ರವಿವಾರವೂ ಉಪ ನೋಂದಣಿ ಕಚೇರಿ ಕರ್ತವ್ಯ
Published Date: 11-Jul-2026 Link-Copied
ಮಂಗಳೂರು, ಜು.10: ರಾಜ್ಯಾದ್ಯಂತ ಇರುವ ಎಲ್ಲ ಉಪ ನೋಂದಣಿ ಕಚೇರಿಗಳು ಜು.12ರಂದು ಸಾರ್ವಜನಿಕ ರಜಾ ದಿನವಾಗಿದ್ದರೂ ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿರಲಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಪಡೆದುಕೊಳ್ಳಬಹುದು. ಸಾರ್ವಜನಿಕರು ಈ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ತಿಳಿಸಿದೆ.