Article Image

ದ್ವಿತೀಯ ಪಿಯುಸಿ ಮಾದರಿ ಉತ್ತರ ಪತ್ರಿಕೆ ಬಿಡುಗಡೆ

Article Image

ದ್ವಿತೀಯ ಪಿಯುಸಿ ಮಾದರಿ ಉತ್ತರ ಪತ್ರಿಕೆ ಬಿಡುಗಡೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾ.1ರಿಂದ 18ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ವಿಷಯವಾರು ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು https://kseab.karnataka.gov.in/english ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾ.20ರಿಂದ 22ರವರೆಗೆ ನಡೆಯಲಿರುವ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು, ಪೋಷಕರು ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ. ದ್ವಂದ್ವಾರ್ಥ ಬರುವ ಪ್ರಶ್ನೆ, ಅಪೂರ್ಣ ಪ್ರಶ್ನೆ, ಪಠ್ಯಕ್ರಮದಲ್ಲಿ ಇಲ್ಲದೇ ಇರುವುದು, ಕನ್ನಡ ಮತ್ತು ಇಂಗ್ಲಿಷ್ ಆವೃತ್ತಿಯಲ್ಲಿ ಬೇರೆ ಬೇರೆ ಅರ್ಥ ಬರುವಂಥದ್ದು, ಒಂದಕ್ಕಿಂತ ಹೆಚ್ಚು ಆಯ್ಕೆಗಳು ಸರಿ ಇರುವ ಬಹು ಆಯ್ಕೆ ಪ್ರಶ್ನೆಗಳಿದ್ದಲ್ಲಿ ಆಕ್ಷೇಪಣೆಗೆ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಲು ಮಾ.19ರಿಂದ 21ರವೆಗೆ ಅವಕಾಶ ಕಲ್ಪಿಸಿದೆ. ಬಳಿಕ ಬರುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಸಾಂಸ್ಕೃತಿಕ ಯೋಜನೆಯಡಿ ಉಚಿತ ಶಿಕ್ಷಣ

Article Image

ಸಾಂಸ್ಕೃತಿಕ ಯೋಜನೆಯಡಿ ಉಚಿತ ಶಿಕ್ಷಣ

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನ(ರಿ.) ವತಿಯಿಂದ ಸಾಂಸ್ಕೃತಿಕ ಯೋಜನೆಯಡಿ ಉಚಿತ ಶಿಕ್ಷಣ ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ (ವಾಣಿಜ್ಯ ಮತ್ತು ಕಲಾ), ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಕರ್ನಾಟಕ ಮತ್ತು ಹಿಂದೂಸ್ತಾನಿ ಶಾಸ್ತ್ರಿಯ ಸಂಗೀತ, ಸುಗಮ ಸಂಗೀತ, ಶಾಸ್ತ್ರಿಯ ನೃತ್ಯ-ಭರತನಾಟ್ಯ, ಕೂಚುಪುಡಿ, ಮೋಹನಿಯಾಟ್ಟಮ್ ಮತ್ತು ಒಡಿಸ್ಸಿ, ಪಕ್ಕವಾದ್ಯಗಳು, ಯಕ್ಷಗಾನ, ನಾಟಕ, ಜಾನಪದ ನೃತ್ಯ ಮತ್ತು ಸಂಗೀತ, ಚಿತ್ರಕಲೆ, ಯೋಗ, ಮಲ್ಲಕಂಬ ಈ ಎಲ್ಲಾ ಸಾಂಸ್ಕçತಿಕ ಕ್ಷೇತ್ರಗಳಲ್ಲಿ ಪ್ರತಿಭಾ ಕಾರಂಜಿ, ವಿಶ್ವವಿದ್ಯಾನಿಲಯ, ರಾಜ್ಯ ಮತ್ತು ರಾಷ್ಟçಮಟ್ಟದ ಸಾಧನೆಗೈದ ದಾಖಲೆ ನಿರ್ಮಿಸಿರುವ ಹಾಗೂ ಜೂನಿಯರ್- ಸೀನಿಯರ್-ವಿದ್ವತ್ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಅವಕಾಶವನ್ನು ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸ್ವ-ವಿವರಗಳೊಂದಿಗೆ ಅಧ್ಯಕ್ಷರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ, ದ.ಕ- 574227 ಈ ವಿಳಾಸಕ್ಕೆ ಎಪ್ರಿಲ್ 10 ರೊಳಗೆ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9480529236,8971161797.

ಶಾಲೆಗಳ ಉನ್ನತೀಕರಣಕ್ಕೆ ಅರ್ಜಿ ಆಹ್ವಾನ

Article Image

ಶಾಲೆಗಳ ಉನ್ನತೀಕರಣಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2024-25ನೇ ಸಾಲಿಗೆ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹೊಸದಾಗಿ 6ರಿಂದ 10ನೇ ತರಗತಿವರೆಗೆ ಉನ್ನತೀಕರಣ, ಆಂಗ್ಲ ಮಾಧ್ಯಮ ಆರಂಭಿಸುವ ಶಾಲೆಗಳ ಬಲವರ್ಧನೆ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಶಿಕ್ಷಣ ಇಲಾಖೆಯು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ. ಪ್ರತಿ ಶಾಲೆಗಳ ಉನ್ನತೀಕರಣಕ್ಕೆ ಇಲಾಖೆಯು ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದೆ. ಇದರ ಅನ್ವಯ ಶಾಲೆಗಳು ಪ್ರಸ್ತಾವನೆಯನ್ನು ಸಲ್ಲಿಸಬಹುದಾಗಿದೆ. ಹಾಲಿ ಚಾಲ್ತಿಯಲ್ಲಿರುವ 1ರಿಂದ 5ನೇ ತರಗತಿ ಆಂಗ್ಲಮಾಧ್ಯಮ ವಿಭಾಗವನ್ನು 6ನೇ ತರಗತಿ ಸ್ವಾಭಾವಿಕ ಬೆಳವಣಿಗೆ ಅಡಿಯಲ್ಲಿ ಮುಂದುವರಿಸಲು ಉಪ ನಿರ್ದೇಶಕರು ಪ್ರಾಧಿಕಾರವಾಗಿರುತ್ತಾರೆ. ಇನ್ನು 1 ರಿಂದ 7 ಹಾಗೂ 8ನೇ ತರಗತಿ ಆಂಗ್ಲ ಮಾಧ್ಯಮ ವಿಭಾಗಗಳಿರುವ ಶಾಲೆಗಳು 8, 9ನೇ ತರಗತಿಯಿಂದ ಆಂಗ್ಲ ಮಾಧ್ಯಮ ವಿಭಾಗ ಮುಂದುವರಿಸಲು ನಿರ್ದೇಶಕರು ಪ್ರಾಧಿಕಾರಗಳಾಗಿರುತ್ತಾರೆ. ಪ್ರತಿ ಪ್ರಸ್ತಾವನೆಗೂ ದಿನಾಂಕ ನಿಗದಿ ಮಾಡಿದೆ. ಹೆಚ್ಚಿನ ಮಾಹಿತಿಯನ್ನು : https://schooleducation. karnataka.gov.in/ ಈ ಲಿಂಕ್ ಮೂಲಕ ತಿಳಿದುಕೊಳ್ಳಬಹುದು.

ಮಂಗಳೂರು: ಬೃಹತ್ ಉದ್ಯೋಗ ಮೇಳ

Article Image

ಮಂಗಳೂರು: ಬೃಹತ್ ಉದ್ಯೋಗ ಮೇಳ

ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಫೆ.26, 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. https://skillconnect.kaushalkar.com/ ಗೆ ಭೇಟಿ ನೀಡಿ, ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿ ನೋಂದಣಿ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸಬಹುದು

ಫೆ. 25: ಪೊಲೀಸ್ ಕಾನ್ ಸ್ಟೇಬಲ್ ಪರೀಕ್ಷೆ

Article Image

ಫೆ. 25: ಪೊಲೀಸ್ ಕಾನ್ ಸ್ಟೇಬಲ್ ಪರೀಕ್ಷೆ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೆಬಲ್ (ಸಿವಿಲ್) (ಪುರುಷ, ಮಹಿಳಾ) (ತೃತೀಯ ಲಿಂಗ ಪುರುಷ ಮತ್ತು ಮಹಿಳಾ), ಸೇವಾನಿರತ ಹಾಗೂ ಬ್ಯಾಕ್ ಲಾಗ್-1137 ಹುದ್ದೆಗಳಿಗೆ ಫೆ. 25ರಂದು ಬೆಳಗ್ಗೆ 11ರಿಂದ 12.30ರ ವರೆಗೆ ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಅರ್ಹ ಅಭ್ಯಥಿ೯ಗಳಿಗೆ ಕರೆಪತ್ರದ ಬಗ್ಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು. ಕರೆಪತ್ರದ ಲಿಂಕ್ ಕಳುಹಿಸಲಾಗುವುದು. ಇನ್ನೂ ಅಭ್ಯಥಿ೯ಗಳಿಗೆ ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ. ವಸ್ತ್ರಸಂಹಿತೆ: ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳಿಗೆ ಅರ್ಧ ತೋಳಿನ ಶರ್ಟ್ ಕಡ್ಡಾಯವಾಗಿ ಧರಿಸುವುದು, ಸಾಧ್ಯವಾದಷ್ಟು ಕಾಲರ್ ರಹಿತ ಶಟ್೯ಗಳನ್ನು ಧರಿಸುವುದು, ಝಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳಿರುವ ಶರ್ಟ್ ಧರಿಸುವಂತಿಲ್ಲ. ಜೀನ್ಸ್ ಹಾಗೂ ಹೆಚ್ಚಿನ ಜೇಬುಗಳಿರುವ ಪ್ಯಾಂಟ್ ಧರಿಸತಕ್ಕದ್ದಲ್ಲ, ತೆಳುವಾದ ಅಡಿಭಾಗವಿರುವ ಪಾದರಕ್ಷೆ (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತ ಲೋಹದ ಆಭರಣ ಅಥವಾ ಉಂಗುರ, ಕಡಗಗಳನ್ನು ಧರಿಸುವುದು ನಿಷೇಧ. ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳಿಗೆ: ವಿಸ್ತಾರವಾದ ಕಸೂತಿ, ಹೂ, ಬೂಚ್ ಅಥವಾ ಬಟನ್‌ಗಳು ಹೊಂದಿರುವ ಉಡುಗೆ, ಪರ್ಣ ತೋಳಿನ ಬಟ್ಟೆ/ ಜೀನ್ಸ್ ಪ್ಯಾಂಟ್ ಧರಿಸಬಾರದು. ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಧರಿಸಬೇಕು. ಎತ್ತರವಾದ ಹಿಮ್ಮಡಿಯ ಶೂ/ಚಪ್ಪಲಿ ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂ/ ಚಪ್ಪಲಿ ಧರಿಸಬಾರದು. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಲೋಹದ ಆಭರಣ ಧರಿಸುವಂತಿಲ್ಲ.

ಗೃಹರಕ್ಷಕ ದಳ ಅರ್ಜಿ ಆಹ್ವಾನ

Article Image

ಗೃಹರಕ್ಷಕ ದಳ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ (Home guard) ಮಂಗಳೂರು, ಉಳ್ಳಾಲ, ಪಣಂಬೂರು, ಸುರತ್ಕಲ್, ಮೂಲ್ಕಿ, ಮೂಡಬಿದ್ರೆ, ಬಂಟ್ವಾಳ, ವಿಟ್ಲ, ಪುತ್ತೂರು, ಕಡಬ, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಘಟಕಗಳಲ್ಲಿ ಖಾಲಿಯಿರುವ ಗೃಹರಕ್ಷಕರ ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹತೆ : ಎಸ್.ಎಸ್.ಎಲ್.ಸಿ. ಉತ್ತೀರ್ಣಗೊಂಡಿರುವ ಹಾಗೂ 19 ರಿಂದ 50 ವರ್ಷದ ಒಳಗಿರುವ, ದೈಹಿಕ ಸದೃಢತೆ ಹೊಂದಿರುವ ಸ್ಥಳೀಯ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕದಳ, ಮೇರಿಹಿಲ್, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇಲ್ಲಿ ಅರ್ಜಿಯನ್ನು ಉಚಿತವಾಗಿ ಪಡೆಯಲು ಸೂಚಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.02.2024. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0824-2220562 ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

First Previous

Showing 3 of 3 pages

Next Last