ಹೊಸದಿಲ್ಲಿ: ಪಿಎಚ್‌ಡಿ ಪ್ರವೇಶ ಸುಗಮ


Logo

Published Date: 29-Mar-2024 Link-Copied

ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪಿಎಚ್‌ಡಿ ಪ್ರವೇಶಕ್ಕೆ ಪ್ರತ್ಯೇಕ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಗೊಂದಲ ಹಾಗೂ ಇದರಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಮಾನಸಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಯುಜಿಸಿ ಹೊಸ ಉಪಕ್ರಮಕ್ಕೆ ಮುಂದಾಗಿದೆ. ಪಿಎಚ್‌ಡಿ ಪ್ರವೇಶಕ್ಕೆ ಇನ್ನು ಮುಂದೆ 'ಎನ್‌ಇಟಿ' ಅಂಕಗಳನ್ನೇ ಪರಿಗಣಿಸಲಾಗುತ್ತದೆ. ಈ ಸಂಬಂಧ ಯುಜಿಸಿ ಗುರುವಾರ ಅಧಿಸೂಚನೆ ಹೊರಡಿಸಿದೆ. 2024-25ನೇ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಅನ್ವಯವಾಗಲಿದೆ. “2020ರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಸಾರವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ'' ಎಂದು ಯುಜಿಸಿ ಮುಖ್ಯಸ್ಥ ಎಂ. ಜಗದೀಶ್ ಕುಮಾರ್ ತಿಳಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img