ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ


Logo

Published Date: 08-Sep-2026 Link-Copied

ಉಜಿರೆ: ಸ್ಥಳೀಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11 ರಂದು ರಾಷ್ಟ್ರಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ “ಎಸ್.ಡಿ.ಎಂ. ಆರೋಹಂ” ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ತಿಳಿಸಿದರು. ಕಾರ್ಯಕ್ರಮಗಳ ವಿವರ: ಸೆ. 10 ರಂದು ಗುರುವಾರ ಪೂರ್ವಾಹ್ನ ಹತ್ತು ಗಂಟೆಗೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ಬೆಂಗಳೂರು ಕ್ಷೇಮವನದ ಸಿ.ಇ.ಒ. ಶ್ರದ್ಧಾಅಮಿತ್ ರಾಷ್ಟ್ರಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ ಉದ್ಘಾಟಿಸುವರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಶುಭಾಶಂಸನೆ ಮಾಡುವರು. ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ ಅಧ್ಯಕ್ಷತೆ ವಹಿಸುವರು. ಸೆ. 11 ರಂದು ಶುಕ್ರವಾರ ಸಂಜೆ ಗಂಟೆ 4.30 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಬಹುಮಾನ ವಿತರಿಸುವರು. ಪದವಿಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳನ್ನು ನಡೆಸಲಿದ್ದು ಪ್ರತಿ ಪದವಿಪೂರ್ವ ಕಾಲೇಜಿನಿಂದ 62 ಮಂದಿ ಹಾಗೂ ಪ್ರತಿ ಪದವಿ ಕಾಲೇಜಿನಿಂದ 19 ಮಂದಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಒಟ್ಟು 23 ಸ್ಪರ್ಧೆಗಳನ್ನು ನಡೆಸಲಾಗುವುದು. ಸ್ಪರ್ಧೆಗೆ ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ. ಎಲ್ಲಾ ಸ್ಪರ್ಧಿಗಳಿಗೆ ಎರಡು ದಿನ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು. ಸ್ಪರ್ಧೆಗಳಲ್ಲಿ ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು. ಸೆ. 10 ರಂದು ಸಂಜೆ 6 ಗಂಟೆಯಿಂದ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರಿಂದ ಕಾರ್ಯಕ್ರಮ ಹಾಗೂ 7 ಗಂಟೆಯಿಂದ ಟೀಂ ಕಂಬೋಜಿ ಮ್ಯೂಸಿಕ್ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ. ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ನಂದಕುಮಾರಿ, ಆರೋಹಂ ಸಂಘಟಕ ಗಣೇಶ್ ನಾಯಕ್, ಡಾ. ಶ್ರೀಧರ ಭಟ್ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಸುನಿಲ್ ಹೆಗ್ಡೆ ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img