ಉಜಿರೆಯಲ್ಲಿ ಪೊಲೀಸ್ ಕಾನ್ಸ್‌ಸ್ಟೇಬಲ್ ಹುದ್ದೆಗೆ ಪರೀಕ್ಷೆ
Published Date: 15-Feb-2024 Link-Copied
ಬೆಳ್ತಂಗಡಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) (ಪುರುಷ, ಮಹಿಳಾ) ಮತ್ತು ತೃತೀಯ ಲಿಂಗ ಪುರುಷ ಹಾಗೂ ಮಹಿಳಾ) ಮತ್ತು ಸೇವಾ ನಿರತ ಹಾಗೂ ಬ್ಯಾಕ್ ಲಾಗ್-1,137 ಹುದ್ದೆಗಳಿಗೆ ನಡೆಯಲಿರುವ ಲಿಖಿತ ಪರೀಕ್ಷೆಯು ಉಜಿರೆಯಲ್ಲಿ ಫೆ. 25ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 12.30 ಗಂಟೆ ತನಕ ನಡೆಯಲಿದೆ. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿ.ಜಿ. ಕಾಲೇಜು, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐ.ಟಿ. ಕಾಲೇಜು, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿ.ಬಿ.ಎಸ್.ಇ. ಶಾಲೆಗಳು ಪರೀಕ್ಷಾ ಕೇಂದ್ರಗಳಾಗಿವೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ. ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಕಳುಹಿಸಲಾಗುವುದು. ಕರೆ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಲಿಖಿತ ಪರೀಕ್ಷೆಗೆ ಅಭ್ಯರ್ಥಿಗಳು ಇಲಾಖೆ ಸೂಚಿಸಿದ ವಸ್ತ್ರಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.