ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವ ಎಲ್‌ಐಸಿಯಿಂದ 333 ವಿಮಾ ಗ್ರಾಮ ಘೋಷಣೆ
Published Date: 07-Apr-2024 Link-Copied
ಬೆಳ್ತಂಗಡಿ, ಎ. 6: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಯವರ ಪರಿಕಲ್ಪನೆಯಂತೆ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದಲ್ಲಿ ಭಾರತೀಯ ಜೀವವಿಮಾ ನಿಗಮ (ಎಲ್‌ಐಸಿ)ದಿಂದ ರಾಜ್ಯದಾದ್ಯಂತ 333 ವಿಮಾ ಗ್ರಾಮಗಳನ್ನು ಗುರುತಿಸಿ 1,22,88,016 ರೂ. ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಸಂಸ್ಥೆಯ ಸಿಇಒ ಡಾ| ಎಲ್. ಎಚ್. ಮಂಜುನಾಥ್ ತಿಳಿಸಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಮತ್ತು ಅವರ ಕುಟುಂಬಗಳಿಗೆ ವಿಮಾ ಭದ್ರತೆ ನೀಡುವ ಕೆಲಸವನ್ನು ಕಳೆದ ಎರಡು ದಶಕಗಳಿಂದ ಮಾಡಲಾಗುತ್ತಿದೆ. ಈಗಾಗಲೇ ರಾಜ್ಯದ 23,27,650 ಮಂದಿ ಇದರ ಲಾಭ ಪಡೆದಿದ್ದಾರೆ. ಈ ಮಧ್ಯೆ ಮೈಕ್ರೋಬಚತ್ ಪಾಲಿಸಿಯಡಿ ವಿಮಾ ಗ್ರಾಮಗಳನ್ನು ಗುರುತಿಸುವ ವಿಶೇಷ ಕಾರ್ಯವನ್ನು ಎಲ್‌ಐಸಿ ಮಾಡುತ್ತಿದ್ದು, ರಾಜ್ಯಾದ್ಯಂತ 13,71,000 ಮಂದಿಗೆ ಈ ಪಾಲಿಸಿ ಮಾಡಲಾಗಿದೆ. 'ಏನಿದು ವಿಮಾ ಗ್ರಾಮ? ಅಲ್ಲಿ ಮಾಡಲಾದ ಮೈಕ್ರೋಬಚತ್ ಪಾಲಿಸಿಯ ಆಧಾರದಲ್ಲಿ ವಿಮಾ ಗ್ರಾಮಗಳನ್ನು ಎಲ್‌ಐಸಿ ಗುರುತಿಸುತ್ತದೆ. 2019ರಿಂದ ರಾಜ್ಯಾದ್ಯಂತ 333 ವಿಮಾ ಗ್ರಾಮಗಳನ್ನು ಗುರುತಿಸಲಾಗಿದೆ. ಆಯ್ಕೆಯಾದ ಗ್ರಾಮಗಳಿಗೆ ಒಂದು ಘಟಕಕ್ಕೆ 35,000ರಿಂದ 1 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.