ಬೆಳ್ತಂಗಡಿ: ಪಹಣಿಗೆ ಆಧಾರ್ ಸೀಡಿಂಗ್ ಕಡ್ಡಾಯ
Published Date: 10-May-2024 Link-Copied
ತಾಲೂಕಿನ ಎಲ್ಲ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)ಬಿ(2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಅವಕಾಶ ನೀಡಲಾಗಿದ್ದು ತಾಲೂಕಿನ ಎಲ್ಲ ರೈತರು ತಮ್ಮ ಜಮೀನಿನ . ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್ ಸೈಟ್ https://landrecords.karnataka.gov.in/service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್ ನೊಂದಿಗೆ ಲಿಂಕ್ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.