ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ


Logo

Published Date: 23-Sep-2024 Link-Copied

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಪೆಂಡಿಸೈಟಿಸ್ ಸಮಸ್ಯೆ ಇರುವ 9 ವರ್ಷ ಪ್ರಾಯದ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಕಿರಣ್ ಹಾಗೂ ಅರೆವಳಿಕೆ ತಜ್ಞರಾದ ಡಾ| ಸುಪ್ರಿತ್ ಆರ್. ಶೆಟ್ಟಿ ಇವರ ತಂಡ ಶಸ್ತ್ರಚಿಕಿತ್ಸೆ ನಡೆಸಿದರು. ಶಸ್ತ್ರಚಿಕಿತ್ಸೆಗೆ ಒಳಗಾದ ಮಗು ಅತೀ ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡಿದ್ದು, ಡಿಸ್ಚಾರ್ಜ್ ಆಗಿರುತ್ತದೆ. ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆಯಲ್ಲಿ ಅತೀ ಚಿಕ್ಕ ಗಾಯವಾಗುವುದರಿಂದ ರೋಗಿ ಬಹಳ ಬೇಗನೇ ಚೇತರಿಸಿಕೊಳ್ಳುತ್ತಾರೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯ ತುಂಬಾ ಕಡಿಮೆ ಇರುತ್ತದೆ. ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳು ಕೂಡ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ. ನಗರದ ಹೈಟೆಕ್ ಆಸ್ಪತ್ರೆಗಳಲ್ಲಿ ದುಬಾರಿಯಾಗಿರುವ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಅತ್ಯಂತ ಕಡಿಮೆ ದರದಲ್ಲಿ ಮಾಡಲಾಗುತ್ತಿದೆ. ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img