ಸೂಚನೆ: ಬೆಳೆ ವಿಮೆ ಯೋಜನೆ ಜಾರಿ
Published Date: 19-Aug-2024 Link-Copied
ಮಂಗಳೂರು: ಹವಾಮಾನ ವೈಪರೀತ್ಯದಿಂದ ತೋಟಗಾರಿಕೆ ಬೆಳೆ ನಷ್ಟವಾಗಿದ್ದರೆ ಪರಿಹಾರ ತುಂಬಿ ಕೊಡಲು 2024-25ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರಕಾರ ಜಾರಿಗೊಳಿಸಿದ್ದು, ಇದರಲ್ಲಿ ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಈ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಬೆಳೆ ಸಾಲ ಪಡೆದಿರುವ ರೈತರಿಗೆ ಮಾತ್ರ ಅನ್ವಯಿಸುವಂತೆ ನೋಂದಣಿಗೊಳಿಸಲು ಆಗಸ್ಟ್ 25ರವರೆಗೆ ಅವಧಿ ವಿಸ್ತರಿಸಲಾಗಿದೆ. ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಪ್ರತಿನಿಧಿ ಅಥವಾ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಮಂಜುನಾಥ ಡಿ. ಅವರ ಮೊಬೈಲ್ ಸಂಖ್ಯೆ 9448999226 ಹಾಗೂ ಟಾಟಾ ಎಐಜಿ ಸಂಸ್ಥೆಯ ಪ್ರತಿನಿಧಿ ಶುಭಂ ಅವರ ಸಂಪರ್ಕ ಸಂಖ್ಯೆ 9131962255 ಆಗಿದೆ ಎಂದು ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.