ಪಿಎಚ್‌ಡಿ ಪ್ರವೇಶಾತಿಗೆ ಅರ್ಜಿ ಆಹ್ವಾನ
Published Date: 19-Feb-2024 Link-Copied
ಮಂಗಳೂರ: ಮಂಗಳೂರು ವಿ.ವಿ.ಯ ವಿವಿಧ ಸ್ನಾತಕೋತ್ತರ ವಿಭಾಗಗಳು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮಡಿಕೇರಿ, ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ ಕುಶಾಲನಗರ ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿ.ಎಚ್.ಡಿ. ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು/ಮಾನ್ಯತೆ ಪಡೆದ ಸಂಶೋಧನ ಕೇಂದ್ರದ ಮುಖ್ಯಸ್ಥರಿಗೆ ಮಾ. 5ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ವೆಬ್‌ಸೈಟ್ www.mangaloreuniversity.ac.in ಪರಿಶೀಲಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರ ಪ್ರಕಟಣೆ ತಿಳಿಸಿದೆ.