247 ಪಿಡಿಒ ಹುದ್ದೆಗಳಿಗೆ ಅರ್ಜಿ ಆಹ್ವಾನ
Published Date: 20-Mar-2024 Link-Copied
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ 247 ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಹೈದರಾಬಾದ್ ಕರ್ನಾಟಕ ವೃಂದದ 97, ಉಳಿಕೆ ಮೂಲ ವೃಂದದ 150 ಸೇರಿ ಒಟ್ಟು 247 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು, ಏ.15ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಅರ್ಜಿ ಸಲ್ಲಿಸಲು ಮೇ 15 ಕಡೆಯ ದಿನವಾಗಿದೆ. ಪಿಡಿಒ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿಯನ್ನು ನಿಗದಿಪಡಿಸಲಾಗಿದೆ. ಗ್ರೂಪ್ 'ಸಿ' ವೃಂದದ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಯ ವೇತನ ಶ್ರೇಣಿ 37,900 ರೂ.ಗಳಿಂದ 70,850 ರೂ. ನಿಗದಿಪಡಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಕನಿಷ್ಠ ವಯೋಮಿತಿ 18 ವರ್ಷ. ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ, 2ಬಿ, 3ಎ, 3ಬಿಗೆ 38 ವರ್ಷ ಹಾಗೂ ಪ.ಜಾ, ಪ.ಪಂ/ಪ್ರವರ್ಗ-1ಕ್ಕೆ 40 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಹೆಚ್ಚಿನ ವಿವರಗಳನ್ನು ಲೋಕಸೇವಾ ಆಯೋಗದ ವೆಬ್‌ಸೈಟ್ ನಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಮಸ್ಯೆ ಎದುರಾದರಲ್ಲಿ ಸಹಾಯವಾಣಿ ಸಂಖ್ಯೆ 080-30574957, 30574901 ನ್ನು ಸಂಪರ್ಕಿಸಬಹುದಾಗಿದೆ ಎಂದು ಆಯೋಗದ ಕಾರ್ಯದರ್ಶಿ ಡಾ. ಕೆ. ರಾಕೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.