ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ


Logo

Published Date: 26-Sep-2024 Link-Copied

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ ನಡೆಯಲಿದೆ. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಸ್.ಡಿ.ಎಂ. ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ, ಧಾರವಾಡ ಇದರ ಸಹಯೋಗದಲ್ಲಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆಯವರ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ನಿರ್ದೇಶನದಂತೆ ದಿನಾಂಕ 04/10/2024 ಶುಕ್ರವಾರ ಮತ್ತು 05/10/2024 ಶನಿವಾರ ಬೆಳಿಗ್ಗೆ 9.00ರಿಂದ ಸಂಜೆ 5.00ರವರೆಗೆ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ ನಡೆಯಲಿದೆ. ಉಜಿರೆ ಎಸ್.ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್, ಧಾರವಾಡದ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯ ವಾಕ್ ಮತ್ತು ಶ್ರವಣ ತಜ್ಞರಾದ ಡಾ| ವಸೀಮ್ ಇವರಿಂದ ಎಲ್ಲಾ ವಯಸ್ಸಿನ ಜನರಿಗೆ ಮಾತು, ಭಾಷೆ ಮತ್ತು ಶ್ರವಣ ಸಂಬಂಧಿತ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು. ಈ ಶಿಬಿರದಲ್ಲಿ ಭಾರತ ಸರಕಾರದ ಎ.ಡಿ.ಐ.ಪಿ ಯೋಜನೆಯಡಿ ಶ್ರವಣ ಉಪಕರಣಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳ ಕುರಿತು ಮಾರ್ಗದರ್ಶನ ನೀಡಲಾಗುವುದು. ಮಾಹಿತಿಗಾಗಿ 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img