ಬೆಂಗಳೂರು: ಇಂದಿನಿಂದ ಮೇ 25ರವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ
Published Date: 27-Apr-2024 Link-Copied
ಹೈಕೋರ್ಟ್‌ಗೆ ಇಂದಿನಿಂದ ಮೇ 25ರವರೆಗೆ ಬೇಸಿಗೆ ರಜೆ ಇರಲಿದೆ. ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳು ಕಾರ್ಯನಿರ್ವಹಿಸಲಿವೆ. ಈ ವೇಳೆ, ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಇತ್ಯಾದಿ ಪ್ರಕರಣಗಳ ವಿಚಾರಣೆ ಮಾತ್ರ ನಡೆಸಲಾಗುವುದು. ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ, ಇ-ಫೈಲಿಂಗ್ ಪೋರ್ಟಲ್ ಮೂಲಕ ಇ-ಫೈಲಿಂಗ್ ಮಾಡಬಹುದಾಗಿದೆ.