ಡಿಪ್ಲೊಮಾ ಪ್ರವೇಶ: ಅರ್ಜಿ ಆಹ್ವಾನ
Published Date: 11-May-2024 Link-Copied
ಮಂಗಳೂರು: ಬೊಂದೇಲ್‌ನಲ್ಲಿರುವ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್ (ಇಂಗ್ಲಿಷ್, ಕನ್ನಡ ) ಹಾಗೂ ಲೈಬ್ರರಿ ಆ್ಯಂಡ್ ಇನ್ಫಾರ್ಮೇಷನ್ ಸೈನ್ಸ್ ಕೋರ್ಸುಗಳ ದಾಖಲಾತಿಗೆ ಎಸ್‌ಎಸ್‌ಎಲ್‌ಸಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಮೇ 14ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜನ್ನು ಸಂಪರ್ಕಿಸಬಹುದು ಎಂದು ಪ್ರಿನ್ಸಿಪಾಲ್‌ರವರು ತಿಳಿಸಿದ್ದಾರೆ.