Article Image

ಎಸ್.ಡಿ.ಎಂ ವಿಶ್ವವಿದ್ಯಾಲಯದಲ್ಲಿ ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ’

Article Image

ಎಸ್.ಡಿ.ಎಂ ವಿಶ್ವವಿದ್ಯಾಲಯದಲ್ಲಿ ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ’

ಎಸ್.ಡಿ.ಎಂ ವೈದ್ಯಕೀಯ ಮಹಾವಿದ್ಯಾಲಯದ, ಮನೋರೋಗ ಚಿಕಿತ್ಸಾ ವಿಭಾಗವು ಎಸ್.ಡಿ.ಎಂ. ನರ್ಸಿಂಗ್ ಕಾಲೇಜು ಅವರ ಸಹಭಾಗಿತ್ವದಲ್ಲಿ “ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವ ಸಮಯ ಇದು” ಎಂಬ ಧ್ಯೇಯೆಯೊಂದಿಗೆ ಅಕ್ಟೋಬರ್ 10, 2024 ರಂದು “ವಿಶ್ವ ಮಾನಸಿಕ ಆರೋಗ್ಯ” ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ ಕುಮಾರ್, ಗೌರವ ಅತಿಥಿಗಳಾಗಿ ಆಡಳಿತ ನಿರ್ದೇಕರಾದ ಶ್ರೀ ಸಾಕೇತ್ ಶೆಟ್ಟಿ ಮತ್ತು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ರತ್ನಮಾಲಾ ಎಂ. ದೇಸಾಯಿ, ಎಸ್.ಡಿ.ಎಂ. ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಸನ್ನ ದೇಶಪಾಂಡೆ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಾನಸಿಕ ಆರೋಗ್ಯ ದಿನಾಚರಣೆಯ ಸಪ್ತಾಹದ ಅಂಗವಾಗಿ, ಮಾನಸಿಕ ಆರೋಗ್ಯ ಸಮಸ್ಯೆಗಳ ಕುರಿತು ಕಿರು ನಾಟಕ ಪ್ರದರ್ಶನ, ಬಿತ್ತಿಪತ್ರ ಮತ್ತು ವಿದ್ಯಾರ್ಥಿಗಳಿಗೆ ಉಪನ್ಯಾಸಗಳನ್ನು ನಡೆಸಲಾಯಿತು. ಸ್ಪರ್ಧೆಗಳ ವಿಜೇತರಿಗೆ ಉಪ ಕುಲಪತಿಗಳಾದ ಡಾ. ನಿರಂಜನ ಕುಮಾರ್ ಮತ್ತು ಆಡಳಿತ ನಿರ್ದೇಕರಾದ ಸಾಕೇತ್ ಶೆಟ್ಟಿ ಅವರು ಬಹುಮಾನಗಳನ್ನು ವಿತರಿಸಿದರು. ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಗಳು, ಅಂಗ ಸಂಸ್ಥೆಯ ಮುಖ್ಯಸ್ಥರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ನೈದಿಲ ಜೈನ್ ಮತ್ತು ಡಾ. ಅನುರಾಧಾ ಎಸ್.ಎನ್. ಧ್ಯೇಯ ವಾಕ್ಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಡಾ. ವಿನುತಾ ಚಿಕ್ಕಮಠ ಅತಿಥಿಗಳನ್ನು ಸ್ವಾಗತಿಸಿದರು. ಡಾ. ಸಚಿನ್ ಬಿ. ಎಸ್., ದಿಕ್ಸೋಚಿ ಭಾಷಣ ಮಾಡಿದರು. ಡಾ. ನಾಗೇಶ ಅಜ್ಜವಾಡಿಮಠ ವಂದಣಾರ್ಪಣೆ ಸಲ್ಲಿಸಿದರು. ಡಾ. ಮೋಕ್ಷಾ ಹಾಗೂ ಡಾ. ಸ್ಪೂರ್ತಿ ಕಾರ್ಯಕ್ರಮವನ್ನು ನಿರೂಪಿಸಿದರು.

ನವರಾತ್ರಿ: ಧರ್ಮಸ್ಥಳದಲ್ಲಿ ಸಂಗೀತ ಕಾರ್ಯಕ್ರಮ

Article Image

ನವರಾತ್ರಿ: ಧರ್ಮಸ್ಥಳದಲ್ಲಿ ಸಂಗೀತ ಕಾರ್ಯಕ್ರಮ

ಉಜಿರೆ: ನವರಾತ್ರಿ ಸಂದರ್ಭದಲ್ಲಿ ಸೋಮವಾರ ರಾತ್ರಿ ಧರ್ಮಸ್ಥಳದಲ್ಲಿ ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ರಕ್ಷಣ್ ಜಿ. ರಾವ್ ಸಂಗೀತ ಕಾರ್ಯಕ್ರಮ ನೀಡಿದರು. ವಯಲಿನ್ ವಾದಕರಾಗಿ ಮಂಗಳೂರಿನ ಗೌತಮ್ ಭಟ್, ಮೃದಂಗ ವಾದಕರಾಗಿ ವಿದ್ವಾನ್ ವಸಂತಕೃಷ್ಣ ಕಾಂಚನ ಮತ್ತು ತಬಲಾವಾದಕರಾಗಿ ಶಿವಮೊಗ್ಗದ ವಿಠಲ ರಂಗಧೋಳ್ ಸಹಕರಿಸಿದರು.

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವ ಪ್ರಾರಂಭ

Article Image

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವ ಪ್ರಾರಂಭ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ವರ್ಷಕ್ಕೆ 2 ಬಾರಿ ಚಿನ್ನೋತ್ಸವ ಪ್ರಾರಂಭಿಸುತ್ತೇವೆ. ಬೆಳ್ತಂಗಡಿ ಚಿನ್ನದಂತ ಊರು. ಮುಳಿಯ ಸಂಸ್ಥೆ ಆರು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಪ್ರಾರಂಭಗೊಂಡಾಗ ನಮ್ಮನ್ನು ಅತ್ಯಂತ ಗೌರವದಿಂದ ಕಂಡ ಊರು. ಇಲ್ಲಿಯ ಜನರು ಅತ್ಯಂತ ಸಾತ್ವಿಕ ಮನಸ್ಸಿನವರು ಎಂದು ಮುಳಿಯ ಮಾರ್ಕೇಟಿಂಗ್ ಕನ್ಸಲ್ವೆಂಟ್ ವೇಣು ಶರ್ಮ ಹೇಳಿದರು. ಅವರು ಬೆಳ್ತಂಗಡಿ ಮುಳಿಯ ಚಿನ್ನೋತ್ಸವಕ್ಕೆ ಅ.7 ರಂದು ಚಾಲನೆ ನೀಡಿ ಮಾತನಾಡಿದರು. 80 ವರ್ಷಗಳ ಪರಂಪರೆಯಲ್ಲಿ ಮುಳಿಯ ಚಿನ್ನಾಭರಣಗಳಲ್ಲಿ ಶುದ್ಧತೆಯನ್ನು ಕಾಪಾಡಿಗೊಂಡು ಬಂದಿದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರೊಂದಿಗೆ ಸಂಸ್ಥೆ ಎತ್ತರಕ್ಕೆ ಬೆಳೆದಿದೆ. ವಿನೂತನ ಮತ್ತು ವಿಶಿಷ್ಠವಾದ ಡಿಸೈನ್ ನಮ್ಮಲ್ಲಿದ್ದು ಗ್ರಾಹಕರು ತಮ್ಮ ಇಷ್ಟದ ಚಿನ್ನಾಭರಣ ಪಡೆಯಬಹುದು ಎಂದರು. ತಾ.ಪಂ ತರಭೇತಿ ಸಂಯೋಜಕಿ, ಸಂಪನ್ಮೂಲ ವ್ಯಕ್ತಿ ಸುಧಾಮಣಿ ಮಾತನಾಡಿ ಮುಳಿಯದಲ್ಲಿ ಮನೆಯ ವಾತವರಣ ಕಂಡಿದ್ದೇವೆ. ಇಲ್ಲಿ ಬರುವಾಗ ನಗುಮೊಗದ ಸೇವೆಯೊಂದಿಗೆ ಸ್ವಾಗತಿಸಿ ಸತ್ಕಾರ ನೀಡುವುದು ಬಹಳ ಅದ್ಭುತವಾಗಿದೆ. ಎಲ್ಲಿಯೂ ಸಿಗದ ಡಿಸೈನ್ ಮುಳಿಯದಲ್ಲಿ ಸಿಗುತ್ತದೆ. ಹೆಣ್ಮಕ್ಕಳಿಗೆ ಚಿನ್ನ ಇಷ್ಟ, ಸ್ಟೀಮ್ ಮಾಡಿದ್ದು ಗ್ರಾಹಕರಿಗೆ ಪ್ರಯೋಜನವಾಗಿದೆ. ಸಂಸ್ಥೆ ವ್ಯಾಪರದೊಂದಿಗೆ ಧಾರ್ಮಿಕ ಆಚರಣೆಗಳನ್ನು ಆಚರಿಸಿ, ಸಮಾಜಕ್ಕೆ ತನ್ನದೆ ಆದ ಕೊಡುಗೆಯನ್ನು ನೀಡುತ್ತಿದೆ. ಪ್ರತಿಭೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಮುಳಿಯ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲಿ ಎಂದರು. ಮೂಡಬಿದ್ರೆ ಜೈನ್ ಕಾಲೇಜಿನ ಶಾರ್ವರಿ ಜೈನ್ ಮಾತನಾಡಿ ಮುಳಿಯ ಸಿಬ್ಬಂದಿಗಳ ಸೇವೆ ಅದ್ಭುತವಾಗಿದೆ. ಎಲ್ಲಾ ಹಬ್ಬಗಳನ್ನು ಆಚರಿಸಿ ಸಂಸ್ಥೆಯು ಮಾದರಿಯಾಗಿದೆ. ಚಿನ್ನಾಭರಣದಲ್ಲಿ ತುಂಬ ಕಲೆಕ್ಷನ್ ಇದ್ದು ಗ್ರಾಹಕರು ಚಿನ್ನೋತ್ಸವದಲ್ಲಿ ಭಾಗವಹಿಸಿ ಎಂದರು. ವೇದಿಕೆಯಲ್ಲಿ ಮುಳಿಯ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಶಿವಕುಮಾರ್ ಉಪಸ್ಥಿತರಿದ್ದರು. ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ಮ್ಯಾನೇಜರ್ ಲೋಹಿತ್ ಕುಮಾರ್ ಸ್ವಾಗತಿಸಿದರು. ಸಮೀಕ್ಷಾ ಶಿರ್ಲಾಲು ಕಾರ್ಯಕ್ರಮ ನಿರೂಪಿಸಿದರು. ಮುಳಿಯದ ಉಪ ವ್ಯವಸ್ಥಾಪಕ ದಿನೇಶ್ ವಂದಿಸಿದರು. ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವ ಹಬ್ಬದಲ್ಲಿ ಭಾಗವಹಿಸಿ ನೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಪಡೆಯಬಹುದಾಗಿದೆ. 5 ಕಾರು ಗೆಲ್ಲುವ ಸುವರ್ಣವಕಾಶ: ಮುಳಿಯ ಜ್ಯುವೆಲ್ಸ್ ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣ ಹಾಗೂ ಡೈಮಂಡ್ ಖರೀದಿಸಿ ಸಂಭ್ರಮಿಸಲು ಅವಕಾಶವಿದೆ. ರೂ. 20 ಸಾವಿರ ಮೊತ್ತದ ಡೈಮಂಡ್ ಆಭರಣ ಖರೀದಿಸಿ, ಕೂಪನ್ ಪಡೆದು 5 ಕಾರು ಗೆಲ್ಲುವ ಸುವರ್ಣಾವಕಾಶ ನಿಮ್ಮದಾಗಿದೆ.

ಧರ್ಮಸ್ಥಳದಲ್ಲಿ ಪುತ್ತೂರಿನ “ಗಾನಸಿರಿ” ಕಲಾವಿದರಿಂದ ಸಂಗೀತ ಕಾರ್ಯಕ್ರಮ

Article Image

ಧರ್ಮಸ್ಥಳದಲ್ಲಿ ಪುತ್ತೂರಿನ “ಗಾನಸಿರಿ” ಕಲಾವಿದರಿಂದ ಸಂಗೀತ ಕಾರ್ಯಕ್ರಮ

ಉಜಿರೆ: ನವರಾತ್ರಿ ಪ್ರಯುಕ್ತ ಶುಕ್ರವಾರ ರಾತ್ರಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಪುತ್ತೂರಿನ ಗಾನಸಿರಿ ಕಲಾಕೇಂದ್ರದ ಡಾ. ಕಿರಣ್‌ಕುಮಾರ್ ಮತ್ತು ಬಳಗದವರು ಸಂಗೀತ ಕಾರ್ಯಕ್ರಮ ನೀಡಿದರು. ಶ್ರೀಲಕ್ಷೀ, ಎಸ್., ಸೃಜನ ಪೂಜಾರಿ, ಮನಸ್ವಿ, ಅಚಿಂತ್ಯ ಸಹಕಲಾವಿದರಾಗಿ ಸಹಕರಿಸಿದರು. ತಬಲ ವಾದಕರಾಗಿ ಸುದರ್ಶನ ಆಚಾರ್ಯ, ಹಾರ್ಮೋನಿಯಂ ವಾದಕರಾಗಿ ದಿವ್ಯಾನಿಧಿ ರೈ ಸಹಕರಿಸಿದರು.

ಎಸ್.ಡಿ.ಎಂ ಕಾಲೇಜಿನಲ್ಲಿ ಗ್ರಾಮೀಣ ಪತ್ರಿಕೋದ್ಯಮ ಕಾರ್ಯಾಗಾರ

Article Image

ಎಸ್.ಡಿ.ಎಂ ಕಾಲೇಜಿನಲ್ಲಿ ಗ್ರಾಮೀಣ ಪತ್ರಿಕೋದ್ಯಮ ಕಾರ್ಯಾಗಾರ

ಉಜಿರೆ. ಆ.4: ಹೊಸ ಕಾಲದ ಸ್ಪರ್ಧಾತ್ಮಕತೆಯನ್ನು ನಿರ್ವಹಿಸುವುದರೊಂದಿಗೆ ವಿಶ್ವಾಸಾರ್ಹತೆ ಕಾಯ್ದುಕೊಂಡು ಜನಪರ ಮೌಲ್ಯಗಳಿಗೆ ಅನುಗುಣವಾಗಿ ಪ್ರಯೋಗ ನಡೆಸುವುದರ ಕಡೆಗೆ ಸುದ್ದಿಮಾಧ್ಯಮಗಳು ಆದ್ಯತೆ ನೀಡಬೇಕು ಎಂದು ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಭಿಪ್ರಾಯಪಟ್ಟರು. ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆ, ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ "ಗ್ರಾಮೀಣ ಪತ್ರಿಕೋದ್ಯಮದ ಅವಕಾಶಗಳು- ಪತ್ರಿಕಾ ಕಾರ್ಯಗಾರ" ಕುರಿತು ಶುಕ್ರವಾರ ಆಯೋಜಿತವಾದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಂದೊಂದು ಕಾಲಘಟ್ಟದಲ್ಲಿ ಒಂದೊಂದು ಮಾಧ್ಯಮ ಪ್ರಭಾವೀಯಾಗುತ್ತದೆ. ಹಿಂದೆ ಮುದ್ರಿತ ಸುದ್ದಿ ಪ್ರತಿಕೆಗಳು ವ್ಯಾಪಕವಾಗಿ ವಿಶ್ವಾಸಾರ್ಹತೆಯನ್ನು ಕಾಯ್ದುಕೊಂಡಿದ್ದವು. ಈಗ ಒಂದೊಂದು ಪತ್ರಿಕೆಯ ಕಂಟೆಂಟ್ ತದ್ವಿರುದ್ಧವಾಗಿದೆ. ಯಾವುದನ್ನು ನೆಚ್ಚಿಕೊಳ್ಳಬೇಕು ಎಂಬ ದ್ವಂದ್ವ ಓದುಗರಲ್ಲಿದೆ. ಈ ದ್ವಂದ್ವ ಸುದ್ದಿವಾಹಿನಿಗಳನ್ನು ವೀಕ್ಷಿಸುವವರಲ್ಲಿಯೂ ಇದೆ. ಇಂಥ ಸಂದರ್ಭದಲ್ಲಿ ಸುದ್ದಿಮಾಧ್ಯಮಗಳು ವಿಶ್ವಾಸಾರ್ಹತೆಯನ್ನು ಕಾಯ್ದುಕೊಳ್ಳುವ ಪ್ರಯೋಗಗಳನ್ನು ನಡೆಸಿ ಜನಮನ್ನಣೆಯನ್ನು ಪಡೆಯುವುದರ ಕಡೆಗೆ ಹೆಚ್ಚಿನ ಗಮನ ನೀಡುವ ಅಗತ್ಯವಿದೆ ಎಂದು ಹೇಳಿದರು. ಸುದ್ದಿಮಾಧ್ಯಮಗಳನ್ನು ನಿರ್ವಹಿಸುವಾಗ ಆರ್ಥಿಕತೆಯೂ ಮುಖ್ಯ. ಜಾಹಿರಾತುಗಳಿಗಷ್ಟೇ ಆದ್ಯತೆ ನೀಡುವ ಮಾಧ್ಯಮಗಳೂ ಇವೆ. ಜಾಹಿರಾತುಗಳ ಆದ್ಯತೆಯೊಂದಿಗೆ ಸತ್ವಯುತವಾದ ಸುದ್ದಿಗೆ ಆದ್ಯತೆ ನೀಡುವ ಮಾಧ್ಯಮಗಳೂ ಇವೆ. ನಮ್ಮಲ್ಲಿಯೇ ಮೊದಲು ಎಂಬ ಹುಮ್ಮಸ್ಸಿನಲ್ಲಿ ನಿಖರವಲ್ಲದ ಸುದ್ದಿವಿವರಗಳನ್ನು ಹರಿಯಬಿಡುವ ಪ್ರಯತ್ನಗಳೂ ನಡೆಯುತ್ತಿವೆ. ಇವುಗಳ ನಡುವೆ ಮೌಲಿಕವಾದ ಸುದ್ದಿಬಿಂಬಗಳನ್ನು ಕಟ್ಟಿಕೊಡುವ ಪ್ರಯೋಗಶೀಲತೆಯೇ ಶಾಶ್ವತ ಪ್ರಭಾವ ಬೀರುತ್ತದೆ. ಗ್ರಾಮೀಣ ಭಾಗದಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಸ್ಥಳೀಯ ಪತ್ರಿಕೆಗಳು ಈ ನಿಟ್ಟಿನಲ್ಲಿ ಪ್ರಶಂಸನೀಯ ಎಂದರು. ಸದಭಿರುಚಿಯ ಓದು ಮತ್ತು ವೀಕ್ಷಣೆ ಟ್ರೆಂಡ್ ರೂಪುಗೊಳ್ಳುವುದಕ್ಕೆ ಮಾಧ್ಯಮಗಳೊಂದಿಗೆ ಜನಸಮೂಹವೂ ಪ್ರೇರಣೆಯಾಗಿ ನಿಲ್ಲಬೇಕಾಗುತ್ತದೆ. ಸತ್ವಯುತವಾದ ಕಂಟೆಂಟ್ ನೊಂದಿಗಿನ ಮಾಧ್ಯಮ ಪ್ರಯೋಗಗಳು ನಡೆದಾಗ ಅಂಥವುಗಳನ್ನು ಬೆಂಬಲಿಸುವುದರ ಮೂಲಕ ಸದಭಿರುಚಿಯ ಸಂಸ್ಕೃತಿಯನ್ನು ಹುಟ್ಟುಹಾಕಬಹುದು. ಇದು ಆರೋಗ್ಯಪೂರ್ಣ ಸಮಾಜವನ್ನು ರೂಪಿಸುತ್ತದೆ ಎಂದು ನುಡಿದರು. ರಾಷ್ಟ್ರಮಟ್ಟದಲ್ಲಿ ಕಾರ್ಯೋನ್ಮುಖವಾಗಿರುವ ಖ್ಯಾತನಾಮ ಪತ್ರಿಕೆಗಳಂತೆಯೇ ಸ್ಥಳೀಯ ಪತ್ರಿಕೆಗಳೂ ಭಿನ್ನವಾಗಿ ಕಾರ್ಯನಿರ್ವಹಿಸುತ್ತಿವೆ. ಈ ಕಾರಣಕ್ಕಾಗಿಯೇ ಗ್ರಾಮೀಣ ಪತ್ರಿಕೋದ್ಯಮವು ಅಭ್ಯುದಯದ ಹಾದಿಯನ್ನು ನಿಚ್ಛಳಗೊಳಿಸುತ್ತಿದೆ. ಗ್ರಾಮೀಣ ಭಾಗದ ಸಮಸ್ಯೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಗ್ರಾಮೀಣ ಪತ್ರಿಕೆಗಳು ಸಮರ್ಥವಾಗಿ ನಿಭಾಯಿಸಿಕೊಂಡು ಬರುತ್ತಿವೆ. ಇದರ ಜೊತೆಯಲ್ಲಿ ಸಾಮಾಜಿಕ ಜಾಗೃತಿ, ಜನ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮೀಣ ಪತ್ರಿಕೋದ್ಯಮದ ಅವಕಾಶಗಳು, ಗ್ರಾಮೀಣ ವರದಿಗಾರರು ಎದುರಿಸುವ ಸಮಸ್ಯೆಗಳು, ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪಾಸಿಟಿವ್ ಹಾಗೂ ನೆಗೆಟಿವ್ ಪತ್ರಿಕೋದ್ಯಮದ ಕುರಿತು ಚರ್ಚೆ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಜರುಗಿತು. ಕಾರ್ಯಕ್ರಮದಲ್ಲಿ ಸುದ್ದಿ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಹಿರಿಯ ಪತ್ರಕರ್ತ ಜಿತೇಂದ್ರ ಕುಂದೇಶ್ವರ, ಪುತ್ತೂರಿನ ಅಂಬಿಕಾ ವಿದ್ಯಾಲಯದ ಪ್ರಾಂಶುಪಾಲರಾದ ರಾಕೇಶ್‌ ಕುಮಾರ್ ಕಮ್ಮಾಜೆ ಉಪಸ್ಥಿತರಿದ್ದರು. ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ್ ಹೆಗಡೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸುದ್ದಿ ಬಿಡುಗಡೆಯ ಸಂತೋಷ್ ಕುಮಾರ್ ವಂದಿಸಿದರು. ವಿದ್ಯಾರ್ಥಿನಿ ದಿವ್ಯಶ್ರೀ ಹೆಗಡೆ ನಿರೂಪಿಸಿದರು.

ಎಕ್ಸಲೆ0ಟ್ ಮೂಡುಬಿದಿರೆಯಲ್ಲಿ ಸರ್ವ ಧರ್ಮ ಅರಿವು ಕಾರ್ಯಕ್ರಮ

Article Image

ಎಕ್ಸಲೆ0ಟ್ ಮೂಡುಬಿದಿರೆಯಲ್ಲಿ ಸರ್ವ ಧರ್ಮ ಅರಿವು ಕಾರ್ಯಕ್ರಮ

ಮೂಡುಬಿದಿರೆ: ಮಾಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆ0ಟ್ ವಿದ್ಯಾ ಸ0ಸ್ಥೆಯಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಹಮ್ಮಿಕೊಂಡಿದ್ದ ಸರ್ವ ಧರ್ಮ ಅರಿವು ಕಾರ್ಯಕ್ರಮವನ್ನು ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳು ಉದ್ಘಾಟಿಸಿ ಆಶೀರ್ವಚನವನ್ನು ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು “ಧರ್ಮಗಳನ್ನು ಅರ್ಥ ಮಾಡಿಕೊಳ್ಳುವುದು ನಾಲ್ಕು ಅಂಧರು ಆನೆಯ ಯಾವುದೋ ಒಂದು ಭಾಗವನ್ನು ಸ್ಪರ್ಶಿಸಿ ಅನುಭವ ಪಡೆದುಕೊಂಡಂತೆ. ಪ್ರತಿಯೊಂದು ಧರ್ಮವು ತನ್ನದೇ ಆತ ತತ್ವವನ್ನು ಹೊಂದಿದೆ. ಆದರೆ ನಿಜವಾದ ಅರ್ಥಗ್ರಹಣ, ಎಲ್ಲಾ ದೃಷ್ಟಿಕೋನಗಳತ್ತ ತೆರೆದಾಗ ಮಾತ್ರ ಸಾಧ್ಯ. ಅಹಿಂಸೆ, ಸಹಾನುಭೂತಿ, ಸಹಿಷ್ಣುತೆ ಮತ್ತು ಸತ್ಯವೆಂಬುದು ಎಲ್ಲಾ ಧರ್ಮಗಳ ಅಧಾರವಾಗಿದೆ” ಎಂದರು. ದಯೆ ಮತ್ತು ಗೌರವದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಹೇಳುತ್ತಾ, “ಇತರರನ್ನು ನೋಯಿಸಬೇಡಿ. ನೀವು ಶಾಂತಿ ಮತ್ತು ಏಕತೆಯನ್ನು ಉತ್ತೇಜಿಸುವ ಜವಾಬ್ದಾರಿಯನ್ನು ಹೊಂದಿದ್ದೀರಿ. ನಿಮ್ಮ ಕ್ರಿಯೆಯು ನಿಮ್ಮ ಜೊತೆಯಲ್ಲಿರುವವರಿಗೆ ಯಾವುದೇ ರೀತಿಯ ಹಾನಿಯನ್ನು ಅಥವಾ ನೋವನ್ನುಂಟು ಮಾಡಬಾರದು. ಸರ್ವೇ ಜನಾ: ಸುಖಿನೋ ಭವಂತು ಎ0ಬ ತತ್ವದ ಮೇಲೆ ಬೆಳೆದು ಬಂದ ದೇಶ ನಮ್ಮದು. ಇತ್ತೀಚೆಗಿನ ದಿನಗಳಲ್ಲಿ ಧಾರ್ಮಿಕ ಸಮನ್ವಯತೆಯನ್ನು ಕಾಪಾಡುವುದು ಬಹಳ ಮುಖ್ಯವಾಗಿದೆ. ನಾವು ಎಲ್ಲಾ ಧರ್ಮಗಳನ್ನು ಗೌರವಿಸೋಣ” ಎಂದರು. ಇಸ್ಲಾಂ ಧರ್ಮದ ಅರಿವನ್ನು ಮೂಡಿಸಲು ಆಗಮಿಸಿದ್ದ ಸಾಲುಮರದ ತಿಮ್ಮಕ್ಕ ರಾಷ್ಟ್ರೀಯ ಪ್ರಶಸ್ತಿ ಪುರಸ್ಕ್ರತರಾದ ರೆಹಾನಾ ಬೇಗಂ ಮಾತನಾಡುತ್ತಾ, “ಇಸ್ಲಾಮ್ ಎಂದರೆ ಶಾಂತಿ. ಕುರಾನ್ ಶಾಂತಿಯನ್ನು ಪ್ರತಿಪಾದಿಸುತ್ತದೆ. ನಮ್ಮ ಜೀವನವು ಅಮೂಲ್ಯವಾದದ್ದು. ದ್ವೇಷವು ಶಾಂತಿಯನ್ನು ಹಾಳು ಮಾಡುತ್ತದೆ. ನಾವು ನಮ್ಮ ದೇಶವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವತ್ತ ಪ್ರಯತ್ನಿಸಬೇಕು ಹಾಗೂ ಪ್ರೀತಿ ಎಲ್ಲಾ ಧರ್ಮಗಳ ಮೂಲ ತತ್ವವಾಗಿ ಉಳಿಯಬೇಕು. ಜಾತಿ ಧರ್ಮಗಳನ್ನು ಪರಿಗಣಿಸದೇ ವಿಷಸರ್ಪದ ಕಡಿತಕ್ಕೆ ಒಳಗಾದ ಸಾವಿರಾರು ಜನರ ಪ್ರಾಣವನ್ನು ಉಳಿಸುವ ಅವಕಾಶ ಆ ಭಗವಂತ ನನಗೆ ಒದಗಿಸಿಕೊಟ್ಟಿದ್ದಾನೆ. ನಾವ್ಯಾರೂ ದೇವರನ್ನು ನೋಡಿಲ್ಲ. ಆದರೆ ಪ್ರೀತಿ ನಮ್ಮೆಲ್ಲರನ್ನು ಒಗ್ಗೂಡಿಸುತ್ತದೆ” ಎಂದರು. ಕ್ರೈಸ್ತ ಧರ್ಮದ ಅರಿವನ್ನು ಮೂಡಿಸಲು ಆಗಮಿಸಿದ್ದ ಬಿ.ಇ.ಸಿ/ಎಸ್.ಸಿ.ಸಿಯ ನಿರ್ದೇಶಕರಾದ ವ0ದನೀಯ ಗುರು ಸುನಿಲ್ ಜಾರ್ಜ್ ಡಿ’ಸೋಜಾ ಮಾತನಾಡುತ್ತಾ, “ಕ್ರೈಸ್ತ ಧರ್ಮವು ನಾವೆಲ್ಲರೂ ದೇವರ ಮಕ್ಕಳು ಎಂದು ಬೋಧಿಸುತ್ತದೆ. ಈ ತತ್ವದ ಆಧಾರದಲ್ಲಿ ನಾವೆಲ್ಲರೂ ಒ0ದೇ ಕುಟು0ಬಕ್ಕೆ ಸೇರುತ್ತೇವೆ. ಯೇಸು ಕೇವಲ ತನ್ನ ಧಾರ್ಮಿಕ ಹಿನ್ನಲೆಯನ್ನು ಹ0ಚಿಕೊಳ್ಳುವವರ ಜೊತೆ ಮಾತ್ರವೇ ತನ್ನ ಪ್ರೀತಿಯನ್ನು ಹಂಚಿಕೊಂಡಿಲ್ಲ. ನಿಜವಾದ ಪ್ರೀತಿ ಮತ್ತು ಸಹಾನುಭೂತಿ ಧಾರ್ಮಿಕ ಮತ್ತು ಸಮಾಜಿಕ ಮೇರೆಗಳನ್ನು ಮೀರಿ ಹೋಗುತ್ತದೆ.” ಎಂದು ಹೇಳಿದರು. “ಇಂದಿನ ಧಾರ್ಮಿಕ ಅಸಹಿಷ್ಣುತೆ ಮತ್ತು ತಾರತಮ್ಯವನ್ನು ಪರಿಗಣಿಸಿದಾಗ ಪ್ರೀತಿ ಮತ್ತು ಸಹಾನುಭೂತಿ ಮತ್ತು ಪರಸ್ಪರ ಅರ್ಥ ಮಾಡಿಕೊಳ್ಳುವಿಕೆ ಆಯ್ಕೆಯಲ್ಲ, ಜವಾಬ್ದಾರಿಯಾಗಿದೆ. ಸಹೋದರತ್ವವು ಕೇವಲ ಮಾತಿಗಷ್ಟೇ ಸೀಮಿತವಾಗಬಾರದು. ಅದು ಕ್ರಿಯೆಯಾಗಿ ಮೂಡಿಬರಬೇಕು” ಎಂದರು. ಹಿ0ದೂ ಧರ್ಮ ಅರಿವನ್ನು ಮೂಡಿಸಲು ಆಗಮಿಸಿದ ಸಂಸ್ಕ್ರತಿ ಚಿಂತಕರಾದ ಪುತ್ತಿಗೆ ಬಾಲಕೃಷ್ಣ ಭಟ್ ಮಾತನಾಡುತ್ತಾ, “ಯಾವುದನ್ನು ಧರಿಸುತ್ತೇವೆ ಮತ್ತು ಪೋಷಿಸುತ್ತೇವೆಯೋ ಅದು ಧರ್ಮ. ಧರ್ಮವನ್ನು ನಾವು ರಕ್ಷಿಸಿದರೆ ನಮ್ಮನ್ನು ಧರ್ಮ ರಕ್ಷಿಸುತ್ತದೆ. ಅದೊಂದು ಜಾಗತಿಕ ನೈತಿಕತೆಯಾಗಿ ಪರಿವರ್ತಿಸಬಹುದು. ಮತ್ತು ವಿಶ್ವದಾದ್ಯಂದ್ಯಂತ ಎಲ್ಲರಿಗೂ ಅನ್ವಯವಾಗುತ್ತದೆ” ಎಂದರು. “ಧರ್ಮವನ್ನು ಅರಿಯಲು ವೇದೋಪನಿಷತ್ತುಗಳಿವೆ, ತದನ0ತರ ಸಂಸ್ಕ್ರತಿಗಳಿವೆ. ಇವುಗಳನ್ನು ಅಧ್ಯಯನ ಮಾಡಿದ ಮೇಲೆಯೂ ಅರ್ಥ ಮಾಡಿಕೊಳ್ಳುವುದು ಕಷ್ಟವೆನಿಸಿದರೆ ಮಹಾನ್ ವ್ಯಕ್ತಿಗಳ ಜೀವನವನ್ನು ಗಮನಿಸಿ ಅವರನ್ನು ಅನುಸರಿಸಬಹುದು. ಅದೂ ಕೂಡ ಕಷ್ಟವೆನಿಸಿದರೆ ಅ0ತರಾತ್ಮದ ನಿರ್ದೇಶನದ0ತೆ ನಡೆದುಕೊಳ್ಳಬಹುದು ಎ0ದರು. ಎಲ್ಲಾ ಧರ್ಮಗಳ ಅ0ತಿಮ ಗುರಿ ಆತ್ಮ ಸಾಕ್ಷಾತ್ಕಾರ. ಧರ್ಮ, ಅರ್ಥ, ಕಾಮವನ್ನು ಪೂರೈಸಿ ಎಲ್ಲಾ ಭೌತಿಕ ಗುರುತುಗಳಿ0ದ ಕಳಚಿಕೊಳ್ಳುವುದೇ ಮೋಕ್ಷ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆ0ಟ್ ವಿದ್ಯಾ ಸ0ಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಮಾತನಾಡಿ ಪ್ರತಿಯೊಬ್ಬರಿಗೂ ಒಳ್ಳೆಯದನ್ನೇ ಬಯಸಿ ಎ0ದು ಹೇಳಿಕೊಡುವುದೇ ಧರ್ಮ. ನಾವೆಲ್ಲರೂ ಬದುಕು ಮತ್ತು ಬದುಕಲು ಬಿಡು ಎ0ಬ ತತ್ವದಲ್ಲಿ ಬದುಕಬೇಕಾಗಿದೆ. ಎಲ್ಲಾ ಧರ್ಮದ ಸಾರ ಮನುಷ್ಯ ಧರ್ಮವೇ ಆಗಿದೆ. ಎಲ್ಲರೂ ಸಮಾನತೆಯಿ0ದ, ಶಾ0ತಿ ಸಹಬಾಳ್ವೆಯಿ0ದ ಒಟ್ಟಾಗಿ ಬಾಳಿ ಬದುಕಿ ಭವ್ಯ ಭಾರತ ಧರ್ಮವನ್ನು ರಕ್ಷಿಸೋಣ ಎ0ದರು. ಸ0ಸ್ಥೆಯ ಆಡಳಿತ ನಿರ್ದೇಶಕ ಡಾ. ಸ0ಪತ್ ಕುಮಾರ್ ಉಜಿರೆ, ಪ್ರಾ0ಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಆ0ಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಶಿವಪ್ರಸಾದ ಭಟ್, ಸಿಬಿಎಸ್ಸಿ ಶಾಲೆಯ ಪ್ರಾ0ಶುಪಾಲ ಸುರೇಶ್ ಉಪಸ್ಥಿತರಿದ್ದರು. ಎಕ್ಸಲೆ0ಟ್ ಶಿಕ್ಷಣ ಸ0ಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಸ್ವಾಗತಿಸಿದರು. ಹರೀಶ್ ಎ0. ವ0ದಿಸಿದರು. ಡಾ. ವಾದಿರಾಜ ಕಾರ್ಯಕ್ರಮ ನಿರೂಪಿಸಿದರು.

ಡಿಸೆಂಬರ್ 10ರಿಂದ 15ರವರೆಗೆ 30ನೇ ವರ್ಷದ ಆಳ್ವಾಸ್ ವಿರಾಸತ್

Article Image

ಡಿಸೆಂಬರ್ 10ರಿಂದ 15ರವರೆಗೆ 30ನೇ ವರ್ಷದ ಆಳ್ವಾಸ್ ವಿರಾಸತ್

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ವು ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ಗೆ ಈ ವರ್ಷ 30ರ ಹರೆಯ. ಈ ಸಂದರ್ಭದಲ್ಲಿ ಅಪೂರ್ವ ಮತ್ತು ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು ಆಳ್ವಾಸ್ ವಿರಾಸತ್-2024’ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ತಿಳಿಸಿದರು. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿದ್ಯಾಗಿರಿಯ ಆವರಣದಲ್ಲಿ ಆಳ್ವಾಸ್ ವಿರಾಸತ್-2024 ಡಿಸೆಂಬರ್ 10, 2024ನೇ ಮಂಗಳವಾರದಂದು ಪ್ರಾರಂಭವಾಗಿ ಡಿಸೆಂಬರ್ 15, 2024ನೇ ಭಾನುವಾರದಂದು ಮುಕ್ತಾಯಗೊಳ್ಳಲಿದೆ. ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ಒಟ್ಟು 6 ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ವೈಭವೋಪೇತವಾಗಿ ಜರುಗಲಿದೆ. ಮೊದಲ 05 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತುಗಳೇ ಮೊದಲಾದ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು ಕೊನೆಯ ದಿನ 15.12.2024ನೇ ಭಾನುವಾರವನ್ನು ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ವು ನಡೆಸುವ ಆಳ್ವಾಸ್ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್-2024’ ಗೆ ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ಮುಕ್ತ ಚೆಸ್ ಪಂದ್ಯಾವಳಿ

Article Image

ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ಮುಕ್ತ ಚೆಸ್ ಪಂದ್ಯಾವಳಿ

ಸತ್ತೂರು, ಧಾರವಾಡ: ಶೀರ್ಷಿಕೆಯ ಅಖಿಲ ಭಾರತ ಫಿಡೆ ರೇಟೆಡ್ ಚೆಸ್ ಪಂದ್ಯಾವಳಿಯನ್ನು ಅಕ್ಟೋಬರ್ 2, 2024 ರಂದು (ಬುಧವಾರ) ಎಸ್.ಡಿ.ಎಂ. ಡೆಂಟಲ್ ಕಾಲೇಜಿನ ಪರೀಕ್ಷಾ ಹಾಲ್ (ಎರಡನೇ ಮಹಡಿ)ನಲ್ಲಿ ಆಯೋಜಿಸಲಾಗುತ್ತಿದೆ. ಈ ಪಂದ್ಯಾವಳಿಯು ದೇಶದಾದ್ಯಂತ ಗ್ರ್ಯಾಂಡ್ ಮಾಸ್ಟರ್‌ಗಳು ಮತ್ತು ಇತರ ಪ್ರತಿಷ್ಠಿತ ಚೆಸ್ ಆಟಗಾರರಿಂದ ಭಾಗವಹಿಸುವಿಕೆಯ ಗುರಿಯನ್ನು ಹೊಂದಿದೆ. ಎಸ್.ಡಿ.ಎಂ. ಕಪ್, ಚೆಸ್‌ನ ಅತ್ಯುನ್ನತ ಗುಣಮಟ್ಟವನ್ನು ಪ್ರದರ್ಶಿಸುವ ಪ್ರತಿಷ್ಠಿತ ಮತ್ತು ಹೆಚ್ಚು ಸ್ಪರ್ಧಾತ್ಮಕ ಕಾರ್ಯಕ್ರಮವಾಗಿದೆ. ಈ ಚೆಸ್ ಪಂದ್ಯಾವಳಿಯನ್ನು ಪುರುಷರು ಮತ್ತು ಮಹಿಳೆಯರು, ಎಲ್ಲಾ ವಯೋಮಾನದವರನ್ನು ಒಳಗೊಂಡಂತೆ ಮುಕ್ತ ವಿಭಾಗದಲ್ಲಿ ಏರ್ಪಡಿಸಲಾಗಿದೆ. 96 ಟ್ರೋಫಿಗಳೊಂದಿಗೆ ಒಟ್ಟು ಎರಡು ಲಕ್ಷ ರೂಪಾಯಿಗಳ ಮೌಲ್ಯದ ನಗದು ಬಹುಮಾನಗಳು ಇರುತ್ತವೆ. 8, 10, 12, 14 ಮತ್ತು 16 ರಂತಹ ವಿವಿಧ ವಯೋಮಾನದ ಗುಂಪುಗಳಲ್ಲಿ ಬಹುಮಾನಗಳನ್ನು ನೀಡಲಾಗುವುದು. ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳಿಗೆ ಅನುಕ್ರಮವಾಗಿ ರೂ.30,000, ರೂ. 25,000 ಮತ್ತು ರೂ. 20,000 ನಗದು ಬಹುಮಾನಗಳನ್ನು ನೀಡಲಾಗುತ್ತದೆ. ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಸಂರ್ಪಕಿಸಿ: ಅನುರಾಗ್, ಮೊಬೈಲ್ ಸಂಖ್ಯೆ. 91488 59412 / 96114 82250

ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಸ್ಕಾಲರ್ ಶಿಪ್ ವಿತರಣೆ

Article Image

ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಸ್ಕಾಲರ್ ಶಿಪ್ ವಿತರಣೆ

ಬೆಳ್ತಂಗಡಿ ರೋಟರಿ ಕ್ಲಬ್ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಂಸ್ಥೆಗಳು ರೋಟರಿ ಕ್ಲಬ್ ಬೆಂಗಳೂರು ಇಂದಿರಾ ನಗರ ಹಾಗೂ ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ತಾಲೂಕಿನ ಒಟ್ಟು 151 ವಿದ್ಯಾರ್ಥಿಗಳಿಗೆ ರೂ. 10,000ದಂತೆ ಒಟ್ಟು ರೂ. 15,10,000 ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸುತ್ತಿದೆ. ಬೆಳ್ತಂಗಡಿಯಲ್ಲಿರುವ ರೋಟರಿ ಸಭಾಭವನದಲ್ಲಿ ಇದೇ ಸೆಪ್ಟೆಂಬರ್ 21 ರಂದು ಶನಿವಾರ ಮಧ್ಯಾಹ್ನ 2:30ಕ್ಕೆ ಸರಿಯಾಗಿ ಈ ಸಮಾರಂಭ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳಾದ ಎಸ್.ಡಿ.ಎಂ, ವಾಣಿ ಮತ್ತು ಅನುಗ್ರಹ ಪದವಿಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಶೇಕಡಾ 90ಕ್ಕಿಂತ ಅಧಿಕ ಅಂಕ ಗಳಿಸಿರುವ, ಆರ್ಥಿಕವಾಗಿ ಅವಶ್ಯಕವಿರುವ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಈ ಸ್ಕಾಲರ್ ಶಿಪ್‌ನ ಪ್ರಯೋಜನ ದೊರೆಯಲಿದೆ. ಇದರಿಂದ ಆರ್ಥಿಕವಾಗಿ ಅಗತ್ಯವಿರುವ ವಿದ್ಯಾ ರ್ಥಿಗಳಿಗೆ ಸಹಾಯವಾಗಲಿದೆ. ಪ್ರತಿಷ್ಠಿತ ಹೌಸಿಂಗ್ ಫೈನಾನ್ಸ್ ಕಂಪನಿಯಾದ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್‌ನ ಮೂಲಕ ಬೆಳ್ತಂಗಡಿ ಪರಿಸರದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಮೊತ್ತವನ್ನು ದೇಣಿಗೆಯಾಗಿ ನೀಡಲಾಗುತ್ತಿದೆ. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಂಸ್ಥೆಯ ಉಪಪ್ರಧಾನ ವ್ಯವಸ್ಥಾಪಕ ಪ್ರಶಾಂತ್ ಜೋಶಿ ಪಾಲ್ಗೊಳ್ಳಲಿದ್ದಾರೆ. ರೋಟರಿ ಡಿಸ್ಟ್ರಿಕ್ಟ್ ಗವರ್ನರ್ ರೋ. ವಿಕ್ರಮದತ್ತ, ರೋಟರಿ ಕ್ಲಬ್ ಬೆಂಗಳೂರು ಇಂದಿರಾ ನಗರ ರೋ. ಪಿಯೂಶ್ ಜೈನ್, ರೋ. ಜಗದೀಶ್ ಮುಗಳಿ, ರೋ. ಮೊಹಮ್ಮದ್ ವಲವೂರ್, ರೋ. ಮನೋರಮಾ ಭಟ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಬೆಳ್ತಂಗಡಿ ರೋಟರಿ ಕ್ಲಬ್ ಕಳೆದ ಅನೇಕ ವರ್ಷಗಳಿಂದ ಈ ಸ್ಕಾಲರ್ಶಿಪ್ ವಿತರಣೆ ಮಾಡುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯದಲ್ಲಿ ನಿರತವಾಗಿದೆ. ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ಪೂರನ್ ವರ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಜಿರೆ: ಎಂಜಿನಿಯರ್‌ಗಳ ದಿನಾಚರಣೆ ಮತ್ತು ಅನುಮೋದನೆಗೊಂಡ ವೃತ್ತಿನಿರತ ಸಿವಿಲ್ ಎಂಜಿನಿಯರಿಂಗ್ ವಿಧೇಯಕ 2024

Article Image

ಉಜಿರೆ: ಎಂಜಿನಿಯರ್‌ಗಳ ದಿನಾಚರಣೆ ಮತ್ತು ಅನುಮೋದನೆಗೊಂಡ ವೃತ್ತಿನಿರತ ಸಿವಿಲ್ ಎಂಜಿನಿಯರಿಂಗ್ ವಿಧೇಯಕ 2024

ಉಜಿರೆ: ದೇಶದ ಪ್ರಗತಿಗೆ ಎಂಜಿನಿಯರ್‌ಗಳ ಸೇವೆ ಮತ್ತು ಕೊಡುಗೆ ಅಮೂಲ್ಯವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಹೇಳಿದರು. ಅವರು ಗುರುವಾರ ಉಜಿರೆಯಲ್ಲಿ ಓಶಿಯನ್‌ಪರ್ಲ್ ಹೋಟೆಲ್‌ನ ಸಭಾಭವನದಲ್ಲಿ ಎಂಜಿನಿಯರ್‌ಗಳ ದಿನಾಚರಣೆ ಮತ್ತು ಅನುಮೋದನೆಗೊಂಡ ವೃತ್ತಿನಿರತ ಸಿವಿಲ್‌ಎಂಜಿನಿಯರಿಂಗ್ ವಿಧೇಯಕ-2024 “ಸಂಭ್ರಮ” ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಲಿಯುಗದಲ್ಲಿ ಸಂಘಟನೆಯೇ ಶಕ್ತಿ ಎಂಬ ಮಾತಿದೆ. ಯಾವುದೇ ಕ್ಷೇತ್ರದಲ್ಲಿ ವೃತ್ತಿಬಾಂಧವರೆಲ್ಲ ಸಂಘಟಿತರಾಗಿ ಕೆಲಸ ಮಾಡಿದರೆ ಉನ್ನತ ಪ್ರಗತಿ ಸಾಧ್ಯವಾಗುತ್ತದೆ. ವಿಶ್ವದ ಎಲ್ಲಾ ದೇಶಗಳ ಚಿತ್ತ ಈಗ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಭಾರತದತ್ತ ಇದೆ. ವೃತ್ತಿನಿರತ ಸಿವಿಲ್ ಎಂಜಿನಿಯರ್‌ಗಳ ಸಂಘಟನೆ ಉತ್ತರೋತ್ತರ ಪ್ರಗತಿಯನ್ನು ಸಾಧಿಸಲೆಂದು ಅವರು ಹಾರೈಸಿದರು. ಇದೇ ಸಂದರ್ಭದಲ್ಲಿ ಲೋಗೋ ಅನಾವರಣಗೊಳಿಸಲಾಯಿತು. ಸಿವಿಲ್‌ಎಂಜಿನಿಯರ್‌ಗಳ ರಾಜ್ಯಮಟ್ಟದ ಸಂಘಟನೆಯ ಅಧ್ಯಕ್ಷ ಶ್ರೀಕಾಂತ್ ಎಸ್. ಚನ್ನಲ್ ಮಾತನಾಡಿ, ಸಿವಿಲ್‌ ಎಂಜಿನಿಯರ್‌ಗಳು, ರಾಷ್ಟ್ರನಿರ್ಮಾಪಕರು ಒಂದು ದೇಶದ ಕಟ್ಟಡಗಳ ವಿನ್ಯಾಸ ಅಲ್ಲಿನ ಜನರ ಸಂಸ್ಕೃತಿ ಮತ್ತು ನಾಗರಿಕತೆಯನ್ನು ಪ್ರತಿಬಿಂಬಿಸುತ್ತದೆ. ರಸ್ತೆ, ಸೇತುವೆ, ಕಟ್ಟಡ, ಅಣೆಕಟ್ಟು ಹಾಗೂ ವಾಣಿಜ್ಯಸಂಕೀರ್ಣಗಳ ನಿರ್ಮಾಣದಲ್ಲಿ ಸಿವಿಲ್‌ಎಂಜಿನಿಯರ್‌ಗಳ ಸೇವೆ ಅಮೂಲ್ಯವಾಗಿದೆ. ಕೇಂದ್ರಸರ್ಕಾರ ಹತ್ತು ಲಕ್ಷ ಕೋಟಿ ರೂ. ಹಾಗೂ ಖಾಸಗಿ ವಲಯದ ಉದ್ಯಮಗಳು ಹದಿನೆಂಟು ಲಕ್ಷ ಕೋಟಿ ರೂ. ಸೇರಿದಂತೆ ಒಟ್ಟು ಇಪ್ಪತ್ತೆಂಟು ಲಕ್ಷ ಕೋಟಿ ರೂ. ಸಿವಿಲ್ ಕಟ್ಟಡ ಕಾಮಗಾರಿಗಳಿಗಾಗಿ ಈಗಾಗಲೇ ವಿನಿಯೋಗಿಸಲಾಗಿದೆ. ಆದರೆ ಪರಿಣತ ಹಾಗೂ ಅಧಿಕೃತ ಸಿವಿಲ್ ಎಂಜಿನಿಯರ್‌ಗಳು ಕಟ್ಟಡ ಕಾಮಗಾರಿಯಲ್ಲಿ ಭಾಗವಹಿಸದೆ ತಾಂತ್ರಿಕಜ್ಞಾನದ ಕೊರತೆಯಿಂದಾಗಿ ಕಟ್ಟಡಗಳ ಕುಸಿತ, ಸೇತುವೆಗಳಲ್ಲಿ ಬಿರುಕು, ರಸ್ತೆಗಳ ಕಳಪೆ ಕಾಮಗಾರಿ, ಅಣೆಕಟ್ಟುಗಳಲ್ಲಿ ಬಿರುಕು ಮುಂತಾದ ಸಮಸ್ಯೆಗಳು ಉಂಟಾಗುತ್ತವೆ. ಆದುದರಿಂದ ಅಧಿಕೃತ ಪರವಾನಿಗೆ ಪಡೆದ ಸಿವಿಲ್ ಎಂಜಿನಿಯರ್‌ಗಳೆ ಕಾಮಗಾರಿಯ ಉಸ್ತುವಾರಿ ನೋಡಿಕೊಳ್ಳಬೇಕು. ಇದಕ್ಕಾಗಿ ಅನುಮೋದನೆಗೊಂಡ ವೃತ್ತಿನಿರತ ಸಿವಿಲ್‌ಎಂಜಿನಿಯರಿಂಗ್ ವಿಧೇಯಕ ಅನಿವಾರ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಈಗಾಗಲೇ ವಿಧೇಯಕವು ಸರ್ಕಾರ ಮತ್ತು ಉಭಯಸದನಗಳಲ್ಲಿ ಅನುಮೋದನೆಗೊಂಡಿದ್ದು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಗೊಂಡಿದೆ ಎಂದು ಅವರು ಹೇಳಿದರು. ಬೆಂಗಳೂರು ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಎಂ.ಯು. ಅಶ್ವಥ್, ಅಜಿತ್ ಕುಮಾರ್ ಮತ್ತು ಎಂ. ಆರ್. ಕಲ್‌ಗಲ್ ತಮ್ಮ ಅನಿಸಿಕೆ ತಿಳಿಸಿದರು. ವಿಶೇಷ ಸಾಧನೆ ಮಾಡಿದ ಸಿವಿಲ್‌ಎಂಜಿನಿಯರ್‌ಗಳಾದ ಉಜಿರೆಯ ಜಗದೀಶಪ್ರಸಾದ್, ಸಂಪತ್‌ರತ್ನ ರಾವ್ ಮತ್ತು ಸುಭಾಶ್ಚಂದರ ಅವರನ್ನು ಗೌರವಿಸಲಾಯಿತು. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದ ಉಜಿರೆಯ ಜಗದೀಶ ಪ್ರಸಾದ್ ಯಾವುದೇ ತಾಂತ್ರಿಕ ಮಾಹಿತಿ ಹಾಗೂ ಅರ್ಹತೆ ಇಲ್ಲದವರು ಸಿವಿಲ್‌ಎಂಜಿನಿಯರ್‌ಗಳ ಮೇಲೆ ಮಾಡುವ ಆಪಾದನೆ ಹಾಗೂ ದಬ್ಬಾಳಿಕೆ ತಡೆಯಲು ಸಂಘಟನೆ ಹಾಗೂ ವಿಧೇಯಕ ಅನಿವಾರ್ಯವಾಗಿದೆ ಎಂದರು. ಉಜಿರೆಯ ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಡಾ. ರವೀಶ್ ಪಡುಮಲೆ ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭಕ್ಕೆ ಮೊದಲು ಆಕರ್ಷಕ ವಾಹನ ಜಾಥಾ ನಡೆಯಿತು.

ರೋಟರಿಯಿಂದ ರಕ್ಷಾಬಂಧನ ಸಂಭ್ರಮಾಚರಣೆ

Article Image

ರೋಟರಿಯಿಂದ ರಕ್ಷಾಬಂಧನ ಸಂಭ್ರಮಾಚರಣೆ

ಉಜಿರೆ : ಸಂಕುಚಿತವಾಗುತ್ತಿರುವ ಮಾನವ ಸಂಬಂಧಗಳಿಗೆ ಹಬ್ಬ- ಆಚರಣೆಗಳ ಮಹತ್ವವನ್ನು ಅರಿತುಕೊಳ್ಳಬೇಕು. ರಕ್ಷಾಬಂಧನದಂತ ಆಚರಣೆಯಿಂದ ಸಮಾಜದಲ್ಲಿ ಒಬ್ಬರನೊಬ್ಬರು ಸದಾ ಗೌರವಿಸುವ ಮತ್ತು ಪ್ರೀತಿಸುವ ಸಂಸ್ಕೃತಿಯನ್ನು ಬೆಳೆಸಿಕೊಳ್ಳೋಣ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ದಿವ್ಯ ಕುಮಾರಿ ಅಭಿಪ್ರಾಯಪಟ್ಟರು. ಇವರು ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ರೋಟರಿ ಸೇವಾ ಭವನ ಕಾಶಿಬೆಟ್ಟು, ರೊ.ಕೆ ರಮಾನಂದ ಸಾಲಿಯಾನ್ ಸಭಾಂಗಣದಲ್ಲಿ ನಡೆದ ರಕ್ಷಾ ಬಂಧನ ಸಂಭ್ರಮಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಪುರಾಣ ಹಾಗೂ ಇತಿಹಾಸಗಳಲ್ಲೂ ರಕ್ಷಾ ಬಂಧನಕ್ಕೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಹಬ್ಬ ಹರಿದಿನಗಳು ತಾಂತ್ರಿಕಗೊಳ್ಳುತ್ತಿರುವ ವರ್ತಮಾನದಲ್ಲಿ ಹಬ್ಬಗಳ ವೈಜ್ಞಾನಿಕ ಮತ್ತು ಧಾರ್ಮಿಕ ಹಿನ್ನೆಲೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು. ರೋಟರಿಯ ಸೇವಾ ಮನೋಭಾವದ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮಾ ಮಾತನಾಡಿ, ರಕ್ಷಾ ಬಂಧನ ರಕ್ಷೆ ಮತ್ತು ಪ್ರೀತಿಯ ಸಂಕೇತ. ಕೈ ಕಟ್ಟುವ ಒಂದಗಲದ ದಾರಕ್ಕೆ ತನ್ನದೇ ಆದ ಶಕ್ತಿ ಇದೆ ಎಂದರು. ದೀಪ ಬೆಳಗುವ ಮೂಲಕ ಗೌರವಿಸಿ ರಕ್ಷಾಬಂಧನವನ್ನು ಕಟ್ಟಿ ಸಿಹಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಎಂ.ಎಲ್.ಸಿ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್, ರೊಟೆರಿಯನ್ ಸೋನಿಯಾ ವರ್ಮಾ ಸೇರಿದಂತೆ ಇತರೆ ಸದಸ್ಯರು ಉಪಸ್ಥಿತರಿದ್ದರು.

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ‘ಎಸ್ ಡಿ ಎಂ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024’

Article Image

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ‘ಎಸ್ ಡಿ ಎಂ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024’

ಉಜಿರೆ, ಆ.24: ಋಣಭಾರ ಕಡಿಮೆಯಾಗದ ಹೊರತು ಜೀವನ ಸಾರ್ಥಕ್ಯ ಕಾಣಲಾರದು. ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಋಣಭಾರ ಕಡಿಮೆ ಮಾಡಿಕೊಳ್ಳಬಹುದು ಎಂದು ಉಜಿರೆ ಎಸ್ ಡಿ ಎಂ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಬೆಂಗಳೂರು ಘಟಕದ ಅಧ್ಯಕ್ಷ ಎನ್. ಸತ್ಯನಾರಾಯಣ ಹೊಳ್ಳ ಹೇಳಿದರು. ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಆ. 24ರಂದು ಹಿರಿಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಪುನರ್ಮಿಲನ (ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024) ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ವ್ಯಕ್ತಿಗೆ ವಿದ್ಯಾಋಣ, ಅನ್ನಋಣ ಇತ್ಯಾದಿ ಋಣಗಳಿರುತ್ತವೆ. ಅದು ದೊಡ್ಡ ಭಾರವಾಗಿದ್ದು, ಸಮಾಜಕ್ಕೆ ಮರಳಿ ಕೊಡುಗೆ ನೀಡುವ ಮೂಲಕ ಋಣದ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದು. ನೈತಿಕ ಬೆಂಬಲ ನೀಡುವುದು, ಧನಸಹಾಯ ನೀಡುವುದು, ಸಂಘ ಸಂಸ್ಥೆಗಳ ಮೂಲಕ ನೆರವು ನೀಡುವುದು ಇತ್ಯಾದಿ ಕ್ರಮಗಳ ಮೂಲಕ ಋಣಭಾರ ಇಳಿಸಿಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು. “ಹಿರಿಯ ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಉದ್ಯೋಗ ಪಡೆಯುವಲ್ಲಿ ನೆರವು ನೀಡುತ್ತಿದ್ದು, ಆ ಮೂಲಕ ವಿದ್ಯಾಸಂಸ್ಥೆಯ ಋಣಭಾರ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ” ಎಂದರು. ಧನಾತ್ಮಕ ಚಿಂತನೆಯೊಂದಿಗೆ, ಇಚ್ಚಾಶಕ್ತಿ ಹೊಂದಿ ಜೀವನದಲ್ಲಿ ಅಭಿವೃದ್ಧಿ ಕಾಣಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮುಖ್ಯ ಅತಿಥಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, “ಗ್ರಾಮೀಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಧರ್ಮಸ್ಥಳದ ಅಂದಿನ ಧರ್ಮಾಧಿಕಾರಿ ರತ್ನವರ್ಮ ಹೆಗ್ಗಡೆ ಅವರಿಂದ ಪ್ರಾರಂಭವಾದ ಉಜಿರೆ ಎಸ್.ಡಿ.ಎಂ. ಕಾಲೇಜು 58 ವರ್ಷಗಳಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಜೀವನೋಪಾಯಕ್ಕೆ ಮಾತ್ರವಲ್ಲದೆ, ಉತ್ತಮ ಬದುಕಿಗೆ ಹೇತುವಾಗಿದೆ. ವೀರೇಂದ್ರ ಹೆಗ್ಗಡೆ ಅವರ ಪೋಷಣೆಯಲ್ಲಿ ಸಂಸ್ಥೆ ಇನ್ನಷ್ಟು ಬೆಳೆದಿದೆ. ಸಂಸ್ಥೆಯಿಂದ ಔದ್ಯೋಗಿಕ, ವೈಯಕ್ತಿಕ ಕೊಡುಗೆ ಪಡೆದಿರುವ ನಾವು ಪ್ರಸ್ತುತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ರೀತಿಯಲ್ಲಿ ಕೊಡುಗೆ ನೀಡುವುದು ನಮ್ಮ ಜವಾಬ್ದಾರಿ. ಹಿರಿಯ ವಿದ್ಯಾರ್ಥಿಗಳಿಂದ ಸಂಸ್ಥೆಗೆ ಶ್ರೇಷ್ಠತೆ ಬರುತ್ತದೆ. ಅವರಿಂದ ಸಂಸ್ಥೆಗೆ ಬ್ರ್ಯಾಂಡ್ ವ್ಯಾಲ್ಯೂ ಲಭಿಸಿದೆ. ಸಂಸ್ಥೆಯ ಷಷ್ಟ್ಯಬ್ದಿ ಕೂಡ ಉತ್ತಮ ರೀತಿಯಲ್ಲಿ ಆಚರಿಸುವಂತಾಗಲಿ” ಎಂದರು. ಇನ್ನೋರ್ವ ಅತಿಥಿ, ಎಸ್.ಡಿ.ಎಂ. ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ, "ಎಸ್.ಡಿ.ಎಂ. ವಿದ್ಯಾ ಸಂಸ್ಥೆ ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟ ಗ್ರಾಮೀಣ ಭಾಗದ ವಿದ್ಯಾಸಂಸ್ಥೆ. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ನಮ್ಮ ಕಾಲೇಜು ಶ್ರೇಷ್ಠ ಸಾಧನೆಗಳನ್ನು ಮಾಡಿದೆ. ಇಂದಿನ ಕಾರ್ಯಕ್ರಮ ಮತ್ತೊಮ್ಮೆ ಹಿರಿಯ ವಿದ್ಯಾರ್ಥಿಗಳ ಮಿಲನಕ್ಕೆ ಕಾರಣವಾಗಿದೆ. ಹಿರಿಯ ವಿದ್ಯಾರ್ಥಿಗಳು ಅತ್ಯಂತ ಸಂವೇದನಾಶೀಲರಾಗಿ ಇಂದಿನ ವಿದ್ಯಾರ್ಥಿಗಳಿಗೆ ಅನೇಕ ರೀತಿಯಲ್ಲಿ ಸಹಕಾರ ನೀಡುತ್ತಿದ್ದಾರೆ. ಮುಂದೆಯೂ ಕೂಡ ಹಿರಿಯ ವಿದ್ಯಾರ್ಥಿಗಳ ಮಾರ್ಗದರ್ಶನ ಹೀಗೇ ಇರಲಿ" ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೀತಾಂಬರ ಹೆರಾಜೆ ಮಾತನಾಡಿ, "ಇಂದು ವಿವಿಧ ಹುದ್ದೆಗಳಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಎಸ್.ಡಿ.ಎಂ. ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ರತ್ನವರ್ಮ ಹೆಗ್ಗಡೆ ಅವರ ಕನಸು ಸಾಕಾರಗೊಂಡಿದೆ. ಕಾಲೇಜಿನ ಬೆಳವಣಿಗಾಗಿ ಹಿರಿಯ ವಿದ್ಯಾರ್ಥಿ ಸಂಘ ಸದಾ ನಿಲ್ಲುತ್ತದೆ. ಪ್ರತಿ ತಿಂಗಳ ನೆನಪಿನಂಗಳ ಕಾರ್ಯಕ್ರಮದ ಆಯೋಜನೆ ಹಾಗೂ ವಿವಿಧ ಚಟುವಟಿಕೆಗಳ ಆಯೋಜನೆ ಮಾಡುವುದರ ಮೂಲಕ ನಮ್ಮ ಮಾತೃ ಸಂಸ್ಥೆ ಎಸ್.ಡಿ.ಎಂ. ಕಾಲೇಜಿನ ಋಣವನ್ನು ಭರಿಸಲು ಸಾಧ್ಯವಾಗಿದೆ. ಸಂಘಟನೆಗೆ ಅಂದಿನ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ಭದ್ರ ತಳಪಾಯ ಹಾಕಿದ್ದಾರೆ. ಮಾರ್ಗದರ್ಶನ ನೀಡಿದ್ದಾರೆ" ಎಂದರು. ಕಾಲೇಜಿನ ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ಸಂಘದ ವತಿಯಿಂದ 5 ಲಕ್ಷ ರೂ. ಚೆಕ್ ಹಸ್ತಾಂತರಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಕಾಲೇಜಿನ ವಿದ್ಯಾರ್ಥಿಗಳಾದ ಸುಶಾಂತ್ ಶೆಟ್ಟಿ ಮತ್ತು ಸಿರಿ ಶರ್ಮ ಅವರನ್ನು ಸನ್ಮಾನಿಸಲಾಯಿತು. ಪ್ರಾಸ್ತಾವಿಕ ನುಡಿಗಳನ್ನಾಡಿದ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಬಿ.ಕೆ. ಧನಂಜಯ ರಾವ್, "ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ. ವಿದ್ಯಾಸಂಸ್ಥೆ ವರದಾನವಾಗಿದೆ. ಇಂತಹ ವಿದ್ಯಾಸಂಸ್ಥೆಯ ಜೊತೆ ಒಡನಾಟವನ್ನು ಹಾಗೆಯೇ ಉಳಿಸಿಕೊಳ್ಳಬೇಕು, ಆಗಾಗ ಕಾಲೇಜಿಗೆ ಭೇಟಿ ನೀಡಿ ನಮ್ಮ ಸಂಬಂಧವನ್ನು ನೆನಪಿಸಿಕೊಳ್ಳಬೇಕು ಎನ್ನುವುದೇ ಸಂಘದ ಉದ್ದೇಶ” ಎಂದರು. ಎಸ್ ಡಿ ಎಂ ಹಿರಿಯ ವಿದ್ಯಾರ್ಥಿಗಳ ಸಂಘವು ಪ್ರಸ್ತುತ ಅತ್ಯಂತ ರಚನಾತ್ಮಕ ಚಟುವಟಿಕೆಗಳನ್ನು ನಡೆಸುತ್ತಿದೆ. ಕಾಲೇಜಿನಲ್ಲಿ ಪ್ರತಿ ತಿಂಗಳು ನಿರಂತರ ಎಸ್.ಡಿ.ಎಂ. ನೆನಪಿನಂಗಳ (ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ) ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಈವರೆಗೆ 14 ಕಾರ್ಯಕ್ರಮ ನಡೆದಿದ್ದು ಒಟ್ಟು 14 ಹಿರಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇವರು ತಲಾ 5 ಸಾವಿರದಂತೆ ಒಟ್ಟು 75 ಸಾವಿರ ರೂ. ವಿದ್ಯಾರ್ಥಿ ವೇತನವನ್ನು ಅರ್ಹ 15 ಮಂದಿ ವಿದ್ಯಾರ್ಥಿಗಳಿಗೆ ವಿತರಿಸಿ ಉದಾರತೆ ತೋರಿದ್ದಾರೆ ಎಂದರು. ಸಂಘದ ಉಪಾಧ್ಯಕ್ಷ ಗುರುನಾಥ ಪ್ರಭು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಹಾಗೂ ಸ್ಥಳೀಯ ಎಸ್.ಡಿ.ಎಂ. ಸಂಸ್ಥೆಗಳ ಸಿಬ್ಬಂದಿ ಉಪಸ್ಥಿತರಿದ್ದರು. ವೈದೇಹಿ ಮತ್ತು ಬಳಗದವರು ಪ್ರಾರ್ಥಿಸಿದರು. ಸಂಘದ ಕಾರ್ಯಕ್ರಮ ಸಂಯೋಜಕ ಡಾ. ಎಂ.ಪಿ. ಶ್ರೀನಾಥ್ ವಂದಿಸಿದರು. ಡಾ. ದಿವಾಕರ ಕೆ. ಮತ್ತು ದಿವ್ಯಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಉಡುಪಿಯ ಕಲಾಮಯಂ ತಂಡದವರಿಂದ ವಿಶೇಷ ರಸಮಂಜರಿ ಕಾರ್ಯಕ್ರಮ ನಡೆಯಿತು.

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Article Image

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

ಉಜಿರೆ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳ ಕಾಲ ಅನುಪಮವಾಗಿ ಕರ್ತವ್ಯ ನಿರ್ವಹಿಸಿ, ನಿವೃತ್ತರಾದ ನೌಕರರು ಸರ್ಕಾರಕ್ಕೂ, ಸಮಾಜಕ್ಕೂ ಉತ್ತಮ ಸೇವೆ ನೀಡಿದ್ದು ಸ್ವಾಭಿಮಾನದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ತಮ್ಮ ಅನುಭವದ ಪರಿಪಕ್ವತೆಯೊಂದಿಗೆ ನಿವೃತ್ತರು ಸಮಾಜಸೇವೆಯಲ್ಲಿ ಪ್ರವೃತ್ತರಾಗಬೇಕು ಎಂದು ಉಜಿರೆಯ ಎಸ್. ಡಿ. ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಹೇಳಿದರು. ಅವರು ಮಂಗಳವಾರ ಉಜಿರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆಯೋಜಿಸಿದ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ಉದ್ಘಾಟಿಸಿ, ಮನವಿಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ಪ್ರತಿಯೊಬ್ಬರ ಜೀವನದಲ್ಲಿಯೂ ನಿವೃತ್ತಿ ಒಂದು ಅನಿವಾರ್ಯ ಹಂತವಾಗಿದ್ದು ನಿವೃತ್ತರು ತಾಳ್ಮೆ , ಪ್ರೀತಿ-ವಿಶ್ವಾಸ ಹಾಗೂ ಮಾನಸಿಕ ಪರಿಪಕ್ವತೆಯೊಂದಿಗೆ ಆರೋಗ್ಯಪೂರ್ಣ ಜೀವನ ನಡೆಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ನಿವೃತ್ತ ಪ್ರಾಂಶುಪಾಲರುಗಳಾದ ಪ್ರೊ ಟಿ. ಕೃಷ್ಣಮೂರ್ತಿ ಮತ್ತು ಪ್ರೊ. ಎ. ಜಯಕುಮಾರ್ ಶೆಟ್ಟಿ ಹಾಗೂ ವೇಣೂರಿನ ಶೀಲಾ ಎಸ್. ಹೆಗ್ಡೆ ಶುಭಾಶಂಸನೆ ಮಾಡಿದರು. ಅಧ್ಯಕ್ಷತೆ ವಹಿಸಿದ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲಶೆಟ್ಟಿ ಮಾತನಾಡಿ, ನಿವೃತ್ತರು ವೃದ್ಧರಲ್ಲ, ಪ್ರಬುದ್ದರು. ಕಿರಿಯರಿಗೆ ಸಕಾಲಿಕ ಮಾಹಿತಿ, ಮಾರ್ಗದರ್ಶನ ನೀಡಬೇಕು. ಪ್ರತಿಯೊಬ್ಬ ಸದಸ್ಯರೂ ಸಂಘಟನೆ ಬಗ್ಗೆ ಅಭಿಮಾನ ಮತ್ತು ಆಸಕ್ತಿಯಿಂದ ಸೇವೆ ಮಾಡಬೇಕು ಎಂದು ಹೇಳಿದರು. ಎಲ್ಲಾ ವಿಭಾಗಸಂಘಟಕರು ಮತ್ತು ಹೊಸ ಸದಸ್ಯರನ್ನು ಗೌರವಿಸಲಾಯಿತು. ಸನ್ಮತ್ ಕುಮಾರ್ ನಾರಾವಿ ಪ್ರಾಸ್ತ್ತಾವಿಕವಾಗಿ ಮಾತನಾಡಿದರು. ಬಿ ಸೋಮಶೇಖರ್ ಶೆಟ್ಟಿ ಸ್ವಾಗತಿಸಿದರು. ವಿಶ್ವಾಸ ರಾವ್ ಧನ್ಯವಾದವಿತ್ತರು. ವಸಂತ ರಾವ್ ನಾರಾವಿ ಕಾರ್ಯಕ್ರಮ ನಿರ್ವಹಿಸಿದರು.

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ನವಜೀವನೋತ್ಸವ

Article Image

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ನವಜೀವನೋತ್ಸವ

ಉಜಿರೆ: ಅನ್ನದಾಸೋಹ, ಅರಿವುದಾಸೋಹ ಮತ್ತು ಅಕ್ಷರದಾಸೋಹ ಎಂಬ ತ್ರಿವಿಧ ದಾಸೋಹದೊಂದಿಗೆ ಮನಪರಿವರ್ತನೆ ಮೂಲಕ ಕ್ರಾಂತಿಕಾರಿ ಸಮಾಜಸುಧಾರಣೆಯೊಂದಿಗೆ ಲೋಕಕಲ್ಯಾಣ ಕಾರ್ಯಗಳನ್ನು ನಿರಂತರ ಮಾಡುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗಡೆಯವರು ಸಾಧುಸಂತರಿಗಿಂತಲೂ ಮಿಗಿಲಾಗಿ ಎಲ್ಲರಿಂದಲೂ ದೇವಮಾನವರಾಗಿ ಗೌರವಿಸಲ್ಪಡುತ್ತಾರೆ. ಅವರ ದರ್ಶನದಿಂದ ದೇವರ ದರ್ಶನ ಮಾಡಿದಷ್ಟೇ ಸಂತೋಷ, ಮಾನಸಿಕ ಶಾಂತಿ ಮತ್ತು ನೆಮ್ಮದಿ ಸಿಗುತ್ತದೆ ಎಂದು ತುಮಕೂರಿನ ಕಾರದೇಶ್ವರ ಮಠದ ಕಾರದ ವೀರಬಸವ ಸ್ವಾಮೀಜಿ ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಮದ್ಯವ್ಯಸನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನಮುಕ್ತರಾದವರ ಶತದಿನೋತ್ಸವದ ಸಂಭ್ರಮದ ನವಜೀವನೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಮದ್ಯಪಾನದಂತಹ ವ್ಯಸನಗಳಿಗೆ ಬಿದ್ದವರನ್ನು ಮತ್ತು ಬೀಳುತ್ತಿರುವವರನ್ನು ಎತ್ತಿ ಹಿಡಿಯುವುದೇ ನಿಜವಾದ ಧರ್ಮವಾಗಿದೆ. “ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು” ಎನ್ನುವಂತೆ ಮನೆಯಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಕಾರ್ಯವಾಗಬೇಕು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಮಾತಾ-ಪಿತರಂತೆ ಬಹಳ ಪ್ರೀತಿ-ವಿಶ್ವಾಸದಿಂದ ಸಮಾಜದ ಸರ್ವರ ಕಲ್ಯಾಣಕ್ಕಾಗಿ ಮಾಡುತ್ತಿರುವ ಸೇವಾಕಾರ್ಯಗಳು ವಿಶ್ವಮಾನ್ಯವಾಗಿವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಹಿಳಾಸಬಲೀಕರಣ, ಕೆರೆಗಳ ಪುನಶ್ಚೇತನ, ಶುದ್ಧ ಕುಡಿಯುವ ನೀರಿನಘಟಕ, ಮನಪರಿವರ್ತನೆ ಮೂಲಕ ಮದ್ಯವರ್ಜನ ಶಿಬಿರಗಳು, ಸ್ವ-ಉದ್ಯೋಗ ತರಬೇತಿ ಇತ್ಯಾದಿ ಸೇವಾ ಕಾರ್ಯಕ್ರಮ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರವಾಗಿವೆ ಎಂದರು. ತುಮಕೂರಿನಲ್ಲಿ ತಮ್ಮ ಮಠದ ಭಕ್ತರಾದ ಚಂದ್ರಶೇಖರ ಎಂಬವರು ಮದ್ಯವ್ಯಸನಿಯಾಗಿದ್ದು ಮದ್ಯವರ್ಜನ ಶಿಬಿರಕ್ಕೆ ಸೇರಿ ವ್ಯಸನಮುಕ್ತರಾಗಿ ಈಗ ಎಂಜಿನಿಯರ್‌ರಾಗಿ ಸ್ವಂತ ಉದ್ಯಮದೊಂದಿಗೆ ಸ್ವಾವಲಂಬಿ ಜೀವನ ನಡೆಸುತ್ತಿರುವುದನ್ನು ಸ್ವಾಮೀಜಿ ಉಲ್ಲೇಖಿಸಿ ಕಾರ್ಯಕರ್ತರ ಸೇವೆಯನ್ನು ಶ್ಲಾಘಿಸಿದರು. ಸಮಾರಂಭವನ್ನು ಉದ್ಘಾಟಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನಮುಕ್ತರಾದವರು ಮನ, ವಚನ, ಕಾಯದಿಂದ ದೃಢ ಸಂಕಲ್ಪ ಮಾಡಿ ಮುಂದೆ ಸಾರ್ಥಕ ಜೀವನ ನಡೆಸಬೇಕು. ಅಂತರಂಗದಲ್ಲಿಯೂ ಬಹಿರಂಗದಲ್ಲಿಯೂ ಪರಿಶುದ್ಧರಾಗಿ ದೇವರ ದರ್ಶನ ಮಾಡಿ ಅನುಗ್ರಹ ಪಡೆದು ಮುಂದೆ ಸುಖ-ಶಾಂತಿ, ನೆಮ್ಮದಿಯ ಕೌಟುಂಬಿಕ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು. ವ್ಯಸನಮುಕ್ತರ ಭಾಗ್ಯದ ಬಾಗಿಲು ತೆರೆದಿದೆ ಎಂದು ಅವರಿಗೆ ಉಜ್ವಲ ಭವಿಷ್ಯವನ್ನು ಹೆಗ್ಗಡೆಯವರು ಹಾರೈಸಿದರು. ಮಾಜಿ ವಿಧಾನಪರಿಷತ್ ಸದಸ್ಯ ಕೆ ಹರೀಶ್ ಕುಮಾರ್ ಶುಭಾಶಂಸನೆ ಮಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಕನಸು ಕಂಡ ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯ ಹಾಗೂ ವ್ಯಸನಮುಕ್ತ ಭಾರತವನ್ನು ಹೆಗ್ಗಡೆಯವರು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಶೇ. ನೂರರಷ್ಟು ನನಸಾಗುವಂತೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ಶ ತದಿನೋತ್ಸವವನ್ನು ಆಚರಿಸಿದ ವ್ಯಸನಮುಕ್ತರು ಜೀವನಪರ್ಯಂತ ಆತ್ಮಸಾಕ್ಷಿಗೆ ಅನುಗುಣವಾಗಿ ಉತ್ತಮ ಜೀವನ ನಡೆಸಬೇಕು. ತಮಗೆ ಯಾವುದೇ ಸಮಸ್ಯೆ ಬಂದರೂ ಯೋಜನಾಧಿಕಾರಿ ಅಥವಾ ಶಿಬಿರಾಧಿಕಾರಿಗಳನ್ನು ಸಂಪರ್ಕಿಸಿದಲ್ಲಿ ಸೂಕ್ತ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಯ ಡಾ. ಅಭಿಷೇಕ್ ಚತುರ್ವೇದಿ ಮತ್ತು ದೇರಳೆಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಡಾ. ಮೇಖಲಾ ದಿವಾಕರ್ ಅವರು ಮದ್ಯವರ್ಜನ ಶಿಬಿರಗಳ ಬಗ್ಗೆ ರಚಿಸಿದ ಸಂಶೋಧನಾ ಪ್ರಬಂಧಗಳನ್ನು ಡಿ. ವೀರೇಂದ್ರ ಹೆಗಡೆಯವರಿಗೆ ಅರ್ಪಿಸಿದರು. ಮಂಗಳೂರಿನ ಡಾ. ಶ್ರೀನಿವಾಸ ಭಟ್, ಎಸ್. ಡಿ. ಸಂಪತ್ ಸಾಮ್ರಾಜ್ಯ, ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ಅಧಿಕಾರಿ ದುಗ್ಗೇಗೌಡ, ಜಿಲ್ಲಾಧ್ಯಕ್ಷ ಪದ್ಮನಾಭ ಭಟ್, ಸ್ಥಾಪಕ ಅಧ್ಯಕ್ಷ ವಸಂತ ಸಾಲಿಯಾನ್, ಕಾಸಿಂ ಮಲ್ಲಿಗೆಮನೆ ಮೊದಲಾದವರು ಉಪಸ್ಥಿತರಿದ್ದರು. ಪ್ರಾಸ್ತಾವಿಕ ಮಾತುಗಳೊಂದಿಗೆ ವಿವೇಕ್ ವಿ. ಪಾÊಸ್, ಸ್ವಾಗತಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ ಧನ್ಯವಾದವಿತ್ತರು. ಯೋಜನಾಧಿಕಾರಿಗಳಾದ ನಾಗೇಶ್ ಮತ್ತು ಭಾಸ್ಕರ್, ಎನ್. ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಗಿಲ್ ವಿಜಯ ದಿವಸ್ ಬೆಳ್ಳಿಹಬ್ಬ ಆಚರಣೆ; ಎನ್ನೆಸ್ಸೆಸ್ ಸರಣಿ ಕಾರ್ಯಕ್ರಮಗಳ ಸಮಾರೋಪ

Article Image

ಕಾರ್ಗಿಲ್ ವಿಜಯ ದಿವಸ್ ಬೆಳ್ಳಿಹಬ್ಬ ಆಚರಣೆ; ಎನ್ನೆಸ್ಸೆಸ್ ಸರಣಿ ಕಾರ್ಯಕ್ರಮಗಳ ಸಮಾರೋಪ

ಉಜಿರೆ, ಆ.7: ಕಾರ್ಗಿಲ್ ವಿಜಯ ದಿನಾಚರಣೆಯು ದೀಪಾವಳಿ ಹಬ್ಬದಂತೆ ಸಮಸ್ತ ದೇಶವಾಸಿಗಳಿಂದ ಆಚರಿಸಲ್ಪಡುತ್ತಿರುವುದು ಸಂತಸದ ಸಂಗತಿ ಎಂದು ಕಾರ್ಗಿಲ್ ಯುದ್ಧ ಸೇನಾನಿ ಕ್ಯಾಪ್ಟನ್ ನವೀನ್ ನಾಗಪ್ಪ ಹೇಳಿದರು. ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಇಂದು (ಆ.7) ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ್ ಬೆಳ್ಳಿಹಬ್ಬ ಆಚರಣೆ ಹಾಗೂ ಕಾರ್ಗಿಲ್ ವಿಜಯ ದಿವಸ್ ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು. ಆರಂಭದಲ್ಲಿ ಕಾರ್ಗಿಲ್ ವಿಜಯ ದಿನಾಚರಣೆಯು ಸೈನ್ಯದಿಂದ ಮಾತ್ರ ಆಚರಿಸಲ್ಪಡುತ್ತಿತ್ತು. ಕ್ರಮೇಣ ನಾಗರಿಕರು ಆಚರಿಸಲು ಆರಂಭಿಸಿದರು. ಪ್ರಸ್ತುತ ದೇಶಾದ್ಯಂತ ವ್ಯಾಪಕವಾಗಿ ಆಚರಿಸಲ್ಪಡುತ್ತಿದೆ ಎಂದು ಅವರು ಹೇಳಿದರು. “ದೇಶದ ಪ್ರಾಂತೀಯ ಸಮಗ್ರತೆಗಾಗಿ ನಾವು ಹೋರಾಟ ಮಾಡಿದೆವು. ಕಿರಿಯ ವಯಸ್ಸಿನ ಸೈನಿಕರು ಪ್ರಾಣತ್ಯಾಗ ಮಾಡಿದರು. ಇಲ್ಲಿಯವರೆಗೆ ನಾವು ದೇಶವನ್ನು ಮುಂದೆ ತೆಗೆದುಕೊಂಡು ಬಂದಿದ್ದೇವೆ, ಇನ್ನು ಮುಂದೆ ದೇಶವನ್ನು ಮುನ್ನಡೆಸಬೇಕಾದವರು ನೀವು. ಈಗ ನಿಮ್ಮ ಸರದಿ” ಎಂದರು. “ದೇಶವು ಸುರಕ್ಷಿತ ಕೈಗಳಲ್ಲಿದೆ” ಎಂದು ಅವರು ಸಮಾಧಾನ ವ್ಯಕ್ತಪಡಿಸಿದರು. “ಈ ಮಣ್ಣಿನಲ್ಲಿ ಹುಟ್ಟಲು ನಾನು ಅದೃಷ್ಟ ಮಾಡಿದ್ದೇನೆ. ಹಲವು ಜನರಿಗೆ ಹಲವು ಪ್ರಯತ್ನಗಳ ಬಳಿಕವೂ ಸೈನ್ಯ ಸೇರಲು ಸಾಧ್ಯವಾಗುವುದಿಲ್ಲ. ಆದರೆ ನಾನು ಪ್ರಥಮ ಪ್ರಯತ್ನದಲ್ಲಿಯೇ ಯಶಸ್ವಿಯಾದೆ. ಯುದ್ಧದಲ್ಲಿ ಪಾಲ್ಗೊಳ್ಳುವ ಅವಕಾಶವೂ ಸಿಕ್ಕಿತು. ಭಾರತಾಂಬೆಗೆ ಅಳಿಲುಸೇವೆ ಸಲ್ಲಿಸುವ ಅವಕಾಶ ನನಗೆ ಸಿಕ್ಕಿತು. ದೇಶಕ್ಕೆ ಈಗ ಸೇವೆ ಮಾಡದಿದ್ದಲ್ಲಿ ಇನ್ನು ಯಾವಾಗ? ನಾವಲ್ಲದೆ ಇನ್ನಾರು?” ಎಂದು ಅವರು ಹೇಳಿದರು. ಅತಿಥಿ, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿದರು. ದೇಶಕ್ಕೆ ಸೈನ್ಯ ಮತ್ತು ಸೈನಿಕರು ಎಷ್ಟು ಅನಿವಾರ್ಯ ಎಂಬುವುದು ಎಲ್ಲರಿಗೂ ಗೊತ್ತು. ನಾವು ರಾತ್ರಿ ನೆಮ್ಮಯಿಂದ ಮಲಗಿ ನಿದ್ದೆ ಹೋಗುತ್ತೇವೆ ಎಂದರೆ ಅದಕ್ಕೆ ಕಾರಣ ನಮ್ಮ ಹೆಮ್ಮೆಯ ಯೋಧರು. ದೇಶವನ್ನು ಕಾಪಾಡುವವರು ಯೋಧರು. ಆದ್ದರಿಂದ ಸೈನ್ಯದ ವ್ಯವಸ್ಥೆ ದೇಶಕ್ಕೆ ಅತೀ ಅಗತ್ಯ ಎಂದರು. ಮಾತೃಋಣ, ಪಿತೃಋಣ, ಗುರುಋಣಕ್ಕಿಂತಲೂ ಸೈನ್ಯ ಋಣ ಮಿಗಿಲು. ನಮ್ಮ ನಮ್ಮ ಕರ್ತವ್ಯದಲ್ಲಿ ಸೈನಿಕರ ಬದ್ಧತೆ, ಸೇವಾ ಮನೋಭಾವ ಅಳವಡಿಸಿಕೊಳ್ಳುವ ಮೂಲಕ ಆ ಋಣ ತೀರಿಸಬಹುದು. ಆ ನಿಟ್ಟಿನಲ್ಲಿ ಈ ಕಾರ್ಯಕ್ರಮ ಪೂರಕ ಎಂದು ಅವರು ಅಭಿಪ್ರಾಯಪಟ್ಟರು. ದೈಹಿಕ, ಮಾನಸಿಕ, ಭಾವನಾತ್ಮಕ ದೃಢತೆ ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, ದೇಶದ ಸೈನಿಕರು ದೇಶದ ರಕ್ಷಣೆ ಮಾಡುವಾಗ ದೇಶವಾಸಿಗಳಾದ ನಾವು ದೇಶದೊಳಗಡೆ ಏನು ಮಾಡುತ್ತಿದ್ದೇವೆ ಎಂಬುದನ್ನು ಅವಲೋಕನ ಮಾಡಬೇಕಿದೆ. ಸೈನಿಕರ ಶ್ರಮವನ್ನು ಯುವಜನರು ಅರಿತುಕೊಳ್ಳಬೇಕು. ನಮ್ಮ ಕಾಲೇಜಿನ ಎನ್ನೆಸ್ಸೆಸ್ ಘಟಕ ತನ್ನ ಸುವರ್ಣ ಸಂಭ್ರಮದ ಸಂದರ್ಭದಲ್ಲಿ ಈ ಕಾರ್ಯಕ್ರಮ ಆಯೋಜಿಸಿರುವುದು ಸಂತಸದಾಯಕ ಎಂದರು. ಭಾರತ ಎಂದಿಗೂ ಯಾವ ದೇಶದ ಮೇಲೆಯೂ ಕೂಡ ಯುದ್ಧ ಸಾರಿಲ್ಲ. ಆದರೆ ತನ್ನ ಮೇಲೆ ದಾಳಿ ಮಾಡಿದವರನ್ನು ಎಂದಿಗೂ ಸದೆ ಬಡಿಯದೆ ಬಿಟ್ಟಿಲ್ಲ ಎಂಬುದಕ್ಕೆ ಕಾರ್ಗಿಲ್ ಯುದ್ಧವೇ ಸಾಕ್ಷಿ ಎಂದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ಎನ್ ಎಸ್ ಎಸ್ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್., "24ನೇ ಕಾರ್ಗಿಲ್ ವಿಜಯ ದಿನಾಚರಣೆ ಸಂದರ್ಭದಲ್ಲಿ ನಾವು ಸರಣಿ ಕಾರ್ಯಕ್ರಮಗಳನ್ನು ನಡೆಸುವ ಸಂಕಲ್ಪ ಮಾಡಿದ್ದೆವು. ಶಾಲಾ ಕಾಲೇಜುಗಳಲ್ಲಿ ದೇಶಭಕ್ತಿ ಕುರಿತ ಸರಣಿ ಕಾರ್ಯಕ್ರಮ ನಡೆಸಿ, ಇಂದು ಸಮಾರೋಪ ಸಮಾರಂಭ ಆಯೋಜಿಸಿದ್ದೇವೆ" ಎಂದರು. ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ನಡೆಸಿದ ಭಾಷಣ ಮತ್ತು ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪಟ್ಟಿಯನ್ನು ಎನ್ ಎಸ್ ಎಸ್ ಯೋಜನಾಧಿಕಾರಿ ಪ್ರೊ. ದೀಪ ಆರ್.ಪಿ. ವಾಚಿಸಿದರು. ಗಣ್ಯರು ಬಹುಮಾನ ವಿತರಿಸಿದರು. ಎನ್ನೆಸ್ಸೆಸ್’ನ ಭಿತ್ತಿ ಪತ್ರಿಕೆ ‘ಯುವ ಚೇತನ’ದ ನೂತನ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಭಾರತಾಂಬೆ ಭಾವಚಿತ್ರ ಹಾಗೂ ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಲಾಯಿತು. ಅತಿಥಿಯನ್ನು ಸನ್ಮಾನಿಸಲಾಯಿತು. ಪ್ರಥಮ ಬಿ.ಕಾಂ. ವಿದ್ಯಾರ್ಥಿ ಶಯನ್ ಕುಮಾರ್ ರಚಿಸಿದ ಪೆನ್ಸಿಲ್ ಸ್ಕೆಚ್ ಅನ್ನು ಅತಿಥಿಗೆ ನೀಡಿದರು. ಸ್ವಯಂಸೇವಕಿಯರಾದ ಶ್ವೇತಾ ಕೆ ಜಿ ನಿರೂಪಿಸಿ, ಸಿಂಚನ ಕಲ್ಲೂರಾಯ ವಂದಿಸಿದರು. ಬಳಿಕ, ಕ್ಯಾಪ್ಟನ್ ಅವರೊಂದಿಗೆ ಎನ್ನೆಸ್ಸೆಸ್ ಅಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ಸಂವಾದ ನಡೆಸಿದರು. ವಿದ್ಯಾರ್ಥಿಗಳಿಂದ ಗಾಯನ ಕಾರ್ಯಕ್ರಮ ನಡೆಯಿತು.

ಶಿಕ್ಷಣದಲ್ಲಿ ನಾಟಕ ಮತ್ತು ಕಲೆ ಮಾಹಿತಿ ಕಾರ್ಯಗಾರ

Article Image

ಶಿಕ್ಷಣದಲ್ಲಿ ನಾಟಕ ಮತ್ತು ಕಲೆ ಮಾಹಿತಿ ಕಾರ್ಯಗಾರ

ವಿದ್ಯಾಗಿರಿ: ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್‌ರಾಮ್ ಸುಳ್ಯ ತಿಳಿಸಿದರು. ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಶಿವರಾಮ ಕಾರಂತ ಸಭಾಭವನದಲ್ಲಿ ಹಮ್ಮಿಕೊಂಡ ‘ಶಿಕ್ಷಣದಲ್ಲಿ ಕಲೆ ಹಾಗೂ ನಾಟಕದ ಪಾತ್ರ’ ದ ಕುರಿತು ಕಾರ್ಯಗಾರದಲ್ಲಿ ಮಾತನಾಡಿದರು. ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಣದಲ್ಲಿ ನೃತ್ಯ, ಸಂಗೀತ, ನಾಟಕ, ಸೃಜನಶೀಲ ಬರವಣಿಗೆ, ರಂಗಭೂಮಿ ಇತ್ಯಾದಿಗಳನ್ನು ಒಳಗೊಂಡಿರಬೇಕು. ನಾಟಕಗಳು ನಮ್ಮ ಸುತ್ತಮುತ್ತಲಿನ ಸುಂದರ ದೃಶ್ಯಗಳನ್ನು ನಮ್ಮ ಕಣ್ಣ ಮುಂದೆ ಸೃಷ್ಟಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ಕಲೆಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಸುಧಾರಿಸಲು ಸಹಾಯಕ. ಪ್ರದರ್ಶನದ ಕಲೆಗಳು ಮಕ್ಕಳಲ್ಲಿ ತಮ್ಮ ಭಾವನೆ ಮತ್ತು ಕಲ್ಪನೆಗಳನ್ನು ಹಾಗೂ ತಮ್ಮದೇ ಆದ ವಿಶಿಷ್ಟ ಧ್ವನಿಗಳನ್ನು ಅಭಿವೃದ್ಧಿ ಪಡಿಸಲು ಸಹಾಯ ಮಾಡುತ್ತವೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಶಿಕ್ಷಕರಾದವರು ಕಲೆಗಾರರು, ನಾಟಕಗಾರರು ಆಗಿರಬೇಕು. ಯಾವುದೇ ವಿಷಯವನ್ನು ಕಲೆ ಮತ್ತು ನಾಟಕದ ಮೂಲಕ ಕಲಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ವಿಷಯವನ್ನು ಮನ ಮುಟ್ಟವಂತೆ ತಿಳಿಸಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಡಾ. ಶಂಕರಮೂರ್ತಿ ಹೆಚ್. ಕೆ ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಜಾನೆಟ್ ಸ್ವಾಗತಿಸಿ, ಅಪೂರ್ವ ವಂದಿಸಿ, ಕಾವ್ಯ ಕೆ ಕಾರ್ಯಕ್ರಮ ನಿರೂಪಿಸಿದರು.

ಎಕ್ಸಲೆಂಟ್: ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ

Article Image

ಎಕ್ಸಲೆಂಟ್: ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ

ನಮ್ಮನ್ನು ರಕ್ಷಣೆ ಮಾಡುತ್ತಿರುವ ಸೈನಿಕರನ್ನು ಪ್ರತೀಕ್ಷಣ ಸ್ಮರಿಸಬೇಕು. ಸೈನಿಕರು ಭಾವಜೀವಿಗಳು, ನಚೀಕೇತ್, ಸೌರಭ್ ಕಾಲಿಯಾರಂತಹ ಮೊದಲಾದ ವೀರ ಯೋಧರ ಬಲಿದಾನದ ಪ್ರತಿಫಲವಾಗಿ ಇಂದಿನ ಭಾರತ ಭವ್ಯವಾಗಿದೆ. ಕಾರ್ಗಿಲ್ ಯುದ್ಧವಲ್ಲ ಅದೊಂದು ಕಾರ್ಯಾಚರಣೆ. ಯಾಕೆ ಭಾರತಕ್ಕೆ ಕಾರ್ಗಿಲ್ ಮುಖ್ಯವೆಂದರೆ 527 ಸೈನಿಕರು ತಮ್ಮ ಯಶಸ್ವಿ ಕಾರ್ಯಚರಣೆಯಿಂದ ಭಾರತಕ್ಕೆ ಜಯ ತಂದುಕೊಟ್ಟು ಹುತಾತ್ಮರಾದರು. ಇಂದು ಆ ಕಾರ್ಯಚರಣೆಯಲ್ಲಿ ಮಡಿದ ಅಷ್ಟೂ ಸೈನಿಕರನ್ನು ಸ್ಮರಿಸಿಕೊಳ್ಳುವುದು ಅತೀ ಮುಖ್ಯ ಎಂಬುದಾಗಿ ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಗಣೇಶ್ ಅಭಿಪ್ರಾಯಪಟ್ಟರು. ಎಕ್ಸಲೆಂಟ್ ಶಿಕ್ಷನ ಸಂಸ್ಥೆಗಳು ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಇಲ್ಲಿಯ ತನಕ ಹುತಾತ್ಮರಾದ ಎಲ್ಲಾ ಸೈನಿಕರಿಗೂ ಎದೆಗೆ ಗುಂಡುಬಿದ್ದಿದೆಯೇ ವಿನಃ ಬೆನ್ನಿಗಲ್ಲ. ಅಷ್ಟಿದ್ದರೂ ದೇಶಕ್ಕಾಗಿ ಬದುಕಬೇಕು ಎಂಬ ಭಾವುಕತೆ ಸೈನಿಕರದ್ದು. ಅವರು ದೇಶದ ರಕ್ಷಣೆ ಕಣ್ಣಮುಂದೆ ಬಂದರೆ ಸದಾ ಬಲಿದಾನಕ್ಕೆ ಮುಂದಾಗುತ್ತಾರೆ. ಬಲಿದಾನಗೈದ ವೀರಯೋಧರ ಕನಸುಗಳನ್ನು ಹೊತ್ತ ಭೂಮಿ ಇದು ಕಾರ್ಗಿಲ್ ಎಂದಿಗೂ ಭಾರತದ ಭಾಗ ಅಲ್ಲಿ ಮಡಿದ ಯೋಧರ ಪರಿಶ್ರಮ ನಮ್ಮ ನೆಮ್ಮದಿಯ ನಿದ್ರೆಗೆ ಕಾರಣ. ಆದರೆ ಇಂದು ನಾವುಗಳು ಜಾತಿ ಮತ ಭಾಷೆ ಇತ್ಯಾದಿ ಬಂಧನಗಳಿಗೆ ಒಳಗಾಗಿದ್ದೇವೆ. ಅದರಿಂದ ಹೊರಬಂದು ನಾವೆಲ್ಲಾ ಒಂದೇ, ನಾವೆಲ್ಲಾ ಭಾರತೀಯರು ಎನ್ನುವ ಹೆಮ್ಮೆ ನಮಗಿರಬೇಕು. ಜೀವನದಲ್ಲಿ ಗುರಿಯ ಸ್ಪಷ್ಟತೆ ಇದ್ದರೆ ಎಂತಹ ಸಮಸ್ಯೆಗಳನ್ನು ಮೆಟ್ಟಿನಿಲ್ಲಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಯೋಧರ ತ್ಯಾಗ ಬಲಿದಾನಗಳನ್ನು ಸದಾ ಗೌರವಿಸಬೇಕು. ದೇಶ ಮೊದಲು ಎಂಬ ಮನೋಭಾವ ಎಲ್ಲರಲ್ಲಿಯೂ ಮೂಡಬೇಕು. ಯೋಧರ ಆದರ್ಶಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಈ ಕಾರ್ಗಿಲ್ ವಿಜಯ ಸುಲಭವಾಗಿ ಲಭಿಸಿದ್ದಲ್ಲ ಅದರಲ್ಲಿ ನೂರಾರು ಸೈನಿಕರು ವೀರತನದಿಂದ ಹೋರಾಡಿ ತಮ್ಮ ಬಲಿದಾನ ಮಾಡಿದ್ದಾರೆ. ಇಂದು ನಾವೆಲ್ಲಾ ಈ ಸಂಭ್ರಮಾಚರಣೆ ಮಾಡುತ್ತಿರುವುದು ಅವರಿಗೆ ಸಲ್ಲಿಸುತ್ತಿರುವ ಗೌರವ ಎಂದು ಹೇಳುತ್ತಾ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮದ ಅರಿವನ್ನು ಮೂಡಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್, ಉಪಮುಖ್ಯೋಪಾಧ್ಯಾಯ ಜಯಶೀಲ, ಎನ್ ಸಿ ಸಿ ನೌಕದಳದ ಕೇರ್‌ಟೇಕರ್ ಆಫೀಸರ್ ರೇಣುಕಾಚಾರ್ಯ, ಭೂದಳದ ಕೇರ್‌ಟೇಕರ್ ಆಫೀಸರ್ ಪ್ರಶಾಂತ್ ಜೈನ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮನಿಷಾ, ನವ್ಯ ಕಾರ್ಯಕ್ರಮ ನಿರೂಪಿಸಿದರು. ಹರ್ಷ ಅತಿಥಿಗಳನ್ನು ಪರಿಚಯಿಸಿದರು, ಗುಂಜನ್ ಕಾರ್ಗಿಲ್ ವಿಜಯ ದಿವಸದ ಮಹತ್ವ ತಿಳಿಸಿದರು. ಪ್ರನ್ಶು ವಂದಿಸಿದರು. ಇದೇ ಸಂದರ್ಭದಲ್ಲಿ ಕಾರ್ಗಿಲ್ ವಿಜಯ ದಿವಸದ ಸವಿನೆನಪಿಗಾಗಿ ಶಾಲಾ ಆವರಣದಲ್ಲಿ ಗಿಡ ನೆಡಲಾಯಿತು.

ಮೂಡುಬಿದಿರೆ: ವಿಶೇಷ ಉಪನ್ಯಾಸ ಕಾರ್ಯಕ್ರಮ

Article Image

ಮೂಡುಬಿದಿರೆ: ವಿಶೇಷ ಉಪನ್ಯಾಸ ಕಾರ್ಯಕ್ರಮ

ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿವೆ. ಆದರೆ ಪತ್ರಿಕೆಗಳ ಮೂಲಕ ದೊರೆಯುವ ಸಕಾರಾತ್ಮಕ ಮತ್ತು ಮಹತ್ವಪೂರ್ಣ ದಾಖಲೆಗಳು ಜ್ಞಾನದ ಜೊತೆ ಓದಿನ ಸುಖವನ್ನು ನೀಡುತ್ತವೆ ಎಂದರು. ವಿದ್ಯಾರ್ಥಿಗಳು ಪತ್ರಿಕೆಗಳಲ್ಲಿ ಪ್ರಕಟವಾಗುವ ಸಂಪಾದಕೀಯ ಪುಟ, ಸ್ಥಳೀಯ, ರಾಜ್ಯ, ರಾಷ್ಟ್ರಮಟ್ಟದ ಸುದ್ದಿಗಳ ಜೊತೆಗೆ ವಿದ್ಯಾರ್ಥಿಗಳಿಗಾಗಿ ಮೀಸಲಿಟ್ಟ ಆಸಕ್ತಿದಾಯಕ ಸಂಗತಿಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ತಿಳಿಸಿದರು. ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಶೆಟ್ಟಿ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಸಾಪ ಮೂಡುಬಿದಿರೆ ತಾಲೂಕು ಘಟಕ ಅಧ್ಯಕ್ಷ ಕೆ ವೇಣುಗೋಪಾಲ್ ಶೆಟ್ಟಿ, ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಬೇರೆ ಬೇರೆ ಮಾತೃಭಾಷೆಗಳನ್ನು ಹೊಂದಿದ್ದರು ಕನ್ನಡಕ್ಕೆ ವಿಶೇಷ ಸ್ಥಾನಮಾನ ನೀಡುತ್ತಾ ಅದನ್ನು ನಮ್ಮ ಜೀವನದ ಅಂಗವನ್ನಾಗಿ ಮಾಡಿಕೊಂಡಿದ್ದು ಉಲ್ಲೇಖನೀಯ ಎಂದರು. ವಿದ್ಯಾರ್ಥಿನಿ ಖ್ಯಾತಿ ಪ್ರಾರ್ಥಿಸಿ, ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಸಾಪ ತಾಲೂಕು ಘಟಕದ ಕಾರ್ಯದರ್ಶಿ ಸದಾನಂದ ನಾರಾವಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ವಿಜಯಲಕ್ಷ್ಮಿ ಮಾರ್ಲಾ ವಂದಿಸಿದರು.

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Article Image

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ಎನ್.ಸಿ.ಸಿ. ಭೂದಳ ಮತ್ತು ನೌಕಾದಳ ಘಟಕದ ವತಿಯಿಂದ ಇಂದು (ಜು.26) 25ನೇ ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿ, "ಈ ದಿನ ಹುತಾತ್ಮರಾದ ಯೋಧರ ತ್ಯಾಗ ಬಲಿದಾನವನ್ನು ನೆನೆದು, ಯೋಧರ ಜೊತೆಗೆ ಅವರ ಕುಟುಂಬವನ್ನೂ ಸ್ಮರಿಸಬೇಕು. ಪ್ರಜ್ಞಾವಂತ ನಾಗರಿಕರಾಗಿ ದೇಶದ ಏಳಿಗೆ, ಏಕತೆ, ಸಾರ್ವಭೌಮತ್ವವನ್ನು ಹೆಚ್ಚಿಸುವ ಯೋಜನೆ ಮತ್ತು ನಿರ್ಧಾರವನ್ನು ಕೈಗೊಳ್ಳಬೇಕಾಗಿದೆ" ಎಂದರು. ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಎನ್.ಸಿ.ಸಿ. ಕೆಡೆಟ್’ಗಳು ಹುತಾತ್ಮ ಯೋಧರಿಗೆ ರೈಫಲ್ ಸೆಲ್ಯೂಟ್ ಮುಖಾಂತರ ಗೌರವ ಸಲ್ಲಿಸಿದರು. ಕೆಡೆಟ್’ಗಳಿಂದ ತಯಾರಿಸಲ್ಪಟ್ಟ ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಲಾಯಿತು. ಕಾಲೇಜಿನ ಆಡಳಿತ ಕುಲಸಚಿವ ಡಾ. ಶಲೀಫ್ ಎ. ಪಿ., ಪರೀಕ್ಷಾಂಗ ಕುಲಸಚಿವೆ ಪ್ರೊ. ನಂದಾಕುಮಾರಿ, ಅಸೋಸಿಯೇಟ್ ಎನ್.ಸಿ.ಸಿ. ಅಧಿಕಾರಿ (ಎಎನ್ಒ)ಗಳಾದ ಲೆಫ್ಟಿನೆಂಟ್ ಭಾನುಪ್ರಕಾಶ್, ಲೆ. ಶುಭಾ ರಾಣಿ, ಕೇರ್ ಟೇಕಿಂಗ್ ಆಫೀಸರ್ (ಸಿಟಿಒ)ಗಳಾದ ಶೋಭಾ, ಹರೀಶ್ ಶೆಟ್ಟಿ, ಹಿರಿಯ ಎಎನ್ಒ ಲೆಫ್ಟಿನೆಂಟ್ ಕಮಾಂಡರ್ ಡಾ. ಶ್ರೀಧರ್ ಭಟ್, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಕೆಡೆಟ್ ಗಳು ಉಪಸ್ಥಿತರಿದ್ದರು. ಕೆಡೆಟ್ ದೀಪ್ತಿ ಆಚಾರ್ಯ ಪಿ. ಕಾರ್ಯಕ್ರಮ ನಿರೂಪಿಸಿದರು.

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ

Article Image

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ

ದೇಶಪ್ರೇಮ ಎಂದಾಕ್ಷಣ ಸೇನೆ ಸೇರುವುದು ಮಾತ್ರವಲ್ಲ. ದೇಶದ ಅಭ್ಯುದಯಕ್ಕಾಗಿ ಸಲ್ಲಿಸುವ ಪ್ರತೀ ಕಾರ್ಯಕ್ರಮ ದೇಶಪ್ರೇಮವೆನಿಸುತ್ತದೆ ಎಂದು ಪತ್ರಕರ್ತ ಹಾಗೂ ಯುವ ವಾಗ್ಮಿ ಶ್ರೀಕಾಂತ್ ಶೆಟ್ಟಿ ನುಡಿದರು. ಅವರು ಶುಕ್ರವಾರ (ಜು. 26) ಶಿವರಾಮ ಕಾರಂತರ ಸಭಾಂಗಣದಲ್ಲಿ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2024-25ನೇ ವರ್ಷದ ಚಟುವಟಿಕೆಗಳು ಹಾಗೂ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಭಾರತದ ಸ್ವಾತಂತ್ರ‍್ಯದ ನಂತರ ಐದು ಪ್ರಮುಖ ಯುದ್ಧಗಳು ನಡೆದಿವೆ. ಪಾಕಿಸ್ತಾನ ನಾಲ್ಕು ಯುದ್ಧಗಳಲ್ಲೂ ನಮ್ಮ ವಿರುದ್ಧ ಗೆಲ್ಲಲಾಗಲಿಲ್ಲ. ಸೈನಿಕರ ಸಾವು ನಮಗೆ ಸ್ವಾಭಾವಿಕ ಸಂಗತಿ ಎಂದೆನಿಸಬಾರದು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರ ಬಲಿದಾನವನ್ನು ಸ್ಮರಿಸಬೇಕು. ಸೈನಿಕರ ನಿಸ್ವಾರ್ಥ ಸೇವೆ ಮತ್ತು ನಿಷ್ಠೆ ಸದಾ ಸ್ಮರಣೀಯ ಎಂದರು. ಕೆಂಗುರಸೆ ಎಂಬ ಯೋಧ ಘಾತಕ್ ಪ್ಲಟೂನ್ ಸೇರಿ ಹುತಾತ್ಮನಾದ ಮೇಲೆ ನಾಗಲ್ಯಾಂಡ್‌ನಲ್ಲಿ ಸೈನ್ಯದ ಬಗ್ಗೆ ಇದ್ದ ನಕಾರಾತ್ಮಕತೆ ಹೋಗಿ ಹೆಚ್ಚು ಹೆಚ್ಚು ಯುವಕರು ಸೇನೆ ಸೇರುವಂತಾದ ಪ್ರಸಂಗವನ್ನು ವಿವರಿಸಿದರು. ನಮ್ಮ ದೇಶದ ಮೇಲೆ ಎಷ್ಟೇ ದಾಳಿಗಳಾದರೂ ನಮ್ಮ ಸಾಂಸ್ಕೃತಿಕ ಹಿನ್ನೆಲೆಯನ್ನು ನಾಶಮಾಡಲು ಸಾಧ್ಯವಾಗಲಿಲ್ಲ. ಕಾರ್ಗಿಲ್‌ಯುದ್ಧ ಪಾಕಿಸ್ತಾನ ನಮ್ಮ ಬೆನ್ನಿಗೆ ಹಾಕಿದ ಚೂರಿ. ಕ್ಯಾ.ವಿಕ್ರಂ ಬಾತ್ರ, ರಾಜೇಶ್ ಅಧಿಕಾರಿ, ಕರ್ನಲ್ ರವೀಂದ್ರನಾಥ್ ಸೇರಿ ಹಲವು ಸೈನಿಕರ ಬಲಿದಾನದ ನಂತರ ನಾವು ಕಾರ್ಗಿಲ್ ಕದನ ಗೆದ್ದೆವು. ಮೊದಲ ಬಾರಿ ಈ ದೇಶದಲ್ಲಿ ಯುದ್ಧದ ನಂತರ ಎಲ್ಲಾ ಹುತಾತ್ಮರ ದೇಹಗಳನ್ನು ಮನೆಗೆ ತಲುಪಿಸುವ ಕೆಲಸ ನಡೆಯಿತು. ಹಾಗೆಯೇ ಅದರ ಮೂಲಕ ಭಾವನಾತ್ಮಕವಾಗಿ ಭಾರತವನ್ನು ಬೇಸೆಯೋ ಕೆಲಸವಾಯಿತು. ಇಂದಿಗೂ ಯುದ್ಧ ನಿಂತಿಲ್ಲ ಆದರೆ ಯುದ್ಧದ ರೂಪ ಬದಲಾಗಿದೆ ಎಂದರು. ಮೂಡುಬಿದಿರೆ ಜೈನ ಪ್ರೌಢಶಾಲೆಯ ನಿವೃತ್ತ ಅಧ್ಯಾಪಕ ಮುನಿರಾಜ ರೆಂಜಾಳ ರಾಷ್ಟ್ರೀಯ ಸೇವಾ ಯೋಜನೆಯ 2024-25ನೇ ವರ್ಷದ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ವೃತ್ತಿಯಲ್ಲಿ ನಿವೃತ್ತರಾದ ಪ್ರತಿಯೊಬ್ಬರಿಗೂ ಅವರ ಹಿಂದಿನ ವೃತ್ತಿಯ ಬಗ್ಗೆ ಆಸಕ್ತಿ ಇರುತ್ತದೆ. ನಾನು ಕಳೆದ 40 ವರ್ಷದಿಂದ ಎನ್.ಎಸ್.ಎಸ್. ಸಂಪರ್ಕದಲ್ಲಿದ್ದೇನೆ. ವಿಶ್ವಮಾನವನಾಗಿಸುವ ವೇದಿಕೆ ಯಾವುದಾದರೂ ಇದ್ದರೆ ಅದು ರಾ.ಸೇ.ಯೋ ಎಂದರು. ಒಂದು ಕೆಲಸವನ್ನು ಆರಂಭಿಸಿದ ನಂತರ ಅದಕ್ಕೆ ಪೂರಕವಾದ ಶ್ರಮ ಮತ್ತು ನಿರಂತರತೆ ಅಗತ್ಯ. ಈಗಿನ ಮಕ್ಕಳಲ್ಲಿ ಕಷ್ಟದ ಪರಿಚಯ ಇಲ್ಲ, ಹೊಂದಾಣಿಕೆಯೂ ಇಲ್ಲ. ಶ್ರಮಪಟ್ಟಾಗ ಮಾತ್ರ ಸುಂದರ ಜೀವನವನ್ನು ರೂಪಿಸಿಕೊಳ್ಳುಲು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್ ಜೀವನದಲ್ಲಿ ಶಿಸ್ತುತನ್ನು ಪಾಲಿಸಬೇಕು. ತರಗತಿ ಹೊರಗಿನ ಶಿಕ್ಷಣ ಅದು ನಿಜವಾದ ಶಿಕ್ಷಣ. ಪ್ರಾಮಾಣಿಕವಾಗಿ ಕೆಲಸ ಮಾಡಿ ಮತ್ತು ಮಾನವೀಯತೆಯನ್ನು ಬೆಳೆಸಿಕೊಳ್ಳಿ. ಆಗ ಮಾತ್ರ ಜೀವನದಲ್ಲಿ ಯಶಸ್ಸುನ್ನು ಸಾದಿಸಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಸಂಸ್ಕೃತ ವಿಭಾಗದ ಮುಖ್ಯಸ್ಥ ಅಂಬರೀಶ್ಚಿ ಪ್ಳೂಣಕರ್ ಉಪಸ್ಥಿತರಿದ್ದರು. ರಾಷ್ಟೀಯ ಸೇವಾ ಯೋಜನೆಯ ಸಂಯೋಜಕ ಧರ್ಮೇಂದ್ರ ಕುದ್ರೋಳಿ ಸ್ವಾಗತಿಸಿ, ಗಣಪತಿ ನಾಯಕ್ ವಂದಿಸಿ, ಶಾಲೆಟ್ ಮೋನೀಸ್ ನಿರೂಪಿಸಿದರು.

ಉಜಿರೆ: ಸಾಂಪ್ರದಾಯಿಕ ಔಷಧ ಕುರಿತ ಕಾರ್ಯಾಗಾರ

Article Image

ಉಜಿರೆ: ಸಾಂಪ್ರದಾಯಿಕ ಔಷಧ ಕುರಿತ ಕಾರ್ಯಾಗಾರ

“ಗಿಡಗಳನ್ನು ಸಂರಕ್ಷಿಸುವ ಹೊಣೆಗಾರಿಕೆಗೆ ನಾವೆಲ್ಲರೂ ಕಟಿಬದ್ಧರಾಗಬೇಕು” ಎಂದು ನಾಟಿ ವೈದ್ಯ ಪರಿಣತ, ಉಜಿರೆಯ ಧ.ಮಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮಾಜಿ ಸಿಬ್ಬಂದಿ ಸದಾನಂದ ಬಿ. ಮುಂಡಾಜೆ ಹೇಳಿದರು. ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಸಸ್ಯಸೌರಭ ಸಂಘ ಮತ್ತು ಇಕೋ ಕ್ಲಬ್ ಇಂದು (ಜು.19) ಆಯೋಜಿಸಿದ್ದ ಸಾಂಪ್ರದಾಯಿಕ ಔಷಧ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ತನ್ನ ಬೇರುಗಳ ಮೂಲಕ ನೀರನ್ನು ಹೀರಿಕೊಂಡು ಹೂ ಹಣ್ಣು ಇವನ್ನೆಲ್ಲ ನೀಡುವ ಯಾವುದೇ ಗಿಡ ಮರ ಬಳ್ಳಿಗಳು ಪ್ರಪಂಚದಲ್ಲಿ ಶ್ರೇಷ್ಠವಾದದ್ದು. ಹಲವಾರು ರೋಗಗಳನ್ನು ನಿವಾರಿಸುವಲ್ಲಿ ಸಸ್ಯಗಳ ಪಾತ್ರ ಬಹಳ ಮುಖ್ಯವಾದಂತದ್ದು. ಅಂತಹ ಗಿಡ ಮರಗಳನ್ನು ಉಳಿಸುವ ಉತ್ಸಾಹ ಅಗತ್ಯ ಎಂದು ಅವರು ಹೇಳಿದರು. ಒಂದು ರೋಗ ಬರಲು ಮನಸ್ಸು ಕಾರಣ. ಆ ರೋಗ ಗುಣವಾಗಲು ಕೂಡ ಮನಸ್ಸೇ ಕಾರಣ. ಹೀಗಾಗಿ ಔಷಧ ಕೊಡುವವನು ಮತ್ತು ತೆಗೆದುಕೊಳ್ಳುವವನ ಮಧ್ಯೆ ನಂಬಿಕೆ ಇದ್ದಾಗ ಮಾತ್ರ ಔಷಧ ಫಲಿಸುತ್ತದೆ ಎಂದು ಅವರು ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, “ಪ್ರಕೃತಿಯಲ್ಲಿರುವ ಯಾವುದೇ ಗಿಡಗಳಲ್ಲಿ ಒಂದಲ್ಲ ಒಂದು ಔಷಧೀಯ ಗುಣ ಇದ್ದೇ ಇರುತ್ತದೆ. ಸಸ್ಯಗಳನ್ನು ಪ್ರೀತಿಸಿ, ಅವುಗಳೊಂದಿಗೆ ಮಾತನಾಡಿ. ಅವುಗಳು ಸ್ಪಂದಿಸುವ ಗುಣ ಹೊಂದಿವೆ” ಎಂದರು. ವಿಭಾಗದ ಭಿತ್ತಿಪತ್ರಿಕೆ ‘ಸಸ್ಯಸೌರಭ’ದ ‘ಹರ್ಬಲ್ಸ್ ದ್ಯಾಟ್ ಹೀಲ್’ ಸಂಚಿಕೆ ಅನಾವರಣಗೊಳಿಸಲಾಯಿತು. ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರಥಮ್ ಪ್ರಾರ್ಥಿಸಿದರು. ನಯನ ಕೆ. ಸ್ವಾಗತಿಸಿ, ಲಾವಣ್ಯ ವಂದಿಸಿ, ವೈದೇಹಿ ನಿರೂಪಿಸಿದರು.

ಉಜಿರೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Article Image

ಉಜಿರೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಜನಸಂಖ್ಯಾ ಸ್ಪೋಟದಿಂದ ದೇಶದ ಪ್ರಗತಿ ಕುಂಠಿತವಾಗುತ್ತದೆ. ಎಲ್ಲರಿಗೂ ಆಹಾರ, ನೆಲ, ಜಲ, ಹಾಗೂ ಪರಿಶುದ್ಧವಾದ ಗಾಳಿ ಮೊದಲಾದ ಮೂಲಭೂತ ಸೌಕರ್ಯಗಳ ಕೊರತೆಯಾಗಿ ನಾವು ಇತರ ಗ್ರಹಗಳಿಗೆ ವಾಸ್ತವ್ಯಕ್ಕೆ ಹೋಗಬೇಕಾದ ಅನಿವಾರ್ಯತೆ ಒದಗಿ ಬಂದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಪಾ ಪ್ರಭು ಹೇಳಿದರು. ಅವರು ಶುಕ್ರವಾರ ಉಜಿರೆಯಲ್ಲಿ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳ್ತಂಗಡಿ ತಾಲೂಕು ಪಂಚಾಯಿತಿ ಹಾಗೂ ಉಜಿರೆ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ವಿಶ್ವಜನಸಂಖ್ಯಾ ದಿನಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾರತದಲ್ಲಿ ಪ್ರತಿದಿನ 73,781 ರಷ್ಟು ಜನಸಂಖ್ಯೆ ಹೆಚ್ಚಾಗುತ್ತಿದೆ. ಜನಸಂಖ್ಯಾ ಸ್ಪೋಟದ ನಿಯಂತ್ರಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯವಾಗುತ್ತದೆ. ಚಿಕ್ಕ ಸಂಸಾರವೇ ಚೊಕ್ಕ ಸಂಸಾರವಾಗಿದ್ದು, ಸಂತಾನ ನಿಯಂತ್ರಣ ಅನಿವಾರ್ಯವಾಗಿದೆ. ಮಹಿಳೆ ಆರೋಗ್ಯವಂತಳಾದರೆ, ಕುಟುಂಬ ಹಾಗೂ ಸಮಾಜವೂ ಆರೋಗ್ಯವಂತವಾಗಿರುತ್ತದೆ. ಮಕ್ಕಳ ಜನನದ ನಡುವಿನ ಅಂತರ ಕನಿಷ್ಠ ಮೂರು ವರ್ಷಗಳಾದರೂ ಇರಬೇಕು. ಇಂದು 144 ಕೋಟಿ ಜನಸಂಖ್ಯೆಯೊಂದಿಗೆ ಭಾರತ ಪ್ರಥಮ ಸ್ಥಾನದಲ್ಲಿರುವುದು ಪ್ರಗತಿಯ ದ್ಯೋತಕವಲ್ಲ. ಜನಸಂಖ್ಯಾ ಸ್ಪೋಟದ ನಿಯಂತ್ರಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಅಭಿಪ್ರಾಯಪಟ್ಟ ಅವರು ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು, ಆರೋಗ್ಯವಂತ ಯುವಜನತೆಯಿಂದ ದೇಶದ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಸಮಾರಂಭವನ್ನು ಉದ್ಘಾಟಿಸಿದ ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಷಾಕಿರಣ ಕಾರಂತ ಮಾತನಾಡಿ ಗ್ರಾಮೀಣ ಪ್ರದೇಶದ ಮಹಿಳೆಯರು ಇನ್ನೂ ಹೆಚ್ಚು ಸಬಲೀಕರಣಗೊಳ್ಳಬೇಕಾಗಿದೆ. ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತೆಯರು ನೀಡುವ ಮಾಹಿತಿ, ಮಾರ್ಗದರ್ಶನದ ಸದುಪಯೋಗ ಪಡೆದು ಹಾಗೂ ಸರ್ಕಾರದ ಸವಲತ್ತುಗಳ ಬಳಕೆಯೊಂದಿಗೆ ಮಹಿಳೆಯರು ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಬೇಕೆಂದು ಅವರು ಸಲಹೆ ನೀಡಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್. ಸತೀಶ್ಚಂದ್ರ ಶುಭಾಶಂಸನೆ ಮಾಡಿ, ದೇಶದ ಪ್ರಬಲ ಶಕ್ತಿಯಾದ ಯುವಜನತೆ ಎಲ್ಲಾ ಆಯಾಮಗಳಲ್ಲಿಯೂ ಸದೃಢರಾದಾಗ ದೇಶದ ಸರ್ವತೋಮುಖ ಪ್ರಗತಿಯಾಗುತ್ತದೆ. ನೌಕರರ ಕೊರತೆ ಇದ್ದರೂ ಸರ್ಕಾರಿ ಅಧಿಕಾರಿಗಳ ಕರ್ತವ್ಯಪ್ರಜ್ಞೆ, ಬದ್ಧತೆ ಮತ್ತು ಸಮರ್ಪಣಾ ಮನೋಭಾವದ ಸೇವೆಯನ್ನು ಅವರು ಶ್ಲಾಘಿಸಿ ಅಭಿನಂದಿಸಿದರು. ದ.ಕ. ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಪಾ ಪ್ರಭು, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸೌಜನ್ಯ ಮತ್ತು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಸ್ತ್ರಿರೋಗ ಮತ್ತು ಪ್ರಸೂತಿ ತಜ್ಞೆ ಡಾ. ರಶ್ಮಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ, ಮಾರ್ಗದರ್ಶನ ನೀಡಿದರು. ಡಾ. ಮಂಜು, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ಶಿಕ್ಷಕರ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸ್ವಾಮಿ ಕೆ.ಎ. ಉಪಸ್ಥಿತರಿದ್ದರು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರು: ತೇಜಸ್ ವಿ.ಎಸ್., ಸರ್ಕಾರಿ ಪದವಿಪೂರ್ವ ಕಾಲೇಜು, ವೇಣೂರು (ಪ್ರಥಮ). ಧನುಷ್, ಕೆ.ಎನ್. ಮುಂಡಾಜೆ ಪದವಿಪೂರ್ವ ಕಾಲೇಜು, ಮುಂಡಾಜೆ (ದ್ವಿತೀಯ). ಫಾತಿಮತ್ ಹಿಸಾನಾ, ಸಕಾಋಇ ಪದವಿಪೂರ್ವ ಕಾಲೇಜು ಕೊಯ್ಯೂರು. ಬೆಳ್ತಂಗಡಿ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರು. ಫಾತಿಮತ್ ಸುಮಯ್ಯ, ಸರ್ಕಾರಿ ಪದವಿಪೂರ್ವ ಕಾಲೇಜು ವೇಣೂರು (ಪ್ರಥಮ), ಕುಮಾರಿ ಸುರಕ್ಷಿತಾ, ವಾಣಿ ಪದವಿಪೂರ್ವ ಕಾಲೇಜು, ಬೆಳ್ತಂಗಡಿ (ದ್ವಿತೀಯ), ಕುಮಾರಿ ಜೆನಿತಾ ಪಿರೇರಾ, ಸರ್ಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ (ತೃತೀಯ) ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸ್ವಾಗತಿಸಿದರು. ವಿಭಾಗ ಯೋಜನಾಧಿಕಾರಿ ಅಜೇಯ್ ಕಾರ್ಯಕ್ರಮ ನಿರ್ವಹಿಸಿ ಕೊನೆಯಲ್ಲಿ ಧನ್ಯವಾದವಿತ್ತರು.

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವ

Article Image

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವ

ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರವು ಸೇವಾ ರೂಪದಲ್ಲಿ ಸಮಾಜಕ್ಕೆ ಒಳಿತನ್ನು ಮಾಡುವ ಸದುದ್ದೇಶದಿಂದ ಸಾಗುತಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಶಿಕ್ಷಣದ ವ್ಯಾಪರೀಕರಣವಾಗುತ್ತಿದೆ. ಈ ನಡುವೆಯೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವ್ಯಾಪಾರಿಕರಣ ಮಾಡದೇ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವದ ಸಲುವಾಗಿ ನಡೆದ "ಅಂಕುರ" ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಳ್ವಾಸ್ ಸದಾ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಒತ್ತು ನೀಡಿದೆ. ಸಾಂಸ್ಕೃತಿಕ, ಕ್ರೀಡಾ, ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ದತ್ತು ಸ್ವೀಕಾರದ ಅಡಿಯಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತಿದೆ. ಸಂಸ್ಥೆಯು ಈ ಹಿಂದೆ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಸಾಗಬೇಕಾದ ಅನಿವಾರ್ಯತೆ ಇತ್ತು. ಆಗ ಕೆಲವು ಸಮಸ್ಯೆಗಳು ಎದುರಾಗುತ್ತಿದ್ದವು. ಆದರೆ ಇದೀಗ ಸ್ವಾಯತ್ತ ಸ್ಥಾನಮಾನದೊಂದಿಗೆ ಗುಣಮಟ್ಟದ ಶೈಕ್ಷಣಿಕ ಚಟುವಟಿಕೆಗಳು, ಪರೀಕ್ಷೆ, ಫಲಿತಾಂಶವನ್ನು ನೀಡಲು ಸಹಕಾರಿಯಾಗಿದೆ. ಶೈಕ್ಷಣಿಕ ವರ್ಷವನ್ನು ಸರಿಯಾದ ಸಮಯದಲ್ಲಿ ಪೂರಣಗೊಳಿಸಲು ಸಾಧ್ಯ ಎಂದರು. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ನಾವು ಬೆಳೆಯುವ ಪರಿಸರ ನಮ್ಮ ಬೆಳವಣಿಗೆಯಲ್ಲಿ ಅತಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪೋಷಕರು ಇದರ ಬಗ್ಗೆ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳು ತಮ್ಮ ಪದವಿ ಜೀವನದಲ್ಲಿ ಪಾಲ್ಗೊಳ್ಳುವ ಕಾರ್ಯಕ್ರಮ ಹಾಗೂ ನಾವು ಸಂಪಾದಿಸುವ ಜ್ಞಾನ ಮತ್ತು ಸಾಧನೆಯು ಜೀವನದಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಎಂದರು. ಕುಲಸಚಿವ (ಪರೀಕ್ಷಾಂಗ) ಡಾ. ನಾರಾಯಣ ಶೆಟ್ಟಿ, ಕುಲಸಚಿವ (ಆಡಳಿತ) ಡಾ. ಟಿ. ಕೆ. ರವೀಂದ್ರನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ಕಾರ್ಯಕ್ರಮ ನಿರೂಪಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಉಜಿರೆಯಲ್ಲಿ ಸದಸ್ಯತ್ವ ಅಭಿಯಾನ

Article Image

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಉಜಿರೆಯಲ್ಲಿ ಸದಸ್ಯತ್ವ ಅಭಿಯಾನ

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಆಶ್ರಯದಲ್ಲಿ ಮುಂದಿನ ತಿಂಗಳು ಉಜಿರೆಯಲ್ಲಿ ಸದಸ್ಯತ್ವ ಅಭಿಯಾನ ಆಯೋಜಿಸಲಾಗುವುದು ಎಂದು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಹೇಳಿದರು. ಶನಿವಾರ ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಸಭಾಭವನದಲ್ಲಿ ನಡೆದ ಸಂಘದ ಮಾಸಿಕ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಸಂಘಕ್ಕೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಬಗ್ಗೆ ಅವರು ಮಾತನಾಡಿ ಧನ ಸಂಗ್ರಹದ ಬಗ್ಗೆ ಸಲಹೆ, ಸೂಚನೆ ನೀಡಿದರು. ಕೃಷ್ಣ ಭಟ್, ನಿವೃತ್ತ ಮುಖ್ಯೋಪಾಧ್ಯಾಯ ಗಣೇಶ ಐತಾಳ, ಪದ್ಮಕುಮಾರ್ ಮತ್ತು ವಸಂತ ರಾವ್ ದೇಣಿಗೆ ಸಂಗ್ರಹದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಇತ್ತೀಚೆಗೆ ನಿಧನರಾದ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ. ಎನ್.ಜಿ. ಪಟವರ್ಧನ್ ಬಗ್ಗೆ ಆರ್.ಯನ್. ಪೂವಣಿ ನುಡಿನಮನ ಸಲ್ಲಿಸಿದರು. ಬಳಿಕ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಮಾಡಲಾಯಿತು. ಸಂಘದ ಕಾರ್ಯದರ್ಶಿ ವಿಶ್ವಾಸ ರಾವ್ ವರದಿ ಸಾದರ ಪಡಿಸಿದರು. ಕುಸುಮಾವತಿ ಸ್ವಾಗತಿಸಿದರು. ವಿಶ್ವಾಸ ರಾವ್ ಧನ್ಯವಾದವಿತ್ತರು.

ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ವೈದ್ಯಕೀಯ ದಿನಾಚರಣೆ

Article Image

ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ವೈದ್ಯಕೀಯ ದಿನಾಚರಣೆ

'ವೈದ್ಯೋ ನಾರಾಯಣೋ ಹರಿ' ಎಂಬ ಉಕ್ತಿಯಂತೆ, ಜುಲೈ 1ರಂದು ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ವೈದ್ಯಕೀಯ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಡಾ. ದೀಪ್ತಿ ರಾವ್ ರವರು ಉಪಸ್ಥಿತರಿದ್ದು ಉತ್ತಮ ಆರೋಗ್ಯಕರವಾದ ಜೀವನ ನಡೆಸಲು ಯಾವ ಕ್ರಮವನ್ನು ಅನುಸರಿಸಬೇಕೆಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಅದೇ ರೀತಿ ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್‌ರವರು ನಾವು ಜೀವನದಲ್ಲಿ ಒಂದಲ್ಲ ಒಂದು ಗುರಿಯನ್ನು ಹೊಂದಿರಬೇಕು, ನಮ್ಮ ಗುರಿ ಏನಿದೆಯೋ ಅದನ್ನು ಮುಟ್ಟಲು ನಿರಂತರ ಓದು ಅಗತ್ಯ ಅನ್ನುವುದನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಶ್ಮಿತಾರವರು ವೈದ್ಯಕೀಯ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಂಯೋಜಕರಾದ ಶ್ರಿಪ್ರಸಾದ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಖಾರವರು ನೆರವೇರಿಸಿ, ದಿಯಾರವರು ವಂದಿಸಿದರು.

ಆಳ್ವಾಸ್ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Article Image

ಆಳ್ವಾಸ್ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

ವಿದ್ಯಾಗಿರಿ: ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್ ನ ಸೇವೆಯ ಧ್ಯೇಯದಿಂದ ವ್ಯಕ್ತಿ ನಿರ್ಮಾಣ ಸಾಧ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ದಕ್ಷಿಣ ಕನ್ನಡದ ಜಿಲ್ಲೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಹೇಳಿದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಶಿವರಾಮ ಕಾರಂತ ವೇದಿಕೆಯಲ್ಲಿ ಆಳ್ವಾಸ್ ರೋವರ್ಸ್ ಮತ್ತು ರೇಂಜರ್ಸ್ 2024-25ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಜೀವನಕ್ಕೆ ಬೇಕಾದ ಕೌಶಲಗಳನ್ನು ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಕಲಿಯಲು ಸಾಧ್ಯ. ಇಲ್ಲಿ ನಡೆಯುವ ಶಿಬಿರಗಳು ವಿದ್ಯಾರ್ಥಿಗಳ ಜೀವನಕ್ಕೆ ಅವಶ್ಯವಾದ ಪಾಠಗಳನ್ನು ಹೇಳಿಕೊಡುತ್ತವೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ನ ದಕ್ಷಿಣ ಕನ್ನಡ ಜಿಲ್ಲಾ ಆಯುಕ್ತ ಡಾ. ಮೋಹನ ಆಳ್ವ ಅವರ ಶ್ರಮದಿಂದ ಜಿಲ್ಲಾ ಘಟಕವು ಮುಂಚೂಣಿಯಲ್ಲಿದೆ. ಆಳ್ವಾಸ್ ಸಾಂಸ್ಕೃತಿಕ ಜಾಂಬೂರಿಯು ಇಡೀ ವಿಶ್ವವೇ ಮೂಡುಬಿದಿರೆಯತ್ತ ಮುಖ ಮಾಡುವಂತೆ ಮಾಡಿತ್ತು ಎಂದರು. ಪಠ್ಯದ ಕಲಿಕೆಯ ಜೊತೆಗೆ ಪಠ್ಯತರ ಚಟುವಟಿಕೆಗಳು ಜೀವನದಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ಇದರಿಂದ ವಿದ್ಯಾರ್ಥಿಗಳ ಮನಸ್ಥಿತಿ ಧನಾತ್ಮನಕವಾಗಿರಲು ಸಾಧ್ಯ ಎಂದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೊಹಮದ್ ಸದಾಕತ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಾರ್ಥನೆಯಿಂದಲೇ ಇದರ ಧ್ಯೇಯವನ್ನು ತಿಳಿಯಬಹುದಾಗಿದೆ. ಸೇವಾ ಮನೋಭಾವ ಎಲ್ಲಾ ವಿದ್ಯಾರ್ಥಿಗಳು ಬೆಳೆಸುವುದು ಅವಶ್ಯಕ ಎಂದರು. ಯುವಜನತೆ ದೇಶದ ಆಸ್ತಿ. ಈ ಯುವಶಕ್ತಿಯನ್ನು ಬೆಳೆಸುವ ಕಾರ್ಯವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮಾಡುತ್ತಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಕೌಶಲ, ನಾಗರಿಕ ಮೌಲ್ಯಗಳು ಹಾಗೂ ದೈಹಿಕ ಸಾಮರ್ಥ್ಯ ಬೆಳೆಸುವಲ್ಲಿ ಇದರ ಪಾತ್ರ ಅನನ್ಯ ಎಂದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಝಾನ್ಸಿ ಪಿ. ಎನ್ ಹಾಗೂ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ. ರೋವರ್ ಸ್ಕೌಟ್ ಲೀಡರ್ ಸುನಿಲ್, ರೇಂಜರ್ ಲೀಡರ್ ವೀಣಾ, ದಳನಾಯಕ ಕಾರ್ತಿಕ್, ದಳ ನಾಯಕಿ ನಕ್ಷತ್ರ ಇದ್ದರು. ವಿದ್ಯಾರ್ಥಿನಿ ನಕ್ಷತ್ರ ಸ್ವಾಗತಿಸಿ, ವಿದ್ಯಾರ್ಥಿನಿ ವರ್ಷ ವಂದಿಸಿ, ವಿದ್ಯಾರ್ಥಿನಿ ಸನ್ನಿಧಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಪ್ರೋ. ನರೇಂದ್ರ ಎಲ್. ನಾಯಕ್ ಅವರ ಷಷ್ಟಬ್ದಿ ‘ನಮ್ಮೊಲುಮೆ’ ಸನ್ಮಾನ ಸಮಾರಂಭ ಮತ್ತು ಕುಪ್ಮಾ ಸದಸ್ಯರ ಸಮಾಗಮ

Article Image

ಪ್ರೋ. ನರೇಂದ್ರ ಎಲ್. ನಾಯಕ್ ಅವರ ಷಷ್ಟಬ್ದಿ ‘ನಮ್ಮೊಲುಮೆ’ ಸನ್ಮಾನ ಸಮಾರಂಭ ಮತ್ತು ಕುಪ್ಮಾ ಸದಸ್ಯರ ಸಮಾಗಮ

ಮೂಡುಬಿದಿರೆ: ಮೂಲತಃ ಕೃಷಿ ಕುಟುಂಬದಿಂದ ಬಂದ ಪ್ರೋ. ನರೇಂದ್ರ ನಾಯಕ್‌ರು ಶೈಕ್ಷಣಿಕ ಕ್ಷೇತ್ರದಲ್ಲೂ ಕೃಷಿಯ ಮೂಲಸತ್ವಗಳನ್ನು ಅಳವಡಿಸಿಕೊಂಡು, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಶೈಕ್ಷಣಿಕ ಕೃಷಿಕ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ(ಕುಪ್ಮಾ) ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ನುಡಿದರು. ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಮೂಡುಬಿದಿರೆಯ ಆಳ್ವಾಸ್‌ನ ಕುವೆಂಪು ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ಕಲಾ ಪ್ರೇಮಿ, ಶಿಕ್ಷಣ ತಜ್ಞ ಪ್ರೋ. ನರೇಂದ್ರ ಎಲ್. ನಾಯಕ್ ಅವರ ಷಷ್ಟಬ್ದಿ ‘ನಮ್ಮೊಲುಮೆ’ ಸನ್ಮಾನ ಸಮಾರಂಭ ಮತ್ತು ಕುಪ್ಮಾ ಸದಸ್ಯರ ಸಮಾಗಮ ಕಾರ‍್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರೋ. ನರೇಂದ್ರ ಎಲ್. ನಾಯಕ್, ಒಬ್ಬ ವ್ಯಕ್ತಿ, ತಾನು ಮಾಡುವ ಕೆಲಸದಿಂದ ಗೌರವ, ಪ್ರೀತಿಯನ್ನು ಗಳಿಸಲು ಸಾಧ್ಯ. ನಾನು ಪ್ರತೀ ಕೆಲಸವನ್ನು ನಿಸ್ವಾರ್ಥದಿಂದ, ಜೀವನದ ಪ್ರತಿ ಕ್ಷಣವನ್ನು ಅನುಭವಿಸುತ್ತಾ ಕಳೆಯುತ್ತೇನೆ. ಕುಪ್ಮಾದ ಇತರೆ ಸದಸ್ಯರ ಸಾಧನೆ ಮುಂದೆ ನನ್ನ ಸಾಧನೆ ಚಿಕ್ಕದು. ನಿಮ್ಮ ಸಾಧಕರ ಸಾಲಿನಲ್ಲಿ ನನಗೊಂದು ಪುಟ್ಟ ಸ್ಥಾನಕೊಡಿ, ಅಷ್ಟೇ ಸಾಕು ಎಂದು ಸಂತಸವನ್ನು ವ್ಯಕ್ತಪಡಿಸಿದರು. ಶಿಕ್ಷಣ ಪ್ರೇಮಿಗಳಿಂದ ಶಿಕ್ಷಣ ಸಂಸ್ಥೆ ಕುಪ್ಮಾದ ಜೊತೆ ಕಾರ‍್ಯದರ್ಶಿ ಮೈಸೂರಿನ ವಿಶ್ವನಾಥ ಶೇಷಾಚಲ ಮಾತನಾಡಿ, ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ರಾಜಕೀಯದ ಹಿನ್ನಲೆಯುಳ್ಳವರು ಸ್ಥಾಪಿಸಿದರೆ, ಕರಾವಳಿಯಲ್ಲಿ ಕಲೆ, ಸಾಹಿತ್ಯ, ಶಿಕ್ಷಣದ ಅಭಿರುಚಿಯುಳ್ಳವರು ಸ್ಥಾಪಿಸುತ್ತಿರುವುದು ಶ್ಲಾಘನೀಯ ಎಂದರು. ತಮ್ಮ ವರ್ತನೆಯಲ್ಲಿ ಆದರ್ಶ ತುಂಬಿಕೊಂಡಿರುವವರು ನರೇಂದ್ರ ನಾಯಕರು, ನಮಗೆಲ್ಲರಿಗೆ ಕಾರ‍್ಯಸಫಲತೆಯಲ್ಲಿ ಜೀವಂತ ಉದಾಹರಣೆ ಎಂದರು. ವಿದ್ಯೆ ವಿನಯವುಳ್ಳವನಿಗೆ ಸ್ಥಾನಮಾನ ಬರುತ್ತದೆ ಎಂಬುದಕ್ಕೆ ನರೇಂದ್ರ ನಾಯಕರು ಉತ್ತಮ ಉದಾಹರಣೆ ಎಂದು ದಾವಣಗೆರೆ ಕುಪ್ಮಾ ಘಟಕದ ಸಂಯೋಜಕ ಎಸ್. ಜೆ. ಶ್ರೀಧರ್ ನುಡಿದರು. ಜೀವನ ಮರಳಿ ಅರಳಲಿ ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಪ್ಮಾದ ಗೌರವಾಧ್ಯಕ್ಷ ಡಾ. ಎಂ. ಬಿ. ಪುರಾಣಿಕ್, ಷಷ್ಟಬ್ದಿ ಆಚರಿಸುತ್ತಿರುವ ನರೇಂದ್ರ ನಾಯಕರ ಜೀವನ ಮರಳಿ ಅರಳಲಿ ಎಂದು ಹಾರೈಸಿದರು. ಕಾರ‍್ಯಕ್ರಮದಲ್ಲಿ ಪ್ರೋ. ನರೇಂದ್ರ ಎಲ್. ನಾಯಕ್ ಹಾಗೂ ಡಾ. ಉಷಾ ಪ್ರಭಾ ನಾಯಕ್ ದಂಪತಿಗಳನ್ನು ಕುಪ್ಮಾವತಿಯಿಂದ ಸನ್ಮಾನಿಸಲಾಯಿತು. ಕಾರ‍್ಯಕ್ರಮ ಆರಂಭದಲ್ಲಿ ಪ್ರೋ. ನರೇಂದ್ರ ಎಲ್. ನಾಯಕ್‌ರ ಜೀವನ ಆಧಾರಿತ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು. ಶಕ್ತಿ ಶಿಕ್ಷಣ ಸಮೂಹದ ಡಾ. ಕೆ.ಸಿ. ನಾಕ್, ಎಕ್ಸ್ ಪರ್ಟ್ ಸಮೂಹ ಸಂಸ್ಥೆಗಳ ಉಪಾಧ್ಯಕ್ಷೆ ಡಾ. ಉಷಾಪ್ರಭಾ ನಾಯಕ್ ಇದ್ದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ನಿರೂಪಿಸಿ, ಕುಪ್ಮಾ ಉಪಾಧ್ಯಕ್ಷ ಯುವರಾಜ್ ಜೈನ್ ಸ್ವಾಗತಿಸಿ, ಕುಪ್ಮಾ ಉಪಾಧ್ಯಕ್ಷ ಡಾ. ಸುಧಾಕರ ಶೆಟ್ಟಿ ವಂದಿಸಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆ, ಉಚಿತ ಸಮವಸ್ತ್ರ ಹಾಗೂ ಕೊಡೆ ವಿತರಣಾ ಕಾರ್ಯಕ್ರಮ

Article Image

ಅಂತರಾಷ್ಟ್ರೀಯ ಯೋಗ ದಿನಾಚರಣೆ, ಉಚಿತ ಸಮವಸ್ತ್ರ ಹಾಗೂ ಕೊಡೆ ವಿತರಣಾ ಕಾರ್ಯಕ್ರಮ

ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಟ್ಟಡದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಉಚಿತ ಸಮವಸ್ತ್ರ ಹಾಗೂ ಕೊಡೆ ವಿತರಣಾ ಕಾರ್ಯಕ್ರಮ ನೆರವೇರಿಸಲಾಯಿತು. ಮೊದಲಿಗೆ ಮಂಜುಳಾ ಜೈನ್ ಇವರ ಮಾರ್ಗದರ್ಶನದಲ್ಲಿ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕತೆಯನ್ನು ನೀಡಲಾಯಿತು. ಯೋಗ ದಿನಾಚರಣೆಯ ವಿಶೇಷತೆ ಮತ್ತು ಆಚರಣೆಯ ಮಹತ್ವದ ಬಗ್ಗೆ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿದರು. ಈ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳು ಯೋಗ ದಿನಾಚರಣೆಯ ಶುಭಾಶಯವನ್ನು ಕೋರಿದರು. ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ದಿಗಂಬರ ಜೈನ ವಿದ್ಯಾ ವರ್ಧಕ ಸಂಘ(ರಿ.) ಇದರ ಸದಸ್ಯರಾದ ಪ್ರಥ್ವಿರಾಜ್ ಶೆಟ್ಟಿಯವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಈ ರೀತಿಯ ಕಾರ್ಯಕ್ರಮಗಳು ಇನ್ನೂ ಹೆಚ್ಚು ನಡೆಯಲಿ ಎಂದು ಹಾರೈಸಿದರು. ಈ ಸುಸಂದರ್ಭದಲ್ಲಿ ಕೊಡುಗೈ ದಾನಿಯಾದ ಪ್ರಥ್ವಿರಾಜ್ ಶೆಟ್ಟಿ ಇವರು ಸುಮಾರು 30 ಅರ್ಹ ಬಡ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರವನ್ನು ವಿತರಿಸಿದರು. ರೋಟರಿ ಕ್ಲಬ್ ಟೆಂಪಲ್ ಟೌನ್ ಮೂಡುಬಿದಿರೆ ಇದರ ನೂತನ ಅಧ್ಯಕ್ಷರಾದ ಪೂರ್ಣಚಂದ್ರ ಜೈನ್ ಇವರ ವತಿಯಿಂದ 1 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಕೊಡೆಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಟೆಂಪಲ್ ಟೌನ್ ಮೂಡಬಿದಿರೆ ಇದರ ಅಧ್ಯಕ್ಷರಾಗಿರುವ ಪೂರ್ಣಚಂದ್ರ ಜೈನ್ ಮತ್ತು ಇದರ ಕಾರ್ಯದರ್ಶಿಗಳಾದ ಎಂ.ಕೆ. ಹರೀಶ್, ಶಾಲಾಭಿವೃದ್ಧಿಯ ನೂತನ ಅಧ್ಯಕ್ಷರಾದ ಪವನ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯರಾದ ಶಶಿಕಾಂತ್ ವೈ. ಯೋಗ ಶಿಕ್ಷಕಿ ಮಂಜುಳಾ ಜೈನ್ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ರೋಲಿಟಾರವರು ಸ್ವಾಗತಿಸಿದರು, ದಿವ್ಯಾಶ್ರೀ ಧನ್ಯವಾದಗೈದರು, ಪ್ರಣೀತಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಎಕ್ಸಲೆಂಟ್: ಅಂತರಾಷ್ಟ್ರೀಯ ಯೋಗ ದಿನಾಚರಣೆ

Article Image

ಎಕ್ಸಲೆಂಟ್: ಅಂತರಾಷ್ಟ್ರೀಯ ಯೋಗ ದಿನಾಚರಣೆ

ಯೋಗ ಎಂದರೆ ದೇಹ ಮನಸ್ಸುಗಳ ಚೈತನ್ಯದ ಶಕ್ತಿ. ಇದು ಮನುಷ್ಯನನ್ನು ಉಲ್ಲಾಸದಾಯಕನನ್ನಾಗಿ ಮಾಡುತ್ತದೆ. ಪ್ರತಿನಿತ್ಯ ಯೋಗದ ಅಭ್ಯಾಸ ಇಟ್ಟುಕೊಳ್ಳಬೇಕು. ಅದರಿಂದ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಬರುವುದಿಲ್ಲ. ಆರೋಗ್ಯಕ್ಕೆ ಯೋಗವೇ ಭಾಗ್ಯ ಇಂದು ಪ್ರಪಂಚದಾದ್ಯಂತ ಜನರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗದ ಮೊರೆ ಹೋಗುತ್ತಿದ್ದಾರೆ. 'ನಮಗಾಗಿ ಹಾಗೂ ಸಮಾಜಕ್ಕಾಗಿ ಯೋಗ' ಎನ್ನುವುದು ಈ ವರ್ಷದ ಥೀಮ್ ಆಗಿದೆ. ಯೋಗವು ವೈಯಕ್ತಿಕ ಆರೋಗ್ಯ ಮಾತ್ರವಲ್ಲದೇ ಸಾಮಾಜಿಕ ಯೋಗಕ್ಷೇಮಕ್ಕೂ ಕೊಡುಗೆ ನೀಡುತ್ತದೆ. ಇದು ವೈಯಕ್ತಿಕ ಮತ್ತು ಸಾಮಾಜಿಕ ಆರೋಗ್ಯದ ಸಂಬಂಧವನ್ನು ಒತ್ತಿ ಹೇಳುತ್ತದೆ. ಆದ್ದರಿಂದ ಯೋಗ ಜೀವನಕ್ಕೆ ಬಹು ಮುಖ್ಯವಾಗಿ ಬೇಕಾಗಿದೆ ಎಂದು ಮಸ್ಕತ್ ನ ಓಮನ್‌ನಲ್ಲಿ ಯೋಗ ತರಬೇತುದಾರರಾಗಿರುವ ಜಗದೀಶ್ ಬಂಗೇರ ಅವರು ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಎನ್‌ಸಿ, ಎನ್‌ಎಸ್‌ಎಸ್, ರೇಂಜರ್ ರೋವರ್, ರೆಡ್ ಕ್ರಾಸ್ ಘಟಕಗಳ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಯೋಗ ನಮ್ಮ ಭಾರತದ ಸಂಸ್ಕ್ರತಿಯಾಗಿದೆ, ಸಂಸ್ಕಾರವಾಗಿದೆ. ಋಷಿ ಮುನಿಗಳಿಂದ ಬಳುವಳಿಯಾಗಿ ಬಂದಿರುವ ಯೋಗದ ಅಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು ದಿನಂಪ್ರತಿ ನಮ್ಮ ಜೀವನದಲ್ಲಿ ಅದು ಒಂದು ಭಾಗವಾಗಬೇಕು. ಯೋಗ ಧ್ಯಾನದಿಂದ ಬದುಕು ಸುಂದರವಾಗಿ ರೂಪಿತಗೊಳ್ಳುತ್ತದೆ. ಅಂತಹ ಯೋಗದಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ಎಂದರು. ಸಂಸ್ಕ್ರತಿ ಯೋಗ ತಂಡ ಮಸ್ಕತ್ ಓಮನ್ ಇಲ್ಲಿನ ಶ್ವೇತ ಪ್ರಭು, ವೀಣಾ ರೋಹಿತ್ ಕುಮಾರ್, ರವಿ ಪ್ರಕಾಶ್ ಭಟ್ ತರಬೇತುದಾರರಾಗಿ ಆಗಮಿಸಿ ವಿದ್ಯಾರ್ಥಿಗಳಿಂದ ಯೋಗದ ಸರ್ವ ಆಸನಗಳನ್ನು ಪ್ರದರ್ಶನ ಮಾಡಿಸಿದರು. ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್, ಸೆಂಟ್ರಲ್ ಶಾಲೆಯ ಪ್ರಾಂಶುಪಾಲರಾದ ಸುರೇಶ್, ಎನ್‌ಸಿಸಿ ಅಧಿಕಾರಿ ಮಹೇಂದ್ರ ಕುಮಾರ್ ಜೈನ್, ಎನ್‌ಎಸ್‌ಎಸ್ ಅಧಿಕಾರಿ ತೇಜಸ್ವಿ ಭಟ್, ರೇಂಜರ‍್ಸ್ ರೋವರ‍್ಸ್ ಅಧಿಕಾರಿಗಳಾದ ಸಂಧ್ಯಾ ಹಾಗೂ ಪ್ರದೀಪ್ ಹಾಗೂ ರೆಡ್ ಕ್ರಾಸ್ ಅಧಿಕಾರಿ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಎಕ್ಸಲೆಂಟ್ ಸೆಂಟ್ರಲ್ ಶಾಲೆಯ ಶೈಕ್ಷಣಿಕ ಸಂಯೋಜಕ ಪ್ರಸಾದ ಅತಿಥಿಗಳನ್ನು ಪರಿಚಯಿಸಿದರು, ವಿದ್ಯಾರ್ಥಿನಿ ಸುಧಾಶ್ರೀ ಕಾರ್ಯಕ್ರಮ ನಿರೂಪಿಸಿದರು. ದೈವಿಕ್ ಸ್ವಾಗತಿಸಿದರು ಯಶಸ್ವಿನಿ ವಂದಿಸಿದರು. ವಿದ್ಯಾರ್ಥಿಗಳಿಂದ ಯೋಗದ ಕುರಿತಾದ ವೈವಿಧ್ಯಮಯ ನೃತ್ಯ ನಡೆಯಿತು.

ಧರ್ಮಸ್ಥಳದಲ್ಲಿ ಹತ್ತನೆ ವಿಶ್ವಯೋಗ ದಿನ ಆಚರಣೆ

Article Image

ಧರ್ಮಸ್ಥಳದಲ್ಲಿ ಹತ್ತನೆ ವಿಶ್ವಯೋಗ ದಿನ ಆಚರಣೆ

ಉಜಿರೆ: ದೈಹಿಕ ಹಾಗೂ ಮಾನಸಿಕ ಸಮತೋಲನದೊಂದಿಗೆ ಆರೋಗ್ಯಭಾಗ್ಯ ಕಾಪಾಡಲು ಎಲ್ಲರೂ ನಿತ್ಯವೂ ಯೋಗಾಭ್ಯಾಸ ಮಾಡಬೇಕು. ಯೋಗಾಭ್ಯಾಸಕ್ಕೆ ವಯಸ್ಸಿನ ಮಿತಿ ಇರುವುದಿಲ್ಲ ಎಂದು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಹತ್ತನೆ ವಿಶ್ವ ಯೋಗ ದಿನ ಆಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತಕ್ಕೆ ವಿದೇಶಗಳಿಂದ ಔಷಧಿ ಆಮದು ಮಾಡುತ್ತೇವೆ. ವಿದೇಶಗಳಿಗೆ ಭಾರತದಿಂದ ಔಷಧಿ ರಹಿತ ಯೋಗವನ್ನು ರಫ್ತು ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಂದು ಜಾಗತಿಕಮಟ್ಟದಲ್ಲಿ ಯೋಗದ ಮಹತ್ವ ಪ್ರಚಾರವಾಗಿದ್ದು ಎಲ್ಲರೂ ಆಸಕ್ತಿ ಮತ್ತು ಕುತೂಹಲದಿಂದ ಯೋಗಾಭ್ಯಾಸ ಮಾಡುತ್ತಿದ್ದಾರೆ. ಯೋಗ ಮತ್ತು ಆಧ್ಯಾತ್ಮದ ತಾತ್ವಿಕ ನೆಲೆಯಲ್ಲಿ ಭಾರತ ವಿಶ್ವಗುರುವಿನ ಮಾನ್ಯತೆ ಹೊಂದಿದೆ. ಧರ್ಮಸ್ಥಳದ ಶಾಂತಿವನಟ್ರಸ್ಟ್ ನೇತೃತ್ವದಲ್ಲಿ ಧರ್ಮಸ್ಥಳ, ಮಣಿಪಾಲದ ಬಳಿ ಪರೀಕ್ಷಾ ಮತ್ತು ಬೆಂಗಳೂರಿನ ನೆಲಮಂಗಲದಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಪ್ರಾರಂಭಿಸಿ ಆರೋಗ್ಯಭಾಗ್ಯ ರಕ್ಷಣೆಗೆ ಪ್ರೋತ್ಸಾಹ, ಪ್ರೇರಣೆ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ ಎಂದರು. ಮೈಸೂರಿನ ಕುಮಾರಿ ಖುಷಿ ಯೋಗ ಪ್ರಚಾರದಲ್ಲಿ ಮಾಡಿದ ಸಾಧನೆಗೆ ಹೆಗ್ಗಡೆಯವರು ಅಭಿನಂದಿಸಿದರು. ಬೆಂಗಳೂರಿನ ಪರಿಮಳ ಆರೋಗ್ಯ ಸೇವಾಕೇಂದ್ರದ ಡಾ. ಜೋಸ್ ಎಬ್‌ನಜೀರ್ ಮತ್ತು ತುಮಕೂರಿನ ಸಿದ್ದಾರ್ಥ ಉನ್ನತ ಶಿಕ್ಷಣ ಅಕಾಡೆಮಿ ಉಪಕುಲಪತಿ ಡಾ. ಕೆ. ಬಿ. ಲಿಂಗೇಗೌಡ ಶುಭಾಶಂಸನೆ ಮಾಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಆಯುರ್ವೇದ, ಪ್ರಕೃತಿಚಿಕಿತ್ಸೆ ಮತ್ತು ಯೋಗವಿಜ್ಞಾನಕ್ಕೆ ನೀಡುತ್ತಿರುವ ಪ್ರೋತ್ಸಾಹವನ್ನು ಶ್ಲಾಘಿಸಿದರು. ಯೋಗಪ್ರಚಾರದಲ್ಲಿ ವಿಶೇಷ ಸೇವೆ-ಸಾಧನೆ ಮಾಡಿದ ಮೈಸೂರಿನ ಕುಮಾರಿ ಖುಷಿ, ಎಚ್. ಅವರಿಗೆ “ಯೋಗರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕುಮಾರಿ ಖುಷಿ ಎಚ್. ಯೋಗ ಪ್ರಾತ್ಯಕ್ಷಿಕೆ ನೀಡಿದರು. ಯೋಗ ಸಾಧಕರಾದ ಅಶ್ವತ್ ಹೆಗಡೆ ಮತ್ತು ಡಾ. ಅಚ್ಯುತ ಈಶ್ವರನ್ ಅವರನ್ನು ಗೌರವಿಸಲಾಯಿತು. ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಶುಭ ಹಾರೈಸಿದರು. ಕೆನರಾ ಬ್ಯಾಂಕ್‌ನ ಮಹಾಪ್ರಬಂಧಕ ಸುಧಾಕರ ಕೊಟ್ಟಾರಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ, ಡಾ. ಶಶಿಕಾಂತ್ ಜೈನ್ ಮತ್ತು ಡಾ. ಸುಜಾತ ಉಪಸ್ಥಿತರಿದ್ದರು. ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಪ್ರಕೃತಿಚಿಕಿತ್ಸಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಧನ್ಯವಾದವಿತ್ತರು. ಕುಮಾರಿ ಅನನ್ಯಾ ಜೈನ್ ಮತ್ತು ಡಾ. ಕೃತಿಕಾ ರಾಮಸ್ವಾಮಿ ಕಾರ್ಯಕ್ರಮ ನಿರ್ವಹಿಸಿದರು.

First Previous

Showing 4 of 6 pages

Next Last