ಮಕ್ಕಳಿಗೆ ಪ್ರಶಸ್ತಿ: ಅರ್ಜಿ ಆಹ್ವಾನ
Published Date: 12-Sep-2026 Link-Copied
ಮಂಗಳೂರು: ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ನಾವೀನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಇಲಾಖಾ ವತಿಯಿಂದ ಜಿಲ್ಲಾ ಮಟ್ಟದ 2026-27ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳನ್ನು ಆಯ್ಕೆ ಮಾಡಿ, ಆಯ್ಕೆಯಾದ ಪ್ರತಿ ಮಗುವಿಗೆ ತಲಾ 10,000 ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಅರ್ಜಿ ಸಲ್ಲಿಸುವ ಮಕ್ಕಳ ವಯಸ್ಸು 5 ರಿಂದ 18 ವರ್ಷದೊಳಗಿರಬೇಕು. ಜನನ ಪ್ರಮಾಣಪತ್ರವನ್ನು ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಲ್ಪಟ್ಟಿರಬೇಕು. ಈ ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡುವುದಿಲ್ಲ, ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲೆಗಳನ್ನು ಒದಗಿಸಬೇಕು. ಅರ್ಜಿ ಸಲ್ಲಿಸಲು ಸೆ.20 ಕೊನೆಯ ದಿನ, ಮಾಹಿತಿ ಅಥವಾ ಅರ್ಜಿ ನಮೂನೆಗೆ ನಗರದ ಬಿಜೈ ಮೆಸ್ಕಾಂ ಬಳಿ ಇರುವ ಜಿಲ್ಲಾ ಸ್ತ್ರೀಶಕ್ತಿ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಇಲಾಖೆ ತಿಳಿಸಿದೆ.