ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ
Published Date: 11-Jun-2024 Link-Copied
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಹೇಮಾವತಿ ವೀ. ಹೆಗ್ಗಡೆಯವರ ನಿರ್ದೇಶನದಂತೆ ದಿನಾಂಕ ಜೂ. 16 ಆದಿತ್ಯವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00ರವರೆಗೆ ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಉಚಿತ ಹಿಯರಿಂಗ್ ಟೆಸ್ಟ್ (ಉಚಿತ ಶ್ರವಣ ಪರೀಕ್ಷೆ), ಮಕ್ಕಳು ಮತ್ತು ವಯಸ್ಕರಲ್ಲಿ ಮೂಗಿನ ದ್ರವದ ತಪಾಸಣೆ, ಅಲರ್ಜಿಗೆ ಚಿಕಿತ್ಸೆ, ಮೈಗ್ರೇನ್ ತಲೆನೋವಿಗೆ ಚಿಕಿತ್ಸೆ, ವರ‍್ಟಿಗೋ ಪರೀಕ್ಷೆ ಮತ್ತು ಚಿಕಿತ್ಸೆ, ಧ್ವನಿ ಬದಲಾವಣೆಗಳ ಪರೀಕ್ಷೆ ಮತ್ತು ಚಿಕಿತ್ಸೆ, ಕಿವುಡುತನದ ಪರೀಕ್ಷೆ ಮತ್ತು ಚಿಕಿತ್ಸೆ, ಥೈರಾಯಿಡ್ ಪರೀಕ್ಷೆ ಮತ್ತು ಚಿಕಿತ್ಸೆ, ಕಿವಿ-ಮೂಗು- ಗಂಟಲು ಕ್ಯಾನ್ಸರ್ ತಪಾಸಣೆ, ಗೊರಕೆಗೆ ಚಿಕಿತ್ಸೆ ಇತ್ಯಾದಿ ಸೌಲಭ್ಯಗಳು ಈ ಶಿಬಿರದಲ್ಲಿ ದೊರೆಯಲಿದೆ. ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್ MBBS, MS (ENT & HNS) Fellowship in Head & Neck Oncologist ಇವರು ರೋಗ ತಪಾಸಣೆ ನಡೆಸಲಿದ್ದಾರೆ. ಡಾ| ರೋಹನ್ ಎಂ. ದೀಕ್ಷಿತ್ ತಲೆ ಮತ್ತು ಕುತ್ತಿಗೆಯ ಕ್ಯಾನ್ಸರ್ ತಜ್ಞರಾಗಿದ್ದಾರೆ. ಇವರು ಪ್ರತಿದಿನ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿರುತ್ತದೆ. ಒಳರೋಗಿ ವಿಭಾಗದಲ್ಲಿ 10%, ಔಷಧದಲ್ಲಿ 10%, ಲ್ಯಾಬ್ ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.