ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
Published Date: 01-Mar-2025 Link-Copied
ಎಸ್.ಡಿ.ಎಂ. ವಿಶ್ವವಿದ್ಯಾಲಯದಿಂದ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಆಚರಣೆಯ ಅಂಗವಾಗಿ ಎಸ್.ಡಿ.ಎಂ. ವಿಶ್ವವಿದ್ಯಾಲಯ ಮತ್ತು ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನ ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಪೋಸ್ಟರ್ ಮತ್ತು ಮಾಡಲ್ ಪ್ರಸ್ತುತಿ ಸ್ಪರ್ಧೆಗಳನ್ನು ನಡೆಸಲಾಯಿತು. ಈ ವರ್ಷ ಸುಮಾರು 62 ತಂಡದವರಿಂದ ವೈಜ್ಞಾನಿಕ ಪೋಸ್ಟರ್‌ಗಳನ್ನು ಮತ್ತು 32 ಮಾಡಲ್‌ಗಳನ್ನು ತಯಾರಿಸಿ ಪ್ದರ್ಶಿಸಲಾಯಿತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಮಾಡಲ್ ಪ್ರದರ್ಶನವನ್ನು ಉದ್ಘಾಟಿಸಿದರು. ಹೈದರಾಬಾದ್‌ನ ಡಾ. ರೆಡ್ಡೀಸ್ ಇನ್ಸ್ಟಿಟ್ಯೂಟ್ ಆಫ್ ಲೈಫ್ ಸೈನ್ಸಸ್‌ನ ನಿರ್ದೇಶಕರಾದ ಡಾ. ಶ್ರೀನಿವಾಸ ಓರಗಂಟಿ ಅವರು ಮುಖ್ಯ ಅತಿಥಿಗಳಾಗಿ ಪೋಸ್ಟ ಪ್ರದರ್ಶನವನ್ನು ಉದ್ಘಾಟಿಸಿದರು ಮತ್ತು ಅವರು ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತೀಯ ಫಾರ್ಮಾ ಕಂಪನಿಗಳು ಜಾಗತಿಕ ಮಾರುಕಟ್ಟೆಯಲ್ಲಿ ಮುಂಚ್ಛೂಣಿಯಲ್ಲಿವೆ. ಯುವ ವಿದ್ಯಾರ್ಥಿಗಳು ಸಂಶೋಧನೆ ಮತ್ತು ನಾವೀನ್ಯತೆಗಳಲ್ಲಿ ಸಕ್ರೀಯ ಆಸಕ್ತಿಯನ್ನು ಹೊಂದಬೇಕು. ಭಾರತದಲ್ಲಿ ಆರೋಗ್ಯ ವೃತ್ತಿಪರರು ಮತ್ತು ಸಂಶೋಧಕರಿಗೆ ಸಾಕಷ್ಟು ಅವಕಾಶಗಳಿವೆ ಎಂದರು . ಮುಖ್ಯ ಅತಿಥಿಗಳಾದ ಡಾ. ಶ್ರೀನಿವಾಸ ಓರಗಂಟಿ, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ ಮತ್ತು ಡಾ. ನೈದಿಲ ಶೆಟ್ಟಿ ಅವರು ವಿಜೇತರಿಗೆ ನಗದು ಪ್ರಶಸ್ತಿ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದ ಮತ್ತು ಸಂಸ್ಥೆಗಳ ಸಂಯೋಜಕರಗಳಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. ಪೊಸ್ಟರ್ ವಿಭಾಗದಲ್ಲಿ ಶ್ರುಪ್ತಾ ಪಡಿವಾಳ ಮತ್ತು ತಂಡ ಪ್ರಥಮ ಬಹುಮಾನವನ್ನು ಪಡೆದಿದೆ. ಮಾಡಲ್ ವಿಭಾಗದಲ್ಲಿ ಡಾ. ಮಂಜುನಾಥ ಮೇಟಿ ಮತ್ತು ತಂಡ ಪ್ರಥಮ ಬಹುಮಾನ ಗಳಿಸಿದೆ. ಬೋಧಕೇತರ ವಿಭಾಗದಲ್ಲಿ ಪ್ರವೀಣ ಹೋಳೆಮ್ಮನವರ ಮತ್ತು ತಂಡಕ್ಕೆ ಪ್ರಥಮ ಬಹುಮಾನ ಲಭಿಸಿದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಸಹ ಉಪಕುಲಪತಿಗಳಾದ ವಿ. ಜೀವಂಧರ ಕುಮಾರ, ಕುಲಸಚಿರಾದ ಡಾ. ಚಿದೇಂದ್ರ ಶೆಟ್ಟರ, ಉಪ ಕುಲಸಚಿವರಾದ ಡಾ. ಅಜಂತಾ ಜಿ. ಎಸ್., ಹಣಕಾಸು ಅಧಿಕಾರಿಗಳಾದ ವಿ. ಜಿ. ಪ್ರಭು, ಸಂಶೋಧನಾ ನಿರ್ದೇಶಕರಾದ ಡಾ. ಕೆ. ಸತ್ಯಮೂರ್ತಿ, ಅಂಗ ಸಂಸ್ಥೆಗಳ ಮುಖ್ಯಸ್ಥರು, ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ ಎಲ್. ಚಕ್ರಸಾಲಿ ಮತ್ತಿತರರು ಉಪಸ್ಥಿತರಿದ್ದರು. ಡಾ. ರಮೇಶ ಕುಮಾರ, ಪ್ರಾಧ್ಯಾಪಕರು, ಸ್ತ್ರಿ ರೋಗ ಮತ್ತು ಪ್ರಸೂತಿ ವಿಭಾಗ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ಟಿ. ಜಿ. ವಾಸುದೇವನ್ ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ದೀಕ್ಷಾ ದೇವರ ಪ್ರಾರ್ಥನೆ ಮಾಡಿದರು. ಡಾ. ಶರ್ಮಿಳಾ ದುಧಾನಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ವಾಚಿಸಿದರು. ಡಾ. ಸಲೀಮಾ ಬಿಜಾಪುರಿ ವಂದನಾರ್ಪಣೆ ಮಾಡಿದರು. ಡಾ. ರೇಣುಕಾರಾಧ್ಯ ಕೆ. ಮಠ ಕಾರ್ಯಕ್ರಮವನ್ನು ನಿರೂಪಿಸಿದರು.