ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ


Logo

Published Date: 09-Sep-2026 Link-Copied

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ಅನುದಾನರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ (ಕುಪ್ಮಾ) ಆಶ್ರಯದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ ಅಂತ್ಯದೊಳಗೆ ಆಯೋಜಿಸಲಾಗುವುದು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಅರ್ಹ ಉಪನ್ಯಾಸಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಕುಪ್ಮಾ ಸಮಿತಿ ಸಭೆಯ ನಡಾವಳಿಯಂತೆ ಜಿಲ್ಲಾವಾರು ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗುತ್ತಿದ್ದು, ಕಲಾ ವಿಭಾಗ, ವಿಜ್ಞಾನ ವಿಭಾಗ ಹಾಗೂ ವಾಣಿಜ್ಯ ವಿಭಾಗಗಳಿಂದ ಒಟ್ಟು ಐವರು ಶಿಕ್ಷಕರನ್ನು ಆಯ್ಕೆ ಮಾಡಲಾಗುವುದು. ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು ಎಂದು ಸಂಘ ತಿಳಿಸಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಉಪನ್ಯಾಸಕರು ಒಂದೇ ಕಾಲೇಜಿನಲ್ಲಿ ಕನಿಷ್ಠ 10 ವರ್ಷ ಕರ್ತವ್ಯ ಸಲ್ಲಿಸಿರಬೇಕು. ಶಿಕ್ಷಕ ವೃತ್ತಿಯಲ್ಲಿನ ನಿಷ್ಠೆ ಉತ್ತಮ ಕಲಿಕಾ ಫಲಿತಾಂಶ, ನಾವೀನ್ಯಯುತ ಬೋಧನಾ ಕ್ರಮಗಳು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಲ್ಲಿಸಿರುವ ಸೇವೆ, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿನ ಸಾಧನೆಯನ್ನು ಆಯ್ಕೆ ಸಂದರ್ಭ ಪರಿಗಣಿಸಲಾಗುವುದು. ಕಾನೂನುಬಾಹಿರ ಅಥವಾ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿರಬಾರದು. ಪ್ರಶಸ್ತಿಗೆ ಆಯ್ಕೆಯಾಗುವ ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವ ಕಾಲೇಜು ಅಥವಾ ಆಡಳಿತ ಮಂಡಳಿಯು ಕುಪ್ಮಾ ಸದಸ್ಯತ್ವವನ್ನು ಕಡ್ಡಾಯವಾಗಿ ಹೊಂದಿರಬೇಕು. ಕುಪ್ಮಾ ದ ಸದಸ್ಯರಾಗಿರುವ ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುವುದು. ಅರ್ಹ ಉಪನ್ಯಾಸಕರು ಇತ್ತೀಚಿನ ಎರಡು ಭಾವ ಚಿತ್ರಗಳು, ಪ್ರಿನ್ಸಿಪಾಲರ ಪತ್ರ ಹಾಗೂ ಆಡಳಿತ ಮಂಡಳಿಯ ಅಧ್ಯಕ್ಷರು/ ಕಾರ್ಯದರ್ಶಿ/ಸಂಚಾಲಕರ ಒಪ್ಪಿಗೆ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನ. ದಾಖಲೆಗಳನ್ನು ದ್ವಿಪ್ರತಿಯಲ್ಲಿ ಮಂಜುನಾಥ್ ಎಸ್., ರೇವಣ್ಕರ್, ವಾದಿರಾಜ ನಗರ, ಗುಲಾಬಿ ಶ್ರೀಪಾದ್ ನಿಲಯ, ಅಳಕೆ, ಮಂಗಳೂರು-575003 ವಿಳಾಸಕ್ಕೆ ಕಳುಹಿಸಬೇಕು. ಆಯ್ಕೆಯಾದ ಶಿಕ್ಷಕರಿಗೆ ಸೆಪ್ಟೆಂಬರ್ ಅಂತ್ಯದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಅರ್ಹ ಶಿಕ್ಷಕರು ಅರ್ಜಿ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿ ಅಧ್ಯಕ್ಷರಾದ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ಡಾ. ಮಂಜುನಾಥ್ ರೇವಣ್ಕರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img