ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೆಸ್ಟ್ ಗೆ ಚಾಲನೆ
Published Date: 03-Mar-2025 Link-Copied
ಬೆಳ್ತಂಗಡಿ: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ಗ್ರಾಹಕರಾಗಿ ಬರುತ್ತಿದ್ದ ನಾನು ಇಂದು ಅತಿಥಿಯಾಗಿರುವುದು ಸಂತಸ ತಂದಿದೆ. ಆಭರಣ ಖರೀದಿಗೆಂದು ಚಿಂತಿಸಿದಾಗ ಮನದಲ್ಲಿ ಬರುವುದು ಮುಳಿಯ ಸಂಸ್ಥೆ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮಾನಸದಲ್ಲಿ ನಲ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ 3ರಂದು ನಡೆದ ಡೈಮಾಂಡ್ ಫೆಸ್ಟ್ ಚಾಲನೆ ಸಮಾರಂಭದಲ್ಲಿ ಮಾತನಾಡಿದರು. ಜೇಸಿಐ ಭಾರತದ ವಲಯ 15 ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, 80 ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು ಬಂದಿರುವ ಸಂಸ್ಥೆ ಮುಳಿಯ, ಚಿನ್ನಾಭಾರಣಗಳಲ್ಲಿ ಉತ್ತಮ ಗುಣ ಮಟ್ಟವನ್ನು ನೀಡುತ್ತಾ ಬಂದಿರುವ ಮುಳಿಯ ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ವ್ಯವಹಾರಕ್ಕೆ ಸಾಮಾಜಿಕವಾಗಿ ತೊಡಗಿಸಿಕೊಂಡು ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಸಂಸ್ಥೆ ಮುಳಿಯ ಎಂದು ಅಭಿಪ್ರಾಯಪಟ್ಟರು. ಮರ‍್ಕೇಟಿಂಗ್ ಕನ್ಸಲ್‌ಟೆಂಟ್ ವೇಣುಶರ್ಮ ಮಾತನಾಡಿ, ಚಿನ್ನಾಭರಣ ಸುರಕ್ಷಿತ ಹೂಡಿಕೆಯ ಉದ್ಯಮವಾಗಿದೆ. ವಿಶಿಷ್ಟ ಹಾಗೂ ವಿನೂತನ ವಜ್ರಾಭರಣಗಳ ಸಂಗ್ರಹಣೆ ಈ ಬಾರಿಯ ಡೈಮಾಂಡ್ ಫೆಸ್ಟ್ ನಲ್ಲಿದೆ. ಜೀವನದ ಮೊದಲ ವಜ್ರಾಭರಣ ಖರೀದಿಯನ್ನು ಮುಳಿಯೊಂದಿಗೆ ಪ್ರಾರಂಭಿಸಿ ಎಂದು ಹೇಳಿದರು. ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಹಕರು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್ ಸ್ವಾಗತಿಸಿ, ಸಿಬ್ಬಂದಿ ಅಶ್ವಥ್ ವಂದಿಸಿ, ಕನ್ನಿಕಾ ನಿರೂಪಿಸಿದರು.