ರಾಷ್ಟ್ರ ಮಟ್ಟದಲ್ಲಿ ಮಿಂಚಿದ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿ


Logo

Published Date: 19-Oct-2026 Link-Copied

ಗುರುವಾಯನಕೆರೆ: ಶಕ್ತಿನಗರದ ವಿದ್ವತ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಮಿತ್ ಶೆಟ್ಟಿ ಅವರು ಕರಾಟೆಯಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅಕ್ಟೋಬರ್ 11, 2026ರಂದು ಇಂಡಿಯಾ ಕರಾಟೆ ಡು-ಕೆನ್ರಿಯುಕಾನ್ ಶೋಟೊಕಾನ್ ಸೈಲ್ ವತಿಯಿಂದ ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ 2ನೇ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅವರು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಸುಮಿತ್ ಅವರು ಕರಾಟೆ ಕ್ಷೇತ್ರದಲ್ಲಿ ಈಗಾಗಲೇ 198 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದು, ತಮ್ಮ ಪ್ರತಿಭೆ ಮತ್ತು ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ನಾಲ್ಕು ಬಾರಿ ಭಾಗವಹಿಸಿರುವ ಅವರು, ಶ್ರೀಲಂಕಾ, ಮಲೇಷ್ಯಾ, ಮಹಾರಾಷ್ಟ್ರ , ಭೂತಾನ್ ಮತ್ತು ಒಡಿಶಾದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕ ಗಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮಿನಿ ಒಲಿಂಪಿಕ್ಸ್ ನಲ್ಲಿಯೂ ಪಾಲ್ಗೊಂಡು ಕರಾಟೆ ಕ್ಷೇತ್ರದಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ. ಒಂದನೇ ತರಗತಿಯಿಂದಲೇ ಕರಾಟೆ ತರಬೇತಿ ಆರಂಭಿಸಿದ ಸುಮಿತ್, ನಿರಂತರ ಅಭ್ಯಾಸ, ಶಿಸ್ತು ಮತ್ತು ಪರಿಶ್ರಮದ ಮೂಲಕ ಈ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿದ್ದಾರೆ. ಕಳೆದ ತಿಂಗಳು ಉಡುಪಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ ಶಿಪ್‌ನಲ್ಲಿಯೂ ಅವರು ಯಶಸ್ಸು ಗಳಿಸಿದ್ದರು. ಮಂಗಳೂರಿನ ಸುರತ್ಕಲ್ ಮೂಲದ ಸುಮಿತ್ ಶೆಟ್ಟಿ ಅವರು ಸುಭಾಷ್ ಶೆಟ್ಟಿ ಮತ್ತು ಶೋಭಾ ಶೆಟ್ಟಿ ದಂಪತಿಯ ಪುತ್ರರಾಗಿದ್ದಾರೆ. ಕರಾಟೆ ಕ್ರೀಡೆಯ ಮೇಲಿನ ಅವರ ಅಪಾರ ಆಸಕ್ತಿ, ಬದ್ಧತೆ ಹಾಗೂ ಸಾಧಿಸುವ ಛಲ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದೆ. ಸುಮಿತ್ ಅವರ ಈ ಗಮನಾರ್ಹ ಸಾಧನೆಗೆ ಅಭಿನಂದನೆ ಸಲ್ಲಿಸಿದ ವಿದ್ವತ್ ಎಜುಕೇಶನ್ ಫೌಂಡೇಶನ್‌ನ ಅಧ್ಯಕ್ಷರಾದ ಪ್ರೊ. ಸುಭಾಶ್ಚಂದ್ರ ಶೆಟ್ಟಿ, ಶೈಕ್ಷಣಿಕ ನಿರ್ದೇಶಕರಾದ ಪ್ರೊ.ಗಂಗಾಧರ ಇ.ಎಂ. ಹಾಗೂ ಪ್ರಾಂಶುಪಾಲರಾದ ಬಾಲಕೃಷ್ಣ ನಾಯಕ್ ಅವರು, ಇವರ ಪ್ರತಿಭೆ, ಸಮರ್ಪಣೆ ಮತ್ತು ಕ್ರೀಡಾಸ್ಫೂರ್ತಿಯನ್ನು ಶ್ಲಾಘಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img