ಉಜಿರೆ ಎಸ್ ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ
Published Date: 22-Jul-2025 Link-Copied
ಬೆಳ್ತಂಗಡಿ, ಜು. 21: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇಟಿ-2025 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನ್‌ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್‌ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಿಸಲಾಗಿದೆ. ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ| ಅಶೋಕ್ ಕುಮಾರ್ ತಿಳಿಸಿದ್ದಾರೆ. ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ಪಾಸ್ ವರ್ಡನ್ನು ಜತೆಗೆ ತರಲು ಕೋರಲಾಗಿದೆ.