ಸರಕಾರಿ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಕ್ಕೆ ಆಹ್ವಾನ
Published Date: 13-May-2024 Link-Copied
ಬಂಟ್ವಾಳ: ರಾಜ್ಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ಆಯುಕ್ತರ ಆದೇಶದ ಪ್ರಕಾರ 2024-25ನೇ ಸಾಲಿನಲ್ಲಿ ಮೆರಿಟ್ ಆಧಾರಿತ ಆನ್‌ಲೈನ್ ಮೂಲಕ ಸೀಟು ಹಂಚಿಕೆ ಮಾಡುವ ಸರಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕೆ ಎಸೆಸೆಲ್ಸಿ/ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಶಿಕ್ಷಣ ಇಲಾಖೆಯ ತಾಂತ್ರಿಕ ವೆಬ್‌ಸೈಟ್ https://dtetech.karnataka.gov.in/kartechnical ನಿಂದ ಮಾಹಿತಿ ಪುಸ್ತಕವನ್ನು ಡೌನ್ ಲೋಡ್ ಮಾಡಿಕೊಂಡು ಅದರ ಸೂಚನೆಗಳನ್ವಯ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಸಿಬಂದಿಯವರ ಸಹಾಯದೊಂದಿಗೆ ತಮ್ಮ ಇಚ್ಛೆಗನುಗುಣವಾಗಿ ಕೋರ್ಸ್/ಕಾಲೇಜು ಆಯ್ಕೆ ಮಾಡಿ ಆನ್‌ಲೈನ್ ಮೂಲಕ ಅರ್ಜಿ ದಾಖಲಿಸಲು ಮೇ 21 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.