ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
Published Date: 19-Aug-2024 Link-Copied
ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.5 ಕೊನೆಯ ದಿನವಾಗಿದೆ. ಈ ವರ್ಷದ ಡಿ. 8ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕೆಎಸ್‌ಕ್ಯುಎಎಸಿ ವತಿಯಿಂದ ವಿದ್ಯಾರ್ಥಿ ನಿಧಿಗೆ ಅರ್ಹತಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯನ್ನು ಸರಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ಬಡ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಪರೀಕ್ಷೆಯ ಆನ್‌ಲೈನ್ ಅರ್ಜಿ ಕೆಎಸ್‌ಇಎಬಿಯ ವೆಬ್‌ಸೈಟ್ https://kseeb.karnataka. gov.inನಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗೆ 080-23341615 ಸಂಪರ್ಕಿಸಬಹುದು.