ಇಂದಿನಿಂದ ದ .ಕ. ಜಿಲ್ಲೆಯಾದ್ಯಂತ ಕಾಲು ಬಾಯಿ ಜ್ವರ ಲಸಿಕೆ ಅಭಿಯಾನ


Logo

Published Date: 01-Apr-2024 Link-Copied

ಮಂಗಳೂರು: ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದಡಿ 5ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ದ.ಕ. ಜಿಲ್ಲೆಯಾದ್ಯಂತ ಎ. 1ರಿಂದ 30ರ ವರೆಗೆ ನಡೆಯಲಿದೆ. ಪ್ರತಿ ಬಾರಿಯಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕೆಎಂಎಫ್‌ನ ಲಸಿಕೆದಾರರು ಪ್ರತೀ ಮನೆ ಮನೆಗೆ ತೆರಳಿ ರೈತರ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ಕಾಲು ಬಾಯಿ ಜ್ವರ ರೋಗವು ವೈರಸ್‌ನಿಂದ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದನ್ನು ತಡೆಗಟ್ಟಲು ಲಸಿಕೆ ನೀಡುವುದೊಂದೇ ಪರಿಣಾಮಕಾರಿಯಾದ ವಿಧಾನವಾಗಿದೆ. ಈ ಹಿಂದೆ ರೈತರು ತಮ್ಮ ಜಾನುವಾರುಗಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಪ್ರತಿ ಸುತ್ತಿನಲ್ಲಿ ಲಸಿಕೆ ಹಾಕುವುದು ಅವಶ್ಯವಾಗಿದೆ ಎಂದು ಪಶುಪಾಲನ ಇಲಾಖೆಯ ಉಪನಿರ್ದೇಶಕ ಡಾ| ಅರುಣ್ ಕುಮಾರ್ ಶೆಟ್ಟಿ ಎನ್. ತಿಳಿಸಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 2,50,569 ದನ, ಹಾಗೂ 1,832 ಎಮ್ಮೆ ಒಟ್ಟು 2,52,401 ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗದ ಲಸಿಕೆ ಹಾಕಿಸಲು ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸನ್ನದ್ಧವಾಗಿದ್ದು, ರೈತರು ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮೂಲಕ ನಿಗದಿತ ದಿನದಂದು ಜಾನುವಾರುಗಳನ್ನು ಮನೆಯಲ್ಲಿ ಕಟ್ಟಿ ಹಾಕಿ, ಲಸಿಕೆ ಹಾಕಲು ಬರುವ ಸಿಬ್ಬಂದಿಯೊಡನೆ ಸಹಕರಿಸಬೇಕು ಎಂದು ಹೇಳಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img