ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಬಗ್ಗೆ ಪ್ರಬಂಧ ಸ್ಪರ್ಧೆ
Published Date: 23-Sep-2024 Link-Copied
ಕಲ್ಕೂರ ಪ್ರತಿಷ್ಠಾನ, ಮಂಗಳೂರು ಇದರ ಆಶ್ರಯದಲ್ಲಿ 2024, ಅಕ್ಟೋಬರ್ 10ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ ಕಾರಂತ ಹುಟ್ಟುಹಬ್ಬ ಸಮಾರಂಭವು ಜರಗಲಿದ್ದು, ಇದರ ಸಲುವಾಗಿ ಕಾರಂತರ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕಾಲೇಜು ಹಾಗೂ ಮುಕ್ತ ಎಂಬ 2 ವಿಭಾಗಗಳಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಮೂರು ಪುಟಕ್ಕೆ ಮೀರದಂತೆ ಪ್ರಬಂಧವನ್ನು ಅಕ್ಟೋಬರ್ 6, 2024ರೊಳಗಾಗಿ ಸ್ವ ವಿಳಾಸ ಮತ್ತು ಸಂಪರ್ಕ ದೂರವಾಣಿ ಸಂಖ್ಯೆಯೊಂದಿಗೆ ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಸಂಕೀರ್ಣ, ಮಹಾತ್ಮಗಾಂಧಿ ರಸ್ತೆ, ಕೊಡಿಯಾಲ್ ಬೈಲ್, ಮಂಗಳೂರು ಈ ವಿಳಾಸಕ್ಕೆ ತಲುಪುವಂತೆ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಬಂಧದ ವಿಷಯ ಕಾಲೇಜು ವಿಭಾಗ : ಕಾರಂತರ ವಿಜ್ಞಾನ ಸಾಹಿತ್ಯ ಮಕ್ಕಳ ಸಾಹಿತ್ಯ ಅವಲೋಕನ, ಅನುಸಂಧಾನ ಮುಕ್ತ ವಿಭಾಗ : ಕಾರಂತರ ಸಾಹಿತ್ಯ (ಕಾದಂಬರಿಗಳು) ಅವಲೋಕನ, ಅನುಸಂಧಾನ