ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ನಾಯಕತ್ವ ತರಬೇತಿ ಶಿಬಿರ
Published Date: 25-Sep-2024 Link-Copied
ಎಸ್.ಡಿ.ಎಂ. ವಿಶ್ವವಿದ್ಯಾಲಯ ಮತ್ತು ಎಂ. ಆರ್. ಪೈ ಫೌಂಡೇಶನ್ ಮುಂಬೈ ಇವರ ಜಂಟಿ ಸಹಭಾಗಿತ್ವದಲ್ಲಿ, ಎಸ್.ಡಿ.ಎಂ. ವಿಶ್ವವಿದ್ಯಾಲಯದ ಆಯ್ದ ವಿದ್ಯಾರ್ಥಿಗಳಿಗೆ ಎರಡು ದಿನಗಳ ಉಚಿತ ನಾಯಕತ್ವ ತರಬೇತಿ ಶಿಬಿರವನ್ನು ಸೆಪ್ಟಂಬರ್ 23 ಮತ್ತು 24ರಂದು ಏರ್ಪಡಿಸಲಾಗಿತ್ತು. ಇಂದಿನ ಯುವ ವಿದ್ಯಾರ್ಥಿಗಳನ್ನು ನಾಳಿನ ಮಹಾನ್ ನಾಯಕರನ್ನಾಗಿ ರೂಪಿಸುವುದೇ ಎಸ್.ಡಿ.ಎಂ. ವಿಶ್ವವಿದ್ಯಾಲಯ ಮತ್ತು ಎಂ. ಆರ್. ಪೈ ಫೌಂಡೇಶನ್‌ನ ಮುಖ್ಯ ಉದ್ದೇಶ. ಈ ನಾಯಕತ್ವ ತರಬೇತಿ ಕಾರ್ಯಕ್ರಮವನ್ನು ದೇಶದ ಹಲವು ಭಾಗಗಳಲ್ಲಿ ನಡೆಸುತ್ತಿದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ ಕುಮಾರ್ ಅವರು ನಾಯಕತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮುಂಬೈನ ಎಂ. ಆರ್. ಪೈ ಫೌಂಡೇಶನ್‌ನಿಂದ ಸಂಪನ್ಮೂಲ ವ್ಯಕ್ತಿಗಳಾಗಿ ಸಚಿನ್ ಕಾಮತ್ ಮತ್ತು ಕ್ಲಾರಿಸ್ಸಾ ಜತ್ತನ್ನ ಅವರು ಆಗಮಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಹಲವು ವಿದ್ಯಾರ್ಥಿಗಳು ತರಬೇತಿ ಶಿಬಿರದ ಬಗ್ಗೆ ತಮ್ಮ ಪ್ರತಿಕ್ರೀಯೆಯನ್ನು ನೀಡಿದರು. ಎಸ್.ಡಿ.ಎಂ. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ ಹೆಗ್ಡೆ ಮತ್ತು ಉಪ ಕುಲಸಚಿವರಾದ ಡಾ. ಅಜಂತಾ ಜಿ.ಎಸ್. ಅವರು ಅತಿಥಿಗಳಾಗಿದ್ದು, ಸುಮಾರು 90ಕ್ಕೂ ಹೆಚ್ಚು ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು. ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಮತ್ತು ನಾಯಕತ್ವ ಶಿಬಿರದ ಸಂಯೋಜಕರಾದ ಬಾಬಣ್ಣ ಶೆಟ್ಟಿಗಾರ್ ಅವರು ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಮೇಘನಾ ಹೆಗಡೆ ಅತಿಥಿಗಳನ್ನು ಸ್ವಾಗತಿಸಿದರು. ಸಚಿನ್ ಕಾಮತ್ ಅವರು ಎಂ. ಆರ್. ಪೈ ಫೌಂಡೇಶನ್, ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಉದ್ದೇಶದ ಬಗ್ಗೆ ಪ್ರಸ್ತಾಪಿಸಿದರು. ಡಾ. ಅಂಜನಿ ವರ್ಮಾ ವಂದಿಸಿದರು.