ಎಸ್‌ಐ ಹುದ್ದೆ: ಅರ್ಜಿ ಆಹ್ವಾನ
Published Date: 20-Mar-2024 Link-Copied
ಉಡುಪಿ/ಮಂಗಳೂರು, ಮಾ. 19: ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರದ ನೇಮಕಾತಿ ಪ್ರಾಧಿಕಾರವು ದಿಲ್ಲಿ ಪೊಲೀಸ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ www.ssckkr.kar.nic.in ಮತ್ತು https://ssc. gov.in ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಿದೆ. ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾ. 29ರೊಳಗೆ ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ 080-25502520 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.