ಸುಲೋಚನಾ ಭಟ್ ನಿಧನ
Published Date: 28-Aug-2025 Link-Copied
ಪುತ್ತೂರು, ಆ. 28: ಸ್ವರ್ಣೋದ್ಯಮಿ ಮುಳಿಯ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಭಟ್ (71) ಅವರು ಅಲ್ಪಕಾಲದ ಅಸೌಖ್ಯದಿಂದ ಆ. 28ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತಿ ಮುಳಿಯ ಶ್ಯಾಮ್ ಭಟ್, ಪುತ್ರರಾದ ಮುಳಿಯ ಜುವೆಲ್ಸನ ಸಿಎಂಡಿ ಕೇಶವ ಪ್ರಸಾದ್, ಎಂಡಿ ಕೃಷ್ಣ ನಾರಾಯಣ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಉದ್ಯಮಿಯಾಗಿದ್ದ ಸುಲೋಚನಾ ಅವರು ಲಯನೆಸ್ ಮತ್ತು ರೋಟರಿ ಇನ್ನರ್‌ವೀಲ್ ಕ್ಲಬ್ ಮೂಲಕ ಸಮಾಜಸೇವಕಿಯಾಗಿ ಗುರುತಿಸಿಕೊಂಡಿದ್ದರು. ಮುಳಿಯ ಜುವೆಲ್ಲರ್ಸ್‌ನ ಎಲ್ಲಾ ಶಾಖೆಗಳು ಇಂದು (29 ಆಗಸ್ಟ್ ಶುಕ್ರವಾರ) ಕಾರ್ಯನಿರ್ವಹಿಸುತ್ತಿಲ್ಲ. ಗ್ರಾಹಕರು ಗಮನಿಸಬೇಕಾಗಿ ವಿನಂತಿ.