ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
Published Date: 12-Sep-2026 Link-Copied
ಮಂಗಳೂರು: 2026-27ನೇ ಸಾಲಿನ ಕೃಷಿ ಪ್ರಶಸ್ತಿ ಯೋಜನೆಯಡಿ ಭತ್ತದ ಬೆಳೆ ಸ್ಪರ್ಧೆ ಹಾಗೂ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಕೆ-ಕಿಸಾನ್ ಪೋರ್ಟಲ್ ಆರ್‌ಎಸ್ ಲಾಗಿನ್ ಅಥವಾ ಸಿಟಿಜನ್ ಲಾಗಿನ್ ಮೂಲಕ ರೈತ ಸಂಪರ್ಕ ಕೇಂದ್ರ/ ಸ್ವತಃ / ನಾಗರಿಕ ಸೇವಾ ಕೇಂದ್ರ ಮೂಲಕ ಅರ್ಜಿ ಸಲ್ಲಿಸಬಹುದು. ಕೃಷಿ ಪ್ರಶಸ್ತಿ ಬೆಳೆ ಸ್ಪರ್ಧೆ ಹಾಗೂ ಕೃಷಿ ಪಂಡಿತ್ ಪ್ರಶಸ್ತಿಗೆ ಪುರುಷರು ಹಾಗೂ ಮಹಿಳೆಯರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆ. 30 ಎಂದು ಪ್ರಕಟನೆ ತಿಳಿಸಿದೆ.