ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಯತಿಕುಮಾರಸ್ವಾಮಿ ಗೌಡರಿಗೆ ಅತ್ಯುತ್ತಮ ನರ್ಸ್ ಎಜುಕೇಟರ್ ಪ್ರಶಸ್ತಿ
Published Date: 02-Jun-2026 Link-Copied
ಮೂಡುಬಿದಿರೆ: ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಯತಿಕುಮಾರಸ್ವಾಮಿ ಗೌಡ ಅವರು ಕರ್ನಾಟಕ ಶುಶ್ರೂಷಕ ಶಿಕ್ಷಕರ ಸಂಘ, ಬೆಂಗಳೂರು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಹಮ್ಮಿಕೊಂಡ ಅಂತರಾಷ್ಟ್ರೀಯ ಶುಶ್ರೂಷಕರ ದಿನಾಚರಣೆಯಲ್ಲಿ ಪ್ರದಾನ ಮಾಡಲಾದ ‘ಅತ್ಯುತ್ತಮ ನರ್ಸ್ ಎಜುಕೇಟರ್ ಪ್ರಶಸ್ತಿ’ ಗೆ ಭಾಜನರಾಗಿದ್ದಾರೆ. ಭವಿಷ್ಯದ ಆರೋಗ್ಯ ವೃತ್ತಿಪರರನ್ನು ರೂಪಿಸುವಲ್ಲಿ ಅತ್ಯುನ್ನತ ಮಟ್ಟದ ಬೋಧನೆ, ಮಾರ್ಗದರ್ಶನ ಹಾಗೂ ನರ್ಸಿಂಗ್ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಡಾ. ಯತಿಕುಮಾರಸ್ವಾಮಿ ಗೌಡ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಕುಲಪತಿ ಡಾ. ಭಗವಾನ್ ಬಿ.ಸಿ. ಉಪಸ್ಥಿತರಿದ್ದರು.