ಸತ್ತೂರು, ಧಾರವಾಡ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ


Logo

Published Date: 10-Oct-2025 Link-Copied

ಎಸ್.ಡಿ.ಎಂ ವೈದ್ಯಕೀಯ ಮಹಾವಿದ್ಯಾಲಯದ, ಮನೋರೋಗ ಚಿಕಿತ್ಸಾ ವಿಭಾಗವು ಎಸ್.ಡಿ.ಎಂ. ನರ್ಸಿಂಗ್ ಕಾಲೇಜು ಅವರ ಸಹಭಾಗಿತ್ವದಲ್ಲಿ “ವಿಪತ್ತು ಮತ್ತು ತುರ್ತು ಸಂದರ್ಭಗಳಲ್ಲಿ ಮಾನಸಿಕ ಆರೋಗ್ಯ, ಸೇವೆಗಳಿಗೆ ಆದ್ಯತೆ” ಎಂಬ ಧ್ಯೇಯೆಯೊಂದಿಗೆ ಅಕ್ಟೋಬರ್ 10, 2025ರಂದು “ವಿಶ್ವ ಮಾನಸಿಕ ಆರೋಗ್ಯ” ದಿನವನ್ನು ಆಚರಿಸಲಾಯಿತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಧ್ಯೇಯೆ ವಾಕ್ಯವನ್ನು ಅನಾವರಣಗೊಳಿಸಿದರು. ಡಾ. ಸಚಿನ್ ಬಿ. ಎಸ್. ಮತ್ತು ಡಾ. ಮನೋಜ ಶೆಟ್ಟರ ಅವರು ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ ನೀಡಿ ಮಾತನಾಡುತ್ತಾ: ಆರೋಗ್ಯ ವೃತ್ತಿಪರರು ತಮ್ಮ ಮಾನಸಿಕ ಆರೋಗ್ಯವನ್ನು ಸಮತೋಲನದಲ್ಲಿರಿಸಿಕೊಳ್ಳಬೇಕು. ಮಾನಸಿಕ ಆರೋಗ್ಯದ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅತ್ಯಂತ ಕಾಳಜಿಯಿಂದ ಚಿಕಿತ್ಸೆ ನೀಡಬೇಕು ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದಷ್ಟೇ ಮುಖ್ಯವಾಗಿದೆ. ಸದಾ ಉತ್ತಮ ಆರೋಗ್ಯವನ್ನು ಹೊಂದಲು ಮನಸ್ಸಿಗೆ ಆಘಾತಗಳಾಗದಂತೆ ಜಾಗೃತಿವಹಿಸಬೇಕು. ಹಣಕಾಸು ಅಧಿಕಾರಿಗಳಾದ ವಿ.ಜಿ. ಪ್ರಭು, ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ ಹೆಗ್ಡೆ, ಎಸ್.ಡಿ.ಎಂ. ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಸನ್ನ ದೇಶಪಾಂಡೆ, ಮತ್ತಿತರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಿತ್ತಪತ್ರ ಪ್ರದರ್ಶನ ಮತ್ತು ರಸಪ್ರಶ್ನೆ ಸ್ಪರ್ಧೆಗಳ ವಿಜೆತರಿಗೆ ಬಹುಮಾನಗಳನ್ನು ವಿತರಿಸಿದರು. ಡಾ. ಸ್ಪೂರ್ತಿ ಹಾಗೂ ಡಾ. ಮೋಕ್ಷ ಅವರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ನಾಗೇಶ ಅಜ್ಜವಾಡಿ ಮಠ ವಂದಣಾರ್ಪಣೆ ಸಲ್ಲಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img