ಕೆಪಿಎಸ್ಸಿ ಪರೀಕ್ಷೆ ಮುಂದೂಡಿಕೆ
Published Date: 04-Apr-2024 Link-Copied
ಬೆಂಗಳೂರು: 2023-24ನೇ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ 'ಎ' ಮತ್ತು 'ಬಿ' ವೃಂದದ 384 ಹುದ್ದೆಗಳ ನೇಮಕಕ್ಕೆ ಮೇ 5ರಂದು ನಿಗದಿಪಡಿಸಿದ್ದ ಪೂರ್ವಭಾವಿ ಪರೀಕ್ಷೆಯನ್ನು ಜು.7ಕ್ಕೆ ಮುಂದೂಡಿರುವ ಕರ್ನಾಟಕ ಲೋಕ ಸೇವಾ ಆಯೋಗ, ಅರ್ಜಿ ಸಲ್ಲಿಸುವ ಅವಧಿಯನ್ನು ಏ.15ರವರೆಗೆ ವಿಸ್ತರಿಸಿದೆ. ಈ ಮೊದಲು ಹೊರಡಿಸಿದ್ದ ಅಧಿಸೂಚನೆಯಂತೆ ಅರ್ಜಿ ಸಲ್ಲಿಸಲು ಏ.3 ಕಡೇ ದಿನವಾಗಿತ್ತು. ಆದರೆ, ಚುನಾವಣೆ, ಇತರೆ ಪರೀಕ್ಷೆಗಳ ನಿಗದಿ ಮತ್ತಿತರ ಕಾರಣಗಳಿಂದಾಗಿ ಅಭ್ಯರ್ಥಿಗಳಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಮೊದಲು ಪೂರ್ವಭಾವಿ ಪರೀಕ್ಷೆಯನ್ನು ಮೇ 5ಕ್ಕೆ ನಿಗದಿಪಡಿಸಲಾಗಿತ್ತು. ಹೊಸ ಆದೇಶದ ಪ್ರಕಾರ, ಪೂರ್ವಭಾವಿ ಪರೀಕ್ಷೆಯನ್ನು ಎರಡು ತಿಂಗಳು ಮುಂದೂಡಿ ಜು.7ಕ್ಕೆ ನಿಗದಿ ಮಾಡಲಾಗಿದೆ ಎಂದು ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ಕೆ.ರಾಕೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.