ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್ ನ ಗೋಲ್ಡ್ ಮೆಡಲ್
Published Date: 12-May-2025 Link-Copied
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ನಾನ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಡಾ. ಗನ್ಯಾಶ್ರೀ ಮೊದಲ ಶ್ರೇಯಾಂಕಕ್ಕಾಗಿ ಹಾಗೂ ಆಯುಷ್ ವಿಭಾಗದಲ್ಲಿಯೂ ಮೊದಲನೇ ಸ್ಥಾನ ಪಡೆದು 4 ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇಂದು ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 27ನೇ ಘಟಿಕೋತ್ಸವದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಥಾವರ್ ಚಂದ್ ಗೆಹ್ಲೋಟ್ ಅವರು ಚಿನ್ನದ ಪದಕವನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷರು, ಅಜೀಂ ಪ್ರೇಮ್‌ಜಿ ಫೌಂಡೇಶನ್, ಸಂಸ್ಥಾಪಕ ಮತ್ತು ಅಧ್ಯಕ್ಷರು, ವಿಪ್ರೋ ಲಿಮಿಟೆಡ್ ಮತ್ತು ವಿಪ್ರೋ ಎಂಟರ್‌ಪ್ರೈಸಸ್ ಲಿಮಿಟೆಡ್ ಹಾಗೂ ಡಾ. ಶರಣಪ್ರಕಾಶ್ ಆರ್ ಪಾಟೀಲ್, ಕರ್ನಾಟಕದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರು, ವಿಶ್ವವಿದ್ಯಾಲಯದ ಸಹ-ಕುಲಪತಿಗಳು ಹಾಗೂ ಕುಲಸಚಿವರು ಉಪಸ್ಥಿತರಿದ್ದರು.