ದ್ವಿತೀಯ ಪಿಯುಸಿ ಮಾದರಿ ಉತ್ತರ ಪತ್ರಿಕೆ ಬಿಡುಗಡೆ
Published Date: 20-Mar-2024 Link-Copied
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾ.1ರಿಂದ 18ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ವಿಷಯವಾರು ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು https://kseab.karnataka.gov.in/english ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾ.20ರಿಂದ 22ರವರೆಗೆ ನಡೆಯಲಿರುವ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು, ಪೋಷಕರು ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ. ದ್ವಂದ್ವಾರ್ಥ ಬರುವ ಪ್ರಶ್ನೆ, ಅಪೂರ್ಣ ಪ್ರಶ್ನೆ, ಪಠ್ಯಕ್ರಮದಲ್ಲಿ ಇಲ್ಲದೇ ಇರುವುದು, ಕನ್ನಡ ಮತ್ತು ಇಂಗ್ಲಿಷ್ ಆವೃತ್ತಿಯಲ್ಲಿ ಬೇರೆ ಬೇರೆ ಅರ್ಥ ಬರುವಂಥದ್ದು, ಒಂದಕ್ಕಿಂತ ಹೆಚ್ಚು ಆಯ್ಕೆಗಳು ಸರಿ ಇರುವ ಬಹು ಆಯ್ಕೆ ಪ್ರಶ್ನೆಗಳಿದ್ದಲ್ಲಿ ಆಕ್ಷೇಪಣೆಗೆ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಲು ಮಾ.19ರಿಂದ 21ರವೆಗೆ ಅವಕಾಶ ಕಲ್ಪಿಸಿದೆ. ಬಳಿಕ ಬರುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.