ಧಾರವಾಡ: ವಿಶ್ವ ಪರಿಸರ ದಿನಾಚರಣೆ


Logo

Published Date: 08-Jun-2025 Link-Copied

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು ಫಿಸಿಯೋಥೆರಪಿ ಮತ್ತು ನರ್ಸಿಂಗ್ ಕಾಲೇಜುಗಳ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದಲ್ಲಿ ಎಸ್.ಡಿ.ಎಂ. ಫಿಸಿಯೋಥೆರಪಿ - ನರ್ಸಿಂಗ್ ಕಾಲೇಜಿನಲ್ಲಿ "ಪ್ಲಾಸ್ಟಿಕ್ ಮಾಲಿನ್ಯಕ್ಕೆ ಅಂತ್ಯ ಹಾಡುವುದು” ಎಂಬ ಧ್ಯೆಯೆಯೊಂದಿಗೆ “ವಿಶ್ವ ಪರಿಸರ ದಿನ”ವನ್ನು ಆಚರಿಸಲಾಯಿತು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ವೈದ್ಯಕೀಯ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಪರಿಸರ ತಜ್ಞರಾದ ಡಾ. ಮೂಕ್ಕಯ್ಯಸ್ವಾಮಿ ವಿ. ಕಳಸೂರಮಠ ಅವರು ಮುಖ್ಯ ಅತಿಥಿಯಾಗಿದ್ದರು. ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳು ಸಸಿಗಳನ್ನು ನೆಟ್ಟು ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ತಮ್ಮ ಸ್ವಂತ ಪ್ರಯೋಜನಕ್ಕಾಗಿ ಪರಿಸರವನ್ನು ರಕ್ಷಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು. ಪ್ರಕೃತಿ ದೇವರ ಕೊಡುಗೆ ಮತ್ತು ಪ್ರಕೃತಿಯನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ. ಪ್ಲಾಸ್ಟಿಕ್ ಬಳಕೆಯನ್ನು ಕ್ರಮೇಣ ಕಡಿಮೆ ಮಾಡಿ ಮತ್ತು ಬಟ್ಟೆ, ಕಾಗದದ ವಸ್ತುಗಳನ್ನು ಹೆಚ್ಚಾಗಿ ಬಳಸಬೇಕು. ನಾವು ಮೊದಲು ನಮ್ಮ ಮನೆಯ ಪರಿಸರವನ್ನು ಹಸಿರು ಮತ್ತು ಸ್ವಚ್ಛವಾಗಿಡಬೇಕು ಪ್ರಕೃತಿ ನಮ್ಮ ಜೀವನದ ಅಂತರ್ಗತ ಭಾಗವಾಗಿದೆ ಮತ್ತು ಪ್ರಕೃತಿಯು ಅನೇಕ ರೋಗಗಳನ್ನು ಗುಣಪಡಿಸುತ್ತದೆ ಎಂದು ಹೇಳಿದರು. ಡಾ. ನಿರಂಜನ್ ಕುಮಾರ್ ಅವರು ಡಾ. ಕಳಸೂರಮಠ ಅವರನ್ನು ಸನ್ಮಾನಿಸಿದರು. ಡಾ. ಬಲರಾಮ್ ನಾಯಕ್, ಡಾ. (ಕರ್ನಲ್) ಯು.ಎಸ್. ದಿನೇಶ್, ಡಾ. ಸಂಜಯ್ ಪರ್ಮಾರ್, ಡಾ. ಪ್ರಸನ್ನ ದೇಶಪಾಂಡೆ, ಡಾ. ಕೆ. ಸತ್ಯಮೂರ್ತಿ, ಭೌತಚಿಕಿತ್ಸೆಯ ಮತ್ತು ನರ್ಸಿಂಗ್ ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನರ್ಸಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕರಾದ ಮಲ್ಲಿಕಾರ್ಜುನ್ ಪಿ. ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಫಿಸಿಯೋಥೆರಪಿ ಕಾಲೇಜಿನ ಸಂಯೋಜರಾದ ಡಾ. ಸಂಗೀತಾ ಅಪ್ಪಣ್ಣವರ್ ವಂದನಾರ್ಪಣೆ ಸಲ್ಲಿಸಿದರು. ಎಸ್.ಡಿ.ಎಂ. ಜೈವಿಕ ವಿಜ್ಞಾನಗಳ ಸಂಶೋಧನಾ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಸತ್ತೂರಿನ ಆಶ್ರಯ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ನಡೆಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕರು ಶಾಲಾ ಆವರಣವನ್ನು ಸ್ವಚ್ಛಗೊಳಿಸಿ, ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ, ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಸ್ವಚ್ಛತೆಯ ಬಗ್ಗೆ ಜಾಗೃತಿ ನೀಡಿದರು. ಡಾ. ಅಜಯ ಕುಮಾರ್ ಓಲಿ, ಪ್ರೋ. ಕ್ಲೇಮೆಂಟ್ ಚೆಲ್ಲಿ, ಪ್ರದೀಪ ಶೆಟ್ಟಿ, ಗುರುಪ್ರಸಾದ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕರಾದ ಡಾ. ರೇಣುಕಾರಾಧ್ಯ ಮಠ ಮತ್ತು ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಎಸ್.ಡಿ.ಎಂ. ಫಿಸಿಯೋಥೆರಪಿ - ನರ್ಸಿಂಗ್ ವಿದ್ಯಾರ್ಥಿಗಳಿಂದ ಪರಿಸರ ರಕ್ಷಣೆಯ ಕುರಿತು ಕಿರು ನಾಟಕ ಪ್ರದರ್ಶಿಸಲಾಯಿತು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img