ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿರುವ ಹುದ್ದೆಗಳ ಭತಿ೯ಗೆ ಅಜಿ೯ ಆಹ್ವಾನ
Published Date: 17-Feb-2024 Link-Copied
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿರುವ 50 ಸಹಾಯಕ ಎಂಜಿನಿಯರ್ (ಸಿವಿಲ್) ಮತ್ತು 14 ಪ್ರಥಮ ದರ್ಜೆ ಲೆಕ್ಕ ಸಹಾಯಕರ (ಗ್ರೂಪ್-ಸಿ) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಹೊರಡಿಸಿದೆ. ಮೂಲ ವೃಂದದಲ್ಲಿ 54 ಮತ್ತು ಕಲ್ಯಾಣ ಕರ್ನಾಟಕದಲ್ಲಿ 10 ಮೀಸಲು ಹುದ್ದೆ ದೊರೆಯಲಿವೆ. ಫೆ. 10ರಿಂದ ಮಾರ್ಚ್ 10ರವರೆಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಸಲು ಮಾ. 14 ಕೊನೆಯ ದಿನವಾಗಿದೆ. ಸಾಮಾನ್ಯ ಮತ್ತು ಇತರೆ ಪ್ರವರ್ಗಗಳಿಗೆ 750 ರೂ. ಮತ್ತು ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ವಿಶೇಷಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 35, ಪ್ರವರ್ಗ 2 ಎ, 2 ಬಿ, 3 ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 38 ಮತ್ತು ಪರಿಶಿಷ್ಟ ಜಾತಿ / ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್: http:// kea.kar.nic.in ಈ ಲಿಂಕ್ ಮೂಲಕ ತಿಳಿದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.