ಎಕ್ಸಲೆಂಟ್: ಇ ವಿ ಎಂ ಮೂಲಕ ಶಾಲಾ ಸಂಸತ್ ಚುನಾವಣೆ


Logo

Published Date: 23-Jun-2026 Link-Copied

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ಅತ್ಯಂತ ವ್ಯವಸ್ಥಿತವಾಗಿ ಮತ್ತು ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಮತದಾನದ ಹಕ್ಕು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಚುನಾವಣೆಯನ್ನು ಆಯೋಜಿಸಲಾಗಿತ್ತು. ಭಾರತದ ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿಯೇ ಈ ಚುನಾವಣೆ ನಡೆಸಲಾಗಿದ್ದು ಇಲೆಕ್ಟ್ರಾನಿಕ್ಸ್ ವೋಟಿಂಗ್ ಮೆಷಿನ್ ಮೂಲಕ ಮತದಾನ ಪ್ರಕ್ರಿಯೆ ಜರುಗಿತು. ವಿದ್ಯಾರ್ಥಿಗಳಿಗೆ ಮತದಾನದ ವಿಧಾನ, ಅಭ್ಯರ್ಥಿಗಳ ಆಯ್ಕೆ ಮತ್ತು ಮತ ಚಲಾಯಿಸುವ ಕ್ರಮಗಳ ಕುರಿತು ಪೂರ್ವಭಾವಿ ಮಾಹಿತಿ ನೀಡಲಾಯಿತು. ಬಳಿಕ ಮತಗಟ್ಟೆಗಳಲ್ಲಿ ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಸರದಿ ಸಾಲಿನಲ್ಲಿ ನಿಂತು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿದರು. ಇವಿಎಂ ಮೂಲಕ ನಡೆದ ಮತದಾನವು ವಿದ್ಯಾರ್ಥಿಗಳಿಗೆ ನೈಜ ಚುನಾವಣೆಯ ಅನುಭವವನ್ನು ನೀಡಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಅವರು, “ಪ್ರಜಾಪ್ರಭುತ್ವದ ಯಶಸ್ಸು ಜಾಗೃತ ಮತದಾರರ ಮೇಲೆ ಅವಲಂಬಿತವಾಗಿದೆ. ವಿದ್ಯಾರ್ಥಿ ಜೀವನದಲ್ಲಿಯೇ ಮತದಾನದ ಮಹತ್ವವನ್ನು ಅರಿತುಕೊಳ್ಳುವುದು ಅಗತ್ಯ. ಇಂತಹ ಚುನಾವಣೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ್ವ, ಜವಾಬ್ದಾರಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ.” ಎಂದು ಹೇಳಿದರು. ಸ್ಪರ್ಧಿಸಿದ ಅಭ್ಯರ್ಥಿಗಳು ಮತ್ತು ಮತದಾರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮತದಾನ ಕೇಂದ್ರಕ್ಕೆ ಭೇಟಿ ನೀಡಿದ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಅವರು ಚುನಾವಣಾ ಪ್ರಕ್ರಿಯೆಯನ್ನು ವೀಕ್ಷಿಸಿ ವಿದ್ಯಾರ್ಥಿಗಳ ಶಿಸ್ತು ಮತ್ತು ಉತ್ಸಾಹವನ್ನು ಶ್ಲಾಘಿಸಿದರು. ಇಂತಹ ಪ್ರಜಾಪ್ರಭುತ್ವ ಚÀಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ನಾಗರೀಕತ್ವದ ಗುಣಗಳನ್ನು ಬೆಳೆಸುತ್ತವೆ ಎಂದು ಅಭಿಪ್ರಾಯಪಟ್ಟರು. ಮೂಡುಬಿದಿರೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ನವೀನ್ ಅವರು ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಎಕ್ಸಲೆಂಟ್ ಶಾಲೆಯಲ್ಲಿ ಆಯೋಜಿಸಿದ ಚುನಾವಣಾ ಪ್ರಕ್ರಿಯೆಯನ್ನು ಪ್ರಶಂಶಿಸಿದರು. ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಧ್ಯೇಯಗಳನ್ನು ಬೆಳೆಸುವಲ್ಲಿ ಎಕ್ಸಲೆಂಟ್ ಶಾಲೆಯ ಪಾತ್ರವನ್ನು ಕೊಂಡಾಡಿದರು. ಶಾಲೆಯ ವಿದ್ಯಾರ್ಥಿನಿ ಮಾನ್ಯತಾ ಅವರ ಪೋಷಕರಾದ ಮಧುರ ಅವರು ಮತದಾನ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಪ್ರಜಾಪ್ರಭುತ್ವದ ಅರಿವು ಮತ್ತು ಚುನಾವಣಾ ಪ್ರಕ್ರಿಯೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಅವರು ಮುಖ್ಯ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಿಕೊಟ್ಟರು. ಉಪಮುಖ್ಯೋಪಾಧ್ಯಾಯರಾದ ಜಯಶೀಲ್ ಅವರು ಚುನಾವಣೆಯನ್ನು ಸಂಘಟಿಸಿ ಮತದಾನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮೂಡಿಬರುವಂತೆ ನೋಡಿಕೊಂಡರು. ಈ ಬಾರಿಯ ಶಾಲಾ ಸಂಸತ್ ಚುನಾವಣೆಯಲ್ಲಿ ಒಟ್ಟು 99.008 ಶೇಕಡ ಮತದಾನ ನಡೆದಿದೆ ಎಂಬುದಾಗಿ ಶಾಲಾ ಚುನಾವಣಾ ಆಯೋಗ ವರದಿಯನ್ನು ಮಾಡಿತು. ಮತದಾನ ಪ್ರಕ್ರಿಯೆ ಮುಗಿದು ಎರಡು ದಿನಗಳ ನಂತರ ಮತಎಣಿಕೆ ಕಾರ್ಯನಡೆದು ಚುನಾವಣಾ ಫಲಿತಾಂಶವನ್ನು ಘೋಷಿಸಲಾಯಿತು. ವಿಜೇತ ವಿದ್ಯಾರ್ಥಿಗಳಾದ ರಿಷಿಕೇಶ್, ಯಶ್ಮಿತ್, ತನ್ವಿ ಮತ್ತು ನಿಹಾರಿಕ ಅವರನ್ನು ಅಭಿನಂದಿಸಲಾಯಿತು. ಶಾಲೆಯ ಶಿಕ್ಷಕವೃಂದ ಮತ್ತು ವಿದ್ಯಾರ್ಥಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉತ್ತಮ ನಾಯಕತ್ವ ಮತ್ತು ಜವಾಬ್ದಾರಿಯುತ ನಾಗರೀಕತ್ವದ ಪಾಠವನ್ನು ಕಲಿಸುವಲ್ಲಿ ಸಫಲವಾಯಿತು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img