ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ವೈದ್ಯಕೀಯ ದಿನಾಚರಣೆ
Published Date: 01-Jul-2024 Link-Copied
'ವೈದ್ಯೋ ನಾರಾಯಣೋ ಹರಿ' ಎಂಬ ಉಕ್ತಿಯಂತೆ, ಜುಲೈ 1ರಂದು ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ವೈದ್ಯಕೀಯ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಡಾ. ದೀಪ್ತಿ ರಾವ್ ರವರು ಉಪಸ್ಥಿತರಿದ್ದು ಉತ್ತಮ ಆರೋಗ್ಯಕರವಾದ ಜೀವನ ನಡೆಸಲು ಯಾವ ಕ್ರಮವನ್ನು ಅನುಸರಿಸಬೇಕೆಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಅದೇ ರೀತಿ ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್‌ರವರು ನಾವು ಜೀವನದಲ್ಲಿ ಒಂದಲ್ಲ ಒಂದು ಗುರಿಯನ್ನು ಹೊಂದಿರಬೇಕು, ನಮ್ಮ ಗುರಿ ಏನಿದೆಯೋ ಅದನ್ನು ಮುಟ್ಟಲು ನಿರಂತರ ಓದು ಅಗತ್ಯ ಅನ್ನುವುದನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಶ್ಮಿತಾರವರು ವೈದ್ಯಕೀಯ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಂಯೋಜಕರಾದ ಶ್ರಿಪ್ರಸಾದ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಖಾರವರು ನೆರವೇರಿಸಿ, ದಿಯಾರವರು ವಂದಿಸಿದರು.