ಸಿರಿ ಸಂಸ್ಥೆಯ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ
Published Date: 26-Dec-2024 Link-Copied
ಧರ್ಮಸ್ಥಳ : ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ‍್ಯಕ್ರಮವು ಡಿ.23 ರಂದು ಧರ್ಮಸ್ಥಳದ ಬೀಡು ಕಛೇರಿಯಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಸಿರಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಹೇಮಾವತಿ ವೀ ಹೆಗ್ಗಡೆ ದಂಪತಿಗಳು ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ವಾಲ್ ಕ್ಯಾಲೆಂಡರನ್ನು ಮತ್ತು ಟೇಬಲ್ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ದನ್ ರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅದೇ ರೀತಿ ಸಿರಿ ಕ್ಯಾಲೆಂಡರ್ ಮುದ್ರಣ ಕಾರ‍್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್ ನ ಶೇಖರ್ ಹಾಗೂ ಸಿರಿ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮುಖ್ಯ ನರ‍್ವಹಣಾಧಿಕಾರಿ ಪ್ರಸನ್ನ, ಸಿರಿ ಸಂಸ್ಥೆಯ ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಹಾಗೂ ಮಾರುಕಟ್ಟೆ ವಿಭಾಗದ ವಿವಿಧ ವಲಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.