ಉಜಿರೆ ಶ್ರೀ ಧ. ಮಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ


Logo

Published Date: 06-Aug-2024 Link-Copied

ಉಜಿರೆಯ ಶ್ರೀ ಧ. ಮಂ. ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಕ್ರಿಯ ಸಂಘಗಳಾದ ಸಸ್ಯಸೌರಭ ಹಾಗೂ ಇಕೋ-ಕ್ಲಬ್ ವತಿಯಿಂದ ಉಜಿರೆಯ ರತ್ನಮಾನಸದಲ್ಲಿ ಆ.2ರಂದು ನೇಜಿ ನೆಡುವ ಕಾರ್ಯಕ್ರಮ ನಡೆಯಿತು. ರತ್ನಮಾನಸದ ಮೇಲ್ವಿಚಾರಕ ಯತೀಶ್ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ ಮಾಹಿತಿಗಳನ್ನು ನೀಡಿದರು. ದ್ವಿತೀಯ ಮತ್ತು ತೃತೀಯ ಬಿ.ಎಸ್ಸಿಯ ಸುಮಾರು 40 ವಿದ್ಯಾರ್ಥಿಗಳು ಉತ್ಸಾಹದಿಂದ ಜೊತೆಗೂಡಿ ನೇಜಿ ನಾಟಿ ಮಾಡಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶಕುಂತಲಾ ಬಿ., ಅಭಿಲಾಷ್ ಕೆ.ಎಸ್., ಮಂಜುಶ್ರೀ ಹಾಗೂ ಭವ್ಯ ಡಿ. ನಾಯಕ್ ಪಾಲ್ಗೊಂಡರು. ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಇವರು ಶುಭ ಹಾರೈಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img