ಎಸ್.ಡಿ.ಎಂ ವೃತ್ತಿಪರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ


Logo

Published Date: 10-Jun-2025 Link-Copied

ಉಜಿರೆ: ಯುವಕರ ಆಸಕ್ತಿಗೆ ಅನುಗುಣವಾದ ಉದ್ಯೋಗಾವಕಾಶಗಳ ಲಭ್ಯತೆ ಮತ್ತು ಸದ್ಭಳಕೆಯಿಂದ ಭಾರತವು ವಿವಿಧ ರಂಗಗಳಲ್ಲಿ ವಿಶ್ವಮಟ್ಟದ ಸ್ಪರ್ಧೆಯನ್ನೊಡ್ಡಿ ಮುಂಚೂಣಿ ಸ್ಥಾನ ಗಳಿಸಬಹುದು ಎಂದು ಧರ್ಮಸ್ಥಳದ ಎಸ್‌ಕೆಡಿಆರ್‌ಡಿಪಿ ಬಿ.ಸಿ ಟ್ರಸ್ಟ್ ಸಿ.ಇ.ಒ ಅನಿಲ್ ಕುಮಾರ್ ಎಸ್.ಎಸ್‌. ಅಭಿಪ್ರಾಯಪಟ್ಟರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಹಾಗೂ ರಿಲಯನ್ಸ್ ಫೌಂಡೇಶನ್ ಸಹಯೋಗದಲ್ಲಿ ಆಯೋಜಿತ ಮೂರು ದಿನಗಳ ವೃತ್ತಿಪರತರಬೇತಿ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಯುವಜನತೆ ಪೂರಕ ಕೌಶಲ್ಯವಿಲ್ಲದೆ ಉದ್ಯೋಗ ಕ್ಷೇತ್ರಕ್ಕೆ ಕಾಲಿಟ್ಟರೆ ವೃತ್ತಿಪರತೃಪ್ತಿ ಸಾಧ್ಯವಾಗುವುದಿಲ್ಲ. ಕೌಶಲ್ಯದ ಅಭಾವವು ವ್ಯಕ್ತಿಯ ವಿಕಾಸವನ್ನುತಡೆಯುವುದಷ್ಟೇ ಅಲ್ಲ, ದೇಶದ ಉತ್ಪಾದಕತೆ ಮತ್ತು ನಾವೀನ್ಯತೆಯ ಮೇಲೆಯೂ ಪರಿಣಾಮ ಬೀರುತ್ತದೆ. ಇತ್ತೀಚಿನ ದಿನಗಳಲ್ಲಿ ಕೆಲ ಕಾರ್ಪೊರೇಟ್ ಸಂಸ್ಥೆಗಳು ವಿದ್ಯಾರ್ಥಿಗಳನ್ನು ವಿವಿಧ ರೀತಿಯಲ್ಲಿ ದುರುಪಯೋಗಪಡಿಸಿಕೊಳ್ಳುತ್ತಿವೆ. ಕಡಿಮೆ ವೇತನ, ಉಚಿತ ಇಂಟರ್ನ್ಷಿಪ್ ಹೆಸರಲ್ಲಿ ಮೂಲಭೂತ ಅಗತ್ಯಗಳನ್ನು ಪೂರೈಸದೇ ಅಗತ್ಯ ಅವಧಿಗಿಂತ ಹೆಚ್ಚಾಗಿ ದುಡಿಸಿಕೊಳ್ಳಲಾಗುತ್ತಿದೆ. ಸ್ಪಷ್ಟ ವೃತ್ತಿಪರ ಮಾರ್ಗದರ್ಶನವಿಲ್ಲದ್ದರಿಂದ ಈ ರೀತಿಯ ಶೋಷಣೆಗಳಾಗುತ್ತವೆ. ಈ ಬಗೆಯ ಶೋಷಣೆಯು ಭವಿಷ್ಯದಲ್ಲಿ ಸಮರ್ಥ ಯುವಕರ ಹಿನ್ನಡೆಗೆ ಕಾರಣವಾಗುತ್ತದೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೆಂಗಳೂರಿನ ಮ್ಯಾಜಿಕ್ ಬಸ್ ಫೌಂಡೇಶನ್ ಎಂಸಿಎಸ್‌ಆರ್ ಪ್ರಾಜೆಕ್ಟ್ ಮ್ಯಾನೇಜರ್ ಧವನ್‌ಗೌಡ ಮಾತನಾಡಿದರು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪಾತ್ರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರಲ್ಲಿನ ವ್ಯಾವಹಾರಿಕ ಕೌಶಲ್ಯ ಹಾಗೂ ಸಾಫ್ಟ್ ಸ್ಕಿಲ್ಸ್ ಅಭಿವೃದ್ಧಿಗೆ ಒತ್ತು ನೀಡುವುದು ಬಹಳ ಅಗತ್ಯವಾಗಿದೆ. ಸಮಾಜಕಾರ್ಯ ವೃತ್ತಿಯು ನೇರವಾಗಿ ಜನರಜೊತೆ ಸಂಪರ್ಕ ಹೊಂದಿರುವ ಕ್ಷೇತ್ರ. ವಿದ್ಯಾರ್ಥಿಗಳು ಉತ್ತಮಗ್ರಹಿಸುವಿಕೆ, ಸಂವೇದನೆ, ಸ್ಪಷ್ಟ ಸಂವಹನ ಕೌಶಲ್ಯ, ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯ, ಸಮಯ ನಿರ್ವಹಣೆ, ಸಮಸ್ಯೆ ಪರಿಹಾರ ಗುಣ ಮತ್ತು ನಾಯಕತ್ವದ ಗುಣಗಳನ್ನು ಹೊಂದಿರುವುದು ಬಹುಅಗತ್ಯವಾಗಿದೆ ಎಂದರು. ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಠ್ಯಪುಸ್ತಕ ಜ್ಞಾನವಷ್ಟೇ ಮುಖ್ಯವಲ್ಲ. ಆತ್ಮವಿಶ್ವಾಸ ಹಾಗೂ ನಿರ್ಧಾರ ತೆಗೆದುಕೊಳ್ಳುವ ಧೈರ್ಯವು ವ್ಯಕ್ತಿತ್ವದ ಅವಿಭಾಜ್ಯ ಅಂಶಗಳು. ವೃತ್ತಿಪರ ಕೌಶಲ್ಯತರಬೇತಿ ಕಾರ್ಯಾಗಾರಗಳಿಂದ ಈ ಆತ್ಮವಿಶ್ವಾಸ, ಧೈರ್ಯ ಸಾಧ್ಯವಾಗುತ್ತದೆ ಎಂದರು. ವಿದ್ಯಾರ್ಥಿಗಳಲ್ಲಿ ವೃತ್ತಿಪರ ಕೌಶಲ್ಯಗಳನ್ನು ಬೆಳೆಸಲು ತರಬೇತಿ ಕಾರ್ಯಾಗಾರಗಳು, ಪ್ರಾಯೋಗಿಕ ಚಟುವಟಿಕೆಗಳು ಹಾಗೂ ಕ್ಷೇತ್ರಕಾರ್ಯದ ಅನುಭವಗಳು ಸಹಾಯಕವಾಗುತ್ತವೆ. ವೃತ್ತಿಜೀವನದ ಸಾಮರ್ಥ್ಯವನ್ನು ರೂಢಿಸುತ್ತವೆ. ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಡಾ. ರವಿಶಂಕರ್‌ ಕೆ.ಆರ್. ಉಪಸ್ಥಿತರಿದ್ದರು. ಡಾ. ಅತುಲ್ ಎಸ್. ಸೆಮಿತ್ ಸ್ವಾಗತಿಸಿದರು. ಸ್ವಾತಿ ಬಿ. ಸ್ವಾಗತಿಸಿದರು, ಡಾ. ದಾನೇಶ್ವರಿ ವಂದಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img