ಪಿಯು ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ


Logo

Published Date: 25-Apr-2024 Link-Copied

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ-2 ಏ. 29ರಿಂದ ಆರಂಭಗೊಳ್ಳಲಿದ್ದು, ಮೇ 16ರವರೆಗೆ ನಡೆಯಲಿದೆ. ಪರೀಕ್ಷೆ ಬರೆಯಲು 1,49,300 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರೆಲ್ಲರೂ ಪ್ರವೇಶ ಪತ್ರವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ವೆಬ್ ಸೈಟ್‌ನಿಂದ ಪಡೆಯಬಹುದಾಗಿದೆ. 32,848 ವಿದ್ಯಾರ್ಥಿಗಳು ಉನ್ನತೀಕರಣ (ಇಂಪ್ರೂವ್‌ಮೆಂಟ್) ಬಯಸಿ ಪರೀಕ್ಷೆ ತೆಗೆದುಕೊಂಡಿದ್ದು, 27,092 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. 89,221 ನಾಟ್ ಕ್ಲಿಯರ್ಡ್ ವಿದ್ಯಾರ್ಥಿಗಳಾಗಿದ್ದು, 139 ವಿದ್ಯಾರ್ಥಿಗಳು ಶೇ.75 ರಷ್ಟು ಹಾಜರಾತಿ ಇಲ್ಲದೇ 17 ವರ್ಷ ತುಂಬಿದ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯಾದ್ಯಂತ 301 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಎಲ್ಲಾ ವಿದ್ಯಾರ್ಥಿಗಳು https://kseab.karnataka.gov.in ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರ ಪಡೆಯಬಹುದಾಗಿದೆ. 11 ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆ ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪತ್ರವನ್ನು ಆನ್‌ಲೈನ್‌ನಲ್ಲಿ ಪಡೆಯಬಹುದಾಗಿದೆ. ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶಪತ್ರ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img