ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Published Date: 02-Apr-2024 Link-Copied
ಬೆಂಗಳೂರು: ಶಿಕ್ಷಣ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಏ.22 ಕೊನೆ ದಿನವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡುವ ಉದ್ದೇಶಕ್ಕಾಗಿ ಅರ್ಜಿ ವಿಸ್ತರಣೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.