ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಆ.31 ಕೊನೆಯ ದಿನಾಂಕ


Logo

Published Date: 24-Aug-2024 Link-Copied

ಬೆಳ್ತಂಗಡಿ: ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ ನೀಡಿದ್ದರೂ ಕೆಲವೊಂದು ಪಡಿತರ ಚೀಟಿ ಸದಸ್ಯರು ಇನ್ನೂ ಇ-ಕೆವೈಸಿ ಮಾಡದೇ ಇರುವುದು ಕಂಡುಬರುತ್ತಿದೆ. ಪ್ರಸ್ತುತ ಸರಕಾರವು ಯಾವುದೇ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲೂ ಕೂಡಾ ಅವಕಾಶ ಕಲ್ಪಿಸಿರುತ್ತದೆ. ಜೀವಮಾಪನ ನೀಡಿ ಇ-ಕೆವೈಸಿ ಮಾಡಿಸಲು ಬಾಕಿ ಇರುವ ಸದಸ್ಯರು ಕೂಡಲೇ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡುವುದು. ಸರಕಾರವು ಆ.31 ರವರೆಗೆ ಅವಕಾಶ ಕಲ್ಪಿಸಿದ್ದು ತಪ್ಪದೆ ಇ-ಕೆವೈಸಿ ಮಾಡಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ವಲಸೆ ಹೋಗಿ ಅಥವಾ ಬೇರೆ ಜಿಲ್ಲೆಗಳಿಗೆ ಕೆಲಸ ನಿಮಿತ್ತ ತೆರಳಿರುವ ವ್ಯಕ್ತಿಗಳು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಜೀವಮಾಪನ ನೀಡಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿ ಇ-ಕೆವೈಸಿಯನ್ನು ಮಾಡುವಂತೆ ತಿಳಿಸಿದೆ. ಇದು ಪಡಿತರ ಚೀಟಿದಾರರಿಗೆ ಕೊನೆಯದಾಗಿ ತಿಳುವಳಿಕೆ ನೀಡುವುದಾಗಿದ್ದು ಆ.31 ರ ನಂತರ ಇ-ಕೆವೈಸಿ ಬಾಕಿಯಾಗಿರುವ ಪಡಿತರ ಚೀಟಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಮ್ಮ ವಾಸ್ತವ್ಯಕ್ಕೆ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಇ-ಕೆವೈಸಿ ಮಾಡಿಸಿ ಕೊಳ್ಳಲು ಅವಕಾಶವಿದೆ. ಪಡಿತರ ಚೀಟಿದಾರರ ಎಲ್ಲಾ ಸದಸ್ಯರ ಬಯೋ ದೃಢೀಕರಣ ಮಾಡಿಸಬೇಕು. ವಿಶೇಷ ವರ್ಗಕ್ಕೆ ಸೇರಿದವರಾಗಿದ್ದಲ್ಲಿ ಆ ಬಗ್ಗೆ ದೃಢಪತ್ರ, ಆಧಾರ್ ಸಂಖ್ಯೆ ಫೋನ್ ನಂಬ‌ರ್, ಅಡುಗೆ ಅನಿಲದ ಮಾಹಿತಿ ಹಾಗೂ ಕುಟುಂಬದ ಸದಸ್ಯರ ಸಂಬಂಧವನ್ನು ಸಹ ಇ-ಕೆವೈಸಿಯಲ್ಲಿ ನಮೂದಿಸಬೇಕು. ಇದು ಜಿಲ್ಲೆಯ ಹಾಗೂ ಪರ ಜಿಲ್ಲೆಯ ಪಡಿತರ ಚೀಟಿದಾರರಿಗೆ ಅಂತಿಮ ಅವಕಾಶವಾಗಿದ್ದು, ಇ-ಕೆವೈಸಿ ಮಾಡಿಸಿ ಕೊಳ್ಳದ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ರದ್ದಾಗಬಹುದು. ಪಡಿತರ ಚೀಟಿಗಳಲ್ಲಿ ಭಾಗಶ: ಜೀವಮಾನ ನೀಡಲ್ಪಟ್ಟು ಬಾಕಿ ಉಳಿದಿರುವ ಸದಸ್ಯರು ಕೂಡಾ ಈ ತಿಂಗಳ ಅಂತ್ಯದವರೆಗೆ ಕಾಯದೇ ಕೂಡಲೇ ಇ-ಕೆವೈಸಿ ಮಾಡಿಸಿಕೊಂಡು ಪಡಿತರ ಚೀಟಿಯನ್ನು ಊರ್ಜಿತವಾಗಿರಿಸಿಕೊಳ್ಳಬಹುದಾಗಿರುತ್ತದೆ

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img