ಮಂಗಳೂರು: ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ
Published Date: 11-May-2024 Link-Copied
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಉಳಾಯಿಬೆಟ್ಟುವಿನ ಮೌಲಾನ ಆಜಾದ್ ಮಾದರಿ ಶಾಲೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. 6ರಿಂದ 10ನೇ ತರಗತಿವರೆಗೆ ಕನ್ನಡ, ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಬೋಧಿಸಲು ಬಿಎಸ್ಸಿ-ಬಿಎಡ್ ಮತ್ತು ಬಿಎ-ಬಿಎಡ್ ಪದವೀಧರ ಶಿಕ್ಷಕರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.