ಎಸೆಸೆಲ್ಸಿ ಪರೀಕ್ಷೆ: ಇಂದು ಫಲಿತಾಂಶ
Published Date: 01-May-2025 Link-Copied
ಬೆಂಗಳೂರು, ಮೇ 1: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ನಡೆಸಿದ 2024-25ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ. ಶುಕ್ರವಾರ ಬೆಳಗ್ಗೆ 11.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರಿಂದ ಫಲಿತಾಂಶ https://karresults.nic.ind ವೀಕ್ಷಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ಮಂಡಳಿ ತಿಳಿಸಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ? https://karresults.nic.inನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಈ (ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ) ಎಸೆಸೆಲ್ಸಿ ರಿಸಲ್ಟ್-2025 ಲಿಂಕ್ ಮೇಲೆ - ಕ್ಲಿಕ್ ಮಾಡಿದರೆ ಪರೀಕ್ಷೆಯ ಫಲಿತಾಂಶ 2025 ಲಾಗಿನ್ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಿ. ಬಳಿಕ ಸಬ್ ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದರೆ ಫಲಿತಾಂಶವನ್ನು ಸ್ಟೀನ್ ಮೇಲೆ ನೊಡಬಹುದಾಗಿದೆ.