ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನಲ್ಲಿ ಬಹುಶಿಸ್ತೀಯ ಅಂತಾರಾಷ್ಟ್ರೀಯ ಸಮ್ಮೇಳನ
ಉಜಿರೆ: “ಪ್ರಚಲಿತ ಆರ್ಥಿಕ ವಿದ್ಯಮಾನದಲ್ಲಿ ಗ್ರಾಮೀಣ ಉದ್ಯಮಶೀಲತೆ” ಎಂಬ ವಿಷಯದ ಬಗ್ಯೆ ಉಜಿರೆಯಲ್ಲಿರುವ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಅರ್ಥಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ಆಶ್ರಯದಲ್ಲಿ 2025ರ ಜನವರಿ 17 ಮತ್ತು 18ರಂದು ಬಹುಶಿಸ್ತೀಯ ಅಂತಾಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನಲ್ಲಿ ಬಹುಶಿಸ್ತೀಯ ಅಂತಾರಾಷ್ಟ್ರೀಯ ಸಮ್ಮೇಳನ ಸಮ್ಮೇಳನ ಆಯೋಜಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಮತ್ತು ಸಮ್ಮೇಳನದ ಸಂಘಟನಾಕಾರ್ಯದರ್ಶಿ ಹಾಗೂ ಅರ್ಥಶಾಸ್ತ್ರ ಉಪನ್ಯಾಸಕ ಡಾ. ಮಹೇಶ್‌ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರಾರಂಭಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ರಾಮೀಣ ಅಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ ಹಾಗೂ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಪ್ರಗತಿ-ಸಾಧನೆಯ ಯಶೋಗಾಥೆಯ ಹಿನ್ನೆಲೆಯಲ್ಲಿ ಬಹುಶಿಸ್ತೀಯ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಭಾರತ, ಚೀನಾ ಮತ್ತು ಬ್ರೆಜಿಲ್ ದೇಶಗಳು ಗ್ರಾಮೀಣ ಉದ್ಯಮಶೀಲತಾಭಿವೃದ್ಧಿಗಾಗಿ ಬಳಸಿದ ಬಹುಶಿಸ್ತೀಯ ಆರ್ಥಿಕನೀತಿಯ ಹಿನ್ನೆಲೆಯಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಬಂಧ ಮಂಡನೆ, ಚರ್ಚೆ, ವಿಚಾರ-ವಿನಿಮಯ ನಡೆಸಲಾಗುವುದು. ಪ್ರಬಂಧ ಕಳುಹಿಸಲು ಕೊನೆಯ ದಿನಾಂಕ : 15-12-2024. ಹೆಸರು ನೋಂದಾವಣೆಗೆ ಕೊನೆಯ ದಿನಾಂಕ: 05-01-2025 ಪ್ರತಿನಿಧಿ ಶುಲ್ಕ: ಉಪನ್ಯಾಸಕರುಗಳಿಗೆ: ರೂ.1,000 ಸಂಶೋಧಕರಿಗೆ: ರೂ. 500. ವಿದ್ಯಾರ್ಥಿಗಳಿಗೆ ರೂ. 300 ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : ಡಾ. ಮಹೇಶ್‌ಕುಮಾರ್ ಶೆಟ್ಟಿ. ಸಂಚಾರಿ ದೂರವಾಣಿ: 9880673174