Article Image 1 Article Image 2

ಉಜಿರೆ ರುಡ್ ಸೆಟ್ ವಸ್ತ್ರ ಚಿತ್ರಕಲಾ ಉದ್ಯಮಿ(ಎಂಬ್ರಾಡರಿ ಮತ್ತು ಫ್ಯಾಬ್ರಿಕ್‌ ಫೈಂಟಿಂಗ್‌) ತರಬೇತಿಯ ಸಮಾರೋಪ

Article Image

ಉಜಿರೆ ರುಡ್ ಸೆಟ್ ವಸ್ತ್ರ ಚಿತ್ರಕಲಾ ಉದ್ಯಮಿ(ಎಂಬ್ರಾಡರಿ ಮತ್ತು ಫ್ಯಾಬ್ರಿಕ್‌ ಫೈಂಟಿಂಗ್‌) ತರಬೇತಿಯ ಸಮಾರೋಪ

ಉಜಿರೆ: ಮನುಷ್ಯನಿಗೆ ವಿದ್ಯೆ ದೊಡ್ಡ ಸಂಪತ್ತು,ನಮ್ಮ ಕನಸುಗಳನ್ನು ನನಸಾಗಿಸಲು ಇರಬೇಕು ನಾವು ಕಲಿತ ವಿದ್ಯೆ ಆದರ ಜೊತೆ ಅದನ್ನು ಬಳಸುವ ಸಂಸ್ಕಾರ ಸಹ ಇದ್ದಲ್ಲಿ ಮಾತ್ರ ವಿದ್ಯೆಗೆ ಬೆಲೆ ಬರುವುದು. ನಿಮಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಹೆಚ್ಚು ಇದೆ ಅದರಲ್ಲಿ ತೊಡಗಿಸಿಕೊಂಡು ಅದನ್ನು ಕಲಿತು ವೃತ್ತಿಯನ್ನಾಗಿಸಿಕೊಂಡು ಬೆಳೆಯಬೇಕು ಆವಾಗ ನೀವು ಗ್ರಾಹಕರ ಹತ್ತಿರ ಹೋಗಬೇಕಾಗಿಲ್ಲ ಅವರೇ ನಿಮ್ಮನ್ನು ಹುಡುಕಿಕೊಂಡು ಬರುತ್ತಾರೆ. ಅಧ್ಯಕ್ಷರಾದ ಪರಮ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ರುಡ್‌ ಸೆಟ್‌ ಸಂಸ್ಥೆಯಲ್ಲಿ ಅತ್ಯತ್ತಮವಾದ ಸೌಲಭ್ಯಗಳೊಂದಿಗೆ ತರಬೇತಿ ನೀಡುತ್ತಿರುವುದು ಬಹಳ ಸಂತೋಷ. ನಮಗೆಲ್ಲ ಹೆಮ್ಮೆ. ಈ ವಿದ್ಯೆ ಯಾವುದೇ ಕಾರಣಕ್ಕೂ ಬಿಡಬೇಡಿ. ವ್ಯವಹಾರದಲ್ಲಿ ಸ್ಪರ್ಧೆ ಇದ್ದಾಗಲೂ ನೈತಿಕೆತೆಯನ್ನು ಬಿಟ್ಟು ವ್ಯವಹಾರ ಮಾಡಬೇಡಿ. ನಮ್ಮ ಕನಸನ್ನು ನನಸು ಮಾಡಲು ಕಷ್ಟಪಡಲೇ ಬೇಕು. ವ್ಯವಹಾರವನ್ನು ಹಂತ ಹಂತವಾಗಿ ಆರಂಭಿಸಿ, ನಾನು ಎನ್ನುವ ಭಾವನೆಕ್ಕಿಂತ ನಾವು ಎನ್ನುವ ಭಾವನೆಯೊಂದಿಗೆ ವ್ಯವಹಾರ ನಡೆಸಿ. ವ್ಯವಹಾರದಲ್ಲಿ ಆಳಾಗಿ ದುಡಿದು, ಮಾಲಕರಾಗಿ ಎಂದು ಉಜಿರೆ ಸಂಧ್ಯಾ ಪ್ರೇಶ್‌ನ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರು/ಯಶಸ್ವಿ ಮಹಿಳಾ ಉದ್ಯಮಿಯಾದ ಅರ್ಚನಾ ರಾಜೇಶ್‌ ಪೈ ಅಭಿಪ್ರಾಯಪಟ್ಟರು. ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ ವಸ್ತ್ರ ಚಿತ್ರಕಲಾ ಉದ್ಯಮಿ (ಎಂಬ್ರಾಡರಿ ಮತ್ತು ಫ್ಯಾಬ್ರಿಕ್‌ ಫೈಂಟಿಂಗ್‌) ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ಮಾತನಾಡಿದರು. ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಮಾತನಾಡಿದರು ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು. ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ, ರಶ್ಮಿ ರಾಘವೇಂದ್ರ ಅವರು ಮಾತನಾಡಿ ಶಿಬಿರಾರ್ಥಿಗಳಿಗೆ ಶುಭಕೋರಿದರು. ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ವಂದಿಸಿದರು. ಸುಮಾರು 30 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು, ಅಮೃತಲಕ್ಷ್ಮೀ ಪ್ರಾರ್ಥನೆ ಮಾಡಿದರು, ಕು. ಸುಷ್ಮಾ , ಪುಷ್ಪ ಜೈನ್, ಕುಮಾರಿ ರಕ್ಷಿತಾ ರೈ ತರಬೇತಿಯ ಅನುಭವ ಹಂಚಿಕೊಂಡರು.

ರೋಟರಿ ಬೆಳ್ತಂಗಡಿ: ಮುಟ್ಟಿನ ನೈರ್ಮಲ್ಯ ಅರಿವು ಕಾರ್ಯಕ್ರಮ

Article Image

ರೋಟರಿ ಬೆಳ್ತಂಗಡಿ: ಮುಟ್ಟಿನ ನೈರ್ಮಲ್ಯ ಅರಿವು ಕಾರ್ಯಕ್ರಮ

ಉಜಿರೆ, ಸೆ.13: ದೇಹದಲ್ಲಾಗುವ ಸಣ್ಣ ಸಣ್ಣ ಬದಲಾವಣೆಗಳ ಗೊಂದಲವನ್ನು ಪೋಷಕರು ಹಾಗು ಹಿರಿಯರಿಂದ ಪರಿಹರಿಸಿಕೊಳ್ಳಿ. ಬೆಳವಣಿಗೆಯ ಹಂತದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹುಮುಖ್ಯ ಎಂದು ರೋಟರಿ ಕ್ಲಬ್ ಇಂದಿರಾನಗರ, ಬೆಂಗಳೂರು ಇದರ ರೋ. ಸೌಮ್ಯ ಶ್ರೀಕಾಂತ್ ಅಭಿಪ್ರಾಯಪಟ್ಟರು. ಇವರು ಬೆಳ್ತಂಗಡಿ ರೋಟರಿ ಕ್ಲಬ್ ಬೆಳ್ತಂಗಡಿ, ಅಂಗ ಸಂಸ್ಥೆ ಹ್ಯಾನ್ಸ್ ಕ್ಲಬ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್ ಇಂದಿರಾನಗರ, ಬೆಂಗಳೂರು ಸಹಯೋಗದಲ್ಲಿ ಬೆಳ್ತಂಗಡಿಯ ಕೊಯ್ಯುರು ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮುಟ್ಟಿನ ನೈರ್ಮಲ್ಯ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದಲ್ಲಿ ಹೆಣ್ಣಿನ ಪಾತ್ರ ಮಹತ್ತರವಾದದ್ದು,ತನ್ನ ಬದುಕಿನುದ್ದಕ್ಕೂ ಹಲವು ಆಯಾಮಗಳಲ್ಲಿ ಪಾತ್ರ ನಿರ್ವಹಿಸುತ್ತಾಳೆ. ಹಾಗಾಗಿ ವಿದ್ಯಾರ್ಥಿನಿಯರು ಪ್ರೌಢಾವಸ್ಥೆಯಿಂದಲೇ ತಮ್ಮ ದೇಹದ ವಾಸ್ತವಿಕ ಸಂಗತಿಗಳನ್ನು ಅರಿತುಕೊಳ್ಳಬೇಕು. ಪಕೃತಿಯ ನಿಯಮದಂತೆ ನಾವು ಮುಂದೆ ಸಾಗಬೇಕು ಎಂದರು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿದ ವಿದ್ಯಾರ್ಥಿನಿಯರು ಕೇಳಿದ ಹಲವು ಪ್ರಶ್ನೆ ಮತ್ತು ಸಂಶಯಗಳಿಗೆ ರೋ. ಸೌಮ್ಯ ಶ್ರೀಕಾಂತ್ ಉತ್ತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಯ್ಯುರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಧಾಕೃಷ್ಣ ಟಿ. ವಹಿಸಿದರು. ಆನ್ಸ್ ಕ್ಲಬ್ ಸದಸ್ಯೆ ದೀಪ್ತಿ ಹೆಗ್ಡೆ ಬಿ. ಕಾರ್ಯಕ್ರಮದ ಕುರಿತು ಪ್ರಸ್ತಾವಿಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್, ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್, ಕಾರ್ಯದರ್ಶಿ ಡಾ.ವಿನಯ ಕಿಶೋರ್, ರೋಟರಿ ಕ್ಲಬ್ ಇಂದಿರಾನಗರ, ಬೆಂಗಳೂರು ರೋ. ಡಾ. ಶ್ರಿಕಾಂತ್, ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಂಟು, ಒಂಬತ್ತು ಮತ್ತು ಹತ್ತನೇ ತರಗತಿಯ ವಿದ್ಯಾರ್ಥಿನಿಯರು ಹಾಗು ಶಿಕ್ಷಕರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ರಾಮಚಂದ್ರ ಸ್ವಾಗತಿಸಿ, ಶಿಕ್ಷಕಿ ಗೀತಾ ವಂದಿಸಿದರು.

ಬೀಚ್ ಕ್ಲೀನಿಂಗ್ ಹಾಗೂ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Article Image

ಬೀಚ್ ಕ್ಲೀನಿಂಗ್ ಹಾಗೂ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಸಸಿಹಿತ್ಲು ಸಮುದ್ರ ತಟದಲ್ಲಿ ಬೀಚ್ ಕ್ಲೀನಿಂಗ್ ಅಭಿಯಾನ ಹಾಗೂ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆಪ್ಟೆಂಬರ್ 15, ಭಾನುವಾರದಂದು ಆಚರಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎನ್.ಸಿ.ಸಿ., ಎನ್.ಎಸ್.ಎಸ್. ನ 120 ವಿದ್ಯಾರ್ಥಿಗಳು ಪಾಲ್ಗೊಂಡು 30-40 ಚೀಲದಷ್ಟು ಕಸವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ, ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವದ ಪರವಾದ ಘೋಷಣೆಗಳನ್ನು ಒಟ್ಟಿಗೆ ಕೂಗುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಭಾರತ, ಮತ್ತು ಬಹುತ್ವದ ನೆಲೆಯಲ್ಲಿ ರೂಪುಗೊಂಡ ಭಾರತಕ್ಕೆ ಪ್ರಜಾಪ್ರಭುತ್ವ ಒಂದು ವರ. ನಾವು ಯಾವುದೇ ಜಾತಿ, ಮತ ಧರ್ಮ, ಭಾಷೆಗೆ ಸೇರಿದವರಾದರೂ ನಾವೆಲ್ಲ ಭಾರತೀಯರು ಎಂಬ ಹೆಮ್ಮೆ ಮತ್ತು ಐಕ್ಯತಾ ಭಾವ ನಮ್ಮಲ್ಲಿ ಸದಾ ಇರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ನುಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಮಾಣಿಕ್ಯ, ಐ.ಸಿ.ಸಿ. ಸರ್ಫಿಂಗ್ ಸ್ವಾಮಿ ಪ್ರತಿಷ್ಠಾನದ ನಿರ್ದೇಶಕರು ಹಾಗೂ ಸರ್ಫಿಂಗ್ ಸ್ವಾಮಿ ಪ್ರತಿಷ್ಠಾನದ ನಿರ್ದೇಶಕರು ಗೌರವ್ ಹೆಗ್ಡೆ ಮತ್ತು ಅದರ ಇತರ ಸದಸ್ಯರು, ಯಂಗ್ ಇಂಡಿಯನ್ಸ್ ನ ಮಧುಕರ್ ಮತ್ತು ಶರಣ್ ಶೆಟ್ಟಿ ಹಾಗೂ ಆಳ್ವಾಸ್ ನ ಸಿಬ್ಬಂದ್ಧಿ ಕೂಡ ಉಪಸ್ಥಿತರಿದ್ದರು.

ರೋಟರಿ ಕ್ಲಬ್‌ : ಶಿಕ್ಷಕರ ದಿನಾಚರಣೆ

Article Image

ರೋಟರಿ ಕ್ಲಬ್‌ : ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಸಮಾಜದ ಪ್ರತಿಯೊಬ್ಬ ಸಾಧಕನ ಹಿಂದೆ ಗುರುವೆಂಬ ಶಕ್ತಿಯ ಆದರ್ಶ, ಮಾರ್ಗದರ್ಶನ, ಮತ್ತು ಪ್ರೀತಿಯ ಹಾರೈಕೆ ಇದೆ. ಈ ದೇಶದಲ್ಲಿ ಬೆಳೆದು ಬಂದಂತಹ ಗುರು ಶಿಷ್ಯರ ಪರಂಪರೆ ಅತ್ಯಂತ ಶ್ರೇಷ್ಠವಾದದ್ದು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅಭಿಪ್ರಾಯಪಟ್ಟರು. ಇವರು ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ರೋಟರಿ ಸೇವಾ ಭವನ ಕಾಶಿ ಬೆಟ್ಟು, ರೊ.ಕೆ ರಮಾನಂದ ಸಾಲಿಯಾನ್ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನ ಸಂಭ್ರಮಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಒಬ್ಬ ಗುರು ಸ್ವ ಪ್ರಯತ್ನ ಮತ್ತು ಪ್ರತಿಭೆಯಿಂದ ದೇಶದ ಯಾವುದೇ ಹುದ್ದೆಗೆ ಹೋಗಲು ಸಾಧ್ಯ ಎಂಬುದಕ್ಕೆ ರಾಧಾಕೃಷ್ಣರೇ ನಿದರ್ಶನ. ಆದರೆ ಒಬ್ಬ ಗುರು ತನ್ನ ಶಿಷ್ಯ ಬಳಗ ಉನ್ನತ ಸ್ಥಾನಕ್ಕೆರಿದಾಗ ಮಾತ್ರ ನಿಜವಾದ ಸಂತಸ ಮತ್ತು ಸಂತೃಪ್ತನಾಗುತ್ತಾನೆ. ಕೃಷ್ಣ - ಅರ್ಜುನ, ದ್ರೋಣ - ಏಕಲವ್ಯ ಹಾಗೂ ಪರಮಹಂಸ- ವಿವೇಕಾನಂದರಂತಹ ಗುರುಶಿಷ್ಯರ ವ್ಯಕ್ತಿತ್ವ ಸಮಾಜಕ್ಕೆ ಮಾದರಿಯಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮಾ ಮಾತನಾಡಿ, ಭಾರತೀಯ ಗುರು ಪರಂಪರೆಯ ದೃಷ್ಟಿಕೋನ ಮತ್ತು ಪಾಶ್ಚಾತ್ಯ ಗುರು ಸಾಂಸ್ಕೃತಿಗೂ ಅಜಗಜಾಂತರ ವ್ಯತ್ಯಾಸವಿದೆ. ರಾಧಾಕೃಷ್ಣರನ್ನು ಶಿಕ್ಷಕರ ಹೆಸರಿನಲ್ಲಿ ಸ್ಮರಿಸುತ್ತಿರುವುದು ದೇಶದ ಶಿಕ್ಷಕ ವರ್ಗಕ್ಕೆ ಸಂದಿರುವ ಗೌರವ ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಕರುಗಳಾದ ರೊ. ಪ್ರಕಾಶ್ ಪ್ರಭು, ರೊ. ರಾಘವೇಂದ್ರ ಪಿದಮಲೆ, ಆಶಾ ಪಿದಮಲೆ, ರೊ. ಆದರ್ಶ ಕಾರಂತ್ , ಅಕ್ಷತಾ ಸಿ. ಎಚ್., ಉಮಾ ರಂಜನ್ ರಾವ್ ರವರಿಗೆ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್, ಕಾರ್ಯದರ್ಶಿ ಡಾ. ವಿನಯ ಕಿಶೋರ್ ಉಪಸ್ಥಿತರಿದ್ದರು. ರೋಟರಿ ಕ್ಲಬ್ ನಿಕಟ ಪೂರ್ವ ಕಾರ್ಯದರ್ಶಿ ವಿದ್ಯಾ ಕುಮಾರ್, ಶ್ರೀಧರ್ ಕೆ ವಿ, ರೊ. ನಿವೃತ್ತ ಮೆ.ಜ.ಎಮ್ ವೆಂಕಟೇಶ್ವರ ಭಟ್ ಹಾಗೂ ಇತರೆ ಸದಸ್ಯರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿ ಪ್ರಸ್ತುತ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ. ಸತೀಶ್ಚಂದ್ರ ಎಸ್. ರವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮಾ, ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್, ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್ , ಕಾರ್ಯದರ್ಶಿ ಡಾ. ವಿನಯ ಕಿಶೋರ್, ರೊ. ನಿವೃತ್ತ ಮೆ.ಜ.ಎಮ್ ವೆಂಕಟೇಶ್ವರ ಭಟ್ ಇದ್ದರು.

ಉಚಿತ ಭೌತಿಕ ಚಿಕಿತ್ಸಾ ಶಿಬಿರ

Article Image

ಉಚಿತ ಭೌತಿಕ ಚಿಕಿತ್ಸಾ ಶಿಬಿರ

ವಿಶ್ವ ಭೌತಿಕ ದಿನದ ಪ್ರಯುಕ್ತ ಎಸ್.ಡಿ.ಎಂ. ಭೌತಿಕ ಚಿಕಿತ್ಸಾ ಸಂಸ್ಥೆಯವರು ದಿನಾಂಕ ಸೆಪ್ಟೆಂಬರ್ 5 (ಗುರುವಾರ)ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಉಚಿತ ಭೌತಿಕ ಚಿಕಿತ್ಸಾ ಮತ್ತು ಸಲಹಾ ಶಿಬಿರವನ್ನು ಹುಬ್ಬಳ್ಳಿಯ ವಿದ್ಯಾನಗರದ ಎಸ್.ಡಿ.ಎಂ. ಪಾಲಿಕ್ಲಿನಿಕ್‌ನಲ್ಲಿ ಆಯೋಜಿಸಲಿದ್ದಾರೆ. ಕೆಳ ಬೆನ್ನು ನೋವು, ಮೂಳೆ ಮತ್ತು ನರಗಳ ಸಂಬಂಧಿತ, ಬೆನ್ನು ಹುರಿ (ಸ್ಪೈನ್) ಸಂಬಂಧಿತ ಸಮಸ್ಯೆಗಳನ್ನು ತಡೆಗಟ್ಟಲು ಮಾಡಬೇಕಾದ ಮತ್ತು ಸಮಸ್ಯೆಗಳಿದ್ದವರು ಮಾಡಬಾರದ ವಿಚಾರಗಳನ್ನು ತಜ್ಞ ಭೌತಿಕ ಚಿಕಿತ್ಸಕರಿಂದ ಚಿಕಿತ್ಸೆ, ಸಲಹೆಗಳನ್ನು ಪಡೆದುಕೊಳ್ಳಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಡುಬಿದಿರೆ ವೈದ್ಯರ ಸಂಘ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Article Image

ಮೂಡುಬಿದಿರೆ ವೈದ್ಯರ ಸಂಘ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಮೂಡುಬಿದಿರೆ: ವೈದ್ಯರ ಸಂಘ ಮೂಡುಬಿದಿರೆ ಇದರ 2024-25ನೇ ಸಾಲಿನ ಅಧ್ಯಕ್ಷ ಜೈನ್ ಮೆಡಿಕಲ್ ಸೆಂಟರ್ ನ ಡಾ. ಮಹಾವೀರ ಜೈನ್ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಆ. 28ರ0ದು ನಿಶ್ಮಿತಾ ಟವರ್ಸ್ ನ ಪ್ಯಾರಡೈಸ್ ಹಾಲ್ ನಲ್ಲಿ ಜರಗಿತು. ಪದಗ್ರಹಣ ಅಧಿಕಾರಿಯಾಗಿದ್ದ ಮೂಡುಬಿದಿರೆಯ ಹಿರಿಯ ವೈದ್ಯ ಡಾ. ಹರೀಶ್ ನಾಯಕ್ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು 1992ರಲ್ಲಿ ಮೂಡುಬಿದಿರೆಯಲ್ಲಿ ವೈದ್ಯರ ಸಂಘ ಪ್ರಾರಂಭಗೊಂಡು ಅಂದು ಪ್ರಥಮ ವರ್ಷದ ಪದಾಧಿಕಾರಿಗಳ ಪದಗ್ರಹಣ ಅಧಿಕಾರಿಯಾಗಿ ಡಾ. ಬಿ.ಎಂ. ಹೆಗ್ಡೆಯವರು ಆಗಮಿಸಿದ್ದದನ್ನು ಸ್ಮರಿಸಿದರಲ್ಲದೆ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಾ. ಮಹಾವೀರ ಜೈನ್ ಅವರು ಕೋಲ್ಕತಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಜೀವತೆತ್ತ ವೈದ್ಯ ವಿದ್ಯಾರ್ಥಿನಿಗೆ ಸಂತಾಪ ಸೂಚಿಸಿದರಲ್ಲದೆ ಮುಂದಿನ ಒಂದು ವರ್ಷದ ಸಂಘದ ಯೋಜನೆಗಳ ವಿವರ ನೀಡಿದರು. ನಿರ್ಗಮನ ಅಧ್ಯಕ್ಷೆ ಡಾ. ನಿವೇದಿತಾ ಕಿಣಿ, ನೂತನ ಕಾರ್ಯದರ್ಶಿ ಡಾ. ಪ್ರಶಾಂತ್ ರಾವ್, ಖಜಾಂಚಿ ಡಾ. ಸಮರ್ಥ್ ಭಟ್ ಉಪಸ್ಥಿತರಿದ್ದರು. ಡಾ. ಅಮರ್ ದೀಪ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಡಾ. ಪ್ರಶಾಂತ್ ರಾವ್ ವಂದಿಸಿದರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣ

Article Image

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ನಡೆಸಲ್ಪಡುತ್ತಿರುವ ಎಲ್ಲಾ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣವಿದೆ ಎಂದು ಮಂಗಳೂರಿನ ನೇಶನಲ್ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲ ಯು.ಎಚ್. ಖಾಲಿದ್ ಉಜಿರೆ ಹೇಳಿದರು. ಅವರು ಶನಿವಾರ ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನಲ್ಲಿ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಪ್ರಾಯೋಜಕತ್ವದಲ್ಲಿ 15 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ ರೂ. 5,000/- ದಂತೆ ರೂ. 75,000/- ವಿದ್ಯಾರ್ಥಿವೇತನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು. ಧರ್ಮ ಮತ್ತು ರಾಷ್ಟ್ರ ನಮ್ಮ ಎರಡು ಕಣ್ಣುಗಳಂತೆ ಮಹತ್ವಪೂರ್ಣವಾಗಿವೆ. ಎಲ್ಲಾ ಧರ್ಮಗಳೂ ಶಾಂತಿ-ಸಾಮರಸ್ಯದ ಸಂದೇಶವನ್ನು ಸಾರುತ್ತವೆ. ನಮ್ಮ ಧರ್ಮವನ್ನು ಪ್ರೀತಿಸಿ, ಪಾಲಿಸುವುದರೊಂದಿಗೆ ಇತರ ಧರ್ಮಗಳನ್ನು ಗೌರವಿಸಬೇಕು ಎಂದರು. ಸುಳ್ಳು ಹೇಳಬೇಡಿ, ಮೋಸ, ವಂಚನೆ ಮಾಡದೆ ಹಿತ-ಮಿತ ಮಾತುಗಳೊಂದಿಗೆ ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮೂಡಬಿದ್ರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಬಿ.ಪಿ. ಸಂಪತ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳ ಸದುಪಯೋಗ ಪಡೆದು ಸಾರ್ಥಕ ಜೀವನ ನಡೆಸಬೇಕು. ಮೊಬೈಲ್‌ ಫೋನ್‌ನ ಅತಿ ಬಳಕೆಯಿಂದ ಮಾನವೀಯ ಸಂಬಂಧಗಳು ಕುಸಿಯುತ್ತಿವೆ ಎಂದು ಅವರು ವಿಷಾದಿಸಿದರು. ಎಲ್ಲಾ ದಾನಗಳಿಗಿಂತ ವಿದ್ಯಾದಾನ ಶ್ರೇಷ್ಠವಾಗಿದ್ದು ಸಿದ್ದವನ ಗುರುಕುಲ ಮತ್ತು ಎಸ್.ಡಿ.ಎಂ. ಕಾಲೇಜಿನಿಂದಾಗಿ ತಾನು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಯಿತು ಎಂದರು. ಸಮಾಚಾರ ಮತ್ತು ಪ್ರಸಾರ ಸಚಿವಾಲಯದ ಮಂಗಳೂರು ಕ್ಷೇತ್ರ ಅಧಿಕಾರಿ ಜಿತು ನಿಡ್ಲೆ ಮಾತನಾಡಿ, ಕಾಲೇಜಿನ ಗ್ರಂಥಾಲಯ, ಭಿತ್ತಿಪತ್ರಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ತನ್ನ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಕುಮಾರ ಹೆಗ್ಡೆ, ವಿದ್ಯಾರ್ಥಿ ವೇತನದ ಸದುಪಯೋಗ ಪಡೆದು ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪೀತಾಂಬರ ಹೇರಾಜೆ ಮತ್ತು ಉಪಾಧ್ಯಕ್ಷ ಎಂ. ಗುರುನಾಥ ಪ್ರಭು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಎಂ.ಪಿ. ಶ್ರೀನಾಥ್ ಸ್ವಾಗತಿಸಿದರು. ಸಸ್ಯಶಾಸ್ತ್ರ ಉಪನ್ಯಾಸಕ ಅಭಿಲಾಷ್ ಧನ್ಯವಾದವಿತ್ತರು. ಕನ್ನಡ ಉಪನ್ಯಾಸಕ ದಿವಾ ಕೊಕ್ಕಡ ಕಾರ್ಯಕ್ರಮ ನಿರ್ವಹಿಸಿದರು. ಯು. ಯಚ್. ಖಾಲಿದ್, ಉಜಿರೆ ಅವರ ಏಕಪಾತ್ರಾಭಿನಯ ಮತ್ತು ಸುಶ್ರಾವ್ಯ ಗಾಯನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು.

ರಕ್ತ ಕ್ಯಾನ್ಸರ್ ಮತ್ತು ಬ್ಲಡ್ ಸ್ಟೆಮ್ ಕೋಶ ದಾನ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ನೋಂದಣಿ

Article Image

ರಕ್ತ ಕ್ಯಾನ್ಸರ್ ಮತ್ತು ಬ್ಲಡ್ ಸ್ಟೆಮ್ ಕೋಶ ದಾನ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ನೋಂದಣಿ

ಉಜಿರೆ, ಆ.27: ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ಇಂದು (ಆ.27) ರಕ್ತ ಕ್ಯಾನ್ಸರ್ ಮತ್ತು ಬ್ಲಡ್ ಸ್ಟೆಮ್ ಕೋಶ ದಾನ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ನೋಂದಣಿ ಜರಗಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳ ವತಿಯಿಂದ ಸಾಮಾಜಿಕ ಜವಾಬ್ದಾರಿ ಉಪಕ್ರಮ ಸಮಿತಿ ಮತ್ತು ಡಿ ಕೆ ಎಂ ಎಸ್ – ಬಿ ಎಂ ಎಸ್ ಟಿ ಫೌಂಡೇಶನ್ ಇಂಡಿಯಾ [Deutsche Knochenmarkspenderdatei (German Bone Marrow Donor Center) Bangalore Medical Services Trust (BMST)] ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ, ಡಿ.ಕೆ.ಎಂ.ಎಸ್. - ಬಿ.ಎಂ.ಎಸ್.ಟಿ. ಫೌಂಡೇಶನ್ ಇಂಡಿಯಾದ ಅಸೋಸಿಯೇಟ್ ರೋಹಿತ್ ರಾಜೀವ್ ಮಾತನಾಡಿ, ಸಂಸ್ಥೆಯ ಮುಖ್ಯ ಉದ್ದೇಶ ಮತ್ತು ಗುರಿಗಳ ಕುರಿತು ತಿಳಿಸಿದರು. ರಕ್ತ ಕ್ಯಾನ್ಸರ್ ಮತ್ತು ಬ್ಲಡ್ ಸ್ಟೆಮ್ ಕೋಶದ ದಾನ ಕುರಿತ ಮಾಹಿತಿ ನೀಡಿದರು. "ಪ್ರಪಂಚದಲ್ಲಿ ಎಷ್ಟೋ ಮಂದಿ ರಕ್ತ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಮತ್ತು ಅದಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಸಾಯುತ್ತಿದ್ದಾರೆ. ಕ್ಯಾನ್ಸರ್ ನ ಚಿಕಿತ್ಸೆಯಲ್ಲಿ ಕಿಮೋಥೆರಪಿ ಮತ್ತು ರೇಡಿಯೋಥೆರಪಿ ಫಲಿಸದೇ ಇದ್ದಾಗ ಕೊನೆಯ ಆಯ್ಕೆ ಬ್ಲಡ್ ಸ್ಟೆಮ್ ಕೋಶದ ಕಸಿ. ಆ ಉದ್ದೇಶದಿಂದ ಸ್ಥಾಪನೆಗೊಂಡ ಸಂಸ್ಥೆಯೇ ಡಿ.ಕೆ.ಎಂ.ಎಸ್. - ಬಿ.ಎಂ.ಎಸ್.ಟಿ." ಎಂದು ಅವರು ತಿಳಿಸಿದರು. "ತಲಸೇಮಿಯಾ ಸಮಸ್ಯೆಯು ಭಾರತದಲ್ಲಿ ಅದೆಷ್ಟೋ ಇದೆ ಆದರೆ ಈ ಕುರಿತು ಭಾರತೀಯರಿಗೆ ಮಾಹಿತಿ ಇಲ್ಲದಿರುವುದು ಬೇಸರದ ಸಂಗತಿ. ಪ್ರತೀ 5 ನಿಮಿಷಕ್ಕೆ ಒಬ್ಬ ವ್ಯಕ್ತಿ ಬ್ಲಡ್ ಕ್ಯಾನ್ಸರ್ ನಿಂದ ಸಾಯುತ್ತಿದ್ದಾನೆ. 10 ಲಕ್ಷ ಜನರಲ್ಲಿ ಓರ್ವನ ಬ್ಲಡ್ ಸ್ಟೆಮ್ ಕೋಶ ಇನ್ನೊಬ್ಬನಿಗೆ ಹೊಂದಾಣಿಕೆಯಾಗುತ್ತದೆ. ಪ್ರಪಂಚದ 7 ಕಡೆಗಳಲ್ಲಿ ನಮ್ಮ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಸುಮಾರು 12 ಲಕ್ಷಕ್ಕಿಂತ ಅಧಿಕ ಜನರ ಬ್ಲಡ್ ಸ್ಟೆಮ್ ಕೋಶದ ದಾನ ಮಾಡಲು ನೋಂದಣಿಯಾಗಿದೆ. ಹತ್ತು ಸಾವಿರಕ್ಕಿಂತಲೂ ಹೆಚ್ಚು ದಾನಿಗಳಿಗೆ ದಾನ ಮಾಡುವಲ್ಲಿ ಯಶಸ್ವಿಯಾಗಿದೆ” ಎಂದು ಅವರು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿ, "ಮಾನವನ ರಕ್ತಕ್ಕೆ ಮಾನವನ ರಕ್ತವೇ ಸಮಾನ. ಜೀವನ ಎನ್ನುವುದು ಸದಾ ಅಸ್ತಿತ್ವಕ್ಕಾಗಿ ಹೋರಾಟ. ಈ ಹೋರಾಟದಲ್ಲಿ ಹಲವಾರು ಸಮಸ್ಯೆಗಳು ಎದುರಾಗುತ್ತದೆ. ಅಂತಹ ಕಾಯಿಲೆಗಳಲ್ಲಿ ಪ್ರಧಾನ ಕಾಯಿಲೆ ಕ್ಯಾನ್ಸರ್. ಗೊತ್ತಿದ್ದು ಅಥವಾ ಗೊತ್ತಿಲ್ಲದೇ ಪ್ರತಿಯೊಬ್ಬರ ದೇಹದಲ್ಲೂ ಕ್ಯಾನ್ಸರ್ ಅಂಶ ಇದ್ದೇ ಇರುತ್ತವೆ. ಅದರಲ್ಲಿ ಕೆಲವು ನಿಯಂತ್ರಣ ತಪ್ಪಿ ವಿಪರೀತ ಬೆಳವಣಿಗೆ ಆಗುತ್ತದೆ. ಬ್ಲಡ್ ಕ್ಯಾನ್ಸರ್ ಕಾಯಿಲೆಯಿಂದ ಬಳಲುವವರಿಗೆ ನಾವು ಬ್ಲಡ್ ಸ್ಟೆಮ್ ಕೋಶದ ದಾನ ಮಾಡುವುದರಿಂದ ಜೀವ ಉಳಿಸುವ ಸೇವೆಯಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬಹುದು " ಎಂದರು. ಬ್ಲಡ್ ಸ್ಟೆಮ್ ಕೋಶ ದಾನದ ನೋಂದಣಿ ನಡೆಸಲಾಯಿತು. ಎನ್ನೆಸ್ಸೆಸ್ ಘಟಕದ ಯೋಜನಾಧಿಕಾರಿಗಳಾದ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಮತ್ತು ಪ್ರೊ. ದೀಪ ಆರ್.ಪಿ. ಹಾಗೂ ಸಾಮಾಜಿಕ ಜವಾಬ್ದಾರಿ ಉಪಕ್ರಮ ಸಮಿತಿ ಸದಸ್ಯೆ ಹರಿಣಿ ಉಪಸ್ಥಿತರಿದ್ದರು. ಸ್ವಯಂಸೇವಕಿಯರಾದ ಮಾನ್ಯ ಕೆ.ಆರ್. ಸ್ವಾಗತಿಸಿ, ಸನುಷ ಪಿಂಟೋ ವಂದಿಸಿ, ಪ್ರೀತಿ ಆರ್. ನಿರೂಪಿಸಿದರು.

ಆ. 28: ಮೈ ಚಾಯ್ಸ್ ಫ್ಯಾನ್ಸಿ ಮತ್ತು ಗಿಫ್ಟ್ ಸೆಂಟರ್ ಶುಭಾರಂಭ

Article Image

ಆ. 28: ಮೈ ಚಾಯ್ಸ್ ಫ್ಯಾನ್ಸಿ ಮತ್ತು ಗಿಫ್ಟ್ ಸೆಂಟರ್ ಶುಭಾರಂಭ

ಉಜಿರೆಯ ಓಷ್ಯನ್ ಪರ್ಲ್ ಎದುರು, ಕಾಲೇಜು ರಸ್ತೆ ಸಿದ್ಧವನದಲ್ಲಿ ಆ. 28ರಂದು ಮೈ ಚಾಯ್ಸ್ ಫ್ಯಾನ್ಸಿ ಮತ್ತು ಗಿಫ್ಟ್ ಸೆಂಟರ್ ಶುಭಾರಂಭಗೊಳ್ಳಲಿದೆ. ಅಲಂಕಾರಿಕ ವಸ್ತುಗಳು, ಉಡುಗೊರೆಗಳು, ಕ್ರೀಡಾ ವಸ್ತುಗಳು ಮತ್ತು ಜೆರ್ಸಿಗಳು, ಕಾಸ್ಕೆಟಿಕ್ಸ್, ಶೀಲ್ಡ್ಸ್, ಒಂದು ಗ್ರಾಂ ಚಿನ್ನ, ಆನ್‌ಲೈನ್ ಬಸ್ ಮತ್ತು ರೈಲು ಟಿಕೆಟ್‌ಗಳು ಇತ್ಯಾದಿ, ಪರ್ಲ್ಸ್, ಮಣಿಗಳು, ರತ್ನಗಳು, ಬಾಡಿಗೆ ಆಭರಣ ಹೀಗೆ ಎಲ್ಲಾ ರೀತಿಯ ಫ್ರಾನ್ಸಿ, ಗಿಫ್ಟ್, ಸ್ಟೇಷನರಿ ಮಿತರದರದಲ್ಲಿ ಲಭ್ಯವಿದೆ.

ಆ. 28ರಂದು ರಿಯಾಂತ್ ಎಲೆಕ್ಟ್ರಾನಿಕ್ಸ್ ಸೇಲ್ಸ್ ಮತ್ತು ಸರ್ವೀಸ್ ಇದರ ನೂತನ ಶೋರೂಂ ಲೋಕಾರ್ಪಣೆ

Article Image

ಆ. 28ರಂದು ರಿಯಾಂತ್ ಎಲೆಕ್ಟ್ರಾನಿಕ್ಸ್ ಸೇಲ್ಸ್ ಮತ್ತು ಸರ್ವೀಸ್ ಇದರ ನೂತನ ಶೋರೂಂ ಲೋಕಾರ್ಪಣೆ

ವೇಣೂರಿನ ಜಿನಪ್ರಸಾದ್ ಕಾಂಪ್ಲೆಕ್ಸ್ ನಲ್ಲಿ ಆ. 28ರಂದು ರಿಯಾಂತ್ ಎಲೆಕ್ಟ್ರಾನಿಕ್ಸ್ ಸೇಲ್ಸ್ ಮತ್ತು ಸರ್ವೀಸ್ ಇದರ ನೂತನ ಶೋರೂಂನ್ನು ಅಳದಂಗಡಿ ಅರಮನೆಯ ಪದ್ಮಪ್ರಸಾದ್ ಅಜಿಲರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಆ. 28ರಿಂದ ಸೆ. 04ರವರೆಗೆ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ನೀಡುತ್ತಿದೆ. ಶುಭಾರಂಭದ ದಿನ 32 Inch Brand TV ಕೇವಲ ರೂ. 6999 ಮತ್ತು ರೂ. 7777 ಮತ್ತು ಟಿವಿ ಖರೀದಿಗೆ ಸ್ಟೆಬಿಲೈಜರ್, ಡಿಶ್ ಆ್ಯಕ್ಟಿವೇಶನ್ ಮತ್ತು ಆರು ತಿಂಗಳ ರೀಚಾರ್ಜ್ ಉಚಿತ, ಫ್ರಿಡ್ಜ್ ಖರೀದಿಗೆ ಕೆಟಲ್ ಉಚಿತ, ಇನ್‌ವರ್ಟರ್ ಮತ್ತು ಯುಪಿಎಸ್ ಖರೀದಿಗೆ ಟ್ರ್ಯಾಲಿ ಉಚಿತ, ಸೋಲಾರ್ ಇನ್‌ಸ್ಟಾಲೇಶನ್ ಖರೀದಿಗೆ ಸೀಲಿಂಗ್ ಫ್ಯಾನ್ ಉಚಿತ, ಎಸಿ ಖರೀದಿಗೆ ಸ್ಟೆಬಿಲೈಸರ್ ಉಚಿತ ತಿಂಗಳ ಸ್ಕೀಂ ರೂ. 500ರ ಮೇಲ್ಪಟ್ಟು 11+1 ತಿಂಗಳ ಕಂತು ಒಟ್ಟು 11 ಕಂತು ಪಾವತಿ ಒಂದು ತಿಂಗಳ ಕಂತು ಫ್ರೀ, ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನ ಹಾಗೂ ಎಲ್ಲಾ ವಾಹನಗಳ ಬ್ಯಾಟರಿ ದೊರೆಯುತ್ತದೆ. ಹಳೇ ಬ್ಯಾಟರಿ ಎಕ್ಸಚೇಂಜ್ 15% ರಿಯಾಯಿತಿ ಹೀಗೆ ಅನೇಕ ಆಫರ್‌ಗಳಿವೆ ಮತ್ತು ಎಲ್ಲಾ ಆಫರ್‌ಗಳು ಶುಭಾರಂಭದ ದಿನಕ್ಕೆ ಮಾತ್ರ ಸೀಮಿತವಾಗಿದೆ. ಇತರ ಸೇವೆಗಳು: ಮನಿ ಟ್ರಾನ್ಸ್ಫರ್, ಎಸ್‌ಬಿಐ ಅಕೌಂಟ್ ಓಪನ್, ಕ್ಯಾಶ್ ವಿಡ್ರಾವಲ್ ಎಟಿಎಂ ಮತ್ತು ಆಧಾರ್ ಇತ್ಯಾದಿ. ಮತ್ತು ರೂ.2000 ಹಾಗೂ ಮೇಲ್ಪಟ್ಟ ಖರೀದಿ ಮೇಲೆ ಉಚಿತ ಕೂಪನ್. ಪ್ರತೀ ಖರೀದಿ ಮೇಲೆ ಖಚಿತ ಬಹುಮಾನಗಳಿವೆ.

ಆ.26: ಕದ್ರಿಯಲ್ಲಿ ರಾಷ್ಟ್ರಮಟ್ಟದ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆ

Article Image

ಆ.26: ಕದ್ರಿಯಲ್ಲಿ ರಾಷ್ಟ್ರಮಟ್ಟದ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆ

ಮಂಗಳೂರು, ಆ.22: ಕಲ್ಕೂರ ಪ್ರತಿಷ್ಠಾನವು ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ-ಶ್ರೀಕೃಷ್ಣವೇಷ ಸ್ಪರ್ಧೆಯನ್ನು ಆ.26ರಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಆಯೋಜಿಸಿದೆ. ಬೆಳಗ್ಗೆ 9 ಗಂಟೆಯಿAದ ಶ್ರೀಕೃಷ್ಣವರ್ಣ ವೈಭವ, ಮಧ್ಯಾಹ್ನ 12ರಿಂದ ಸಾಂಸ್ಕೃತಿಕ ಕಾರ್ಯಕ್ರಮ, 1 ಗಂಟೆಗೆ ಶ್ರೀಕೃಷ್ಣ ಜನ್ಮ ಮಹೋತ್ಸವ, ನಂದಗೋಕುಲ ವೇದಿಕೆಯಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ ಉದ್ಘಾಟನೆಗೊಳ್ಳಲಿದೆ. ರಾತ್ರಿ 12ರವರೆಗೆ ಸ್ಪರ್ಧೆಗಳು ನಡೆಯಲಿದ್ದು ಒಟ್ಟು 42 ವಿಭಾಗದಲ್ಲಿ 9 ವೇದಿಕೆಗಳಲ್ಲಿ ಏಕಕಾಲದಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದರು. ಮೂರು ಸಾವಿರಕ್ಕೂ ಹೆಚ್ಚು ಮಕ್ಕಳು ಭಾಗವಹಿಸುವ ನಿರೀಕ್ಷೆ ಇದ್ದು ಸ್ಥಳದಲ್ಲೇ ಹೆಸರು ನೋಂದಣಿಗೆ ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಕಲ್ಕೂರ ಪ್ರತಿಷ್ಠಾನ, ಶ್ರೀ ಕೃಷ್ಣ ಸಂಕೀರ್ಣ, ಮಹಾತ್ಮಗಾಂಧಿ ರಸ್ತೆ, ಕೊಡಿಯಾಲಬೈಲು ಮಂಗಳೂರು ಅಥವಾ ಠಿಡಿಚಿಜeeಠಿ.ಞಚಿಟಞuಡಿಚಿ@gmಚಿiಟ.ಛಿom ಮೂಲಕ ಪಡೆಯಬಹುದು ಎಂದು ತಿಳಿಸಿದರು. ಸಮೂಹ ನಂದಗೋಕುಲ ವಿಭಾಗದಲ್ಲಿ ಶ್ರೀ ಕೃಷ್ಣನ ಕಥಾನಕದ ಯಾವುದೇ ಸನ್ನಿವೇಶದ ಪ್ರದರ್ಶನವನ್ನು ಸಾಮೂಹಿಕವಾಗಿ ಪ್ರದರ್ಶಿಸಲು ವಯಸ್ಸಿನ ನಿರ್ಬಂಧವಿಲ್ಲದೆ ಈ ಬಾರಿ ಅವಕಾಶ ಕಲ್ಪಿಸಲಾಗಿದೆ. ಕನಿಷ್ಠ ಐದು ಮಂದಿ ಭಾಗವಹಿಸಬಹುದು. ಗುಂಪಿನಲ್ಲಿ ಸ್ತಬ್ದ ಚಿತ್ರವನ್ನು ದೃಶ್ಯ ಸ್ವರೂಪದೊಂದಿಗೆ ಪ್ರದರ್ಶಿಸಲು ಅವಕಾಶ ನೀಡಲಾಗುತ್ತದೆ ಎಂದರು. ಸ್ಪರ್ಧೆಗಳ ವಿಜೇತರಿಗೆ ಪ್ರಥಮ, ಹಾಗೂ ತೃತೀಯ ದ್ವಿತೀಯ ಬಹುಮಾನ ನೀಡಲಾಗುವುದು. ಎಲ್ಲ ಸ್ಪರ್ಧಾಳುಗಳಿಗೆ ಉಡುಪಿ ಕಡೆಗೋಲು ಕೃಷ್ಣನ ಪಂಚಲೋಹದ ವಿಗ್ರಹ, ಶ್ರೀಕೃಷ್ಣ ಚರಿತ್ರೆ ಪುಸ್ತಕ, ಪ್ರೋತ್ಸಾಹಕ ಬಹುಮಾನ, ಪ್ರಶಂಸ ಪತ್ರ, ಮತ್ತು ಭಗವದ್ಗೀತೆಯ ಪ್ರತಿಯನ್ನು ನೀಡಲಾಗುವುದು ಎಂದು ತಿಳಿಸಿದರು. ಅರ್ಘ್ಯ ಪ್ರದಾನ ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ರಾತ್ರಿ 12 ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ನೆರವೇರಲಿದ್ದು ಎಲ್ಲರಿಗೂ ಅರ್ಘ್ಯ ಪ್ರದಾನಕ್ಕೆ ಅವಕಾಶವಿದೆ ಎಂದರು. ಪ್ರಮುಖರಾದ ಪ್ರೊ| ಎಂ.ಬಿ. ಪುರಾಣಿಕ್, ಕದ್ರಿ ನವನೀತ ಶೆಟ್ಟಿ ದಯಾನಂದ ಕಟೀಲು, ರತ್ನಾಕರ ಜೈನ್, ಸಮೀರ್ ಪುರಾಣಿಕ್, ಜಿ.ಕೆ. ಭಟ್ ಸೇರಾಜೆ, ತಾರಾನಾಥ ಶೆಟ್ಟಿ ಬೋಳಾರ, ಪ್ರಭಾಕರ ರಾವ್ ಪೇಜಾವರ, ಪೊಳಲಿ ನಿತ್ಯಾನಂದ ಕಾರಂತ, ಜನಾರ್ದನ ಹಂದೆ, ತಮ್ಮ ಲಕ್ಷ್ಮಣ, ವಿಜಯಲಕ್ಷ್ಮೀ ಶೆಟ್ಟಿ ಮಂಜುಳಾ ಶೆಟ್ಟಿ ಉಪಸ್ಥಿತರಿದ್ದರು.

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಆ.31 ಕೊನೆಯ ದಿನಾಂಕ

Article Image

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಆ.31 ಕೊನೆಯ ದಿನಾಂಕ

ಬೆಳ್ತಂಗಡಿ: ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ ನೀಡಿದ್ದರೂ ಕೆಲವೊಂದು ಪಡಿತರ ಚೀಟಿ ಸದಸ್ಯರು ಇನ್ನೂ ಇ-ಕೆವೈಸಿ ಮಾಡದೇ ಇರುವುದು ಕಂಡುಬರುತ್ತಿದೆ. ಪ್ರಸ್ತುತ ಸರಕಾರವು ಯಾವುದೇ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲೂ ಕೂಡಾ ಅವಕಾಶ ಕಲ್ಪಿಸಿರುತ್ತದೆ. ಜೀವಮಾಪನ ನೀಡಿ ಇ-ಕೆವೈಸಿ ಮಾಡಿಸಲು ಬಾಕಿ ಇರುವ ಸದಸ್ಯರು ಕೂಡಲೇ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡುವುದು. ಸರಕಾರವು ಆ.31 ರವರೆಗೆ ಅವಕಾಶ ಕಲ್ಪಿಸಿದ್ದು ತಪ್ಪದೆ ಇ-ಕೆವೈಸಿ ಮಾಡಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ವಲಸೆ ಹೋಗಿ ಅಥವಾ ಬೇರೆ ಜಿಲ್ಲೆಗಳಿಗೆ ಕೆಲಸ ನಿಮಿತ್ತ ತೆರಳಿರುವ ವ್ಯಕ್ತಿಗಳು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಜೀವಮಾಪನ ನೀಡಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿ ಇ-ಕೆವೈಸಿಯನ್ನು ಮಾಡುವಂತೆ ತಿಳಿಸಿದೆ. ಇದು ಪಡಿತರ ಚೀಟಿದಾರರಿಗೆ ಕೊನೆಯದಾಗಿ ತಿಳುವಳಿಕೆ ನೀಡುವುದಾಗಿದ್ದು ಆ.31 ರ ನಂತರ ಇ-ಕೆವೈಸಿ ಬಾಕಿಯಾಗಿರುವ ಪಡಿತರ ಚೀಟಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಮ್ಮ ವಾಸ್ತವ್ಯಕ್ಕೆ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಇ-ಕೆವೈಸಿ ಮಾಡಿಸಿ ಕೊಳ್ಳಲು ಅವಕಾಶವಿದೆ. ಪಡಿತರ ಚೀಟಿದಾರರ ಎಲ್ಲಾ ಸದಸ್ಯರ ಬಯೋ ದೃಢೀಕರಣ ಮಾಡಿಸಬೇಕು. ವಿಶೇಷ ವರ್ಗಕ್ಕೆ ಸೇರಿದವರಾಗಿದ್ದಲ್ಲಿ ಆ ಬಗ್ಗೆ ದೃಢಪತ್ರ, ಆಧಾರ್ ಸಂಖ್ಯೆ ಫೋನ್ ನಂಬ‌ರ್, ಅಡುಗೆ ಅನಿಲದ ಮಾಹಿತಿ ಹಾಗೂ ಕುಟುಂಬದ ಸದಸ್ಯರ ಸಂಬಂಧವನ್ನು ಸಹ ಇ-ಕೆವೈಸಿಯಲ್ಲಿ ನಮೂದಿಸಬೇಕು. ಇದು ಜಿಲ್ಲೆಯ ಹಾಗೂ ಪರ ಜಿಲ್ಲೆಯ ಪಡಿತರ ಚೀಟಿದಾರರಿಗೆ ಅಂತಿಮ ಅವಕಾಶವಾಗಿದ್ದು, ಇ-ಕೆವೈಸಿ ಮಾಡಿಸಿ ಕೊಳ್ಳದ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ರದ್ದಾಗಬಹುದು. ಪಡಿತರ ಚೀಟಿಗಳಲ್ಲಿ ಭಾಗಶ: ಜೀವಮಾನ ನೀಡಲ್ಪಟ್ಟು ಬಾಕಿ ಉಳಿದಿರುವ ಸದಸ್ಯರು ಕೂಡಾ ಈ ತಿಂಗಳ ಅಂತ್ಯದವರೆಗೆ ಕಾಯದೇ ಕೂಡಲೇ ಇ-ಕೆವೈಸಿ ಮಾಡಿಸಿಕೊಂಡು ಪಡಿತರ ಚೀಟಿಯನ್ನು ಊರ್ಜಿತವಾಗಿರಿಸಿಕೊಳ್ಳಬಹುದಾಗಿರುತ್ತದೆ

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Article Image

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

ಉಜಿರೆ: ಸ್ವ-ಉದ್ಯೋಗದಿಂದ ಆರ್ಥಿಕ ಪ್ರಗತಿಯೊಂದಿಗೆ ಸ್ವಾವಲಂಬಿ ಜೀವನ ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ತರಬೇತಿ ಪಡೆದವರು ಸ್ಥಳೀಯ ಸಂಪನ್ಮೂಲ ಹಾಗೂ ಬೇಡಿಕೆಗಳಿಗೆ ಅನುಗುಣವಾಗಿ ಸ್ವ-ಉದ್ಯೋಗ ಪ್ರಾರಂಭಿಸಿ, ಸಾಲದ ಹಣವನ್ನು ಸದುಪಯೋಗ ಮಾಡಿ, ಕೌಲಾಭಿವೃದ್ಧಿಯೊಂದಿಗೆ ಸ್ವ-ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸುವಂತೆ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳು ಸಕಾಲಿಕ ಮಾಹಿತಿ, ಮಾರ್ಗದರ್ಶನ ಮತ್ತು ಪ್ರೇರಣೆ ನೀಡಬೇಕು. ಯಾವುದೇ ಸಮಸ್ಯೆಗಳು, ಸವಾಲುಗಳು ಉಂಟಾದಾಗ ಅದನ್ನು ಪರಿಹರಿಸಲು ಸಹಕರಿಸಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು. ತರಬೇತಿ ಪಡೆದವರು ಇರುವ ಊರಿನಲ್ಲೆ ಅಲ್ಪ ಬಂಡವಾಳದೊಂದಿಗೆ ಸ್ವ-ಉದ್ಯೋಗ ಪ್ರಾರಂಭಿಸಿದರೆ ಗ್ರಾಮೀಣ ಪ್ರದೇಶವರು ನಗರಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟಬಹುದು. ಬ್ಯೂಟಿಪಾರ್ಲರ್, ಛಾಯಾಗ್ರಹಣ, ವೀಡಿಯೋಗ್ರಫಿ ಮೊದಲಾದ ಸೇವಾಕ್ಷೇತ್ರಗಳಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ವಿಜ್ಞಾನದ ಬಳಕೆಯಿಂದ ಅನೇಕ ಕ್ಷಿಪ್ರಪರಿವರ್ತನೆಗಳಾಗುತ್ತಿದ್ದ ಬದಲಾದ ವಿದ್ಯಮಾನಕ್ಕೆ ಸ್ವ-ಉದ್ಯೋಗಿಗಳು ಹೊಂದಿಕೊಳ್ಳಬೇಕು ಎಂದು ಹೆಗ್ಗಡೆಯವರು ಕಿವಿಮಾತು ಹೇಳಿದರು. ಯಾವುದೇ ಸಮಸ್ಯೆ ಬಂದಲ್ಲಿ ರುಡ್‌ಸೆಟ್ ಸಂಸ್ಥೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಎಲ್ಲಾ ರುಡ್‌ಸೆಟ್ ಸಂಸ್ಥೆಗಳ ಸೇವೆ-ಸಾಧನೆಯನ್ನು ಹೆಗ್ಗಡೆಯವರು ಶ್ಲಾಘಿಸಿ ಅಭಿನಂದಿಸಿದರು. ಮುಂದೆ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸುವಂತಾಗಲಿ ಎಂದು ಅವರು ಶುಭ ಹಾರೈಸಿದರು. ಕೆನರಾ ಬ್ಯಾಂಕ್ ಪ್ರಧಾನ ಕಾರ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್ ಶುಭಾಶಂಸನೆ ಮಾಡಿ, ನಿರುದ್ಯೋಗ ಸಮಸ್ಯೆ ನಿವಾರಣೆಯೊಂದಿಗೆ ಸಮಾಜದ ಆರ್ಥಿಕ ಪ್ರಗತಿಗೆ ರುಡ್‌ಸೆಟ್ ಸಂಸ್ಥೆಗಳ ಸೇವೆ, ಕೊಡುಗೆ ಅಮೂಲ್ಯವಾಗಿದೆ. ಬಡವರು ಮತ್ತು ಅವಕಾಶ ವಂಚಿತರು ಸ್ವ-ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸಲು ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರ ಸೇವೆಯನ್ನು ಅವರು ಶ್ಲಾಘಿಸಿದರು. ಈ ದಿಸೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದರು. ಕೆನರಾ ಬ್ಯಾಂಕ್‌ನ ಮುಖ್ಯ ಮಹಾಪ್ರಬಂಧಕ ಕೆ.ಜೆ. ಶ್ರೀಕಾಂತ್ ಮಾತನಾಡಿ, ಕೇಂದ್ರ ಸರ್ಕಾರವು ಆರ್ಥಿಕ ಪ್ರಗತಿಗೆ ಆದ್ಯತೆ ನೀಡುತ್ತಿದ್ದು ಬ್ಯಾಂಕ್‌ಗಳಲ್ಲಿ ಸಾಲ ಮಂಜೂರಾತಿಯನ್ನು ಸರಳಗೊಳಿಸಲಾಗಿದೆ. ಸ್ವಯಂ ಉದ್ಯೋಗ ಮಾಡುವವರು ವ್ಯಕ್ತಿತ್ವ ವಿಕಸನದೊಂದಿಗೆ ಉತ್ತಮ ಕೌಶಲವನ್ನೂ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕೆನರಾ ಬ್ಯಾಂಕ್ ಮಂಗಳೂರು ವೃತ್ತದ ಮಹಾಪ್ರಬಂಧಕ ಸುಧಾಕರ ಕೊಠಾರಿ ಮಾತನಾಡಿ ಇಂದು ಮಹಿಳೆಯರು ಕೂಡಾ ಸ್ವಯಂ ಉದ್ಯೋಗದೊಂದಿಗೆ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿದರು. ರುಡ್‌ಸೆಟ್ ಸಂಸ್ಥೆಗಳ ಕೇಂದ್ರೀಯ ಕಾರ್ಯಾಲಯದ ನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಸ್ವಾಗತಿಸಿದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕಿ ಅನಸೂಯ ಕಾರ್ಯಕ್ರಮ ನಿರ್ವಹಿಸಿದರು.

ರುಡ್ ಸೆಟ್ ಸಂಸ್ಥೆ: ಸಮಾರೋಪ ಸಮಾರಂಭ

Article Image

ರುಡ್ ಸೆಟ್ ಸಂಸ್ಥೆ: ಸಮಾರೋಪ ಸಮಾರಂಭ

ಉಜಿರೆ: ಇಂದು ಪ್ರತಿಯೊಂದು ಕೆಲಸದಲ್ಲಿ ಮನೆಯಲ್ಲಿ ವಿವಿಧ ಸಂಸ್ಥೆಗಳಲ್ಲಿ ವಿಶೇಷವಾಗಿ ಅಪರಾಧ ವಿಭಾಗದಲ್ಲಿ ಸಿಸಿ ಕ್ಯಾಮರಗಳ ಪಾತ್ರ ಮಹತ್ವದಾಗಿದೆ. ಈ ನಿಟ್ಟಿನಲ್ಲಿ ರುಡ್ ಸೆಟ್ ಸಂಸ್ಥೆಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ದುರಸ್ತಿಯ ಸ್ವ ಉದ್ಯೋಗ ತರಬೇತಿ ಪಡೆದ ನಿಮಗೆ ಇವತ್ತು ತುಂಬಾ ಅವಕಾಶಗಲಿವೆ, ಏಕೆಂದರೆ ಪ್ರತಿಯೊಂದು ಆಟ, ಪಾಠ, ನೋಟಕ್ಕೆ ಸಿಸಿ ಕ್ಯಾಮರಾಗಳನ್ನು ಅಳವಡಿಸಲೇ ಬೇಕು ಅನ್ನುವ ಅನಿರ್ವಾಯತೆ ಬಂದಿದೆ. ಈ ಹಿನ್ನಲೆಯಲ್ಲಿ ಇಂತಹ ತರಬೇತಿ ಪಡೆದ ನಿಮಗೆ ಮುಂದಿನ ದಿನಗಳಲ್ಲಿ ಬೇರೆ ಬೇರೆ ಉದ್ಯಮ, ವ್ಯವಹಾರ ನಡೆಸಲು ಅನುಕೂಲವಾಗುತ್ತದೆ. ಹಾಗೇನೆ ಉತ್ತಮ ಗುಣಮಟ್ಟದ ವಸ್ತುಗಳನ್ನೇ ಬಳಸಿ, ಉತ್ತಮವಾದ ಸೇವೆ ನೀಡಿ ಎಂದು ಬೆಳ್ತಂಗಡಿ ಗ್ರಾಮಾಂತರ ಪೋಲಿಸ್ ವಿಭಾಗದ ವೃತ್ತ ನಿರೀಕ್ಷರಾದ ನಾಗೇಶ್ ಕದ್ರಿ ಅಭಿಪ್ರಾಯಪಟ್ಟರು. ರುಡ್ ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ಮತ್ತು ಕೆನರಾ ಬ್ಯಾಂಕಿನಲ್ಲಿ ಹೊಸತಾಗಿ ಆರಂಭಿಸಿದ ಜನಧನ್ ಖಾತೆ ಪುಸ್ತಕ ವಿತ್ತರಿಸಿ ಮಾತನಾಡಿದರು. ಸ್ವ ಉದ್ಯೋಗ ನಮ್ಮ ಹೆಮ್ಮೆಯ ವೃತ್ತಿಯಾಗಬೇಕು. ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ.ವಿಜಯ ಕುಮಾರ್ ವಹಿಸಿ, ಮಾತನಾಡುತ್ತಾ, ಹೊಸ ಹೊಸ ಅವಿಷ್ಕಾರಗಳ ಜೊತೆಗೆ ವ್ಯವಹಾರವನ್ನು ಉತ್ತಮ ರೀತಿಯಲ್ಲಿ ಬೆಳೆಸಿ ಎಂದು ಶುಭ ಕೋರಿದರು. ಚಂದ್ರಹಾಸ ಪ್ರಾರ್ಥನೆ ಮಾಡಿದರು. ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯರವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ವಂದಿಸಿದರು. ಸುಮಾರು 32 ಜನ ಶಿಬಿರಾರ್ಥಿಗಳು ಭಾಗವಹಿಸಿದ್ದರು, ಹರಿಕೃಷ್ಣ, ಸುಶಿಲ್, ನವೀನ ತರಬೇತಿಯ ಅನುಭವ ಹಂಚಿಕೊಂಡರು.

ಭತ್ತದ ಬೆಳೆ ಸ್ಪರ್ಧೆ: ಅರ್ಜಿ ಆಹ್ವಾನ

Article Image

ಭತ್ತದ ಬೆಳೆ ಸ್ಪರ್ಧೆ: ಅರ್ಜಿ ಆಹ್ವಾನ

ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸುವುದು, ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನ ಭತ್ತದ ಬೆಳೆಯಲ್ಲಿ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತಾಲೂಕು ಮಟ್ಟ: ಪ್ರಥಮ-15,000ರೂ., ದ್ವಿತೀಯ-10,000ರೂ., ತೃತೀಯ-5,000ರೂ. ಜಿಲ್ಲಾ ಮಟ್ಟ: ಪ್ರಥಮ-30,000ರೂ., ದ್ವಿತೀಯ-25,000ರೂ., ತೃತೀಯ-20,000ರೂ. ರಾಜ್ಯ ಮಟ್ಟ: ಪ್ರಥಮ-50,000., ದ್ವಿತೀಯ-40,000ರೂ., ತೃತೀಯ-35,000ರೂ. ಬಹುಮಾನ ಮೊತ್ತ ಘೋಷಿಸಲಾಗಿದೆ. ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸುವ ರೈತರು ಕನಿಷ್ಠ 1 ಎಕ್ರೆ ಪ್ರದೇಶದಲ್ಲಿ ಭತ್ತದ ಬೆಳೆ ಬೆಳೆದಿದ್ದು, ಕಂದಾಯ ಇಲಾಖೆ ಪ್ರಕಾರ ಜಮೀನು ಹೊಂದಿರಬೇಕು ಅಥವಾ ಸ್ವಂತ ಜಮೀನು ಹೊಂದಿರದಿದ್ದರೂ ಸಹ ಬೇಸಾಯದಲ್ಲಿ ತೊಡಗಿರುವ ಕೃಷಿಕರು ಜಮೀನು ಮಾಲಕರಿಂದ ಸಾಮಾನ್ಯ ವ್ಯವಹಾರಿಕ ಅಧಿಕಾರ (ಜಿಪಿಎ) ಹೊಂದಿರಬೇಕು. ಆಸಕ್ತರು ಅರ್ಜಿ ನಮೂನೆಯನ್ನು ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿಮಾಡಿ ಆ.31ರೊಳಗಾಗಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರು ಜಾತಿ ಪ್ರಮಾಣ ಪತ್ರ ಒದಗಿಸಬೇಕು ಎಂದು ಬೆಳ್ತಂಗಡಿ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಬೆಳ್ತಂಗಡಿ ರೋಟರಿ ಕ್ಲಬ್: ಕಂಪ್ಯೂಟರ್ ಕೊಡುಗೆ

Article Image

ಬೆಳ್ತಂಗಡಿ ರೋಟರಿ ಕ್ಲಬ್: ಕಂಪ್ಯೂಟರ್ ಕೊಡುಗೆ

ಬೆಳ್ತಂಗಡಿ: ಶಿಕ್ಷಕರ ಆಡಳಿತಾತ್ಮಕ ಕೆಲಸಗಳನ್ನು ನಿರ್ವಹಿಸಲು ಕಂಪ್ಯುಟರ್ ಗಳ ತುರ್ತು ಅಗತ್ಯತತೆ ಇದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಕಂಪ್ಯೂಟರ್ ಗಳನ್ನು ನೀಡಲಾಯಿತು. ಸರಿಯಾಗಿ ಅನುದಾನ ಸಿಗದೇ ಕಳೆದ ನಾಲ್ಕು ವರ್ಷಗಳಿಂದ ಕಂಪ್ಯೂಟರ್ ಗಳ ಕೊರತೆ ಅನುಭವಿಸುತ್ತಿದ್ದ ಶಿಕ್ಷಣಾಧಿಕಾರಿಗಳ ಕಚೇರಿ ಇಲಾಖೆಯ ಮುಂದೆ 5 ಕಂಪ್ಯೂಟರ್ ಗಳ ಬೇಡಿಕೆಯನ್ನು ಇರಿಸಿತ್ತು. ಕಂಪ್ಯೂಟರ್ ಗಳು ಈವರೆಗೂ ಲಭಿಸಿದೆ ಇದ್ದುದರಿಂದ, ಬೆಳ್ತಂಗಡಿ ರೋಟರಿ ಕ್ಲಬ್ ಗೆ ಮನವಿ ನೀಡಿದ ಬೆನ್ನಲ್ಲಿ ರೋಟರಿ ಸಂಸ್ಥೆ ಎರಡು ಕಂಪ್ಯೂಟರ್ ಗಳನ್ನು ದಾನವಾಗಿ ನೀಡಿ ಸಹಕರಿಸಿದೆ. ಇಲಾಖೆಯ ಕಚೇರಿಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮಾ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿರವರಿಗೆ ಕಂಪ್ಯೂಟರ್ ಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್, ನಿಕಟ ಪೂರ್ವ ಅಧ್ಯಕ್ಷ ಅನಂತ ಭಟ್, ಶಿಕ್ಷಣಾಧಿಕಾರಿಗಳ ಕಚೇರಿಯ ಸಹಾಯಕರಾದ ಸಂದೇಶ್, ವಜ್ರ ಕುಮಾರ್ ಹಾಗೂ ರಾಜೇಂದ್ರ ಉಪಸ್ಥಿತರಿದ್ದರು.

ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಕೃಷ್ಣ ವೇಷ ಸ್ಪರ್ಧೆ

Article Image

ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಕೃಷ್ಣ ವೇಷ ಸ್ಪರ್ಧೆ ಆ.24 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ. ಸ್ಪರ್ಧೆಯಲ್ಲಿ ಮುದ್ದು ಕೃಷ್ಣ 0-3 ವರ್ಷ, ಬಾಲ ಕೃಷ್ಣ 4-7 ವರ್ಷ, ರಾಧಾ ಕೃಷ್ಣ 8-12 ವರ್ಷದ ಮಕ್ಕಳಿಗೆ ಮಾತ್ರ ಅವಕಾಶ. ಸ್ಪರ್ಧಾ ನೋಂದಾವಣೆಗೆ ಆಗಸ್ಟ್ 22 ಕೊನೆಯ ದಿನಾಂಕವಾಗಿದೆ. ಸ್ಪರ್ಧೆಯ ನಿಬಂಧನೆಗಳು: *ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶ. *ಸ್ಪರ್ಧಾಳುಗಳು ಸಮಯಕ್ಕೆ ಸರಿಯಾಗಿ ಹಾಜಾರಿರಬೇಕು. *ನೋಂದಾವಣೆ ಸಮಯ ಆಧಾ‌ರ್ ಕಾರ್ಡ್ ಕಡ್ಡಾಯ. *ಪ್ರತೀ ವಿಭಾಗದಲ್ಲೂ ಸ್ಪರ್ಧಿಗಳಿಗೆ 1-2 ನಿಮಿಷದ ಸಮಯಾವಕಾಶ ನೀಡಲಾಗುವುದು. *ಸ್ಪರ್ಧೆಗೆ ಬೇಕಾದ ವೇಷಭೂಷಣ ಮತ್ತು ಹಾಡನ್ನು ತಾವೇ ತಯಾರಿ ಮಾಡಿಕೊಂಡು ಬರತಕ್ಕದ್ದು. *ವೇಷಭೂಷಣ, ಹಾವ-ಭಾವಗಳನ್ನು ತೀರ್ಪುಗಾರಿಕೆಗೆ ಪರಿಗಣಿಸಲಾಗುವುದು. *ಸಂಘಟಕರ ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಎಲ್ಲಾ ಸ್ಪರ್ಧಿಗಳ ಫೋಟೊ/ ವೀಡಿಯೋವನ್ನು ಮುಳಿಯ ಫೇಸ್‌ಬುಕ್ ಪೇಜ್ ನಲ್ಲಿ ಹಾಕಲಾಗುವುದು. ನೋಂದಾವಣೆಗಾಗಿ - 9343004916 / 87925 30916

ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ 78 ನೇ ಸ್ವಾತಂತ್ರೋತ್ಸವ ಆಚರಣೆ

Article Image

ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ 78 ನೇ ಸ್ವಾತಂತ್ರೋತ್ಸವ ಆಚರಣೆ

ಇಂದು ಬೆಳಿಗ್ಗೆ ರುಡ್ ಸೆಟ್ ಸಂಸ್ಥೆಯಲ್ಲಿ 78ನೇ‌ ಸ್ವಾತಂತ್ರ್ಯೋತ್ಸವ ವನ್ನು ದೇಶಾದಂತ್ಯ ಇರುವ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯ ಕುಮಾರ್ ಸರ್ ಧ್ವಜಾರೋಹಣ ನಡೆಸಿ, ಮಾತನಾಡಿ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ನಾವೇ ಪ್ರಯತ್ನ ಮಾಡಬೇಕು ಎಂದು ತಿಳಿಸಿ, ಶುಭ ಹಾರೈಸಿದರು. ಸಂಸ್ಥೆಯ ನಿರ್ದೇಶಕರಾದ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಅನಸೂಯಾ, ಕರುಣಾಕರ ಜೈನ್, ಲೋಹಿತ್ ಕುಮಾರ್ ಜೈನ್ ಹಾಗೂ ಎಲ್ಲ ಸಹೋದ್ಯೋಗಿಗಳು ‌ಮತ್ತು ಸ್ವ ಉದ್ಯೋಗ ತರಬೇತಿಯನ್ನು ಪಡೆಯುತ್ತಿರುವ ಶಿಬಿರಾರ್ಥಿಗಳು ಭಾಗವಹಿಸಿದ್ದರು.

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು 78ನೇ ಸ್ವಾತಂತ್ರ್ಯ ದಿನಾಚರಣೆ

Article Image

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು 78ನೇ ಸ್ವಾತಂತ್ರ್ಯ ದಿನಾಚರಣೆ

ಎಸ್.ಡಿ.ಎಂ. ವಿಶ್ವವಿದ್ಯಾಲಯವು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು. ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಮುಖ್ಯ ಅತಿಥಿಯವರಾಗಿ ಧ್ವಜಾರೋಹಣ ಮಾಡಿದರು. ಮುಖ್ಯ ಅತಿಥಿಯವರಾದ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಅವರು ಮಾತನಾಡುತ್ತಾ: ಅದೆಷ್ಟೊ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಸುಖ ನೆಮ್ಮದಿಯನ್ನು ತೊರೆದು ದೇಶಕ್ಕಾಗಿ ದೇಹ ಬಲಿದಾನ ಮಾಡ್ಡಿದ್ದಾರೆ. ಅಂತಹ ತ್ಯಾಗ ಮೂರ್ತಿಗಳ ಬಲಿದಾನದ ಪ್ರತಿಫಲವೇ ಇಂದು ನಾವೆಲ್ಲ ಅನುಭವಿಸುತ್ತಿರುವ ಸ್ವಾತಂತ್ರ್ಯ ದೇಶಕ್ಕೆ ಸ್ವಾತಂತ್ರ್ಯ ಬಂದ ಮೇಲೆ ಹಂತ ಹಂತವಾಗಿ ಅಪಾರ ಬದಲಾವಣೆಯಾಗಿದೆ. ದೇಶದ ಸ್ವಾತಂತ್ರ್ಯದಿಂದ ಹಳ್ಳಿಯಿಂದ ಪಟ್ಟಣದವರೆಗೂ ಜನ ಪ್ರಗತಿಯನ್ನು ಕಂಡಿದ್ದಾರೆ. ಇಂದು ನಾವೆಲ್ಲ ಆಧ್ಯತೆಯಲ್ಲಿ ಮಾಡಬೇಕಾದ ಕೆಲಸ ದೇಶದ ಐಕೈತೆ ಮತ್ತು ಬಲಿಷ್ಠ ಭಾರತದ ನಿರ್ಮಾಣ ಪ್ರಜೆಗಳಾದ ನಾವೆಲ್ಲ ಸರ್ವಧರ್ಮ ಸಮನ್ವಯತೆ, ಬಡತನ ನಿರ್ಮೂಲನೆ, ಸಾಕ್ಷರತೆ ಕಡೆಗೆ ಗಮನ ಹರಿಸಬೇಕು. ಇಂದಿನ ವಿದ್ಯಾರ್ಥಿಗಳು ಭವಿಷ್ಯದಲ್ಲಿ ರೋಗಿಗಳನ್ನು ದೇವರಂತೆ ಕಂಡು ಸೇವೆ ಸಲ್ಲಿಸಿ ಸಂತೃಪ್ತಿ ಪಡೆಯಬೇಕು. ಈ ಸಂದರ್ಭದಲ್ಲಿ ಅಂಗ ಸಂಸ್ಥೆಗಳ ಪ್ರಥಮ ವರ್ಷದ ಒಬ್ಬ ಮತ್ತು ಅಂತಿಮ ವರ್ಷದ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಕಿರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ, ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಸಹ ಉಪಕುಲಪತಿಯವರಾದ ವಿ. ಜೀವಂಧರ್ ಕುಮಾರ್, ಹಣಕಾಸು ಅಧಿಕಾರಿಗಳಾದ ವಿ ಜಿ ಪ್ರಭು, ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ್, ಸಂಸ್ಥೆಗಳ ಮುಖ್ಯಸ್ಥರು, ಉಪ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ರತ್ನಮಾಲಾ ಎಂ. ದೇಸಾಯಿ ಅತಿಥಿಗಳನ್ನು ಸ್ವಾಗತಿಸಿದರು. ಡಾ. ರಘುನಾಥ್ ಶಾನಭಾಗ್ ಹಾಗೂ ಡಾ. ಅನಿಲ್ ಆರ್. ಕಾರ್ಯಕ್ರಮವನ್ನು ನಿರೂಪಿಸಿದರು. ಉಪ ಪ್ರಾಂಶುಪಾಲರಾದ ಡಾ. ದೀಪಕ ಕಣಬೂರ ವಂದನಾರ್ಪಣೆಯನ್ನು ಮಾಡಿದರು.

ಉಜಿರೆ ಎಸ್.ಡಿ.ಎಂನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Article Image

ಉಜಿರೆ ಎಸ್.ಡಿ.ಎಂನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

ಉಜಿರೆ: ‘ವಿಕಸಿತ ಭಾರತ’ದ ದೃಢಸಂಕಲ್ಪ ಮತ್ತು ಪ್ಲಾಸ್ಟಿಕ್ ಮುಕ್ತ ಪರಿಸರ ಜಾಗೃತಿ ಮೂಡಿಸುವ ಸದಾಶಯದೊಂದಿಗಿನ ಆಕರ್ಷಣೀಯ ಪಥಸಂಚಲನ ಮತ್ತು ದೇಶಭಕ್ತಿಗೀತೆಗಳ ಮಾರ್ಧುರ್ಯದ ನಡುವೆ ಎಸ್.ಡಿ.ಎಂ ಕಾಲೇಜಿನ ಶ್ರೀರತ್ನವರ್ಮ ಹೆಗ್ಗಡೆ ಕ್ರೀಡಾಂಗಣವು ನಡೆದ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಯಿತು. ಎಸ್.ಡಿ.ಎಂ ಶಾಲೆ, ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯ, ತಾಂತ್ರಿಕ ಕಾಲೇಜುಗಳ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗಳ ಸಮ್ಮುಖದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು. ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಲ್ಲದೇ ಧ್ವಜಾರೋಹಣ ಮತ್ತು ವೇದಿಕೆಯನ್ನು ಸಿದ್ಧಗೊಳಿಸಿದ್ದು ಈ ಸಲದ ವಿಶೇಷವಾಗಿತ್ತು. ಧ್ವಜಾರೋಹಣ ನೆರವೇರುತ್ತಿದ್ದಂತೆ ಎಸ್.ಡಿ.ಎಂ ಕಲಾಕೇಂದ್ರದ ವಿದ್ಯಾರ್ಥಿಗಳು ರಾಷ್ಟ್ರಗೀತೆಯನ್ನು ಪ್ರಸ್ತುತಪಡಿಸಿದರು. ವಂದೇಮಾತರಂ ಗೀತೆಯನ್ನು ಹಾಡಿದರು. ‘ಸಾರೇ ಜಹಾಂಸೆ ಅಚ್ಛಾ’ ಹಾಡಿನೊಂದಿಗೆ ಅಲ್ಲಿದ್ದವರೊಳಗೆ ದೇಶದ ಕುರಿತ ಹೆಮ್ಮೆ ಮೂಡುವಂತೆ ಪ್ರೇರಣೆ ನೀಡಿದರು. ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾಧ್ಯಾಪಕರಾದ ಸುವೀರ್ ಜೈನ್, ಪಿಯು ಕಾಲೇಜಿನ ಉಪನ್ಯಾಸಕರಾದ ದಿವ್ಯಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎನ್‌ಸಿಸಿಯ ಆರ್ಮಿ ವಿಭಾಗದ ಕ್ಯಾಪ್ಟನ್ ಜಿ. ಆರ್. ಭಟ್, ಲೆಫ್ಟಿನೆಂಟ್ ಕಮಾಂಡರ್ ಡಾ. ಶ್ರೀಧರ್ ಭಟ್, ಆರ್ಮಿ ಸೀನಿಯರ್ ಡಿವಿಜನ್ ಅಧಿಕಾರಿ ಲೆಫ್ಟಿನೆಂಟ್ ಡಾ.ಭಾನುಪ್ರಕಾಶ್ ಬಿ.ಇ. ಕೇರ್ ಟೇಕರ್ ಲೆಫ್ಟಿನೆಂಟ್ ಶುಭಾರಾಣಿ, ಕೇರ್ ಟೇಕರ್ ಹರೀಶ್ ಶೆಟ್ಟಿ, ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಪಥಸಂಚಲನ ನಡೆಸಿದರು. ರೋವರ್ ಸ್ಕೌಟ್ ಲೀಡರ್ ಪ್ರಸಾದ್, ರೇಂಜರ್ ಲೀಡರ್ ಗಾನವಿ ಮಾರ್ಗದರ್ಶನದಲ್ಲಿ ಧ್ವಜಾರೋಹಣ ಸಂದರ್ಭದ ಬ್ಯಾಂಡ್‌ಸೆಟ್‌ನ್ನು ವಿದ್ಯಾರ್ಥಿಗಳು ನಿರ್ವಹಿಸಿದರು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್, ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಮಾರ ಹೆಗ್ಡೆ ಬಿ.ಎ ಮತ್ತಿತರ ಎಸ್.ಡಿ.ಎಂ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎನ್.ಎಸ್.ಎಸ್‌ನ ಸ್ವಯಂ ಸೇವಕರು ಸಿಹಿ ವಿತರಿಸಿದರು. ದೈಹಿಕ ಶಿಕ್ಷಣ ವಿಭಾಗದ ಸ್ಪೋರ್ಟ್ಸ್ ಕ್ಲಬ್ ವಿದ್ಯಾರ್ಥಿಗಳು ಇಡೀ ಕ್ರೀಡಾಂಗಣವನ್ನು ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ವ್ಯವಸ್ಥಿತ ರೀತಿಯಲ್ಲಿ ಸಜ್ಜುಗೊಳಿಸಿದ್ದರು.

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Article Image

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಮೂಡುಬಿದಿರೆ:- ಭಾರತ ದೇಶದಲ್ಲಿ ಜನಿಸಿರುವುದೇ ನಮ್ಮೆಲ್ಲರ ಭಾಗ್ಯ ಭಾರತ ಪುಣ್ಯ ಭೂಮಿ. 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ನಾವೆಲ್ಲರೂ ಸ್ವಾತಂತ್ರ್ಯಕ್ಕಾಗಿ ಮಡಿದ ಲಕ್ಷಾಂತರ ವೀರರ ಸ್ಮರಣೆಯನ್ನು ಮಾಡಿಕೊಳ್ಳುತ್ತಾ ತಾಯಿ ಭಾರತಿಗೆ, ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಆಕೆಯ ಕೀರ್ತಿಯನ್ನು ಜಗದಗಲಕ್ಕೆ ತಲುಪಿಸುವ ಅತ್ಯಂತ ಮಹತ್ವದ ದಿನ ಇದಾಗಿದೆ. ಪ್ರತಿಯೊಬ್ಬರ ಮನಸಿನಲ್ಲಿ ತಿರಂಗ ಸದಾ ಹಾರುತ್ತಿರಲಿ ಎಂದು ಮೂಡುಬಿದಿರೆ-ಮುಲ್ಕಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆಯಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಮಾತನಾಡಿ ಸ್ವಾತಂತ್ರ್ಯ ಲಭಿಸಿದ 77 ವರ್ಷಗಳಿಂದ ದೇಶದಲ್ಲಿ ಏನೆಲ್ಲ ಬದಲಾವಣೆಯಾಗಿದೆ. ನಮ್ಮ ದೇಶದ ಪ್ರಗತಿ ಹೇಗಿದೆ ಎನ್ನುವುದನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತಿಳಿದುಕೊಳ್ಳಬೇಕು. ಪ್ರತಿಯೊಬ್ಬರ ಹೃದಯದಲ್ಲಿ ತಾಯಿನಾಡಿನ ಬಗ್ಗೆ ಮಾತೃಭೂಮಿಯ ಬಗ್ಗೆ ಅಭಿಮಾನವಿರಬೇಕು. ನಮಗಾಗಿ ಹೋರಾಡಿ ಮಡಿದ ವೀರ ಯೋಧರನ್ನು ಸದಾ ಸ್ಮರಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು. ಉಪನ್ಯಾಸಕಿ ಸಾಯಿಶೃತಿ ನಿರೂಪಿಸಿದರು. ಸಹ ಮುಖ್ಯೋಪಾಧ್ಯಾಯ ಸ್ವಾಗತಿಸಿದರು. ಸಿಬಿಎಸ್‌ಸಿ ಶಾಲೆಯ ಪ್ರಾಂಶುಪಾಲರಾದ ಸುರೇಶ್ ವಂದಿಸಿದರು.

ಆಳ್ವಾಸ್‌ನಲ್ಲಿ ಸಂಭ್ರಮದಿಂದ ನಡೆದ 78ನೇ ಸ್ವಾತಂತ್ರ‍್ಯೋತ್ಸವ

Article Image

ಆಳ್ವಾಸ್‌ನಲ್ಲಿ ಸಂಭ್ರಮದಿಂದ ನಡೆದ 78ನೇ ಸ್ವಾತಂತ್ರ‍್ಯೋತ್ಸವ

ಮೂಡುಬಿದಿರೆ: ವ್ಯಕ್ತಿ, ಸಮುದಾಯ, ದೇಶ ಸೇರಿದಂತೆ ಸರ್ವರಲ್ಲಿ ನಿರ್ಭೀತ ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಬೇಕು ಎಂದು ಮಾಜಿ ಮುಖ್ಯ ಮಂತ್ರಿ ಎಂ.ವೀರಪ್ಪ ಮೊಯ್ಲಿ ಆಶಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆಳ್ವ ಆವರಣದ ಕೆ.ವಿ.ಸುಬ್ಬಣ್ಣ ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡ 78ನೇ ಸ್ವಾತಂತ್ರ‍್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. 'ದೇಶವನ್ನು ಆರ್ಥಿಕ, ಸಾಮಾಜಿಕ, ಸಾಮುದಾಯಿಕವಾಗಿ ಎಲ್ಲರೂ ಸೇರಿ ಕಟ್ಟೋಣ' ಎಂದ ಅವರು, 'ವೈಯಕ್ತಿಕ ಸ್ವಾತಂತ್ರ‍್ಯದ ಉಳಿವೂ ಇಂದಿನ ಅವಶ್ಯಕತೆ. ಸ್ವಾತಂತ್ರ‍್ಯ ವನ್ನು ಯಾರದೇ ಪಾದಕ್ಕೆ ಸಮರ್ಪಿಸಬೇಡಿ' ಎಂದು ಯುವ ಸಮುದಾಯವನ್ನು ಎಚ್ಚರಿಸಿದರು. ಯಾವುದೂ ಅಸಾಧ್ಯ ಎಂಬುದು ಇಲ್ಲ. ಪ್ರಕೃತಿ ಪೂರಕ ಸಂಸ್ಕೃತಿ ಬೆಳೆಯಬೇಕು. ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಬೇಕು. ಅದಕ್ಕೆ ಪ್ರತಿ ವ್ಯಕ್ತಿಯೂ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು. ದೇಶದಲ್ಲಿ ಅನೇಕ ಜಾತಿ-ಧರ್ಮಗಳಿವೆ. ಆದರೆ ವೈವಿಧ್ಯತೆಯ ನಡುವೆ ಐಕ್ಯತೆ ಹಾಗೂ ಸಾಮರಸ್ಯ ಇದೆ. ದೇಶದಲ್ಲಿನ ನದಿಗಳು ಸಮುದ್ರ ಸೇರಿದಂತೆ, ಇಲ್ಲಿ ಯಾರ ಪಾಲು ಎಷ್ಟು ಎಂದು ಕೇಳಬಾರದು. ದೇಶ ನಿರ್ಮಾಣಕ್ಕೆ ಸಮರ್ಪಣ ಭಾವ ಬೇಕು. ಮಾಧುರ್ಯ, ಸಮತೆ, ಸಮಾನತೆ ಪಡೆದ ದೇಶ ಭಾರತ ಎಂದು ಬಣ್ಣಿಸಿದರು. ದೇಶದ ದ್ವಜವೇ ನಮ್ಮ ಐಕ್ಯತೆಯ ಸಂಕೇತ. ಕೇಸರಿ ಧೈರ್ಯ, ಬಲ, ತ್ಯಾಗವಾದರೆ, ಬಿಳಿ ಶಾಂತಿಯ ಸಂಕೇತ. ಹಸಿರು ಸಮೃದ್ಧಿಯ ಸಂಕೇತ. ಅಶೋಕ ಚಕ್ರದ 24ಗೆರೆಗಳು ದಿನದ ಗಂಟೆಯಂತೆ ನಮ್ಮ ಸಮಯ ಪ್ರಜ್ಞೆ ಜಾಗೃತವಾಗಿಡುತ್ತವೆ. ಹೋರಾಟದಿಂದ ಬಂದ ಸ್ವಾತಂತ್ರ‍್ಯವನ್ನು ನಾವೆಲ್ಲ ಉಳಿಸಬೇಕು ಎಂದರು. ಸಂವಿಧಾನ ಯಂತ್ರದ ಹಾಗೆ. ಅದನ್ನು ಕಾರ್ಯಗೊಳಿಸುವವರು ಜೀವಂತಿಕೆ ನೀಡುತ್ತಾರೆ. ನಮ್ಮಲ್ಲಿ ಧೈರ್ಯ ಹಾಗೂ ಸ್ಥೈರ್ಯ ಬೇಕು. ಶೋಷಣೆಯ ವಿರುದ್ಧ ಪ್ರತಿಭಟಿಸಬೇಕು. ಆಗ ಸ್ವಾತಂತ್ರ‍್ಯ ಸಾರ್ಥಕವಾಗುತ್ತದೆ. ಎಲ್ಲರಲ್ಲೂ ನಿರ್ಭೀತಿ ಮನೋಭೂಮಿಕೆ ಬೇಕು ಎಂದರು. ಭಾರತದ ಪ್ರಜಾಪ್ರಭುತ್ವಕ್ಕೆ ಹಿರಿಯರು ಸದೃಢ ಅಡಿಪಾಯ ಹಾಕಿದ್ದಾರೆ. ಇದರಿಂದ ದೇಶವು ರಾಜಕೀಯ ಸಬಲತೆ, ಸದೃಢತೆಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ತಲೆ ಎತ್ತಿ ನಿಂತಿದೆ ಎಂದರು. ಮೌಲ್ಯಯುತ ಶಿಕ್ಷಣ ನೀಡುತ್ತಿರುವ ಡಾ.ಎಂ.ಮೋಹನ ಆಳ್ವ ಅವರು ಮಹಾಶಿಲ್ಪಿ. ಇಲ್ಲಿ ಪಾಲ್ಗೊಂಡಿರುವುದು ನನ್ನ ಸೌಭಾಗ್ಯ. ಇಲ್ಲಿ ಎಲ್ಲರೂ ಶಿಸ್ತು ಬದ್ಧರಾಗಿ ಧ್ವಜ ವಂದನೆ ಮಾಡಿರುವುದು ರೋಮಾಂಚನ ನೀಡಿದೆ ಎಂದು ಸಂತಸ ಹಂಚಿಕೊಂಡರು. 'ವಿಶ್ವ ಸಂಸ್ಕೃತಿಯ ಮಹಾಯಾನ' ಬರೆಯುತ್ತಿದ್ದೇನೆ. ಇದು ಸಂಸ್ಕೃತಿಯ ಸಾರ. ಸಂಸ್ಕೃತಿಯು ಪ್ರಕೃತಿಗೆ ಪೂರಕವಾಗಿ ಇರಬೇಕು ಎಂದರು. ಮನೆ, ಮನಗಳಲ್ಲಿ ಸ್ವಾತಂತ್ರ‍್ಯ ಅರಳಲಿ ಎಂದು ಅವರು ಹಾರೈಸಿದರು. ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಪಿ.ಜಿ.ಆರ್ ಸಿಂಧ್ಯಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಉದ್ಯಮಿ ಶ್ರೀಪತಿ ಭಟ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹಾಗೂ ಡಾ ವಿನಯ ಆಳ್ವ ಇದ್ದರು. ವಿವಿಧ ಕ್ಷೇತ್ರದ ಸಾಧಕರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರುಗಳು, ಬೋಧಕ ಹಾಗೂ ಭೋಧಕೇತರ ಸಿಬ್ಬಂದಿ ಸೇರಿದಂತೆ 15 ಸಾವಿರಕ್ಕೂ ಅಧಿಕ ಜನರು ಸಂಭ್ರಮದಲ್ಲಿ ಪಾಲ್ಗೊಂಡರು. ಧ್ವಜಾರೋಹಣದ ತಕ್ಷಣ ರಾಷ್ಟ್ರ ಗೀತೆ ಹಾಡಿ, ದೇಶಪ್ರೇಮ ವ್ಯಕ್ತಪಡಿಸಲಾಯಿತು. ಇದಕ್ಕೂ ಮೊದಲು ಅತಿಥಿಗಳು ಕಾಲೇಜಿನ ಎನ್ ಸಿಸಿ ತಂಡಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಎನ್‌ಸಿಸಿ ಸೀನಿಯರ್ ಅಂಡರ್ ಆಫೀಸರ್ ಜೊನಾಥನ್ ಡಿಸೋಜ ನೇತೃತ್ವದಲ್ಲಿ ಗೌರವ ರಕ್ಷೆ ನೀಡಲಾಯಿತು. ಬಳಿಕ 'ವಂದೇ ಮಾತರಂ' ಹಾಡಲಾಯಿತು. 'ಕೋಟಿ ಕಂಠೋ ಸೇ..' ಗಾನಕ್ಕೆ ವೇದಿಕೆ ಹಾಗೂ ಸಭಾಂಗಣದಲ್ಲಿ ಶಿಸ್ತು ಬದ್ಧವಾಗಿ ನಿಂತ ವಿದ್ಯಾರ್ಥಿಗಳು ಧ್ವಜ ಹಾರಡಿಸಿದರೆ, ಕೇಸರಿ, ಬಿಳಿ, ಹಸಿರು ಬಣ್ಣಗಳ ರಂಗು ಬ್ಲೋವರ್ ಮೂಲಕ ಗಾಳಿಯಲ್ಲಿ ತೇಲಿ ಬಂತು. ಕೇಸರಿ, ಬಿಳಿ, ಹಸಿರು ಬಣ್ಣದ ಪುರುಲಿಯಾ ಸಿಂಹಗಳು ವಿಶೇಷ ಮೆರುಗು ನೀಡಿದವು. ಉಪನ್ಯಾಸಕ ರಾಜೇಶ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

ಶ್ರೀ ಕ್ಷೇತ್ರ ಪಡ್ಯಾರಬೆಟ್ಟದಲ್ಲಿ ನಾಳೆ ಸಿಂಹ ಸಂಕ್ರಮಣ

Article Image

ಶ್ರೀ ಕ್ಷೇತ್ರ ಪಡ್ಯಾರಬೆಟ್ಟದಲ್ಲಿ ನಾಳೆ ಸಿಂಹ ಸಂಕ್ರಮಣ

ಬೆಳ್ತಂಗಡಿ ತಾಲೂಕಿನ, ಪೆರಿಂಜೆ ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ, ಶ್ರೀ ಕ್ಷೇತ್ರ ಪಡ್ಯಾರಬೆಟ್ಟದಲ್ಲಿ ನಾಳೆ(ಆ. 16) ಸಿಂಹ ಸಂಕ್ರಮಣ ನಡೆಯಲಿದ್ದು ಆ ಪ್ರಯುಕ್ತ ಹೂವಿನ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಸಾಯಂಕಾಲ ಆಟಿಕೋಲ, ತುಲಾಭಾರ ಸೇವೆ ನಡೆಯಲಿದೆ ಎಂದು ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ್ ಕುಮಾರ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತುಲಾಭಾರ ಸೇವೆ ಮಾಡಿಸುವವರು ಮುಂಚಿತವಾಗಿ ತಿಳಿಸಬೇಕು 94481610227, 9972993222

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆ

Article Image

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ ಸಾಧನ ಪ್ರಶಸ್ತಿಗೆ 9ನೇ ಭಾರಿಗೆ ಆಯ್ಕೆಯಾಗಿರುತ್ತದೆ. 2023-24 ನೇ ಸಾಲಿನಲ್ಲಿ ಸಹಕಾರ ಸಂಘವು 41709 ಸದಸ್ಯತನದೊಂದಿಗೆ, ರೂ. 188.78 ಕೋಟಿ ಠೇವಣಿ, ರೂ.155.63 ಕೋಟಿ ಸಾಲ, ರೂ.212.24 ಕೋಟಿ ದುಡಿಯುವ ಬಂಡವಾಳದೊಂದಿಗೆ ರೂ.3.84ಕೊಟಿ ನಿವ್ವಳ ಲಾಭ ಗಳಿಸಿರುತ್ತದೆ. 2023-24ನೇ ಸಾಲಿನಲ್ಲಿ ರೂ.11.28 ಕೋಟಿ ವ್ಯವಹಾರ ನಡೆಸಿರುತ್ತದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಮಾಜಿಕ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಸ್ವಂತ ಕೇಂದ್ರ ಕಛೇರಿ ಸುಮಾರು 5 ಕೋಟಿ ಮೊತ್ತದ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಜು.13ರಂದು ಲೋಕರ್ಪಣೆಗೊಂಡಿದ್ದು, ಇದರ ಎರಡನೇ ಮಹಡಿಯಲ್ಲಿ ಆಡಳಿತ ಕಛೇರಿಯನ್ನು ಹೊಂದಿರುತ್ತದೆ. 2023-24 ನೇ ಸಾಲಿನಲ್ಲಿ ಸಂಘವು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಠ ಸಾಧನೆಯನ್ನು ಗಮನಿಸಿ 2023-24 ನೇ ಸಾಲಿನ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಆಡಳಿತ ಮಂಡಳಿ ನಿರ್ದೇಶಕರ ಸಮ್ಮುಖದಲ್ಲಿ ಸಾಧನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ ಎಂದು ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಎನ್ ಪದ್ಮನಾಭ ತಿಳಿಸಿರುತ್ತಾರೆ.

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Article Image

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ 2023-24 ನೇ ಸಾಲಿನ ಮಹಾಸಭೆಯಲ್ಲಿ ಸಾಧನ ಪ್ರಶಸ್ತಿ ಯನ್ನು ಸಂಘದ ಅಧ್ಯಕ್ಷರ ಪರವಾಗಿ ವಿಶೇಷಾಧಿಕಾರಿಗಳಾದ ಯಂ ಮೋನಪ್ಪ ಪೂಜಾರಿ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ ಕುಮಾರ್ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ| ರಾಜೇಂದ್ರ ಕುಮಾರ್, ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ ಎಸ್ ಕೋಟ್ಯಾನ್ ಹಾಗೂ ಇತರ ನಿರ್ದೇಶಕರುಗಳು. ಸಹಕಾರ ಸಂಘಗಳ ಉಪನಿಬಂಧಕರದ ರಮೇಶ್, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಆನಂದ ಪೂಜಾರಿ, ಸರ್ವೆದೋಳ ಉಪಸ್ಥಿತರಿದ್ದರು.

ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

Article Image

ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

ಧರ್ಮಸ್ಥಳ: ಮೂಡಂಗಲ್ ಫ್ರೆಂಡ್ಸ್ ಬಳಗದ ಆಶ್ರಯದಲ್ಲಿ ಭಾನುವಾರ ಧರ್ಮಸ್ಥಳದಲ್ಲಿ ಆಯೋಜಿಸಿದ “ಕೆಸರ್‌ಡ್ ಒಂಜಿ ದಿನ” ಕಾರ್ಯಕ್ರಮವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ. ವಿ. ಶೆಟ್ಟಿ ಉದ್ಘಾಟಿಸಿದರು. ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಸಂಘಟಿತರಾಗಿ ಆಯೋಜಿಸುವ ಇಂತಹ ಕಾರ್ಯಕ್ರಮಗಳಿಂದ ಪರಸ್ಪರ ಪ್ರೀತಿ-ವಿಶ್ವಾಸ, ಆತ್ಮೀಯತೆ ಹೆಚ್ಚಾಗಿ ಸಾಮಾಜಿಕ ಸಾಮರಸ್ಯ ಮೂಡಿಬರುತ್ತದೆ ಎಂದು ಎ. ವಿ. ಶೆಟ್ಟಿ ಹೇಳಿದರು. ದೈಹಿಕ ಮತ್ತು ಮಾನಸಿಕ ಆರೋಗ್ಯವರ್ಧನೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಹೇಳಿದ ಅವರು ಎಲ್ಲಾ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು. ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು. ದೇವಸ್ಥಾನದ ಪಾರುಪತ್ಯಗಾರ್ ಲಕ್ಷ್ಮಿನಾರಾಯಣ್ ರಾವ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿಮಲಾ, ವಕೀಲರಾದ ಕೇಶವ ಬೆಳಾಲ್, ಧನಕೀರ್ತಿ ಆರಿಗ, ಮುರಳಿಧರ ದಾಸ್, ಹರ್ಷ ಜೈನ್ ಮತ್ತು ಗದ್ದೆಯ ಮಾಲಕ ಕೃಷ್ಣಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಧರ್ಮಸ್ಥಳದಲ್ಲಿ ಪುಸ್ತಕಗಳ ಲೋಕಾರ್ಪಣೆ, ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ಸಮಾರಂಭ

Article Image

ಧರ್ಮಸ್ಥಳದಲ್ಲಿ ಪುಸ್ತಕಗಳ ಲೋಕಾರ್ಪಣೆ, ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ಸಮಾರಂಭ

ಆಟ-ಪಾಠಗಳು ಜೊತೆಯಾಗಿದ್ದಾಗ ಶಿಕ್ಷಣ ಅರ್ಥಪೂರ್ಣವಾಗಿದ್ದು ವಿದ್ಯಾರ್ಥಿಗಳು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಪುಸ್ತಕದ ಜೊತೆ ಇದ್ದಾಗ ಮಸ್ತಕದ ವಿಕಾಸವೂ ಆಗುವುದರಿಂದ ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಿಕೊಂಡು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಮಹಾಸ್ವಾಮೀಜಿ ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಶಾಂತಿವನ ಟ್ರಸ್ಟ್ ನಿಂದ ಪ್ರಕಟಿಸಿದ “ಜ್ಞಾನದರ್ಶಿನಿ ಮತ್ತು ಜ್ಞಾನವರ್ಷಿಣಿ” ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿಯೊಂದಿಗೆ ಮಸ್ತಕದ ವಿಕಾಸವೂ ಆಗುತ್ತದೆ. ಕಾಲಹರಣ ಮಾಡುವ ಮೊಬೈಲ್ ಫೋನ್ ಬಳಕೆಯ ಚಟವನ್ನು ಕಡಿಮೆ ಮಾಡಿ, ದೃಢಸಂಕಲ್ಪದೊಂದಿಗೆ ನಿರ್ಧಿಷ್ಟ ಗುರಿಯನ್ನು ಇಟ್ಟುಕೊಂಡು ಉನ್ನತ ಸಾಧನೆ ಮಾಡಬೇಕು. ಸಾಧನೆ ಸಾಧಕರ ಸೊತ್ತು, ಅಲ್ಲದೆ ಸೋಮಾರಿಗಳ ಸೊತ್ತು ಅಲ್ಲ. ಪಠ್ಯದ ಜೊತೆಗೆ ನಿತ್ಯವೂ ಇತರ ಪುಸ್ತಕಗಳನ್ನೂ ಓದಬೇಕು. ಸರ್ಕಾರ ಮಾಡಬೇಕಾದ ಕೆಲಸವನ್ನು ಧರ್ಮಸ್ಥಳದ ವತಿಯಿಂದ ಮಾಡುತ್ತಿದ್ದು, ಪುಸ್ತಕ ಪ್ರಕಾಶನ ರಾಜ್ಯಕ್ಕೆ ಮಾದರಿ ಕಾರ್ಯಕ್ರಮವಾಗಿದೆ ಎಂದು ಸ್ವಾಮೀಜಿ ಹೆಗ್ಗಡೆಯವರನ್ನು ಅಭಿನಂದಿಸಿದರು. ಚಲನಚಿತ್ರ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಶುಭಾಶಂಸನೆ ಮಾಡಿ ಕಲೆಯನ್ನು ತಪಸ್ಸಿನಂತೆ ಏಕಾಗ್ರತೆ ಮತ್ತು ಸತತ ಪ್ರಯತ್ನದಿಂದ ಅಭ್ಯಾಸ ಮಾಡಿದರೆ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಡಿ.ಡಿ.ಪಿ.ಐ. ವೆಂಕಟೇಶ ಸುಬ್ರಾಯ ಪಟಗಾರ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಂಡು ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರಾಗಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಮಾನವೀಯತೆ ಇಲ್ಲದ ಜನ್ಮ ವ್ಯರ್ಥ. ಗುರು-ಹಿರಿಯರನ್ನು ಗೌರವಿಸುವುದು, ಸಮಾನ ಮನಸ್ಕರಲ್ಲಿ ಸ್ನೇಹಿತರಂತೆ ಪ್ರೀತಿ-ವಿಶ್ವಾಸದಿಂದ ವ್ಯವಹರಿಸುವುದು ಹಾಗೂ ಕಿರಿಯರಲ್ಲಿ ಪ್ರೀತಿ, ಕರುಣೆ ಅನುಕಂಪ ತೋರಿಸುವುದು ಇತ್ಯಾದಿ ಮಾನವೀಯ ಮೌಲ್ಯಗಳಿಂದ ಜೀವನ ಪಾವನವಾಗುತ್ತದೆ. ಆದುದರಿಂದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನೂ ಕಲಿಸಿಕೊಡಲಾಗುತ್ತದೆ ಎಂದರು. ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಪೂರನ್‌ವರ್ಮ ಉಪಸ್ಥಿತರಿದ್ದರು. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದ ಯೋಗ ನಿರ್ದೇಶಕ ಶಶಿಕಾಂತ್ ಜೈನ್, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯನ್ನು ಈ ವರ್ಷ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರಕ್ಕೂ ವಿಸ್ತರಿಸಲಾಗುವುದು ಎಂದು ಪ್ರಕಟಿಸಿದರು. ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಅತ್ಯಾಧುನಿಕ ಯಂತ್ರ

Article Image

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಅತ್ಯಾಧುನಿಕ ಯಂತ್ರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಹಾರ್ಮೋನ್ ಪರೀಕ್ಷೆ, ಬಂಜೆತನ ಪರೀಕ್ಷೆ ಮತ್ತು ಸೋಂಕು ರೋಗಗಳ ಪತ್ತೆಗಾಗಿ ಕೆಮಿಲುಮಿನೆಸೆನ್ಸ್ ಇಮ್ಯೂನೊಲಿಸೆ ಸಿಎಲ್-900ಐ ಎಂಬ ಅತ್ಯಾಧುನಿಕ ಯಂತ್ರವನ್ನು ಆ. 5ರಂದು ಅಳವಡಿಸಲಾಯಿತು. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಆಶಯದಂತೆ, ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಿತದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತದೆ. ಅವರ ನಿರ್ದೇಶನದಂತೆ ರೋಗಿಗಳಿಗೆ ಶೀಘ್ರವಾಗಿ ಮತ್ತು ನಿಖಿರವಾದ ವರದಿ ನೀಡಬಲ್ಲ ಅತ್ಯಾಧುನಿಕ ವೈದ್ಯಕೀಯ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಪ್ರಸ್ತುತ ಅಳವಡಿಸಿರುವ ಸಿಎಲ್-900ಐ ಯಂತ್ರ ಅತ್ಯಂತ ಹೆಚ್ಚು ನಿಖರವಾಗಿ ಮತ್ತು ಅತೀ ಶೀಘ್ರವಾಗಿ ಫಲಿತಾಂಶ ನೀಡಬಲ್ಲದು. ಇಲ್ಲಿ ಈಗಾಗಲೇ ಟೈಪ್-2 ಮಧುಮೇಹ ಪತ್ತೆ ಹಚ್ಚುವಲ್ಲಿ ಹೆಚ್ಚು ನಿಖರವಾದ ವರದಿ ನೀಡಬಲ್ಲ ಹೈಪಫಾರ್ಮೆನ್ಸ್ ಲಿಕ್ವಿಡ್ ಕ್ರೊಮ್ಯಾಟೋಗ್ರಫಿ ಯಂತ್ರವನ್ನು ಅಳವಡಿಸಲಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್‌ಪಿಎಲ್‌ಸಿ ವಿಧಾನದ ಮೂಲಕ ಟೈಪ್-2 ಮಧುಮೇಹ ಪತ್ತೆ ಹಚ್ಚಲು ಸಾಧ್ಯವಾಗುವ ಏಕೈಕ ಆಸ್ಪತ್ರೆ ಇದಾಗಿದೆ ಎಂದು ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.

ಸತ್ತೂರು, ಧಾರವಾಡ: ಎಸ್.ಡಿ.ಎಂ. ಪಾಲಿಕ್ಲಿನಿಕ್‌ನಲ್ಲಿ ಮೂರು ದಿನಗಳ ಉಚಿತ ಆರೋಗ್ಯ ತಪಾಸಣಾ ಶಿಬಿರ

Article Image

ಸತ್ತೂರು, ಧಾರವಾಡ: ಎಸ್.ಡಿ.ಎಂ. ಪಾಲಿಕ್ಲಿನಿಕ್‌ನಲ್ಲಿ ಮೂರು ದಿನಗಳ ಉಚಿತ ಆರೋಗ್ಯ ತಪಾಸಣಾ ಶಿಬಿರ

ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯು ದೇಶದ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧಾರವಾಡದ ಜುಬಿಲಿ ಸರ್ಕಲ್‌ನಲ್ಲಿರುವ ಎಸ್.ಡಿ.ಎಂ. ಪಾಲಿಕ್ಲಿನಿಕ್‌ನಲ್ಲಿ 3 ದಿನಗಳ ಕಾಲ ಬೆಳಿಗ್ಗೆ 09.00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. ಆಗಸ್ಟ್ 12 ಸೋಮವಾರದಂದು ಮೆಡಿಸಿನ್ ಮತ್ತು ಕಣ್ಣಿನ ಪರೀಕ್ಷೆ, ಆಗಸ್ಟ್ 13 ಮಂಗಳವಾರದಂದು ಸ್ತ್ರೀರೋಗ ಮತ್ತು ಮಕ್ಕಳ ತಪಾಸಣೆ ಮತ್ತು ಆಗಸ್ಟ್ 14 ಬುಧವಾರದಂದು ಎಲುಬು ಸಂಬಂದಿತ, ಚರ್ಮರೋಗ ಮತ್ತು ಕಿವಿ ಮೂಗು ಗಂಟಲಿನ ತಪಾಸಣೆ ನಡೆಯಲಿದೆ. ಸಾರ್ವಜನಿಕರು 3 ದಿನಗಳ ಕಾಲ ನಡೆಯುವ ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕಾಗಿ ಎಸ್.ಡಿ.ಎಂ. ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತಪಾಸಣಾ ಸಮಯವನ್ನು ಮುಂಚಿತವಾಗಿ ನಿಗದಿ ಪಡಿಸಿಕೊಳ್ಳಲು ಈ ದೂರವಾಣಿಯನ್ನು ಸಂಪರ್ಕಿಸಬಹುದು. 0836–2957777/9740312042

ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

Article Image

ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

ಉಜಿರೆ: ಸಮಾಜದಲ್ಲಿ ನೊಂದ ಜೀವಗಳಿಗೆ ಧೈರ್ಯ ತುಂಬುವ ಅವಶ್ಯಕತೆ ಇದೆ. ಮಾಡುವ ಕರ್ತವ್ಯದಲಿ ಸೇವಾ ಮನೋಭಾವ ಮತ್ತು ಪ್ರೀತಿ ಜೊತೆಗೂಡಿದರೆ ಕೆಲಸದ ಉತ್ಸಾಹ ಇಮ್ಮಡಿಯಾಗುತ್ತದೆ. ಸುಖ ಮತ್ತು ಸಂತೋಷದ ತಾತ್ಪರ್ಯ ಅರಿತು, ವೈಯಕ್ತಿಕ ಅಲ್ಪ ಸುಖಕ್ಕಿಂತ ಸೇವೆಯ ಮೂಲಕ ಎಲ್ಲರ ಸಂತಸದಲ್ಲಿ ಸಂತೃಪ್ತರಾಗೋಣ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಯುವ ಅಧ್ಯಕ್ಷ ಪೂರನ್ ವರ್ಮಾ ಹೇಳಿದರು. ಇವರು ಇತ್ತೀಚೆಗೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ಆಡಳಿತ ಮಂಡಳಿ ಆಯೋಜಿಸಿದ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನ ನೂತನ ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್ ಮಾತನಾಡಿ, ಈ ಅಭಿನಂದನಾ ಕಾರ್ಯಕ್ರಮ ರೋಟರಿ ಕ್ಲಬ್ ನ ಕಾರ್ಯವೈಖರಿ ಮತ್ತು ಹೊಸ ಯೋಜನೆಗಳಿಗೆ ಮತ್ತಷ್ಟು ಧೈರ್ಯ ಮತ್ತು ಬಲ ತಂದಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ್ ಮೋಗರಾಜ್ ಮಾತನಾಡಿ, ವ್ಯಕ್ತಿತ್ವ ಹಾಗು ಸಂಸ್ಕಾರದಿಂದ ವ್ಯಕ್ತಿ ಸದೃಢನಾಗುತ್ತಾನೆ ಮತ್ತು ತನ್ನ ಕಾರ್ಯಕ್ಷಮತೆಯಿಂದ ಸಮಾಜದಲ್ಲಿ ಗುರುತಿಸಿಕೊಳ್ಳುತ್ತಾನೆ. ಇದಕ್ಕೆ ಪೂರನ್ ವ್ಯಕ್ತಿತ್ವವೇ ನಿದರ್ಶನ ಎಂದರು. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿ, ಸಾತ್ವಿಕ್ ಜೈನ್ ಪೂರನ್ ವರ್ಮರ ವ್ಯಕ್ತಿ ಪರಿಚಯ ಮಾಡಿ ಪೂರನ್ ಜೊತೆಗಿನ ತನ್ನ ಬಾಲ್ಯದ ನೆನಪುಗಳನ್ನು ಹಂಚಿಕೊಂಡರು. ಆಸ್ಪತ್ರೆಯ ಸಿಬ್ಬಂದಿ ದೀಪಾ ಕಾರ್ಯಕ್ರಮದಲ್ಲಿ ಅನಿಸಿಕೆಯನ್ನು ಹೇಳಿ ನೂತನ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ನೂತನವಾಗಿ ಬೆಳ್ತಂಗಡಿ ರೋಟರಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಗೊಂಡಿರುವ ಪೂರನ್ ವರ್ಮಾ ಹಾಗೂ ಕ್ಲಬ್ ನ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿರುವ ಸಂದೇಶ್ ಕುಮಾರ್ ರಾವ್ ರನ್ನು ಆಸ್ಪತ್ರೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರಿಂದ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮೆಡಿಕಲ್ ಸೂಪರಿಂಟೆಂಡೆಂಟ್ ದೇವೇಂದ್ರ ಕುಮಾರ್ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರೋಗಿಗಳ ಸಂಯೋಜಕಿ ಹೇಮಾವತಿ ಸ್ವಾಗತಿಸಿ, ಸೃಜನ್ ಕುಮಾರ್ ವಂದಿಸಿದರು.

First Previous

Showing 1 of 5 pages

Next Last