Article Image

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆ

Article Image

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆ

ಮೂಡುಬಿದಿರೆ: ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ರಾಜಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಅತ್ಯಂತ ವಿಜೃಂಭಣೆ, ಶ್ರದ್ಧೆ ಮತ್ತು ಸಾಂಸ್ಕೃತಿಕ ವೈಭವದೊಂದಿಗೆ ಆಚರಿಸಲಾಯಿತು. ಸ್ವಾಗತ ನೃತ್ಯದ ಮೂಲಕ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಮುದ್ದು ಕೃಷ್ಣ ಮತ್ತು ಯಶೋಧೆಯರ ಸಮ್ಮುಖದಲ್ಲಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಅವರು ಪ್ರಾಸ್ತಾವಿಕ ನುಡಿಗಳ ಮೂಲಕ ಎಲ್ಲರನ್ನು ಸ್ವಾಗತಿಸಿ, ಶ್ರೀಕೃಷ್ಣನ ಜೀವನ ಮೌಲ್ಯಗಳು , ಧರ್ಮ ಹಾಗೂ ಸಂಸ್ಕೃತಿಯ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಎಸ್ ಡಿ ಎಮ್ ಕಲಾ ಕೇಂದ್ರದ ಮುಖ್ಯ ಸಲಹೆಗಾರರಾದ ಸೋನಿಯಾ ವರ್ಮಾ ಮಾತನಾಡಿ, “ಪ್ರತಿಯೊಬ್ಬರ ಆತ್ಮದಲ್ಲಿಯೂ ದೈವಿಕ ಶಕ್ತಿ ಅಡಗಿದೆ. ಆಧುನಿಕ ವ್ಶೆಜ್ಞಾನಿಕ ತಂತ್ರಜ್ಞಾನದ ಜೊತೆಗೆ ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳ ಅರಿವು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಅತ್ಯಂತ ಅಗತ್ಯವಾಗಿದೆ. ಪ್ರತಿಯೊಬ್ಬ ಮಗುವಿನಲ್ಲಿಯೂ ವಿಶೇಷವಾದ ಸಾಮರ್ಥ್ಯ ಅಡಗಿರುತ್ತದೆ. ಹೇಗೆ ಸಾಮಾನ್ಯವಾದ ಬಿದಿರು ಸುಂದರವಾದ ಕೊಳಲಾಗಿ ರೂಪುಗೊಳ್ಳುತ್ತದೆಯೋ ಹಾಗೆಯೇ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರ ಮೇಲಿದೆ.” ಎಂದು ಹೇಳಿದರು. “ಶ್ರೀ ಕೃಷ್ಣನ ಜನ್ಮದಿನವು ಕೇವಲ ಒಂದು ಹಬ್ಬವಲ್ಲ, ಅದು ಕೃಷ್ಣನ ಧರ್ಮ, ಕರ್ತವ್ಯ ಮತ್ತು ಜೀವನ ಸಂದೇಶಗಳನ್ನು ಸ್ಮರಿಸುವ ಪವಿತ್ರ ಸಂದರ್ಭವಾಗಿದೆ. ಇಂತಹ ಹಬ್ಬಗಳು ಸಮಾಜದ ಎಲ್ಲರನ್ನು ಒಗ್ಗೂಡಿಸಿ, ಸಂಸ್ಕೃತಿ ಮತ್ತು ಬಾಂಧವ್ಯವನ್ನು ಗಟ್ಟಿಗೊಳಿಸುತ್ತವೆ.” ಎಂದು ಅವರು ಅಭಿಪ್ರಾಯಪಟ್ಟರು. ಸಂಸ್ಥೆಯ ನಿರ್ದೇಶಕರಾದ ಬಿ.ಪಿ.ಸಂಪತ್ ಕುಮಾರ್ ಜೈನ್ ಅವರು ಮಾತನಾಡಿ, “ಎಲ್ಲರನ್ನು ತನ್ನತ್ತ ಸೆಳೆಯುವ ಆಯಸ್ಕಾಂತೀಯ ವ್ಯಕ್ತಿತ್ವ ಶ್ರೀ ಕೃಷ್ಣನದು. ‘ಕೃಷ್ಣಂ ವಂದೇ ಜಗದ್ಗುರುಂ’ ಎಂಬ ಮಾತಿನಂತೆ, ಕೃಷ್ಣನು ಜಗತ್ತಿಗೆ ಮಾರ್ಗದರ್ಶಕನಾಗಿದ್ದಾನೆ. ಕೃಷ್ಣನ ಜೀವನದಲ್ಲಿ ಭಕ್ತಿ, ಜ್ಞಾನ ಮತ್ತು ವೈರಾಗ್ಯದಂತಹ ಉನ್ನತ ತತ್ವಗಳು ಅಡಗಿವೆ. ಇವುಗಳ ಸಮನ್ವಯದಿಂದ ಅಪೂರ್ವ ವ್ಯಕ್ತಿತ್ವವನ್ನು ನಾವು ಶ್ರೀಕೃಷ್ಣನಲ್ಲಿ ಕಾಣಬಹುದು.” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮತ್ತೋರ್ವ ಅತಿಥಿಯಾಗಿ ಆಗಮಿಸಿದ್ದ ಖ್ಯಾತ ನೃತ್ಯ ಸಂಯೋಜಕರಾದ ರೂಪೇಶ್ ಶೆಟ್ಟಿ ಅವರು ಮಾತನಾಡಿ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಶ್ಲಾಘಿಸುತ್ತಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಸಂಸ್ಥೆಯ ಕಾರ್ಯವನ್ನು ಮೆಚ್ಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಅವರು ಮಾತನಾಡಿ, “ಜೀವನದಲ್ಲಿ ಸಂಸ್ಕಾರ ಮತ್ತು ಉತ್ತಮ ಮೌಲ್ಯಗಳು ಇದ್ದರೆ ನಾವು ಎಲ್ಲಿ ಬೇಕಾದರೂ ನೆಮ್ಮದಿಯಿಂದ ಬದುಕಬಹುದು ಎಂಬುದಕ್ಕೆ ಶ್ರೀ ಕೃಷ್ಣನ ಜೀವನವೇ ಸಾಕ್ಷಿಯಾಗಿದೆ. ಯಾವುದೇ ಫಲಾಪೇಕ್ಷೆಯಿಲ್ಲದೆ ಪ್ರಾಮಾಣಿಕತೆ, ನಿಷ್ಠೆ ಮತ್ತು ಧರ್ಮದ ಹಾದಿಯಲ್ಲಿ ಜೀವನ ನಡೆಸಿದಾಗ ಭಗವಂತನ ಅನುಗ್ರಹ ಸದಾ ನಮ್ಮೊಂದಿಗಿರುತ್ತದೆ. ಶ್ರೀ ಕೃಷ್ಣನ ಆದರ್ಶಗಳು ನಮ್ಮ ಬದುಕಿಗೆ ದಾರಿದೀಪವಾಗಲಿ.” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸೋನಿಯಾ ವರ್ಮಾ ಅವರನ್ನು ಸಂಸ್ಥೆಯ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಕೃಷ್ನ ಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡಿದ್ದ ಯಶೋದಾ-ಕೃಷ್ಣ ವೇಷಭೂಷನ ಸ್ಪರ್ಧೆ ಹಾಗೂ ಇನ್ನಿತರ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಗಣ್ಯರ ಉಪಸ್ಥಿತಿಯಲ್ಲಿ ಬಹುಮಾನ ವಿತರಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಿವಪ್ರಸಾದ್ ಭಟ್, ಉಪಮುಖ್ಯ ಶಿಕ್ಷಕ ಜಯಶೀಲ, ಸಿ.ಬಿ.ಎಸ್.ಸಿ ವಿಭಾಗದ ಸಂಯೋಜಕಿ ವಿಮಲಾ ಶೆಟ್ಟಿ, ಅಪೇಕ್ಷಾ ಜೈನ್, ಮಾಲಕರು ಪ್ರಭಾತ್ ಸಿಲ್ಕ್ ಮೂಡುಬಿದಿರೆ, ಯಶಸ್ವಿ ವೆಲ್ಡಿಂಗ್ ಇಂಜಿನಿಯರಿಂಗ್ ವರ್ಕ್ಸ್ ಇದರ ಮಾಲಕರಾದ ಲೀಲೇಶ್ ಕೋಟ್ಯಾನ್ ಸೇರಿದಂತೆ ಸಂಸ್ಥೆಯ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಭಾಗವಹಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಕು. ಸಾನ್ವಿ ಹಾಗೂ ಕು.ಮಾನಸ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಕು. ಮೌಲ್ಯ ವೈ ಆರ್ ಜೈನ್ ಇವರು ಅತಿಥಿಗಳ ಪರಿಚಯ ಭಾಷಣವನ್ನು ಮಾಡಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಂದ ಮನಮೋಹಕ ನೃತ್ಯ ಕಾರ್ಯಕ್ರಮಗಳು ಪ್ರದರ್ಶನಗೊಂಡವು. ಶ್ರೀ ಕೃಷ್ಣನ ಜೀವನದ ವಿವಿಧ ಪ್ರಸಂಗಗಳನ್ನು ಬಿಂಬಿಸುವ ನೃತ್ಯ ರೂಪಕಗಳು ಪ್ರೇಕ್ಷಕರ ಮನಸೂರೆಗೊಂಡವು. ವಿದ್ಯಾರ್ಥಿಗಳ ಅದ್ಭುತ ಪ್ರತಿಭೆ, ಶಿಸ್ತು ಮತ್ತು ಕಲಾ ನೈಪುಣ್ಯವು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ಆಳ್ವಾಸ್: ಎರಡನೇ ಆವೃತ್ತಿಯ ಅಭಿಜ್ಞ ವಿಜ್ಞಾನ ಕಾರ್ಯಾಗಾರ

Article Image

ಆಳ್ವಾಸ್: ಎರಡನೇ ಆವೃತ್ತಿಯ ಅಭಿಜ್ಞ ವಿಜ್ಞಾನ ಕಾರ್ಯಾಗಾರ

ಮೂಡುಬಿದಿರೆ: ವಿಜ್ಞಾನವನ್ನು ಪಠ್ಯಪುಸ್ತಕದ ಕಲಿಕೆಗೆ ಸೀಮಿತಗೊಳಿಸದೆ, ಪ್ರಯೋಗ, ಅನುಭವ ಮತ್ತು ಸಂಶೋಧನೆಯ ಮೂಲಕ ಅರ್ಥೈಸುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಉದ್ದೇಶದಿಂದ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗವು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಎರಡನೇ ಆವೃತ್ತಿಯ ‘ಅಭಿಜ್ಞ’ ವಿಜ್ಞಾನ ಕಾರ್ಯಾಗಾರವನ್ನು ಕುವೆಂಪು ಸಭಾಂಗಣದಲ್ಲಿ ಆಯೋಜಿಸಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ವಿಜ್ಞಾನವು ಕುತೂಹಲದಿಂದ ಕಲಿಯಬಹುದಾದ, ಪ್ರಯೋಗದ ಮೂಲಕ ಅರ್ಥಮಾಡಿಕೊಳ್ಳಬಹುದಾದ ಮತ್ತು ನೈಜ ಜೀವನದೊಂದಿಗೆ ಸಂಪರ್ಕ ಹೊಂದಿರುವ ಕ್ಷೇತ್ರವಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿಜ್ಞಾನ ವಿಭಾಗಗಳತ್ತ ಬರಬೇಕು. ವಿಜ್ಞಾನ ಶಿಕ್ಷಣ ಮತ್ತು ಸಂಶೋಧನೆ ಬಲಗೊಂಡಾಗ ದೇಶದ ಪ್ರಗತಿಗೂ ವೇಗ ದೊರೆಯುತ್ತದೆ. ವಿಜ್ಞಾನ ಬೆಳೆಯಬೇಕು, ದೇಶವೂ ಬೆಳೆಯಬೇಕು ಎಂದರು. ವಿಜ್ಞಾನ ಸೇರಿದಂತೆ ಯಾವುದೇ ಕ್ಷೇತ್ರವನ್ನು ಒತ್ತಾಯ ಅಥವಾ ಸಾಮಾಜಿಕ ಒತ್ತಡದಿಂದ ಆಯ್ಕೆ ಮಾಡಬಾರದು. ಆಸಕ್ತಿ ಮತ್ತು ಉತ್ಸಾಹ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ ಹೊಸತನವನ್ನು ಹುಡುಕಬಹುದು. ಸ್ಥಾಪಿತ ಮಾದರಿಯನ್ನೇ ಅನುಸರಿಸುತ್ತಾ ಹೋಗಬೇಡಿ. ನಿಮ್ಮದೇ ಆದ ದಾರಿಯನ್ನು ಕಂಡುಕೊಳ್ಳಿ. ಯಾವುದೇ ಕೋರ್ಸ್ ನಿಮಗೆ ಉದ್ಯೋಗವನ್ನು ಸೃಷ್ಟಿಸಿಕೊಡುವುದಿಲ್ಲ. ನೀವು ಕಲಿಯುವ ಕೋರ್ಸ್ ಗೆ ನಿಮ್ಮ ಜ್ಞಾನ, ಕೌಶಲ್ಯ ಮತ್ತು ಉದ್ದೇಶದ ಮೂಲಕ ಅರ್ಥ ನೀಡಬೇಕು. ಶಿಕ್ಷಣವು ಉದ್ದೇಶಪೂರ್ಣವಾಗಿರಬೇಕು ಎಂದರು. ಕಾರ್ಯಾಗಾರ ಮುಖ್ಯ ಸಂಪನ್ಮೂಲ ವ್ಯಕ್ತಿಯ ನೆಲೆಯಲ್ಲಿ ಮಾತನಾಡಿದ ಸುರತ್ಕಲ್‌ನ ಎನ್‌ಐಟಿಕೆಯ ರಸಾಯನಾಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಅರುಣ್ ಎಂ ಇಸ್ಲೂರ್, ಮೈಕ್ರೋಪ್ಲಾಸ್ಟಿಕ್ ಮಾಲಿನ್ಯವು ಪ್ರಸ್ತುತ ಜಗತ್ತು ಎದುರಿಸುತ್ತಿರುವ ಪ್ರಮುಖ ಪರಿಸರ ಸವಾಲುಗಳಲ್ಲಿ ಒಂದಾಗಿದೆ. ಪರಿಸರದಲ್ಲಿ ಹೆಚ್ಚುತ್ತಿರುವ ಮೈಕ್ರೋಪ್ಲಾಸ್ಟಿಕ್‌ನ ಪರಿಣಾಮಗಳು ಮಾನವ ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ವೈಜ್ಞಾನಿಕ ಅಧ್ಯಯನ ಮತ್ತು ಜಾಗೃತಿ ಅಗತ್ಯವಿದೆ ಎಂದು ಹೇಳಿದರು. ವಿಜ್ಞಾನವು ಭವಿಷ್ಯ ರೂಪಿಸುವ ಅನೇಕ ಕ್ಷೇತ್ರಗಳಿಗೆ ದಾರಿ ಮಾಡಿಕೊಡುವುದರಿಂದ ವಿದ್ಯಾರ್ಥಿಗಳು ವಿಜ್ಞಾನವನ್ನು ಭಯದಿಂದ, ಒತ್ತಾಯದಿಂದ ಅಥವಾ ಇತರರನ್ನು ಅನುಸರಿಸಿ ಆಯ್ಕೆ ಮಾಡದೆ, ತಮ್ಮ ಆಸಕ್ತಿ, ಸಾಮರ್ಥ್ಯ ಮತ್ತು ಭವಿಷ್ಯದ ಅವಕಾಶಗಳನ್ನು ಅರಿತುಕೊಂಡು ಆಯ್ಕೆ ಮಾಡಬೇಕು ಎಂದರು. ಒಂಬತ್ತು ವಿಜ್ಞಾನ ವಿಭಾಗಗಳಲ್ಲಿ ಪ್ರಾಯೋಗಿಕ ಕಲಿಕೆ ಕಾರ್ಯಾಗಾರದ ಅಂಗವಾಗಿ ವಿದ್ಯಾರ್ಥಿಗಳಿಗೆ ಆಳ್ವಾಸ್ ಕಾಲೇಜಿನ ವಿವಿಧ ವಿಜ್ಞಾನ ವಿಭಾಗಗಳಲ್ಲಿ ಹ್ಯಾಂಡ್ಸ್-ಆನ್ ತರಬೇತಿ ನೀಡಲಾಯಿತು. ಜೈವಿಕ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಸೂಕ್ಷ್ಮಜೀವಶಾಸ್ತ್ರ, ಜೈವಿಕ ತಂತ್ರಜ್ಞಾನ, ರಸಾಯನಶಾಸ್ತ್ರ, ಭೌತಶಾಸ್ತ್ರ, ಗಣಿತ ಹಾಗೂ ಸಂಖ್ಯಾಶಾಸ್ತ್ರ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಪ್ರಾಯೋಗಿಕ ಚಟುವಟಿಕೆಗಳಲ್ಲಿ ಭಾಗವಹಿಸಿದರು. ಕಾರ್ಯಗಾರದಲ್ಲಿ ಅವಿಭಜಿತ ದಕ್ಷಿಣ ಕನ್ನಡದ ವಿವಿಧ ಶಿಕ್ಷಣ ಸಂಸ್ಥೆಗಳಿಂದ 212 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ವಿಜ್ಞಾನ ವಿಭಾಗದ ಡೀನ್ ರಮ್ಯಾ ರೈ ವಿದ್ಯಾರ್ಥಿ ಸಂಯೋಜಕರಾದ ತೇಜಸ್ ಡಿ. ಪೂಜಾರಿ ಹಾಗೂ ಗಣೇಶ್ ಹೆಗಡೆ ಉಪಸ್ಥಿತರಿದ್ದರು. ಉಪನ್ಯಾಸಕರಾದ ಪವಿತ್ರಾ ಹಾಗೂ ನಿಶಾ ಕೆ. ಎಂ ಕಾರ್ಯಕ್ರಮ ಸಂಯೋಜಿಸಿದರು. ತೇಜಸ್ ಡಿ. ಪೂಜಾರಿ ಸ್ವಾಗತಿಸಿ, ಖುಷಿ ಮಣ್ಣೂರು ನಿರೂಪಿಸಿದರು.

ಎಕ್ಸಲೆಂಟ್ ವಿದ್ಯಾರ್ಥಿಗಳ ಸಾಧನೆ

Article Image

ಎಕ್ಸಲೆಂಟ್ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಕರ್ನಾಟಕ ವಿದ್ಯಾರ್ಥಿ ಪರಿಷತ್ತು ಆಯೋಜಿಸಿದ್ದ ರಾಜ್ಯಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಶ್ಮಿತಾ ಶೆಟ್ಟಿ ಅವರು ಪ್ರಥಮ ಸ್ಥಾನವನ್ನು ಮತ್ತು ರಾಜ್ಯಮಟ್ಟದ ಹಿಂದಿ ಪ್ರಬಂಧ ಸ್ಪರ್ಧೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾಮೃತ ಅವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಧರ್ಮಸ್ಥಳ: 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ

Article Image

ಧರ್ಮಸ್ಥಳ: 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ ಕಾರ್ಯದರ್ಶಿ ಎ. ವೀರು ಶೆಟ್ಟಿ ಮಾತನಾಡಿ, ತಾಲೂಕು ಹಾಗೂ ವಲಯ ಭಜನಾ ಪರಿಷತ್‌ಗಳ ಮೂಲಕ ಬೇಸಿಗೆ ರಜೆಯಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ, ಕಾನೂನು ಮಾಹಿತಿ ಮತ್ತು ಆರೋಗ್ಯ ಶಿಬಿರ, ಭಜನೋತ್ಸವ, ಮನೆ-ಮನೆ ಭಜನೆ, ಸತ್ಸಂಗ, ಶ್ರಮದಾನ, ಸ್ವಚ್ಛತಾ ಕಾರ್ಯಕ್ರಮ, ರಾಷ್ಟ್ರೀಯ ದಿನಾಚರಣೆ ಹಾಗೂ ಹಬ್ಬ-ಹರಿದಿನಗಳ ಆಚರಣೆ ಸೇರಿದಂತೆ ಹಲವು ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. “ಭಜನಾ ಪರಿಷತ್‌ನ ಚಟುವಟಿಕೆಗಳು ಸಮಾಜದಲ್ಲಿ ಧಾರ್ಮಿಕ ಜಾಗೃತಿ ಹಾಗೂ ಸಂಸ್ಕಾರಯುತ ಪರಿವರ್ತನೆಗೆ ಕಾರಣವಾಗಿವೆ. ಈ ವರ್ಷದ ಭಜನಾ ಕಮ್ಮಟದ ಪೂರ್ವತಯಾರಿಗಳು ರಾಜ್ಯದಾದ್ಯಂತ ಉತ್ತಮವಾಗಿ ನಡೆಯುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ” ಎಂದು ಅವರು ತಿಳಿಸಿದರು. ಕಮ್ಮಟದ ಸಂಚಾಲಕ ಜಿ. ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದಾದ್ಯಂತ ಭಜನಾ ಪರಿಷತ್ ಮೂಲಕ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಭಜನಾ ತರಬೇತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಈಗಾಗಲೇ ರಾಜ್ಯ ಭಜನಾ ಪರಿಷತ್ ಪದಾಧಿಕಾರಿಗಳ ಸಭೆ ನಡೆಸಲಾಗಿದೆ ಎಂದರು. 28ನೇ ವರ್ಷದ ಭಜನಾ ಕಮ್ಮಟದ ಶಿಬಿರಾರ್ಥಿಗಳ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದೊಂದಿಗೆ ತಾಲೂಕು ಮಟ್ಟದಲ್ಲಿ ಭಜನಾ ಪರಿಷತ್ ಸಭೆಗಳು ನಡೆಯುತ್ತಿವೆ. ಸೆಪ್ಟೆಂಬರ್ 27ರಂದು ಮಧ್ಯಾಹ್ನ 2.30ರಿಂದ ಶಿಬಿರಾರ್ಥಿಗಳ ನೋಂದಣಿ ಆರಂಭವಾಗಲಿದೆ ಎಂದು ತಿಳಿಸಿದರು. ಕಮ್ಮಟದ ವಸತಿ ವ್ಯವಸ್ಥೆ, ಉದ್ಘಾಟನಾ ಸಮಾರಂಭ, ನಗರ ಭಜನೆ, ಸಾಧಕ ಭಜನಾ ಮಂಡಳಿಗಳ ಆಯ್ಕೆ, ಸಂಪನ್ಮೂಲ ವ್ಯಕ್ತಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಅಕ್ಟೋಬರ್ 4ರಂದು ನಡೆಯಲಿರುವ ಭಜನೋತ್ಸವ ಮತ್ತು ಸಮಾರೋಪ ಸಮಾರಂಭದ ಸಿದ್ಧತೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ವಿವಿಧ ಜವಾಬ್ದಾರಿಗಳ ನಿರ್ವಹಣೆಗೆ ಪೂರಕ ಸಮಿತಿಗಳನ್ನು ರಚಿಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಭಜನಾ ಪರಿಷತ್ ರಾಜ್ಯಾಧ್ಯಕ್ಷ ಪಿ. ಚಂದ್ರಶೇಖರ ಸಾಲ್ಯಾನ್ ವಹಿಸಿದ್ದರು. ವೇದಿಕೆಯಲ್ಲಿ ಸೀತಾರಾಮ ತೋಳ್ಪಾಡಿತ್ತಾಯ, ಬಿ. ಭುಜಬಲಿ, ಲಕ್ಷ್ಮೀನಾರಾಯಣ ರಾವ್, ಪಾರ್ಶ್ವನಾಥ್ ಜೈನ್, ಮಹಾವೀರ ಅಜ್ರಿ, ಕೇಶವ ಪಿ., ಡಾ. ಶಶಿಕಾಂತ್ ಜೈನ್, ರತ್ನವರ್ಮ ಜೈನ್ ಹಾಗೂ ಶ್ರೀ ನಿವಾಸ ರಾವ್ ಉಪಸ್ಥಿತರಿದ್ದರು. ಭಜನಾ ಕಮ್ಮಟದ ವಿವಿಧ ಉಪಸಮಿತಿಗಳ ಪ್ರಮುಖರು, ಊರಿನ ಮಹನೀಯರು ಹಾಗೂ ಕನ್ಯಾಕುಮಾರಿ ಯುವತಿ ಮಂಡಲದ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಪವಿತ್ರ ಸುನಿಲ್ ಸ್ವಾಗತಿಸಿದರು. ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಇಂಡಿಯನ್ ಆರ್ಥೊಡಾಂಟಿಕ್ ಸೊಸೈಟಿಯ ರಾಷ್ಟ್ರೀಯ ಕಾರ್ಯಕ್ರಮ

Article Image

ಇಂಡಿಯನ್ ಆರ್ಥೊಡಾಂಟಿಕ್ ಸೊಸೈಟಿಯ ರಾಷ್ಟ್ರೀಯ ಕಾರ್ಯಕ್ರಮ

ಎಸ್.ಡಿ.ಎಂ. ದಂತ ಮಹಾವಿದ್ಯಾಲಯದ ಕೃತಕ ದಂತ ವಿಭಾಗ ಮತ್ತು ಹುಬ್ಬಳ್ಳಿ-ಧಾರವಾಡ ಕೃತಕ ದಂತ ತಜ್ಞರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಇಂಡಿಯನ್ ಆರ್ಥೊಡಾಂಟಿಕ್ ಸೊಸೈಟಿಯ ರಾಷ್ಟ್ರೀಯ ಕಾರ್ಯಕ್ರಮವಾದ ಐ.ಓ.ಎಸ್.- ಎಸ್.ಡಿ.ಎಂ. ಆರ್ಥೋಟೆಕ್ -2026 ಅನ್ನು ಆಗಸ್ಟ್ 17 ಮತ್ತು 18 ರಂದು ಎರಡು ದಿನಗಳ ಡಿಜಿಟಲ್ ಆರ್ಥೊಡಾಂಟಿಕ್ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಭಾರತದಾದ್ಯಂತ ಸುಮಾರು 100ಕ್ಕೂ ಹೆಚ್ಚು ಹಿರಿಯ ದಂತ ವೈದ್ಯರು, ಶಿಕ್ಷಕರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಡಾ. ಶ್ರೀದೇವಿ ಪದ್ಮನಾಭನ್, ಅಧ್ಯಕ್ಷರು, ಇಂಡಿಯನ್ ಆರ್ಥೊಡಾಂಟಿಕ್ ಸೊಸೈಟಿ ಮತ್ತು ಗೌರವಾನ್ವಿತ ಅತಿಥಿಗಳಾದ ವಿ. ಜೀವಂಧರ್ ಕುಮಾರ್, ಸಹ ಉಪ ಕುಲಪತಿಗಳು, ಎಸ್.ಡಿ.ಎಂ. ವಿಶ್ವವಿದ್ಯಾಲಯ ಮತ್ತಿತರ ಗಣ್ಯರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಡಾ. ಬಲರಾಮ್ ನಾಯ್ಕ್, ಪ್ರಾಂಶುಪಾಲರು, ಎಸ್.ಡಿ.ಎಂ. ಡೆಂಟಲ್ ಕಾಲೇಜು, ಡಾ. ರೂಪಕ್ ನಾಯಕ್, ಮುಖ್ಯಸ್ಥರು, ಆರ್ಥೊಡಾಂಟಿಕ್ಸ್ ವಿಭಾಗ ಮತ್ತು ಸಂಘಟನಾ ಕಾರ್ಯದರ್ಶಿ ಡಾ. ಅನುಪಮಾ ವಿ. ಅವರು ಉಪಸ್ಥಿತರಿದ್ದರು. ವೈಜ್ಞಾನಿಕ ಸಮಿತಿಯ ಅಧ್ಯಕ್ಷರಾದ ಡಾ. ಹರ್ಷವರ್ಧನ್ ಕಿದಿಯೂರ್ ಅತಿಥಿಗಳನ್ನು ಸ್ವಾಗತಿಸಿದರು. ಹುಬ್ಬಳ್ಳಿ-ಧಾರವಾಡ ಕೃತಕ ದಂತ ತಜ್ಞರ ಅಧ್ಯಯನ ಕೇಂದ್ರದ ಸಂಚಾಲಕರಾದ ಡಾ. ಸಂಗಮೇಶ್ ಬಿ. ಅವರು ವಂದನಾರ್ಪಣೆ ಸಲ್ಲಿಸಿದರು.

ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ 2026

Article Image

ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ 2026

ಮೂಡುಬಿದಿರೆ: ಬೆಂಗಳೂರಿನ ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ (ರಿ.)ಯ ವತಿಯಿಂದ ನಡೆದ ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 15 ಚಿನ್ನ, 08 ಬೆಳ್ಳಿ, 10 ಕಂಚು ಒಟ್ಟು 33 ಪದಕಗಳು ಹಾಗೂ 04 ನೂತನ ಕೂಟ ದಾಖಲೆಯನ್ನು ನಿರ್ಮಿಸಿದ್ದಾರೆ. ನೂತನ ಕೂಟ ದಾಖಲೆಗಳು: 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಸುಭಾಷ್ (ಟ್ರಯಥ್ಲಾನ್ ಸಿ)ನಲ್ಲಿ, 18 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಸಾಹಿಲ್ (100ಮೀ)ನಲ್ಲಿ, 16 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ರಾಜು (60ಮೀ)ನಲ್ಲಿ ಹಾಗೂ 18 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಬಾನವಿ (400ಮೀ)ನಲ್ಲಿ ನೂತನ ಕೂಟ ದಾಖಲೆಯನ್ನು ನಿರ್ಮಿಸಿದ್ದಾರೆ. ಫಲಿತಾಂಶ : 14 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಸುಭಾಷ್ - ಟ್ರಯಥ್ಲಾನ್ ಸಿ (ಪ್ರಥಮ), ಮೋಕ್ಷಿತ್ ಆರ್ ಗೌಡ - ಟ್ರಯಥ್ಲಾನ್-ಬಿ (ದ್ವಿತೀಯ) 16 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಕೌಶಿಕ್ ಪಿ ಶೆಟ್ಟಿಗಾರ್– 80ಮೀ ಹರ್ಡಲ್ಸ್ (ಪ್ರಥಮ), ಉದ್ದ ಜಿಗಿತ (ತೃತೀಯ), ಹರ್ಷದ್ ಗೌಡ - ಉದ್ದ ಜಿಗಿತ (ದ್ವಿತೀಯ), ಆದರ್ಶ್ – 60 ಮೀ (ತೃತೀಯ), ರಾಜು – 60 ಮೀ (ಪ್ರಥಮ), 80ಮೀ ಹರ್ಡಲ್ಸ್ (ದ್ವಿತೀಯ), ಅಮೂಲ್ಯ - 80ಮೀ ಹರ್ಡಲ್ಸ್ (ತೃತೀಯ), ಮೇಘಾ – 600 ಮೀ (ಪ್ರಥಮ) 18 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಸಮರ್ಥ್ – 1000ಮೀ (ಪ್ರಥಮ), ಜಶ್ವಿನ್ – ಎತ್ತರ ಜಿಗಿತ (ಪ್ರಥಮ), ಸಾಹಿಲ್ – 100ಮೀ (ಪ್ರಥಮ), ಹೆಚ್ ಮೈಲಾರಿ – ಚಕ್ರ ಎಸೆತ (ಪ್ರಥಮ), ಆಕಾಶ್ - 110ಮೀ ಹರ್ಡಲ್ಸ್ (ದ್ವಿತೀಯ), ಧನುಷ್ ಚಂದ್ರ – ಚಕ್ರ ಎಸೆತ (ತೃತೀಯ), ಕೃಷ್ಣ – ಜಾವೆಲಿನ್ ಎಸೆತ (ತೃತೀಯ), ನವೀನ್ – ಉದ್ದ ಜಿಗಿತ (ತೃತೀಯ), ಬಾನವಿ - 400ಮೀ (ಪ್ರಥಮ), 200 ಮೀ (ತೃತೀಯ), ನಾಗಿಣಿ – 1000 ಮೀ (ಪ್ರಥಮ), ಭಾಗೀರಥಿ – 3 ಕಿಮೀ ನಡಿಗೆ (ಪ್ರಥಮ), ಮಲ್ಲಮ್ಮ - 3 ಕಿಮೀ ನಡಿಗೆ (ತೃತೀಯ) 20 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ದಯಾನಂದ – 400ಮೀ (ಪ್ರಥಮ), ನೊಯಲ್ ಆರ್ ಪಿ – ಉದ್ದ ಜಿಗಿತ (ಪ್ರಥಮ), ರೂಪೇಶ್ - ಪೋಲೊವಾಲ್ಟ್ (ದ್ವಿತೀಯ), ಮಹಮ್ಮದ್ ಅಬ್ದುಲ್ - ಹ್ಯಾಮರ್ ಎಸೆತ (ದ್ವಿತೀಯ), ನಿತಿನ್ – ಚಕ್ರ ಎಸೆತ (ದ್ವಿತೀಯ), ರೀತುಶ್ರೀ – 400ಮೀ (ಪ್ರಥಮ), ನಿರ್ಮಲಾ – 100ಮೀ ಹರ್ಡಲ್ಸ್ (ತೃತೀಯ), 400ಮೀ ಹರ್ಡಲ್ಸ್ (ತೃತೀಯ), ಚರೀಷ್ಮಾ – 3000ಮೀ (ಪ್ರಥಮ), 5000ಮೀ (ದ್ವಿತೀಯ) ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

ಎಸ್.ಡಿ.ಎಂ: ಹಿರಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ

Article Image

ಎಸ್.ಡಿ.ಎಂ: ಹಿರಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ

ಉಜಿರೆ: ವಿದ್ಯೆ ಮತ್ತು ಮಾನವೀಯ ಮೌಲ್ಯಗಳಿಂದ ಸುಸಂಸ್ಕೃತ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ನಾವೂರದ ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್ ಆಟಿಕುಕ್ಕೆ ಹೇಳಿದರು. ಅವರು ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಆಯೋಜಿಸಿದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಸನ್ಮಾನಕ್ಕೆ ಕೃತಜ್ಞತೆ ವ್ಯಕ್ತಪಡಿಸಿ ಮಾತನಾಡಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಸುಧಾರಣೆ ಮಾಡಿ ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರನ್ನು ರೂಪಿಸಿವೆ. ಪಠ್ಯೇತರ ಚಟುವಟಿಕೆಗಳು ಜೀವನ ಶಿಕ್ಷಣವನ್ನು ನೀಡುತ್ತವೆ ಎಂದರು. ಶುಭಾಶಂಸನೆ ಮಾಡಿದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ರಾಯಭಾರಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸೇವೆ, ಸಾಧನೆ ಮಾಡುತ್ತಿರುವ ಬಗ್ಗೆ ಕೃತಜ್ಞತೆ ಮತ್ತು ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿದರು. ಹಿರಿಯ ವಿದ್ಯಾರ್ಥಿಗಳ ಸನ್ಮಾನ: ವೈದ್ಯರುಗಳಾಗಿ ವಿವಿಧ ಊರುಗಳಲ್ಲಿ ಸೇವೆ ಮಾಡುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಡಾ. ಪ್ರಕಾಶ್, ಉಜಿರೆ, ಡಾ. ರಾಜಾರಾಮ, ಉಪ್ಪಿನಂಗಡಿ, ಡಾ. ಎಂ.ಎ. ದಯಾಕರ, ಡಾ. ಸದಾನಂದ ಪೂಜಾರಿ, ಮಂಗಳೂರು, ಡಾ. ಶ್ರೀಹರಿ, ಗುರುವಾಯನಕೆರೆ, ಡಾ. ಪ್ರದೀಪ್ ಆಟಿಕುಕ್ಕೆ, ನಾವೂರು, ಡಾ. ಶಶಿಕಾಂತ್ ಡೋಂಗ್ರೆ, ಬೆಳ್ತಂಗಡಿ, ಡಾ. ರಂಜನ್ ಕುಮಾರ್, ಉಜಿರೆ, ಡಾ, ರೇಷ್ಮಾ, ಮೂಡಬಿದ್ರೆ ಮತ್ತು ಡಾ. ಶ್ರೀಹರ್ಷ, ಉಜಿರೆ ಅವರನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿನ ಇಪ್ಪತ್ತು ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂ. ನಂತೆ ಒಂದು ಲಕ್ಷ ರೂ. ವಿದ್ಯಾರ್ಥಿವೇತನ ವಿತರಿಸಲಾಯಿತು. ಮಧ್ಯಾಹ್ನ ಭೋಜನ ವ್ಯವಸ್ಥೆಗೆ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ದೇಣಿಗೆ ನೀಡಿದರು. ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆ ಅಧ್ಯಕ್ಷತೆ ವಹಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ ಸ್ವಾಗತಿಸಿದರು. ವಕೀಲ ಬಿ.ಕೆ. ಧನಂಜಯ ರಾವ್ ಧನ್ಯವಾದವಿತ್ತರು. ಉಪನ್ಯಾಸಕರುಗಳಾದ ದಿವಾ ಕೊಕ್ಕಡ ಮತ್ತು ದೀಕ್ಷಿತ್ ಕಾರ್ಯಕ್ರಮ ನಿರ್ವಹಿಸಿದರು.

ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

Article Image

ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಆಳ್ವಾಸ್ ಹೆಲ್ತ್ ಸೆಂಟರ್‌ನ ಸಹಯೋಗದಲ್ಲಿ ಆಳ್ವಾಸ್ ನರ್ಸಿಂಗ್ ಕಾಲೇಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಡುಬಿದಿರೆ ವಲಯ ಹಾಗೂ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿ ಸ್ತನ್ಯಪಾನದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಏಳುದಿನಗಳ ವಿಶೇಷ ಕಾರ್ಯಕ್ರಮದ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಲಾಯಿತು. ಮೊದಲ ದಿನ ಆಳ್ವಾಸ್‌ನ ಹೆರಿಗೆ ಮತ್ತು ಪ್ರಸೂತಿ ತಜ್ಞೆ ಡಾ ಶ್ರೇಯಾ ವೈದ್ಯ, ಸುಮಾರು 120 ತಾಯಂದಿರಿಗೆ ಝಮ್ ಮೀಟಿಂಗ್ ಮೂಲಕ ಮಾಹಿತಿ ಒದಗಿಸಿದರು. ಎರಡನೇ ದಿನ ಆಳ್ವಾಸ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಸ್ತನ್ಯಪಾನ ಬಗ್ಗೆ ಮಾಹಿತಿ ನೀಡುವ ದೃಶ್ಯ ಮಾಧ್ಯಮದ ವಿಡಿಯೋಗಳನ್ನು ತಯಾರಿಸಿದರು. ಮೂರನೇ ದಿನ ಗರ್ಭಿಣಿಯರ ಆಹಾರ ಪದ್ದತಿಯನ್ನು ವಿವರಿಸುವ ಸ್ಟಾಲ್‌ಗಳನ್ನು ನಿರ್ಮಿಸಿ ಮಾಹಿತಿ ನೀಡಲಾಯಿತು. ನಾಲ್ಕನೇಯ ದಿನ ಮಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಹಿತಿ ಕಾರ್ಯಗಾರ ನಡೆಸಲಾಯಿತು. ಐದನೇ ದಿನ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಮಾಹಿತಿ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಅಧಿಕಾರಿ ಎಂ.ಎಸ್. ಶ್ರೀಧರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಶೈಲಾ ಕಾರಗಿ ಇದ್ದರು. ಮಕ್ಕಳ ತಜ್ಞ ಡಾ. ದೀಪಕ್ ಪ್ರೀತೇಶ್ ಮಾಹಿತಿ ನೀಡಿದರು. ಆರನೇ ದಿನ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯಕ್ರಮ ನಡೆಸಿ ಎಲ್ಲರಿಗೂ ಮಾಹಿತಿ ನೀಡಲಾಯಿತು. ಏಳನೇ ದಿನ ಮೂಡುಬಿದಿರೆ ವಿಭಾಗದ ಎಲ್ಲಾ ಆಶಾ ಕಾರ್ಯಕರ್ತೆಯರು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಗರ್ಭಿಣಿಯರ ಮಾನಸಿಕ ಆರೋಗ್ಯದ ಕುರಿತು ಮಾಹಿತಿಯನ್ನು ಆಳ್ವಾಸ್‌ನ ಮಾನಸಿಕ ಆರೋಗ್ಯ ತಜ್ಞೆ ಡಾ.ಪ್ರಜಕ್ತ ವಿ ರಾವ್ ನೀಡಿದರು. ಗರ್ಭಿಣಿಯರ ಆಹಾರ ಪದ್ಧತಿಯನ್ನು ರಾಷ್ಟ್ರಪತಿ ಪ್ರಶಸ್ತಿ ವಿಜೇತೆ ಅನುಷಾ ಆಚಾರ್ ಹಾಗೂ ಮಡಿಲು ಹೆರಿಗೆ ಯೋಜನೆಯ ಕುರಿತು ಆಳ್ವಾಸ್‌ನ ಹೆರಿಗೆ ಮತ್ತು ಪ್ರಸೂತಿ ತಜ್ಞೆ ಡಾ. ಹನಾ ಶೆಟ್ಟಿ ನೀಡಿದರು. ಪ್ರೊ ಕವಿತಾ ಸ್ತನ್ಯಪಾನದ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ 2026ನೇ ಸಾಲಿನ ತಳಮಟ್ಟದ ನವೋದ್ಯಮ ಗೌರವಕ್ಕೆ ಪಾತ್ರರಾಗಿರುವ ಮೂಡುಬಿದಿರೆಯ ಅನುಷಾ ಪ್ರಜ್ವಲ್ ಆಚಾರ್‌ನ್ನು ಆಳ್ವಾಸ್ ಹೆಲ್ತ್ ಸೆಂಟರ್‌ ವತಿಯಿಂದ ಸನ್ಮಾನಿಸಲಾಯಿತು. ವೈದ್ಯರು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ತಾಯಂದಿರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಜ್ಞರಿಂದ ಸಲಹೆ ಮತ್ತು ಮಾರ್ಗದರ್ಶನ ಪಡೆದರು. ಆಳ್ವಾಸ್‌ನ ಹಿರಿಯ ಹೆರಿಗೆ ಮತ್ತು ಪ್ರಸೂತಿ ತಜ್ಞೆ ಡಾ. ಹನಾ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು.

ಎಕ್ಸಲೆಂಟ್: ಜಾನಪದ ರಸಪ್ರಶ್ನೆ ಕಾರ್ಯಕ್ರಮ

Article Image

ಎಕ್ಸಲೆಂಟ್: ಜಾನಪದ ರಸಪ್ರಶ್ನೆ ಕಾರ್ಯಕ್ರಮ

ಮೂಡುಬಿದಿರೆ: ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಘಟಕ ಮೂಡುಬಿದಿರೆ ತಾಲೂಕು ಘಟಕ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಜಾನಪದ ರಸಪ್ರಶ್ನೆ ಕಾರ್ಯಕ್ರಮ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಕರ್ನಾಟಕ ಜಾನಪದ ಪರಿಷತ್ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷೆ ಪದ್ಮಶ್ರೀ ಭಟ್ ನಿಡ್ಡೋಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ. ಮಂದಾರ ರಾಜೇಶ್ ಭಟ್, ಉದ್ಯಮಿ ಸದಾಶಿವ ರಾವ್, ಸಾಹಿತಿ ಸದಾನಂದ ನಾರವಿ ಹಾಗೂ ಕರ್ನಾಟಕ ಜಾನಪದ ಪರಿಷತ್ ಮೂಡುಬಿದಿರೆ ತಾಲೂಕು ಘಟಕದ ಕಾರ್ಯದರ್ಶಿ ಮಲ್ಲಿಕಾ ಸುರೇಶ್, ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ “ಜಾನಪದವು ನಮ್ಮ ಸಂಸ್ಕೃತಿಯ ಜೀವಾಳವಾಗಿದೆ. ಇಂದಿನ ವಿದ್ಯಾರ್ಥಿಗಳು ಆಧುನಿಕ ಶಿಕ್ಷಣದೊಂದಿಗೆ ನಮ್ಮ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಜಾನಪದ ಪರಂಪರೆಯ ಬಗ್ಗೆ ಅರಿವು ಹೊಂದುವುದು ಅತ್ಯಗತ್ಯ. ಜಾನಪದ ರಸಪ್ರಶ್ನೆಯಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಚಿಂತನಶಕ್ತಿ, ಆತ್ಮವಿಶ್ವಾಸ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವುದರ ಜೊತೆಗೆ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉತ್ತಮ ವೇದಿಕೆಯಾಗಿದೆ. ಇಂತಹ ಮೌಲ್ಯಯುತ ಕಾರ್ಯಕ್ರಮಗಳಿಗೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಸದಾ ಪ್ರೋತ್ಸಾಹ ನೀಡಲಿದೆ,” ಎಂದು ಹೇಳಿದರು. ಕರ್ನಾಟಕ ಜಾನಪದ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ. ಮಂದಾರ ರಾಜೇಶ್ ಭಟ್ ಮಾತನಾಡಿ, “ಜಾನಪದ ಸಾಹಿತ್ಯ ಮತ್ತು ಸಂಸ್ಕೃತಿ ನಮ್ಮ ಜೀವನದ ಬೇರುಗಳಾಗಿವೆ. ಜಾನಪದವು ಕೇವಲ ಮನರಂಜನೆಗೆ ಸೀಮಿತವಾಗದೆ ಜೀವನ ಮೌಲ್ಯಗಳು, ಸಾಮಾಜಿಕ ಅರಿವು ಹಾಗೂ ಸಂಸ್ಕೃತಿಯ ಶ್ರೀಮಂತಿಕೆಯನ್ನು ಸಾರುವ ಮಾಧ್ಯಮವಾಗಿದೆ. ವಿದ್ಯಾರ್ಥಿಗಳು ಜಾನಪದದ ಬಗ್ಗೆ ಆಸಕ್ತಿ ಬೆಳೆಸಿಕೊಂಡಾಗ ತಮ್ಮ ನೆಲ, ನುಡಿ ಮತ್ತು ಪರಂಪರೆಯ ಬಗ್ಗೆ ಹೆಮ್ಮೆ ಮೂಡುತ್ತದೆ. ಇಂತಹ ರಸಪ್ರಶ್ನೆ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಜ್ಞಾನವೃದ್ಧಿಯೊಂದಿಗೆ ಸಂಶೋಧನಾ ಮನೋಭಾವ ಮತ್ತು ಸೃಜನಶೀಲತೆಯನ್ನು ಬೆಳೆಸುತ್ತವೆ,” ಎಂದು ತಿಳಿಸಿದರು. ಕಾರ್ಯಕ್ರಮ ನಿರೂಪಕಿ ಚೇತನಾ ರಾಜೇಂದ್ರ ಹೆಗ್ಡೆ ಅವರು, “ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯವರು ಶಿಕ್ಷಣ ಕ್ಷೇತ್ರದ ಜೊತೆಗೆ ಪ್ರಾಣಿ-ಪಕ್ಷಿಗಳ ಸಂರಕ್ಷಣೆ ಹಾಗೂ ಪೋಷಣೆಯಂತಹ ಸಮಾಜಮುಖಿ ಚಿಂತನೆ ಶ್ಲಾಘನೀಯ. ವಿದ್ಯಾರ್ಥಿಗಳಲ್ಲಿ ಸಂಸ್ಕೃತಿ, ಪರಂಪರೆ ಮತ್ತು ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ಕೆ ಅವರು ನೀಡುತ್ತಿರುವ ಬೆಂಬಲಕ್ಕೆ ಕರ್ನಾಟಕ ಜಾನಪದ ಪರಿಷತ್ತಿನ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ,” ಎಂದು ಹೇಳಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗಾಗಿ ಜಾನಪದ ರಸಪ್ರಶ್ನೆ ಸ್ಪರ್ಧೆ ನಡೆಸಲಾಯಿತು. ವಿದ್ಯಾರ್ಥಿಗಳು ಅಪಾರ ಉತ್ಸಾಹದಿಂದ ಭಾಗವಹಿಸಿ ತಮ್ಮ ಜಾನಪದ ಜ್ಞಾನವನ್ನು ಪ್ರದರ್ಶಿಸಿದರು. ಕಾರ್ಯಕ್ರಮವನ್ನು ಚೇತನಾ ರಾಜೇಂದ್ರ ಹೆಗ್ಡೆ ನಿರೂಪಿಸಿದರೆ, ಸತೀಶ್ ಅಬ್ಬನಡ್ಕ ವಂದಿಸಿದರು.

ಆಳ್ವಾಸ್ ಪ್ರಗತಿ 16ನೇ ಆವೃತ್ತಿಗೆ ಚಾಲನೆ

Article Image

ಆಳ್ವಾಸ್ ಪ್ರಗತಿ 16ನೇ ಆವೃತ್ತಿಗೆ ಚಾಲನೆ

ಮೂಡುಬಿದಿರೆ: ದೇಶದ ಅತಿದೊಡ್ಡ ಉದ್ಯೋಗ ಮೇಳವೆಂದು ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ–2026’ರ 16ನೇ ಆವೃತ್ತಿಗೆ ಶುಕ್ರವಾರ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ಯುವ ಉದ್ಯೋಗಾಕಾಂಕ್ಷಿಗಳು ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು, ವೃತ್ತಿಪರ ಸಂಪರ್ಕ ಜಾಲವನ್ನು ಬೆಳೆಸಿಕೊಳ್ಳಬೇಕು ಹಾಗೂ ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣವೊಂದೇ ಇಂದಿನ ವೇಗವಾಗಿ ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಕಾಗುವುದಿಲ್ಲ. ಶಿಕ್ಷಣದ ಜೊತೆಗೆ ಕೌಶಲ್ಯವೂ ಅತ್ಯಗತ್ಯವಾಗಿದ್ದು, ಉದ್ಯೋಗ ಕ್ಷೇತ್ರದಲ್ಲಿ ಪ್ರಸ್ತುತವಾಗಿರಲು ಕೌಶಲ್ಯಗಳನ್ನು ನಿರಂತರವಾಗಿ ಉನ್ನತೀಕರಿಸಿಕೊಳ್ಳಬೇಕು. “ಶಿಕ್ಷಣ ಪಾಸ್‌ಪೋರ್ಟ್ ನಂತಿದ್ದರೆ, ಕೌಶಲ್ಯ ವೀಸಾದಂತೆ” ಎಂದು ರೂಪಕದ ಮೂಲಕ ವಿವರಿಸಿದ ಅವರು, ಯುವಜನರು ಪ್ರಾಯೋಗಿಕ ಹಾಗೂ ಉದ್ಯಮ ಕ್ಷೇತ್ರಕ್ಕೆ ಅಗತ್ಯವಾದ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳನ್ನು ಕೇವಲ ಮನರಂಜನೆಗಾಗಿ ಬಳಸದೆ, ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು, ಸಾಮರ್ಥ್ಯಗಳನ್ನು ಪರಿಚಯಿಸಿಕೊಳ್ಳಲು ಹಾಗೂ ವೃತ್ತಿಪರ ಸಂಪರ್ಕಗಳನ್ನು ಬೆಳೆಸಿಕೊಳ್ಳಲು ಪರಿಣಾಮಕಾರಿಯಾಗಿ ಬಳಸಬೇಕು ಎಂದರು. “ನೆಟ್‌ವರ್ಕ್ ಯಾವಾಗಲೂ ನೆಟ್‌ವರ್ತ್ ಆಗಿರುತ್ತದೆ” ಎಂದು ಹೇಳಿದ ಅವರು, ವೃತ್ತಿಜೀವನದ ಬೆಳವಣಿಗೆಯಲ್ಲಿ ಅರ್ಥಪೂರ್ಣ ವೃತ್ತಿಪರ ಸಂಬಂಧಗಳ ಮಹತ್ವವನ್ನು ವಿವರಿಸಿದರು. ಯುವಜನರು ಉದ್ಯೋಗಕ್ಕೆ ಸೇರಿದ ಬಳಿಕ ಸಂಸ್ಥೆಯು ತಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಸಂಸ್ಥೆಗೆ ಸೇರಿದ ನಂತರ ತಮ್ಮ ಕಾರ್ಯಕ್ಷಮತೆ, ನಡವಳಿಕೆ ಮತ್ತು ಬದ್ಧತೆಯ ಮೂಲಕ ಸಂಸ್ಥೆಯ ವಿಶ್ವಾಸವನ್ನು ಕಾಪಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕೃತಕ ಬುದ್ಧಿಮತ್ತೆ ಉದ್ಯೋಗ ಕ್ಷೇತ್ರದ ಸ್ವರೂಪವನ್ನು ವೇಗವಾಗಿ ಬದಲಾಯಿಸುತ್ತಿದ್ದು, ಅದನ್ನು ಉದ್ಯೋಗ ಕಸಿದುಕೊಳ್ಳುವ ತಂತ್ರಜ್ಞಾನವೆಂದು ಪರಿಗಣಿಸುವ ಬದಲು, ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ನೆರವಾಗುವ ಸಾಧನವಾಗಿ ನೋಡಬೇಕು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಯುವಜನರಿಗೆ ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ರಯತ್ನವನ್ನು ಶ್ಲಾಘಿಸಿದರು. ಲೋಕಸಭೆಯ ಅಧಿವೇಶನ ನಡೆಯುತ್ತಿದ್ದರೂ, ತಮ್ಮ ಕ್ಷೇತ್ರದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಉದ್ಯೋಗ ಮೇಳ ಆಯೋಜಿಸಿರುವುದಕ್ಕೆ ಮಹತ್ವ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ರೂಪಿಸಿರುವ ಈ ಮಾದರಿಯು ವಿಕಸಿತ ಭಾರತದ ನಿರ್ಮಾಣಕ್ಕೆ ಮಹತ್ವದ ಕೊಡುಗೆಯಾಗಿದೆ. ದೇಶವು ವಿಕಸಿತ ಭಾರತದ ಗುರಿಯನ್ನು ಸಾಧಿಸಬೇಕಾದರೆ, ಯುವಜನರಿಗೆ ಶಿಕ್ಷಣದ ಜೊತೆಗೆ ಉದ್ಯೋಗ ಮತ್ತು ಅವಕಾಶಗಳನ್ನು ಸೃಷ್ಟಿಸುವ ಇಂತಹ ಸಂಸ್ಥೆಗಳು ಹಾಗೂ ಉಪಕ್ರಮಗಳು ಅಗತ್ಯ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎಂಆರ್‌ಜಿ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ಶಿಕ್ಷಣದೊಂದಿಗೆ ಪ್ರಾಯೋಗಿಕ ಜ್ಞಾನ ಮತ್ತು ಸಾಮಾನ್ಯ ಜ್ಞಾನವೂ ಅತ್ಯಂತ ಅಗತ್ಯ. “ಶಿಕ್ಷಣಕ್ಕಿಂತಲೂ ಸಾಮಾನ್ಯ ಜ್ಞಾನ ಬಹಳ ಮುಖ್ಯ” ಎಂದ ಅವರು, ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುವ, ಸೂಕ್ತ ನಿರ್ಧಾರ ಕೈಗೊಳ್ಳುವ ಹಾಗೂ ಸವಾಲುಗಳಿಗೆ ಸಮರ್ಥವಾಗಿ ಪ್ರತಿಕ್ರಿಯಿಸುವ ಸಾಮರ್ಥ್ಯವನ್ನು ಯುವಜನರು ಬೆಳೆಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್, ತಮ್ಮ ಕ್ಷೇತ್ರದಲ್ಲಿ ಇಷ್ಟೊಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಆಳ್ವಾಸ್ ಪ್ರಗತಿಯ ವ್ಯಾಪ್ತಿ ವರ್ಷದಿಂದ ವರ್ಷಕ್ಕೆ ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ, ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರಿಗೆ ಈ ವ್ಯವಸ್ಥೆಯು ನಿರಂತರ ಪ್ರಯೋಜನ ದೊರೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಎಲ್ಲರ ಮೇಲಿದೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಹರೀಶ್ ಪೂಂಜಾ, ಎಸ್‌ಡಿಎಮ್ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಹಾಗೂ ಐಟಿ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರಣ್ ವರ್ಮ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧಿಯಾ, ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ ಇದ್ದರು. ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಪ್ರಾಧ್ಯಪಕಿ ಪ್ರಿಯಾ ಸಿಕ್ವೇರಾ ಅತಿಥಿಗಳನ್ನು ಪರಿಚಯಿಸಿದರು. ಆಳ್ವಾಸ್ ಪ್ರಗತಿಯ ಆರಂಭಿಕ ದಿನಗಳಲ್ಲಿ ಉದ್ಯೋಗ ಮೇಳಗಳ ಆಯೋಜನೆಗೆ ಅಮೂಲ್ಯ ಕೊಡುಗೆ ನೀಡಿದ ದಿವಂಗತ ಎ.ಕೆ. ಮಹೇಶ್ ಶೇಖರ್‌ರವರ ಸ್ಮರಣಾರ್ಥ ಉದ್ಘಾಟನಾ ವೇದಿಕೆಯನ್ನು ಸಮರ್ಪಿಸಲಾಯಿತು. ಕರಾವಳಿಯ ಸಾಧಕರಿಗೆ ಸನ್ಮಾನ ಉದ್ಘಾಟನಾ ಸಮಾರಂಭದಲ್ಲಿ ಕರಾವಳಿಯ ಉದ್ಯಮ ಹಾಗೂ ಉದ್ಯೋಗ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದ ಪ್ರಮುಖರನ್ನು ಸನ್ಮಾನಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪರವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ, ಎಂಆರ್‌ಜಿ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ಭವಾನಿ ಶಿಪ್ಪಿಂಗ್ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಕುಸುಮೋದರ ಡಿ. ಶೆಟ್ಟಿ, ಪ್ರೊವಿಟ್ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ವಿನ್ಸೆಂಟ್ ಕುಟಿನ್ಹಾ ಹಾಗೂ ಎಕ್ಸ್ಪರ್ಟೈಸ್ ಕಾಂಟ್ರಾಕ್ಟಿಂಗ್ ಕಂಪನಿಯ ಸಹ-ಸಂಸ್ಥಾಪಕ ಮೊಹಮ್ಮದ್ ಅಶ್ಫಾಕ್ ಅವರನ್ನು ಸನ್ಮಾನಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಗಾಲಿಕುರ್ಚಿಯಲ್ಲಿ ಬಂದ ಭವ್ಯಶ್ರೀಗೆ ಆಳ್ವಾಸ್ ಪ್ರಗತಿಯಲ್ಲಿ ಉದ್ಯೋಗದ ಹೊಸ ದಾರಿ ಕಳೆದ ಒಂದು ವರ್ಷದಿಂದ ಉದ್ಯೋಗಕ್ಕಾಗಿ ಕಾಯುತ್ತಿದ್ದ ಭವ್ಯಶ್ರೀ ಅವರ ನಿರೀಕ್ಷೆಗೆ ಆಳ್ವಾಸ್ ಪ್ರಗತಿ–2026 ಹೊಸ ತಿರುವು ನೀಡಿದೆ. ದೈಹಿಕ ವಿಶೇಷಚೇತನರಾಗಿರುವ ಅವರು, ತಮ್ಮ ಸಹೋದರನ ನೆರವಿನಿಂದ ಗಾಲಿಕುರ್ಚಿಯಲ್ಲಿ ಆಗಮಿಸಿ, ಉದ್ಯೋಗ ಮೇಳದಲ್ಲಿ ಭಾಗವಹಿಸಿ ಮೈಸೂರಿನ ರೆಡ್ಡೀಸ್ ಫೌಂಡೇಷನ್‌ನಲ್ಲಿ ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಭವ್ಯಶ್ರೀ, ಒಂದು ವರ್ಷದ ಹಿಂದೆ ಎಂ.ಕಾಂ ಪದವಿ ಪಡೆದಿದ್ದರು. ಪದವಿ ಪಡೆದ ಬಳಿಕ ಉದ್ಯೋಗಕ್ಕಾಗಿ ನಿರಂತರವಾಗಿ ಪ್ರಯತ್ನಿಸುತ್ತಿದ್ದರೂ, ಕಳೆದ ಒಂದು ವರ್ಷದಿಂದ ಸೂಕ್ತ ಅವಕಾಶಕ್ಕಾಗಿ ಕಾಯುತ್ತಿದ್ದರು. ಉದ್ಯೋಗದ ನಿರೀಕ್ಷೆಯೊಂದಿಗೆ ಆಳ್ವಾಸ್ ಪ್ರಗತಿಗೆ ಆಗಮಿಸಿದ ಭವ್ಯಶ್ರೀ ಅವರಿಗೆ, ದೈಹಿಕ ಸವಾಲು ಯಾವುದೂ ತಮ್ಮ ಕನಸಿಗೆ ಅಡ್ಡಿಯಾಗಲಿಲ್ಲ. ತಮ್ಮ ಸಹೋದರನ ನೆರವಿನಿಂದ ಗಾಲಿಕುರ್ಚಿಯಲ್ಲಿ ಮೇಳಕ್ಕೆ ಆಗಮಿಸಿ, ಸಂದರ್ಶನ ಎದುರಿಸಿ, ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಅಂತಿಮವಾಗಿ ಮೈಸೂರಿನ ರೆಡ್ಡೀಸ್ ಫೌಂಡೇಷನ್‌ನಲ್ಲಿ ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾಗುವ ಮೂಲಕ ತಮ್ಮ ಬಹುದಿನಗಳ ಉದ್ಯೋಗದ ಕನಸನ್ನು ನನಸಾಗಿಸಿಕೊಂಡಿದ್ದಾರೆ. ಉದ್ಯೋಗ ಸಿಕ್ಕಿರುವುದು ತುಂಬಾ ಸಂತೋಷ ತಂದಿದೆ. ಕಳೆದ ಒಂದು ವರ್ಷದಿಂದ ಉದ್ಯೋಗಕ್ಕಾಗಿ ಕಾಯುತ್ತಿದ್ದೆ. ಆಳ್ವಾಸ್ ಪ್ರಗತಿಗೆ ಬಂದು ಸಂದರ್ಶನ ಎದುರಿಸಿದ ಬಳಿಕ ನನಗೆ ಈ ಅವಕಾಶ ದೊರೆತಿದೆ. ಮೈಸೂರಿಗೆ ತೆರಳಿ ಕೆಲಸ ಮಾಡಲು ಸಿದ್ಧಳಾಗಿದ್ದೇನೆ ಎಂದು ಭವ್ಯಶ್ರೀ ಸಂತಸ ವ್ಯಕ್ತಪಡಿಸಿದರು. ಆಳ್ವಾಸ್ ಪ್ರಗತಿ 2026ರ ಮೊದಲ ದಿನದ ವಿವರ: ಆನ್‌ಲೈನ್ ನೋಂದಣಿ ಮಾಡಿಸಿದ ಉದ್ಯೋಗಾಕಾಂಕ್ಷಿಗಳು: 13247 ಸ್ಪಾಟ್ ನೋಂದಣಿ ಮಾಡಿಸಿದ ಅಭ್ಯರ್ಥಿಗಳು: 83 ಉದ್ಯೋಗ ಮೇಳಕ್ಕೆ ಆಗಮಿಸಿದ ಕಂಪನಿಗಳು: 326 ಮೊದಲ ದಿನ ಆಗಮಿಸಿದ ಉದ್ಯೋಗಾಕಾಂಕ್ಷಿಗಳು: 13016

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನಶಿಬಿರ

Article Image

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂಡಿಯನ್ ರೆಡ್‌ಕ್ರಾಸ್ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಆ.8ರಂದು ನಡೆಯಿತು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರು ಮಾತನಾಡುತ್ತಾ, ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಆಶೀರ್ವಾದಲ್ಲಿ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ ಇವರ ಮಾರ್ಗದರ್ಶನದಲ್ಲಿ ಅತ್ಯಂತ ಅವಶ್ಯವಾಗಿರುವ ರಕ್ತದಾನ ಶಿಬಿರವನ್ನು ನಿರಂತರವಾಗಿ ನಮ್ಮ ಆಸ್ಪತ್ರೆಯ ವತಿಯಿಂದ ನಡೆಸುತ್ತಿದ್ದೇವೆ. ದಾನ ಮಾಡಿದವರಿಗೂ ಅನುಕೂಲವಾಗುವ ದಾನ ಅಂದರೆ ಅದು ರಕ್ತದಾನ. ರಕ್ತದಾನ ಮಾಡಿದಾಗ ಉಚಿತವಾಗಿ ನಿಮ್ಮ ರಕ್ತದ ಪರೀಕ್ಷೆ ನಡೆಯುತ್ತದೆ. ದಾನದಿಂದಾಗಿ ನಿಮ್ಮ ಶರೀರದಲ್ಲಿ ರಕ್ತದ ಮರುಸೃಷ್ಟಿಯಾಗುತ್ತದೆ. ನೀವು ನೀಡುವ ರಕ್ತ 3-4 ಮಂದಿಗೆ ಪ್ರಯೋಜನಕ್ಕೆ ಬರುತ್ತದೆ ಎಂದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ ರಕ್ತದಾನದ ಮಹತ್ವ ವಿವರಿಸುತ್ತಾ, ಮಳೆಗಾಲದಲ್ಲಿ ಡೆಂಗ್ಯೂ ಸರ್ವೇಸಾಮಾನ್ಯ. ಡೆಂಗ್ಯೂ ಪೀಡಿತರಲ್ಲಿ ಪ್ಲೇಟ್‌ಲೆಟ್ ಕೊರತೆ ಇರುವುದರಿಂದ ಈ ಸಮಯದಲ್ಲಿ ರಕ್ತದಾನ ಹೆಚ್ಚಿನ ಮಹತ್ವ ಪಡೆಯುತ್ತದೆ ಎಂದರು. ವೈದ್ಯಕೀಯ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಮಾತನಾಡಿ ರಕ್ತದಾನ ಮಾಡುವುದರಿಂದ ರಕ್ತದಲ್ಲಿ ಹಿಮೋಗ್ಲೋಬಿನ್ ಮತ್ತು ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಣದಲ್ಲಿರುತ್ತದೆ ಎಂದರು. ನರರೋಗ ತಜ್ಞರಾದ ಡಾ| ಅರುಣ್ ಕುಮಾರ್ ಮಾತನಾಡಿ, ರಕ್ತದ ಅವಶ್ಯಕತೆ ಇರುವ ರೋಗಿಗೆ ಮತ್ತು ವೈದ್ಯರಿಗೆ ರಕ್ತದ ಮಹತ್ವ ಗೊತ್ತಿರುತ್ತದೆ. ಎಷ್ಟೋ ಬಾರಿ ವೈದ್ಯರು ರೋಗಿಯ ಜೀವ ಉಳಿಸಲು ರಕ್ತಕ್ಕಾಗಿ ಪರದಾಡಬೇಕಾಗುತ್ತದೆ ಎಂದರು. ಮಂಗಳೂರಿನ ರೆಡ್‌ಕ್ರಾಸ್ ಸಂಸ್ಥೆಯ ಟೆಕ್ನಿಕಲ್ ಸೂಪರ್‌ವೈಸರ್ ನಾಗಭೂಷನ್ ಮಾತನಾಡುತ್ತಾ, ಇನ್ನೊಬ್ಬರ ಜೀವ ಉಳಿಸಬಲ್ಲ ಉದ್ದೇಶದಿಂದ ಮಾಡುವ ರಕ್ತದಾನ ದಾನಗಳಲ್ಲಿಯೇ ಶ್ರೇಷ್ಠದಾನ. ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ನಿರಂತರವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ರಕ್ತದ ತುರ್ತು ಅವಶ್ಯಕತೆ ಇರುವ ನೂರಾರು ರೋಗಿಗಳಿಗೆ ಸಹಾಯ ಮಾಡಿದೆ ಎಂದರು. ಬ್ಲಡ್ ಸ್ಟೋರೇಜ್ ಮೆಡಿಕಲ್ ಆಫೀಸರ್ ಡಾ| ಪ್ರೌಸ್ಟಿಲ್ ರಕ್ತದಾನಿಗಳಿಗೆ ಶುಭಹಾರೈಸಿದರು. ಮಾರುಕಟ್ಟೆ ಮತ್ತು ಸಂಪರ್ಕ ಅಧಿಕಾರಿ ಭವಿಷ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಾರ್ಕೆಟಿಂಗ್ ಎಕ್ಸ್ಕ್ಯೂಟಿವ್ ಸುಮಂತ್ ರೈ ಮತ್ತು ಲ್ಯಾಬ್ ಇನ್‌ಚಾರ್ಜ್ ಮೀಣಾಕ್ಷಿ ರಮೇಶ್ ಸಹಕರಿಸಿದರು.

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ

Article Image

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ನಡೆಸುವ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಶಾಂತಿವನ ಟ್ರಸ್ಟ್ ನ ಯೋಗ ನಿರ್ದೇಶಕ ಡಾ. ಶಶಿಕಾಂತ್ ಜೈನ್ ತಿಳಿಸಿದ್ದಾರೆ. “ನಮ್ಮೂರ ಸಂತೆ” ಎಂಬ ವಿಷಯದಲ್ಲಿ ಅಂಚೆ ಕಾರ್ಡ್ ನಲ್ಲಿ ಚಿತ್ರಗಳನ್ನು ರಚಿಸಿ 2027ರ ಮಾರ್ಚ್ 31ರೊಳಗೆ ಕಳುಹಿಸಬೇಕು. ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಮತ್ತು ಸಾರ್ವಜನಿಕ ವಿಭಾಗ ಎಂಬ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪ್ರೋತ್ಸಾಹಕ ಬಹುಮಾನಗಳಿರುತ್ತವೆ. ಸ್ಪರ್ಧೆಗೆ ಚಿತ್ರಗಳನ್ನು ಕಳುಹಿಸಬೇಕಾದ ವಿಳಾಸ: ನಿರ್ದೇಶಕರು, ಅಂಚೆ-ಕುಂಚ ವಿಭಾಗ, ಶಾಂತಿವನ, ಧರ್ಮಸ್ಥಳ – 574216.

ಎಸ್.ಡಿ.ಎಂ: ಪ್ರತಿಷ್ಠಿತ ಇನ್‌ಸ್ಪಾ ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ

Article Image

ಎಸ್.ಡಿ.ಎಂ: ಪ್ರತಿಷ್ಠಿತ ಇನ್‌ಸ್ಪಾ ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ

ಉಜಿರೆ: ಭಾರತೀಯ ಶಾಲಾ ಮನೋವಿಜ್ಞಾನ ಸಂಘಟನೆ (Indian School Psychology Association – INSPA) ವತಿಯಿಂದ ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ದೊರೆತ ಪ್ರತಿಷ್ಠಿತ “ಇನ್‌ಸ್ಪಾ” ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿಯನ್ನು ಚೆನ್ನೈನಲ್ಲಿ ಎನ್.ಕೆ.ಟಿ. ನೇಶನಲ್ ಮಹಿಳಾ ಕಾಲೇಜಿನಲ್ಲಿ ನಡೆದ ಹದಿನಾರನೆ “ಇನ್‌ಸ್ಪಾ” ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ವಂದನಾ ಜೈನ್ ಮತ್ತು ಉಪನ್ಯಾಸಕಿ ಅಶ್ವಿನಿ ಸ್ವೀಕರಿಸಿದರು. ಎಸ್.ಡಿ.ಎಂ. ಕಾಲೇಜಿನ ಮನೋವಿಜ್ಞಾನ ವಿಭಾಗದ ಶೈಕ್ಷಣಿಕ ಗುಣಮಟ್ಟ, ತರಬೇತಿ, ಸಂಶೋಧನಾ ಸಾಧನೆ, ವಿದ್ಯಾರ್ಥಿಕೇಂದ್ರಿತ ಚಟುವಟಿಕೆಗಳು ಹಾಗೂ ಸಮಾಜಮುಖಿ ಸೇವೆ, ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಡೀನ್ ಹಾಗೂ ಎಲ್ಲಾ ಪ್ರಾಧ್ಯಾಪಕರು ಮನೋವಿಜ್ಞಾನ ವಿಭಾಗದ ಮುಖ್ಯಸ್ಥರು ಮತ್ತು ಎಲ್ಲಾ ಪ್ರಾಧ್ಯಾಪಕರನ್ನು ಅಭಿನಂದಿಸಿದ್ದಾರೆ.

ಎಕ್ಸಲೆಂಟ್: ಡ್ರಗ್ ಅವೇರ್‌ನೆಸ್ ಕಾರ್ಯಕ್ರಮ

Article Image

ಎಕ್ಸಲೆಂಟ್: ಡ್ರಗ್ ಅವೇರ್‌ನೆಸ್ ಕಾರ್ಯಕ್ರಮ

ಮೂಡುಬಿದಿರೆ: "ವಿದ್ಯಾರ್ಥಿಗಳು ತಮ್ಮ ಸುವರ್ಣ ಭವಿಷ್ಯವನ್ನು ಸತ್ಪ್ರಜೆಗಳಾಗಿ ರೂಪಿಸಿಕೊಳ್ಳಬೇಕೆ ಹೊರತು ದುರಭ್ಯಾಸಗಳಿಗೆ ಬಲಿಯಾಗಬಾರದು. ಜೀವನವನ್ನು ಸುಂದರವಾಗಿ ಕಟ್ಟಿಕೊಳ್ಳಿ, ವ್ಯಸನವನ್ನಲ್ಲ," ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ರಾಜೇಂದ್ರ ಬಿ. ಪ್ರತಿಪಾದಿಸಿದರು. ಇಲ್ಲಿನ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಮುದಾಯವನ್ನು ಮಾದಕ ದ್ರವ್ಯಗಳ ದುಷ್ಪರಿಣಾಮದಿಂದ ದೂರವಿರಿಸಿ, ಆರೋಗ್ಯವಂತ ಹಾಗೂ ಮೌಲ್ಯಾಧಾರಿತ ಬದುಕಿನತ್ತ ಮುನ್ನಡೆಸುವ ಉದ್ದೇಶದಿಂದ ಆಯೋಜಿಸಲಾಗಿದ್ದ 'ಡ್ರಗ್ ಅವೇರ್‌ನೆಸ್' (ಮಾದಕ ವಸ್ತು ಜಾಗೃತಿ) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮಾದಕ ವಸ್ತುಗಳ ಸೇವನೆಯು ಕೇವಲ ಒಬ್ಬ ವ್ಯಕ್ತಿಯ ಬದುಕನ್ನು ಮಾತ್ರವಲ್ಲದೆ, ಆತನ ಕುಟುಂಬದ ನೆಮ್ಮದಿ ಮತ್ತು ಇಡೀ ಸಮಾಜದ ಶಾಂತಿಯನ್ನೇ ಕದಡುವ ಗಂಭೀರ ಪಿಡುಗಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. "ಕ್ಷಣಿಕ ಕುತೂಹಲ ಅಥವಾ ಕೆಟ್ಟ ಸ್ನೇಹಿತರ ಸಂಗದಿಂದ ಆರಂಭವಾಗುವ ಸಣ್ಣ ಅಭ್ಯಾಸ, ಇಡೀ ಜೀವನದ ದಿಕ್ಕನ್ನೇ ಹಾಳುಗೆಡವಬಲ್ಲದು. ಶೈಕ್ಷಣಿಕವಾಗಿ ಬೆಳೆಯಲು ನಿಮ್ಮ ಮುಂದೆ ಹತ್ತಾರು ಸನ್ಮಾರ್ಗದ ಆಯ್ಕೆಗಳಿವೆ. ಹೀಗಾಗಿ ವಿದ್ಯಾರ್ಥಿಗಳು ಸೂಕ್ತ ಕಾನೂನಿನ ಅರಿವು, ಆತ್ಮ ಸಂಯಮ ಹಾಗೂ ಉತ್ತಮ ಜೀವನಮೌಲ್ಯಗಳನ್ನು ಮೈಗೂಡಿಸಿಕೊಂಡು ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು," ಎಂದು ರಾಜೇಂದ್ರ ಬಿ. ಯುವಜನತೆಗೆ ಕಿವಿಮಾತು ಹೇಳಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಮುಲ್ಕಿ ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ ನಾಯಕ್, ಯುವಜನತೆಯನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳ ಜಾಲ ವಿಸ್ತರಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ಎಚ್ಚರಿಕೆಯ ಮನೋಭಾವ ಬೆಳೆಸಿಕೊಂಡು, ಸಂಶಯಾಸ್ಪದ ಚಟುವಟಿಕೆಗಳ ಬಗ್ಗೆ ನಿರ್ಭಯವಾಗಿ ಮಾಹಿತಿ ನೀಡುವ ಜವಾಬ್ದಾರಿಯುತ ನಾಗರಿಕನಾಗಬೇಕು ಎಂದು ಅವರು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಜೀವ ದೇವರ ಕೊಡುಗೆ; ಜೀವನ ನಮ್ಮ ಸಾಧನೆ. ಜೀವವನ್ನು ಕಾಪಾಡಿ, ಜೀವನವನ್ನು ಸಾರ್ಥಕಗೊಳಿಸಿ. ಜೀವ ಅಮೂಲ್ಯ; ಜೀವನ ಅದಕ್ಕಿಂತಲೂ ಅಮೂಲ್ಯವಾದ ಹೊಣೆಗಾರಿಕೆ. ಶಿಕ್ಷಣದ ನಿಜವಾದ ಉದ್ದೇಶ ಕೇವಲ ಶೈಕ್ಷಣಿಕ ಸಾಧನೆಯಲ್ಲ; ಉತ್ತಮ ವ್ಯಕ್ತಿತ್ವ, ಸಾಮಾಜಿಕ ಬದ್ಧತೆ ಹಾಗೂ ರಾಷ್ಟ್ರಪ್ರಜ್ಞೆಯುಳ್ಳ ಯುವಜನರನ್ನು ರೂಪಿಸುವುದಾಗಿದೆ ಎಂದು ಹೇಳಿದರು. ಜ್ಞಾನ, ಸಂಸ್ಕಾರ ಮತ್ತು ಶಿಸ್ತಿನ ಸಮನ್ವಯವೇ ವಿದ್ಯಾರ್ಥಿಯ ಬದುಕಿನ ನಿಜವಾದ ಯಶಸ್ಸಿನ ಮಾನದಂಡ ಎಂದು ಅವರು ಅಭಿಪ್ರಾಯಪಟ್ಟರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಕೆರಿಯರ್ ಗೈಡೆನ್ಸ್ ತಜ್ಞ ವಿವೇಕ್ ಭಂಡಾರಿ, ಹಾಗೂ ಪ್ರಾಂಶುಪಾಲ ಪುಷ್ಪರಾಜ್ ಉಪಸ್ಥಿತರಿದ್ದರು. ಉಪನ್ಯಾಸಕಿ ಮಂಜುಶ್ರೀ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಪ್ರಿಯಾಂಕ ವಂದಿಸಿದರು.

ಎಸ್‌ಡಿಎಂ ಐಟಿಐ: 41ನೇ ಬ್ಯಾಚ್‌ಗೆ ಚಾಲನೆ

Article Image

ಎಸ್‌ಡಿಎಂ ಐಟಿಐ: 41ನೇ ಬ್ಯಾಚ್‌ಗೆ ಚಾಲನೆ

ವೇಣೂರು, ಆ. 3: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ (ಎಸ್‌ಡಿಎಂ ಐಟಿಐ), ವೇಣೂರಿನ 41ನೇ ಬ್ಯಾಚ್‌ನ ಉದ್ಘಾಟನಾ ಸಮಾರಂಭ ಸೋಮವಾರ ಸಂಸ್ಥೆಯ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಕ್ಷೇಮವನ, ಬೆಂಗಳೂರು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರದ್ಧಾ ಅಮಿತ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, “ಎಸ್‌ಡಿಎಂ ಐಟಿಐಯ ವಿದ್ಯಾರ್ಥಿಗಳು ಶಿಸ್ತು, ಸಮಯಪಾಲನೆ ಮತ್ತು ಉತ್ತಮ ಕಾರ್ಯಕ್ಷಮತೆಗೆ ಹೆಸರುವಾಸಿಯಾಗಿದ್ದಾರೆ. ಉದ್ಯಮಗಳಲ್ಲಿ ಉತ್ತಮ ಕೆಲಸಗಾರರಾಗಿ ಗುರುತಿಸಿಕೊಂಡಿರುವ ಈ ಸಂಸ್ಥೆಯ ವಿದ್ಯಾರ್ಥಿಗಳು ತಮ್ಮ ಗುಣಮಟ್ಟವನ್ನು ಸದಾ ಉಳಿಸಿಕೊಳ್ಳಬೇಕು” ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುರಕ್ಷಾ ಕರಿಯರ್ ಅಕಾಡೆಮಿ, ಬೆಂಗಳೂರು ವ್ಯವಸ್ಥಾಪಕ ನಿರ್ದೇಶಕ ರಾಮಪ್ರಸಾದ್ ರೈ ರವರು ಮಾತನಾಡಿ, "ಭವಿಷ್ಯದ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ತಾಂತ್ರಿಕ ಕೌಶಲ್ಯ ಅತ್ಯಂತ ಮುಖ್ಯ. ವೃತ್ತಿ ಜೀವನದ ಆರಂಭದ ವರ್ಷಗಳಲ್ಲಿ ಸಂಬಳದ ಬಗ್ಗೆ ಹೆಚ್ಚು ಗಮನ ಹರಿಸದೆ, ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳುವುದರತ್ತ ಹೆಚ್ಚಿನ ಒತ್ತು ನೀಡಬೇಕು. ಕೌಶಲ್ಯ ಇದ್ದರೆ ಉತ್ತಮ ಅವಕಾಶಗಳು ಮತ್ತು ಉತ್ತಮ ಸಂಬಳ ತಾನಾಗಿಯೇ ದೊರೆಯುತ್ತವೆ' ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಪದ್ಮಂಭ ಗ್ರೂಪ್, ವೇಣೂರು ಸಂಸ್ಥೆಯ ಮಾಲೀಕರಾದ ಜಿನರಾಜ್ ಜೈನ್ ಉಪಸ್ಥಿತರಿದ್ದು, ವಿದ್ಯಾರ್ಥಿಗಳು ಕೇವಲ ಉದ್ಯೋಗವನ್ನು ಹುಡುಕುವವರಾಗದೆ, ಸ್ವಯಂ ಉದ್ಯೋಗ ಆರಂಭಿಸಿ ಇತರರಿಗೂ ಉದ್ಯೋಗ ನೀಡುವ ಉದ್ಯಮಿಗಳಾಗಿ ಬೆಳೆಯಬೇಕು. ಸಮಾಜಕ್ಕೆ ಉದ್ಯೋಗ ಸೃಷ್ಟಿಸುವ ಜವಾಬ್ದಾರಿಯನ್ನು ಯುವಕರು ವಹಿಸಬೇಕು” ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ವಿಶ್ವೇಶ್ವರ ಪ್ರಸಾದ್ ಕೆ.ಆರ್. ಮಾತನಾಡಿ, 'ಎಸ್‌ಡಿಎಂ ಐಟಿಐ ಶಿಸ್ತು, ಗುಣಮಟ್ಟದ ತಾಂತ್ರಿಕ ಶಿಕ್ಷಣ ಹಾಗೂ ಅತ್ಯುತ್ತಮ ಕ್ಯಾಂಪಸ್ ನೇಮಕಾತಿಗೆ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳು ಶಿಸ್ತು, ಕೌಶಲ್ಯ ಮತ್ತು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡರೆ ದೇಶದ ಯಾವುದೇ ಉದ್ಯಮದಲ್ಲಿ ಯಶಸ್ಸು ಸಾಧಿಸಲು ಸಾಧ್ಯ” ಎಂದು ಹೇಳಿದರು. ಕಾರ್ಯಕ್ರಮದ ಆರಂಭದಲ್ಲಿ ಪ್ರಸನ್ನಕುಮಾರ್ ಪ್ರಾರ್ಥಿಸಿ, ರತ್ನಾಕರ ರಾವ್ ಎಚ್. ರವರು ಸ್ವಾಗತಿಸಿ ಸಂಸ್ಥೆಯ ಸಾಧನೆಗಳನ್ನು ಪರಿಚಯಿಸಿದರು. ಪದ್ಮಪ್ರಸಾದ್ ಬಸ್ತಿರವರು ಕಾರ್ಯಕ್ರಮವನ್ನು ನಿರೂಪಿಸಿದರು. ಸತೀಶ್ ರವರು ವಂದನಾರ್ಪಣೆ ಸಲ್ಲಿಸಿದರು.

ಮೂಡುಬಿದಿರೆ: ಕೋ-ಆಪರೇಟಿವ್ ಸರ್ವಿಸ್ ಸೊಸೈಟಿ ವತಿಯಿಂದ ವಿಭಿನ್ನ ಕಾರ್ಯಕ್ರಮ

Article Image

ಮೂಡುಬಿದಿರೆ: ಕೋ-ಆಪರೇಟಿವ್ ಸರ್ವಿಸ್ ಸೊಸೈಟಿ ವತಿಯಿಂದ ವಿಭಿನ್ನ ಕಾರ್ಯಕ್ರಮ

ಮೂಡುಬಿದಿರೆ ಕೋ-ಆಪರೇಟಿವ್ ಸರ್ವಿಸ್ ಸೊಸೈಟಿ ,ಇದರ ಮಹಾಸಭೆಯನ್ನು ಸಂಪೂರ್ಣವಾಗಿ ಶೂನ್ಯತ್ಯಾಜ್ಯ ಮಾದರಿಯಲ್ಲಿ ಅಳವಡಿಸಿ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಮಾರು 10 ಸಾವಿರ ಮಂದಿಗೆ ಉಪಹಾರದ ವ್ಯವಸ್ಥೆಯನ್ನು ಪರಿಸರ ಸ್ನೇಹಿ ಮಾದರಿಯಾಗಿಸಲಾಗಿತ್ತು. ಇಲ್ಲಿ ಯಾವುದೇ ಟಿಶ್ಯು ಪೇಪರ್, ಏಕ ಬಳಕೆಯ ಪೇಪರ್ ಅಥವಾ ಪ್ಲಾಸ್ಟಿಕ್ ಕಪ್ ಹಾಗೂ ಪ್ಲೇಟ್ಗಳು ಹಾಗೆಯೇ ಚಮಚಗಳನ್ನು ಬಳಸದೆ ಮರುಬಳಕೆಯ ತಟ್ಟೆ ಲೋಟಗಳ ಸಹಾಯದಿಂದ ಬಂದ ಎಲ್ಲ ಮಂದಿಗೆ ಉಪಹಾರದ ಏರ್ಪಾಡನ್ನು ಶುಚಿರುಚಿಯಾಗಿ ಮಾಡುತ್ತಾ ತ್ಯಾಜ್ಯ ನಿರ್ವಹಣೆಯನ್ನು ಕೂಡ ಸರಿಯಾಗಿ ನಿಭಾಯಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಏಕ ಬಳಕೆಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಬಳಸದೇ ಎಲ್ಲಾ ಸದಸ್ಯರಿಗೆ ಕೊಡುಗೆಯಾಗಿ ಸ್ಟೀಲ್ ಬಾಟಲ್ ಅನ್ನು ನೀಡಲಾಯಿತು. ಸುಮಾರು 10 ಸಾವಿರ ಏಕ ಬಳಕೆಯ ಟಿಶ್ಯೂ ಪೇಪರ್, ತಟ್ಟೆ ,ಲೋಟ, ಚಮಚ, ಕ್ಯಾರಿ ಬ್ಯಾಗ್ ಗಳ ನಿಯಂತ್ರಣಕ್ಕೆ ನಾಂದಿ ಹಾಡಲಾಯಿತು. ಈ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ MCS bank ನ ಅಧ್ಯಕ್ಷರಾಗಿರುವ ಎಂ ಬಾಹುಬಲಿ ಪ್ರಸಾದ್, ಹಾಗೂ ಎಲ್ಲಾ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಹಾಗೆಯೇ new padivals ನವರ ಈ ಪರಿಸರ ಸ್ನೇಹಿ ಉಪಹಾರದ ವ್ಯವಸ್ಥೆ ತುಂಬಾ ಅಚ್ಚುಕಟ್ಟಾಗಿತ್ತು.

ಕುತ್ಲೂರು: ವನಮಹೋತ್ಸವ ಕಾರ್ಯಕ್ರಮ

Article Image

ಕುತ್ಲೂರು: ವನಮಹೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಕುತ್ಲೂರು ಗ್ರಾಮದಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೂಡಬಿದ್ರೆ ಉಪವಿಭಾಗದ ಅರಣ್ಯಇಲಾಖೆ ಹಾಗೂ ಶಾಲೆಯ ವನಸಿರಿ ಪರಿಸರ ಸಂಘದ ಆಶ್ರಯದಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮವನ್ನು ಅರಣ್ಯಇಲಾಖೆಯ ಮೂಡಬಿದ್ರೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಉದ್ಘಾಟಿಸಿ ಶುಭ ಹಾರೈಸಿದರು. ಅರಣ್ಯ ಇಲಾಖೆ ವತಿಯಿಂದ ಶಾಲಾ ಆವರಣದಲ್ಲಿ ಹಣ್ಣುಗಳ ಉದ್ಯಾನ ನಿರ್ಮಿಸಿಕೊಡುವುದಾಗಿ ಅವರು ಭರವಸೆ ನೀಡಿದರು. ಶಾಲಾ ವಠಾರದಲ್ಲಿ ಗಿಡನೆಟ್ಟು ಉತ್ತಮ ರೀತಿಯಲ್ಲಿ ಬೆಳೆಸುವ ಪ್ರತಿ ವಿದ್ಯಾರ್ಥಿಗೆ ತಲಾ ಇನ್ನೂರು ರೂ. ಬಹುಮಾನ, ಶಾಲಾ ಶಿಕ್ಷಕರೊಬ್ಬರ ಮಾಸಿಕ ವೇತನ ಎಂಟು ಸಾವಿರ ರೂ. ಹಾಗೂ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ಗಳನ್ನು ತನ್ನ ವೈಯಕ್ತಿಕ ದೇಣಿಗೆಯಾಗಿ ನೀಡುವುದಾಗಿ ಅವರು ಪ್ರಕಟಿಸಿದರು. ಪರಿಸರ ಸಂರಕ್ಷಣೆಯಲ್ಲಿ ಸಂಘ-ಸಂಸ್ಥೆಗಳ ಪಾತ್ರ ಮಹತ್ವಪೂರ್ಣವಾಗಿದೆ ಎಂದು ಹೇಳಿದ ಅವರು ಶಾಲೆಯ ಪ್ರಗತಿಗೆ ಜಿಲ್ಲಾ ಪತ್ರಕರ್ತರ ಸಂಘದ ಕೊಡುಗೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಅವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್, ಬಿ.ಎನ್. ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕನಕವರ್ಮ ಜೈನ್ ಮತ್ತು ಉಪಾಧ್ಯಕ್ಷರಾದ ಶ್ವೇತಾ ಜಗದೀಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಎಸ್.ಡಿ.ಎಂ: ಚಿಗುರು ಸಂಘ ಉದ್ಘಾಟನೆ

Article Image

ಎಸ್.ಡಿ.ಎಂ: ಚಿಗುರು ಸಂಘ ಉದ್ಘಾಟನೆ

ಉಜಿರೆ: ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ 'ಚಿಗುರು ಸಂಘ’ ದ ಉದ್ಘಾಟನೆ ಮತ್ತು ನೂತನ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮ ‘ಆರಂಭ್’ ಇತ್ತೀಚೆಗೆ ನಡೆಯಿತು. 'ಮಂಜುವಾಣಿ' ಮಾಸ ಪತ್ರಿಕೆಯ ಸಂಪಾದಕರಾದ ಡಾ. ಭಾಸ್ಕರ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ವಿಭಾಗದ ಎಲ್ಲಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿದರು. ಅಲ್ಲದೆ, ಮಾಧ್ಯಮ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಬಲವಾದ ವೃತ್ತಿಪರ ಪೋರ್ಟ್‌ಫೋಲಿಯೊ ಬೆಳೆಸಿಕೊಳ್ಳುವುದು ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬರೆದು, ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದ ಲೇಖನಗಳ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ಜೊತೆಗೆ ವಿಭಾಗದ ವೈವಿಧ್ಯಮಯ ಚಟುವಟಿಕೆಗಳನ್ನು ಬಿಂಬಿಸುವ ವಿಶೇಷ ‘ಭಿತ್ತಿ ಪತ್ರಿಕೆ'ಯನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಭಾಸ್ಕರ್ ಹೆಗಡೆ ಅವರು ದ್ವಿತೀಯ ಬಿ.ಎ. ಪತ್ರಿಕೋದ್ಯಮ ವಿದ್ಯಾರ್ಥಿನಿ ರಮ್ಯಾ ಅವರಿಗೆ ವೈಯಕ್ತಿಕವಾಗಿ ವಿದ್ಯಾರ್ಥಿವೇತನ ನೀಡಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಸುನಿಲ್ ಹೆಗ್ಡೆ, ಎಸ್.ಡಿ.ಎಂ ಮಲ್ಟಿಮೀಡಿಯಾ ಸ್ಟುಡಿಯೋದ ಸೀನಿಯರ್ ಪ್ರೊಡಕ್ಷನ್ ಅಸೋಸಿಯೇಟ್ ಸಂಹಿತಾ ಎಸ್. ಮೈಸೂರೆ, 'ರೇಡಿಯೋ ನಿನಾದ 90.4' ರ ಮುಖ್ಯಸ್ಥರಾದ ವಿ. ಕೆ. ಕಡಬ, ಕಾರ್ಯಕ್ರಮ ಸಂಯೋಜಕ ಸಂತೋಷ್, ಇ – ಲೆಕ್ಚರ್ ಸಂಯೋಜಕ ಕುಮಾರೇಶ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ದೇಶದ ಮೊದಲ ಐಬಿಎಂ ಎಐ ಲ್ಯಾಬ್ ಲೋಕರ್ಪಾಣೆ

Article Image

ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ದೇಶದ ಮೊದಲ ಐಬಿಎಂ ಎಐ ಲ್ಯಾಬ್ ಲೋಕರ್ಪಾಣೆ

ಮೂಡುಬಿದಿರೆ: ಐಬಿಎಂ ಸಾಫ್ಟ್ವೇರ್ ಲ್ಯಾಬ್ಸ್ ಸಹಯೋಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಸ್ಥಾಪಿಸಲಾದ, ದೇಶದ ಮೊದಲ ಐಬಿಎಂ ಎಐ ಲ್ಯಾಬ್‌ನ್ನು ಉದ್ಘಾಟಿಸಲಾಯಿತು. ಉದ್ಯಮ–ಶೈಕ್ಷಣಿಕ ಸಹಯೋಗವನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನಗಳ ನೇರ ಪ್ರಾಯೋಗಿಕ ಅನುಭವ ಕಲ್ಪಿಸಲು ಈ ಲ್ಯಾಬ್ ಸ್ಥಾಪಿಸಲಾಗಿದೆ. ಐಬಿಎಂ ವಾಟ್ಸನ್‌ಎಕ್ಸ್ ಎಐ, ವಾಟ್ಸನ್‌ಎಕ್ಸ್ ಆರ್ಕೆಸ್ಟ್ರೇಟ್ ಹಾಗೂ ಎಐ ಆಧಾರಿತ ಡೆವಲಪರ್ ಉಪಕರಣಗಳಿಂದ ಸಜ್ಜುಗೊಂಡಿರುವ ಈ ಲ್ಯಾಬ್, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಎಂಟರ್‌ಪ್ರೈಸ್ ಎಐ ವೇದಿಕೆಗಳು ಹಾಗೂ ನೈಜ ಕೈಗಾರಿಕಾ ಅನ್ವಯಿಕೆಗಳ ಕುರಿತು ನೇರ ಅನುಭವ ನೀಡಲಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಐಬಿಎಂ ಇಂಡಿಯಾದ ವಾಟ್ಸನ್‌ಎಕ್ಸ್ ಎಐ ವಿಭಾಗದ ಕಾರ್ಯಕ್ರಮ ನಿರ್ದೇಶಕ ಹಾಗೂ ಮುಖ್ಯಸ್ಥ ರತೀಶ್ ಮುರಳೀಧರನ್, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ದೇಶದ ಮೊದಲ ಐಬಿಎಂ ಎಐ ಲ್ಯಾಬ್ ಸ್ಥಾಪಿಸಿದ ಎಂಜಿನಿಯರಿಂಗ್ ಕಾಲೇಜಾಗಿ ಹೊಸ ಮೈಲಿಗಲ್ಲು ನಿರ್ಮಿಸಿದೆ. ಎಐ ತಂತ್ರಜ್ಞಾನವು ಶಕ್ತಿಯುತ ಸಾಧನಗಳನ್ನು ಎಲ್ಲರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡಿ ಜ್ಞಾನವನ್ನು ವ್ಯಾಪಕವಾಗಿ ತಲುಪಿಸಿದೆ. ಆದರೆ ಭವಿಷ್ಯದಲ್ಲಿ ಯಶಸ್ಸು ತಂತ್ರಜ್ಞಾನದಿಂದ ಮಾತ್ರ ನಿರ್ಧಾರವಾಗುವುದಿಲ್ಲ; ಕಲಿಯುವ ಆಸಕ್ತಿ, ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯ ಮತ್ತು ಸಮಾಜಕ್ಕೆ ಉಪಯುಕ್ತ ಪರಿಹಾರಗಳನ್ನು ಕಂಡುಹಿಡಿಯುವ ಮನೋಭಾವವೂ ಮುಖ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಕೃತಕ ಬುದ್ಧಿಮತ್ತೆಯನ್ನು ಮಾನವ ಸಾಮರ್ಥ್ಯವನ್ನು ವೃದ್ಧಿಸುವ ಸಾಧನವಾಗಿ ನೋಡಬೇಕು, ಅದು ಮಾನವನನ್ನು ಬದಲಿಸುವ ತಂತ್ರಜ್ಞಾನವಲ್ಲ. “ಮಾನವೀಯ ಸಾಮಾನ್ಯ ಜ್ಞಾನ ಮತ್ತು ಎಐ ಒಂದಾದಾಗ ವಿಶ್ವಕ್ಕೆ ಅತ್ಯುತ್ತಮ ಪರಿಹಾರಗಳನ್ನು ನೀಡಬಹುದು. ಜಾಗತೀಕರಣದಿಂದ ಹಿಡಿದು ಇಂಟರ್‌ನೆಟ್ ಕ್ರಾಂತಿಯವರೆಗೆ ಪ್ರತಿಯೊಂದು ತಂತ್ರಜ್ಞಾನ ಬದಲಾವಣೆ ಉದ್ಯೋಗಗಳ ಸ್ವರೂಪವನ್ನು ಬದಲಾಯಿಸಿದೆ ಹೊರತು ಉದ್ಯೋಗಗಳನ್ನು ಸಂಪೂರ್ಣವಾಗಿ ನಾಶ ಪಡಿಸಿಲ್ಲ. ಎಐ ಕೂಡ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ. ಆದ್ದರಿಂದ ಶೈಕ್ಷಣಿಕ ಸಂಸ್ಥೆಗಳು ತಮ್ಮ ಪಠ್ಯಕ್ರಮಗಳನ್ನು ಕಾಲಾನುಗುಣವಾಗಿ ಪರಿಷ್ಕರಿಸಬೇಕು ಎಂದರು. ಈ ಐಬಿಎಂ ಎಐ ಲ್ಯಾಬ್ ಮುಂದಿನ ದಿನಗಳಲ್ಲಿ ನವೀನತೆ, ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿಗೆ ಕೇಂದ್ರವಾಗಿದ್ದು, ವಿದ್ಯಾರ್ಥಿಗಳನ್ನು ಎಐ ಆಧಾರಿತ ಭವಿಷ್ಯದ ಉದ್ಯೋಗಗಳಿಗೆ ಸಜ್ಜುಗೊಳಿಸುವ ಪ್ರಮುಖ ವೇದಿಕೆಯಾಗಲಿದೆ ಎಂದರು. ಈ ಸಂದರ್ಭದಲ್ಲಿ ಎಐಇಟಿಯ ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ಐಬಿಎಂ ಇಂಡಿಯಾದ ಎಐ ತಜ್ಞ ಮನೋಜ್ ಬಿ. ಶೆಟ್ಟಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಎಐಇಟಿ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್, ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಐಬಿಎಂ ಸಾಫ್ಟ್ವೇರ್ ಲ್ಯಾಬ್ಸ್ ಪ್ರತಿನಿಧಿಗಳು ಇದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೊಠಾರಿ ಸ್ವಾಗತಿಸಿ, ರಕ್ಷಿತಾ ರೈ ಕಾರ್ಯಕ್ರಮ ನಿರೂಪಿಸಿ, ಸಂಪತ್ ಶೆಟ್ಟಿ ವಂದಿಸಿದರು.

ಎಕ್ಸಲೆಂಟ್: ನೂತನ ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭ

Article Image

ಎಕ್ಸಲೆಂಟ್: ನೂತನ ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭ

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಜವಾಬ್ದಾರಿಯ ಪ್ರಜ್ಞೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವಲ್ಲಿ ಶಾಲಾ ಸಂಸತ್ತು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ನಿರ್ದೇಶಕರಾದ ರವೀಂದ್ರ ಪುತ್ತೂರು ಹೇಳಿದರು. ಅವರು ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾದ ನೂತನ ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. “ಶಾಲಾ ಸಂಸತ್ತು ಎಂಬುದು ಕೇವಲ ವಿದ್ಯಾರ್ಥಿಗಳಿಗೆ ಹುದ್ದೆ ನೀಡುವ ಕಾರ್ಯಕ್ರಮವಲ್ಲ; ಅದು ಭವಿಷ್ಯದ ಉತ್ತಮ ನಾಯಕರು, ಜವಾಬ್ದಾರಿಯುತ ನಾಗರಿಕರು ಹಾಗೂ ಸಮಾಜಮುಖಿ ವ್ಯಕ್ತಿತ್ವಗಳನ್ನು ರೂಪಿಸುವ ಪ್ರಜಾಪ್ರಭುತ್ವದ ಪಾಠಶಾಲೆಯಾಗಿದೆ. ವಿದ್ಯಾರ್ಥಿಗಳು ಇಂದು ಶಾಲಾ ಸಂಸತ್ತಿನ ಮೂಲಕ ಕಲಿಯುವ ನಾಯಕತ್ವ, ಶಿಸ್ತು, ಸಮಯಪಾಲನೆ, ಸೇವಾ ಮನೋಭಾವ ಮತ್ತು ಜವಾಬ್ದಾರಿಯ ಗುಣಗಳು ಇರುವವರು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಪ್ರಭಾವ ಬೀರುತ್ತಾರೆ. ಜಗತ್ತಿನ ಅತ್ಯುತ್ತಮ ನಾಯಕನ ಆಡಳಿತ ವ್ಯವಸ್ಥೆಯಲ್ಲಿ ನಾವಿದ್ದೇವೆ ಅದು ನಮಗೆ ಹೆಮ್ಮೆಯ ಸಂಗತಿ. ಲಾಲ್ ಬಹದ್ದೂರ್ ಶಾಸ್ತ್ರಿಯವರ ನಾಯಕನ ಬದ್ಧತೆಯಂತೆ ನಾಯಕರು ಇರಬೇಕು. ನಮ್ಮ ಮೌಲ್ಯಗಳಿಗೆ ನಮ್ಮ ಯೋಚನೆಗಳಿಗೆ, ನಮ್ಮ ಕೆಲಸಗಳಿಗೆ ನಾವು ಗೌರವ ನೀಡಿದರೆ ನಾವು ಹೆಮ್ಮೆಯ ಭಾರತದ ರಾಯಭಾರಿಗಳಾಗುತ್ತೇವೆ ಎಂದರು. ಮುಂದುವರಿದು ಅವರು, “ಎಕ್ಸೆಲೆಂಟ್ ಶಿಕ್ಷಣ ಸಂಸ್ಥೆ ಶಿಕ್ಷಣದಲ್ಲಿ ಮಾತ್ರವಲ್ಲದೆ ಸಂಸ್ಕಾರ, ನೈತಿಕ ಮೌಲ್ಯಗಳು, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ನಾಯಕತ್ವ ಬೆಳೆಸುವ ಕಾರ್ಯಕ್ರಮಗಳ ಮೂಲಕ ರಾಜ್ಯದಲ್ಲೇ ಮಾದರಿ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಪ್ರಜಾಪ್ರಭುತ್ವದ ಸುಖವನ್ನು ವಿದ್ಯಾರ್ಥಿಗಳು ಅನುಭವಿಸುವಂತೆ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಈ ಶಿಕ್ಷಣ ಸಂಸ್ಥೆ ಮುಂಚೂಣಿಯಲ್ಲಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸಂಸ್ಥೆ ನೀಡುತ್ತಿರುವ ಒತ್ತು ನಿಜಕ್ಕೂ ಶ್ಲಾಘನೀಯವಾಗಿದೆ. ಶಾಲಾ ಸಂಸತ್ತಿಗೆ ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಹುದ್ದೆಯನ್ನು ಅಧಿಕಾರದ ಸಂಕೇತವಾಗಿ ಅಲ್ಲ, ಸೇವೆಯ ಅವಕಾಶವಾಗಿ ಪರಿಗಣಿಸಿ ಕಾರ್ಯನಿರ್ವಹಿಸಬೇಕು. ಸಹಪಾಠಿಗಳ ಸಮಸ್ಯೆಗಳಿಗೆ ಸ್ಪಂದಿಸಿ, ಶಿಕ್ಷಕರೊಂದಿಗೆ ಸಮನ್ವಯ ಸಾಧಿಸಿ ಶಾಲೆಯ ಶಿಸ್ತು, ಸ್ವಚ್ಛತೆ ಮತ್ತು ಉತ್ತಮ ವಾತಾವರಣ ಕಾಪಾಡುವಲ್ಲಿ ಮುಂಚೂಣಿಯಲ್ಲಿರಬೇಕು” ಎಂದು ಕರೆ ನೀಡಿದರು. ಬೇರೆ ಬೇರೆ ಜಿಲ್ಲೆಗಳಿಂದ ಬಂದಿರುವ ವಿದ್ಯಾರ್ಥಿಗಳು ಇಲ್ಲಿಗೆ ಬಂದಿರುವ ಉದ್ದೇಶವನ್ನು ಮರೆಯಬಾರದು. ಜೀವನದಲ್ಲಿ ಒಮ್ಮೆ ಸೋಲಿನ ಇಳಿಜಾರಿಗೆ ಇಳಿದರೆ ನಾವು ಜೀವನದಲ್ಲಿ ಸೋಲುತ್ತೇವೆ. “ಇಂದಿನ ವಿದ್ಯಾರ್ಥಿಗಳೇ ನಾಳಿನ ಜನಪ್ರತಿನಿಧಿಗಳು, ಆಡಳಿತಗಾರರು, ವಿಜ್ಞಾನಿಗಳು ಮತ್ತು ರಾಷ್ಟ್ರ ನಿರ್ಮಾತೃಗಳು. ಆದ್ದರಿಂದ ಶಾಲಾ ದಿನಗಳಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಂತಹ ಮೌಲ್ಯಧಾರಿತ ಶಿಕ್ಷಣ ನೀಡುವ ಸಂಸ್ಥೆಗಳು ಸಮಾಜಕ್ಕೆ ಉತ್ತಮ ನಾಗರಿಕರನ್ನು ಕೊಡುಗೆಯಾಗಿ ನೀಡುತ್ತಿವೆ. ನೂತನ ಶಾಲಾ ಸಂಸತ್ತಿನ ಎಲ್ಲಾ ಸದಸ್ಯರು ತಮ್ಮ ಜವಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಶಾಲೆಗೆ ಮತ್ತಷ್ಟು ಕೀರ್ತಿತರಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ, ಮತದಾನ ಪ್ರತಿಯೊಬ್ಬರ ಹಕ್ಕು ಅಂತಹ ಹಕ್ಕನ್ನು ನಾವು ಸರಿಯಾದ ವ್ಯಕ್ತಿಗೆ ನೀಡಬೇಕು. ವಿದ್ಯಾರ್ಥಿಗಳು ಒಳ್ಳೊಳ್ಳೆ ನಾಯಕರುಗಳನ್ನು ಮಾದರಿಯಾಗಿ ತೆಗೆದುಕೊಂಡು ಅತ್ಯುತ್ತಮ ನಾಯಕರಾಗಬೇಕು, ಒಳ್ಳೆಯ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ತಂದೆ ತಾಯಿಯರ ಕಷ್ಟ ಯಾರಿಗೆ ಗೊತ್ತಿರುತ್ತದೆಯೋ ಅವರು ಯಾವತ್ತೂ ಕೆಟ್ಟ ದಾರಿ ಹಿಡಿಯುವುದಿಲ್ಲ ಹೆತ್ತವರು ಹೆಮ್ಮೆ ಪಡುವಂತಹ ವ್ಯಕ್ತಿಗಳು ನೀವಾಗಬೇಕು ಎಂದು ವಿದ್ಯಾರ್ಥಿಗಳು ಹಾಗೂ ನೂತನವಾಗಿ ಆಯ್ಕೆಯಾದ ಶಾಲಾ ಸಂಸತ್ ಸದಸ್ಯರಿಗೆ ಶುಭ ಹಾರೈಸಿ, ತಮ್ಮ ಜವಬ್ದಾರಿಗಳನ್ನು ಪ್ರಾಮಾಣಿಕತೆ ಹಾಗೂ ಸಮರ್ಪಣಾ ಮನೋಭಾವದಿಂದ ನಿರ್ವಹಿಸಿ ಶಾಲೆಗೆ ಉತ್ತಮ ಹೆಸರು ತರುವಂತೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್ ಮಾತನಾಡಿ. ಶಾಲಾ ಸಂಸತ್ತಿನ ಸದಸ್ಯರು ವಿದ್ಯಾರ್ಥಿಗಳ ಧ್ವನಿಯಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ತಾಯಿ ಮನೆಯಲ್ಲಿ ಹೇಗೆ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸುತ್ತಾಳೋ ಹಾಗೇ ನಾಯಕರಾದವರು ಇರಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಒಳ್ಳೊಳ್ಳೆಯ ಸಾಮಾರ್ಥ್ಯ ಇರುತ್ತದೆ. ಅದನ್ನು ನಿಮ್ಮ ಸಾಧನೆಗೆ ಪೂರಕವಾಗಿ ಉಪಯೋಗಿಸಿಕೊಳ್ಳಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಿ ಎಂದು ಹೇಳುತ್ತಾ ಶಿಸ್ತು, ಸಮಯಪಾಲನೆ, ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಅಳವಡಿಸಿಕೊಂಡು ಶಾಲೆಯ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ತಿಳಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಬಿ.ಪಿ ಸಂಪತ್ ಕುಮಾರ್, ಸಿಬಿಎಸ್‌ಸಿ ಶಾಲೆಯ ಪ್ರಾಂಶುಪಾಲರಾದ ಶ್ರೀಪ್ರಸಾದ್, ಶಿಕ್ಷಕ-ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಸಂಸತ್ತಿನ ನಾಯಕನಾಗಿ ಋಷಿಕೇಶ್ ಎ ಮಿನಾಚೆ, ಉಪನಾಯಕ ನಿಶಾಂತ್ ರಾಜ್, ಸ್ಪೀಕರ್ ನಿಹಾರಿಕ, ಶಿಕ್ಷಣ ಮತ್ತು ಸಾಂಸ್ಕತಿಕ ಮಂತ್ರಿ ಸಯ್ಯದಾ ಆನಂ, ಶಿಸ್ತು ಮಂತ್ರಿ ದೃಷ್ಠಿ, ಕ್ರೀಡಾ ಮಂತ್ರಿ ಚೇತನ್, ಜಲಶಕ್ತಿ ಮಂತ್ರಿ ಸಾನ್ವಿಕಾ ಹಾಗೂ ವಿರೋಧ ಪಕ್ಷದ ನಾಯಕಿಯಾಗಿ ತನ್ವಿ ಪೂಜಾರಿ ತಮ್ಮ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಉಪಮುಖ್ಯೋಪಾಧ್ಯಾಯರಾದ ಜಯಶೀಲ ಬೆಳ್ತಂಗಡಿ ಕ್ಷೇತ್ರದ ಜನಪ್ರೀಯ ಶಾಸಕರಾದ ಹರೀಶ್ ಪೂಂಜಾ ಅವರು ಕಾರ್ಯಕ್ರಮದ ಕುರಿತಾಗಿ ಕಳುಹಿಸಿದ ಶುಭ ನುಡಿಗಳ ಸಂದೇಶವನ್ನು ವಾಚಿಸಿದರು. ಶಿಕ್ಷಕಿ ರಶ್ಮಿ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕಿ ಸ್ವರ್ಣಲತಾ ಸಂಸತ್ತ್ತಿನ ನೂತನ ನಾಯಕರ ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಶಿಕ್ಷಕಿ ವನಿತಾ ಪ್ರತಿಜ್ಞಾವಿಧಿ ಬೋಧಿಸಿದರು. ಶಾಲಾ ಸಂಸತ್ತಿನ ನಾಯಕ ಋಷಿಕೇಶ್ ನಾಯಕನ ಜವಾಬ್ದಾರಿಗಳನ್ನು, ಶಿಸ್ತು ಮಂತ್ರಿ ದೃಷ್ಠಿ, ವಿರೋಧ ಪಕ್ಷದ ನಾಯಕಿ ತನ್ವಿ ಪೂಜಾರಿ ತಮ್ಮ ತಮ್ಮ ಜವಾಬ್ದಾರಿಗಳನ್ನು ವಾಚಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಸ್ವಾಗತಿಸಿದರು ಶಿಕ್ಷಕಿ ಜಯಲಕ್ಷ್ಮೀ ನಿರೂಪಿಸಿದರು. ಸ್ಪೀಕರ್ ನಿಹಾರಿಕ ವಂದಿಸಿದರು. ನೂತನ ಸಂಸತ್ ಸದಸ್ಯರ ಪದಗ್ರಹಣದೊಂದಿಗೆ ಕಾರ್ಯಕ್ರಮವು ಸಂಭ್ರಮ, ಶಿಸ್ತು ಹಾಗೂ ರಾಷ್ಟ್ರ ಭಕ್ತಿಯ ವಾತವರಣದಲ್ಲಿ ಯಶಸ್ವಿಯಾಗಿ ನೆರವೇರಿತು.

ಎಕ್ಸಲೆಂಟ್: ನಾಲ್ಕು ಕ್ಷೇತ್ರಗಳಲ್ಲಿ ಅರಳಿದ ಸಸ್ಯ ಶ್ಯಾಮಲಾ-2026ದ ದಿವ್ಯ ಸಂಕಲ್ಪ

Article Image

ಎಕ್ಸಲೆಂಟ್: ನಾಲ್ಕು ಕ್ಷೇತ್ರಗಳಲ್ಲಿ ಅರಳಿದ ಸಸ್ಯ ಶ್ಯಾಮಲಾ-2026ದ ದಿವ್ಯ ಸಂಕಲ್ಪ

ಮೂಡುಬಿದಿರೆ: ಮರವೆಂದರೆ ಪ್ರಕೃತಿಯ ಮೌನ ಪ್ರಾರ್ಥನೆ; ಅದನ್ನು ನೆಡುವ ಕೈಗಳು ಮಾನವೀಯತೆಯ ಮಹಾಮಂತ್ರ. ಭೂಮಿಗೆ ಹಸಿರು ಹೊದಿಸಿ, ಮುಂದಿನ ಪೀಳಿಗೆಗೆ ಜೀವಸಂಪತ್ತಿನ ಉಡುಗೊರೆ ನೀಡುವ ಮಹೋನ್ನತ ಧ್ಯೇಯದೊಂದಿಗೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ವತಿಯಿಂದ ಪರಿಸರ ಪ್ರೇಮಿ ರಸಿಕ ಅವರ ಪವಿತ್ರ ಸ್ಮರಣಾರ್ಥ ಆಯೋಜಿಸಲಾದ “ಸಸ್ಯ ಶ್ಯಾಮಲಾ–2026” ಸಾವಿರ ಗಿಡಗಳನ್ನು ನೆಡುವ ಹಾಗೂ ಹಂಚುವ ಹಸಿರು ಅಭಿಯಾನವು ಒಂದೇ ದಿನದಲ್ಲಿ ನಾಲ್ಕು ವಿವಿಧ ಪವಿತ್ರ ಕ್ಷೇತ್ರಗಳಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಪವಿತ್ರ ಕರೀಂಜೆ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಭಕ್ತಿಭಾವ ಮತ್ತು ಪರಿಸರ ಪ್ರಜ್ಞೆಯ ಸಮ್ಮಿಲನದೊಂದಿಗೆ ಜರುಗಿದ ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿ ಅನುಗ್ರಹ ಸಂದೇಶ ನೀಡಿದರು. “ಪ್ರಕೃತಿಯೇ ಪರಬ್ರಹ್ಮನ ಪ್ರತ್ಯಕ್ಷ ರೂಪ. ಮರವನ್ನು ನೆಡುವುದು ಎಂದರೆ ಮಣ್ಣಿನಲ್ಲಿ ಸಸಿಯನ್ನಲ್ಲ, ಧರ್ಮದ ಬೀಜವನ್ನೇ ಬಿತ್ತುವುದು. ಪ್ರತಿಯೊಂದು ಗಿಡವೂ ದೇವರ ಉಸಿರು, ಪ್ರತಿಯೊಂದು ಮರದ ನೆರಳೂ ದೈವಾನುಗ್ರಹದ ವಿಸ್ತಾರ. ಪರಿಸರ ಸಂರಕ್ಷಣೆ ಇಂದಿನ ಅಗತ್ಯ ಮಾತ್ರವಲ್ಲ; ಅದು ಪ್ರತಿಯೊಬ್ಬರ ಆಧ್ಯಾತ್ಮಿಕ ಹೊಣೆಗಾರಿಕೆಯೂ ಆಗಿದೆ,” ಎಂದು ಸ್ವಾಮೀಜಿಯವರು ಆಶೀರ್ವಚನ ನೀಡಿದರು. ನಾಲ್ಕೂ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರು ಮಾತನಾಡಿ,“‘ಹಸಿರೇ ಉಸಿರಾಗಲಿ… ನೆನಪೇ ಬೆಳಕಾಗಲಿ…’ ಎಂಬ ನಮ್ಮ ಸಂಕಲ್ಪ ಕೇವಲ ಘೋಷಣೆಯಲ್ಲ; ಅದು ಮುಂದಿನ ಪೀಳಿಗೆಗೆ ನೀಡುತ್ತಿರುವ ಜೀವದ ವಾಗ್ದಾನ. ಪರಿಸರವನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು. ವಿದ್ಯಾರ್ಥಿಗಳ ಹೃದಯದಲ್ಲಿ ಪರಿಸರ ಪ್ರೀತಿಯ ಬೀಜ ಮೊಳಕೆಯೊಡೆದರೆ, ನಾಳೆಯ ಸಮಾಜ ಹಸಿರಿನ ಸಂಸ್ಕೃತಿಯಿAದ ಸಮೃದ್ಧವಾಗುತ್ತದೆ. ಪ್ರತಿಯೊಬ್ಬರೂ ಒಂದು ಗಿಡವನ್ನು ನೆಟ್ಟು, ಅದನ್ನು ಮರವಾಗಿ ಬೆಳೆಸುವವರೆಗೆ ಪಾಲನೆ ಮಾಡಬೇಕು,” ಎಂದು ಅವರು ಕರೆ ನೀಡಿದರು. ಪವಿತ್ರ ಕ್ಷೇತ್ರಗಳಲ್ಲಿ ಹಸಿರು ಯಜ್ಞದ ಪಯಣ: ಇರ್ವತ್ತೂರು: ಈ ಮಹತ್ವದ ಹಸಿರು ಅಭಿಯಾನಕ್ಕೆ ಕೊಳಕ್ಕೆ ಆದಿನಾಥ ಬಸದಿಯಲ್ಲಿ ಅರ್ಥಪೂರ್ಣ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಂಶುಪಾಲ ಗುಣಪಾಲ ಕಡಂಬ ಅವರು ಮಾತನಾಡಿ, ಶಿಕ್ಷಣದ ಜೊತೆಗೆ ಪರಿಸರ ಸಂರಕ್ಷಣೆಯ ಸಂಸ್ಕಾರವನ್ನು ಬೆಳೆಸುತ್ತಿರುವ ಎಕ್ಸಲೆಂಟ್ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು. ಪ್ರಗತಿಪರ ಕೃಷಿಕ ಸುಭಾಷ್‌ಚಂದ್ರ ಚೌಟ, ಚಂದ್ರರಾಜ ಅಧಿಕಾರಿi, ಧರಣೇಂದ್ರ ಜೈನ್ ಮಾಂಟ್ರಾಡಿ, ಶಕುಂತಳಾ ಜೈನ್ ಬಜಗೋಳಿ ಉಪಸ್ಥಿತರಿದ್ದರು. ಮರ್ಯಾಡಿ: ಮರ್ಯಾಡಿಯ ನಡ್ಯೋಡಿ ದೈವಸ್ಥಾನದ ಪಾವನ ಪರಿಸರದಲ್ಲಿ ಮೂರನೇ ಹಂತದ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಯಾಗಿದ್ದ ಹಿರಿಯ ಪತ್ರಕರ್ತ ಪ್ರಸನ್ನ ಹೆಗ್ಡೆ ಅವರು, ಕಾಲೇಜುಗಳು ಕೇವಲ ಪಠ್ಯದ ಕೇಂದ್ರಗಳಾಗದೆ ಪ್ರಕೃತಿಯ ಪರಮಪಾಠ ಕಲಿಸುವ ಸಂಸ್ಕಾರ ಕೇಂದ್ರಗಳಾಗಬೇಕು ಎಂದು ಎಕ್ಸಲೆಂಟ್ ಸಂಸ್ಥೆಯ ಹೆಜ್ಜೆಯನ್ನು ಪ್ರಶಂಸಿಸಿದರು. ಮಾರೂರು ಖಂಡಿಗೆ ರಾಮದಾಸ ಆಸ್ರಣ್ಣ, ವಿಶ್ವನಾಥ ಕೋಟ್ಯಾನ್, ಉದ್ಯಮಿ ಆರ್. ಕೆ. ಭಟ್ ಉಪಸ್ಥಿತರಿದ್ದರು. ಕಲ್ಲಬೆಟ್ಟು: ಶ್ರೀ ಮಹಾಮಾಯಿ ದೇವಸ್ಥಾನದ ಸನ್ನಿಧಿಯಲ್ಲಿ ನೆರವೇರಿತು. ದೇವಸ್ಥಾನದ ಕೋಶಾಧಿಕಾರಿ ರಮೇಶಚಂದ್ರ ಪಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ದೇವಾಲಯಗಳು ಪ್ರಕೃತಿಯ ಸಂರಕ್ಷಣೆಯ ಸಂಕಲ್ಪ ಮೂಡುವ ಪುಣ್ಯಭೂಮಿಗಳಾಗಬೇಕು ಎಂದರು. ವೇದಿಕೆಯಲ್ಲಿ ದೇವಸ್ಥಾನದ ಅಧ್ಯಕ್ಷ ಸೂರ್ಯ ಭಟ್, ಶಿವಾನಂದ ಪೈ, ಕಾರ್ಯದರ್ಶಿ ಕಮಲಾಕ್ಷ ರಾವ್ ಉಪಸ್ಥಿತರಿದ್ದರು. ಜನಮನ ಸೆಳೆದ ಸಸಿಗಳ ವಿತರಣೆ: ಈ ನಿರಂತರ ಅಭಿಯಾನದ ಅಂಗವಾಗಿ ಮಾವು, ಪೇರಳೆ, ನೆಲ್ಲಿಕಾಯಿ, ನೇರಳೆ, ಬೇವು ಸೇರಿದಂತೆ ಸುಮಾರು ಐವತ್ತು ಬಗೆಯ ಫಲ ಹಾಗೂ ನೆರಳು ನೀಡುವ ಅಪರೂಪದ ಸಸಿಗಳನ್ನು ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಯಿತು. ನಾಲ್ಕೂ ಕಾರ್ಯಕ್ರಮಗಳಲ್ಲಿ ಸಂಸ್ಥೆಯ ಉಪನ್ಯಾಸಕ ಡಾ. ವಾದಿರಾಜ ಕಲ್ಲೂರಾಯ, ಸಾರ್ವಜನಿಕ ಸಂಪರ್ಕಾಧಿಕಾರಿ ಸ್ವರೂಪ್ ಜೈನ್, ಎನ್.ಎಸ್.ಎಸ್. ಅಧಿಕಾರಿ ಅಶೋಕ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರಶಾಂತ್ ಶೆಟ್ಟಿ, ಶಿಕ್ಷಕಿಯರಾದ ರಂಜಿತಾ, ವಿಮಲಾ, ಹರ್ಷಿತ ಬಂಗೇರ ಸೇರಿದಂತೆ ಸಂಸ್ಥೆಯ ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು, ದೇವಸ್ಥಾನದ ಪದಾಧಿಕಾರಿಗಳು ಹಾಗೂ ನೂರಾರು ಪರಿಸರಾಸಕ್ತ ಸಾರ್ವಜನಿಕರು ಭಾಗವಹಿಸಿ ಹಸಿರು ಸಂಕಲ್ಪಕ್ಕೆ ಸಾಕ್ಷಿಯಾದರು.

ಆಳ್ವಾಸ್‌: ಕನ್ನಡ ಗಾನ ಗುಚ್ಛ ವೈವಿಧ್ಯಮಯ ಹಾಡುಗಳ ವಿನೂತನ ರಂಗಪ್ರಸ್ತುತಿ

Article Image

ಆಳ್ವಾಸ್‌: ಕನ್ನಡ ಗಾನ ಗುಚ್ಛ ವೈವಿಧ್ಯಮಯ ಹಾಡುಗಳ ವಿನೂತನ ರಂಗಪ್ರಸ್ತುತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಆಶ್ರಯದಲ್ಲಿ ಜುಲೈ 10 ಮತ್ತು 11 ರಂದು ಸಂಜೆ 6.30ಕ್ಕೆ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ `ಕನ್ನಡ ಗಾನ ಗುಚ್ಛ' ಎಂಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಪ್ರಸ್ತುತ ಪಡಿಸುವ ಈ ಗಾನ ಗುಚ್ಛವನ್ನು ರಂಗನಿರ್ದೇಶಕ ಡಾ| ಜೀವನ್ ರಾಂ ಸುಳ್ಯ ಸಂಯೋಜಿಸಿದ್ದಾರೆ. ಕನ್ನಡದ ವಿವಿಧ ಪ್ರಾಕಾರಗಳ ವೈವಿಧ್ಯಮಯ ಹಾಡುಗಳನ್ನು ರಂಗಸಾಧ್ಯತೆಗಳ ಮೂಲಕ ಪ್ರಸ್ತುತಪಡಿಸುವ ಎರಡು ಗಂಟೆಗಳ ವಿಶೇಷ ಕಾರ್ಯಕ್ರಮ ಇದಾಗಿದ್ದು ತಂಡದಲ್ಲಿ ಡಾ| ಜೀವನ್ ರಾಂ ಸುಳ್ಯ, ಮಮತಾ ಕಲ್ಮಕಾರು, ಮನುಜ ನೇಹಿಗ ಸುಳ್ಯ, ಸಮನ್ವಿತ ಹುಬ್ಬಳ್ಳಿ, ಸತ್ಯಜಿತ್ ರಾವ್, ಸತೀಶ್ ಸುರತ್ಕಲ್, ಸಂತೋಷ್ ಉಡುಪಿ, ತೇಜಸ್ವಿನಿ ತರೀಕೆರೆ, ನಿಶ್ಮಿತಾ ಬೆಂಗಳೂರು, ವಿಸ್ಮಯ ಪೈ, ಸಿಂಚನಾ ಶೆಟ್ಟಿ ಹಾಗೂ ಕೃಪಾ ನಾಯಕ್ ಮುಂತಾದವರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮ ಇರುವುದಿಲ್ಲ ಮತ್ತು ಕಾರ್ಯಕ್ರಮ ಸಮಯಕ್ಕೆ ಸರಿಯಾಗಿ ಆರಂಭವಾಗಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ.

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Article Image

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ಸೇವೆಯಲ್ಲಿರುವ ಸಂತೋಷ ಬೇರೆಲ್ಲಿಯೂ ಸಿಗಲಾರದು. ನಮ್ಮೆಲ್ಲಾ ವೈದ್ಯರಲ್ಲಿ ಆ ಸೇವಾ ಮನೋಭಾವವಿದೆ ಎಂದರು. ಅವರು ವೈದ್ಯರ ದಿನಾಚರಣೆಯ ಅಂಗವಾಗಿ ಇಲ್ಲಿನ ವೈದ್ಯರನ್ನು ಸನ್ಮಾನಿಸಿ ಮಾತನಾಡುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವೈದ್ಯರ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೈದ್ಯರಿಗೆ ಅವರ ಪರಿವಾರದವರ ಸಹಕಾರ ಇರುವುದರಿಂದ ಮಾತ್ರ ಇಂತಹ ಗ್ರಾಮೀಣ ಪ್ರದೇಶದಲ್ಲಿ ನಮ್ಮ ವೈದ್ಯರು ಸೇವೆ ಸಲ್ಲಿಸಲು ಸಾಧ್ಯವಾಗಿದೆ. ಕೇವಲ ವೈದ್ಯಕೀಯ ಸಲಕರಣೆಗಳು ಇದ್ದರೆ ಸಾಲದು ಅದನ್ನು ಸರಿಯಾಗಿ ಬಳಸುವವರ ಮೂಲಕ ರೋಗಿಗಳಿಗೆ ಉಪಯುಕ್ತವಾಗಬೇಕು. ಅಂತಹ ಕೆಲಸ ಈ ಆಸ್ಪತ್ರೆಯಲ್ಲಿ ಅತ್ಯುತ್ತಮವಾಗಿ ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ನಗರದ ಹೈಟೆಕ್ ವೈದ್ಯಕೀಯ ಸೇವೆ ಕಡಿಮೆ ಖರ್ಚಿನಲ್ಲಿ ಸಿಗಬೇಕು ಎಂಬ ಉದ್ದೇಶದಿಂದ ಈ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ. ಇಲ್ಲಿನ ವೈದ್ಯಕೀಯ ಸೇವೆಯನ್ನು ಗಮನಿಸಿ ನಗರದ ವೈದ್ಯರು ಅತ್ಯಂತ ಉತ್ಸಾಹದಿಂದ ಈ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಲು ಮುಂದೆ ಬರುತ್ತಿರುವುದು ಖುಷಿ ಕೊಟ್ಟಿದೆ. ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರ ಆಡಳಿತದಿಂದ ಆಸ್ಪತ್ರೆ ಬೆಳೆಯುತ್ತಿದೆ. ಅತೀ ಶೀಘ್ರದಲ್ಲಿ ಎಂ.ಆರ್ ಸ್ಕ್ಯಾನಿಂಗ್ ಸೇವೆ ಇಲ್ಲಿ ದೊರೆಯಲಿದೆ ಎಂದರು. ಹೇಮಾವತಿ ವಿ. ಹೆಗ್ಗಡೆಯವರು ಮಾತನಾಡಿ ಗಿಡ ಹೆಮ್ಮರವಾಗಿ ಬೆಳೆಯುವಂತೆ ನಮ್ಮ ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಬೆಳೆಯುತ್ತಿದೆ. ಮರದ ರೆಂಬೆ ಕೊಂಬೆಗಳು ವಿಸ್ತಾರವಾಗುವಂತೆ ಇಲ್ಲಿ ಹೊಸ ಹೊಸ ವಿಭಾಗಗಳು ಕೂಡ ತೆರೆದುಕೊಳ್ಳುತ್ತಿವೆ. ಸೇವಾ ಮನೋಭಾವ ಹೊಂದಿರುವ ಇಲ್ಲಿನ ವೈದ್ಯರು ಕೇವಲ ವೃತ್ತಿಯಿಂದ ಮಾತ್ರ ಅಲ್ಲ ಹೃದಯದಿಂದ ವೈದ್ಯರಾಗಿದ್ದಾರೆ. ವೈದ್ಯರ ಸೇವೆಗೆ ಬೆಲೆ ಕಟ್ಟಲಾಗದು. ಅತ್ಯುತ್ತಮ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಎಸ್.ಡಿ.ಎಂ ಬ್ರಾಂಡ್‌ಗೆ ಹೊಸ ಗರಿಯಾಗಿ ಶೋಭಿಸುತ್ತಿದೆ. ಇದಕ್ಕೆಲ್ಲ ಕಾರಣ ಎಲ್ಲರ ಶ್ರಮದೊಂದಿಗೆ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರ ಕಠಿಣ ಪರಿಶ್ರಮ ಮತ್ತು ಎಲ್ಲರನ್ನು ಒಗ್ಗೂಡಿ ಕೆಲಸ ಮಾಡಿಸುವ ಚಾಣಾಕ್ಯತೆ ಇದೆ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ, 2025-26ರ ಸಾಲಿನಲ್ಲಿ 4 ಕೋಟಿಗೂ ಹೆಚ್ಚು ಮೊತ್ತದ ವೈದ್ಯಕೀಯ ಸೇವೆಯನ್ನು ಡಾ. ಹೆಗ್ಗಡೆಯವರ ನಿದೇರ್ಶನದಂತೆ ಉಚಿತವಾಗಿ ನೀಡಲಾಗಿದೆ. 11 ಹಾಸಿಗೆಗಳ ಸುಸಜ್ಜಿತ ಹವಾನಿಯಂತ್ರಿತ ಡಯಾಲಿಸಿಸ್ ಸೆಂಟರ್‌ನಲ್ಲಿ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿದ್ದು, 2025-26ರಲ್ಲಿ 1.44 ಕೋಟಿ ಮೊತ್ತದ 9644 ಉಚಿತ ಡಯಾಲಿಸಿಸ್ ಸೇವೆ ನೀಡಲಾಗಿದೆ. 60 ಕ್ಕೂ ಹೆಚ್ಚು ಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ವೈದ್ಯರು ಇಲ್ಲಿ ಲಭ್ಯವಿದ್ದಾರೆ ಎಂದರು. ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ ಮಾತನಾಡಿ ಎಲ್ಲಾ ವಿಭಾಗಗಳಲ್ಲಿ ತಜ್ಞ ವೈದ್ಯರಿದ್ದು, ಅತ್ಯಾಧುನಿಕ ವೈದ್ಯಕೀಯ ಸೇವೆಯನ್ನು ಇಲ್ಲಿ ನೀಡಲಾಗುತ್ತಿದೆ ಎಂದರು. ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಮಾತನಾಡಿ, ದ.ಕ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹೊರತು ಪಡಿಸಿ ಅತೀ ಹೆಚ್ಚು ಹೆರಿಗೆ ನಡೆಸುವ ಆಸ್ಪತ್ರೆ ನಮ್ಮದಾಗಿದೆ. ಇಲ್ಲಿ 2 ಸುಸಜ್ಜಿತ ಆಪರೇಶನ್ ಥಿಯೇಟರ್ ಇದ್ದು, ದಿನ ಒಂದಕ್ಕೆ 10 ರಿಂದ 15 ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುತ್ತಿದೆ. ಕಳೆದ ವರ್ಷ 40 ಲಕ್ಷ ರೂಪಾಯಿ ಮೌಲ್ಯದ ಲ್ಯಾಪರೋಸ್ಕೋಪಿಕ್ ಯಂತ್ರ ಅಳವಡಿಸಿದ್ದು, ಕಳೆದ ಮೇ ತಿಂಗಳಲ್ಲಿ 100 ಕ್ಕೂ ಹೆಚ್ಚು ಲ್ಯಾಪರೋಸ್ಕೋಪಿಕ್ ಸರ್ಜರಿ ನಡೆಸಲಾಗಿದೆ. ಲೇಸರ್ ಶಸ್ತ್ರಚಿಕಿತ್ಸೆ ಲ್ಯಾಪರೋಸ್ಕೋಪಿಕ್ ಸರ್ಜರಿ, ಎಂಡೋಸ್ಕೋಪಿಕ್ ಸರ್ಜರಿ ಸೇವೆ ಇಲ್ಲಿ ಲಭ್ಯವಿದ್ದು, ನ್ಯೂರೋ ಸರ್ಜರಿ ಸೇವೆ, ಎಮರ್ಜೆನ್ಸಿ ಮೆಡಿಸಿನ್, ಇಬ್ಬರು ಸಾಮಾನ್ಯ ಸರ್ಜರಿ, 5 ಮಂದಿ ಆರ್ಥೋಪೆಡಿಕ್ ಸರ್ಜನ್, ಕಣ್ಣಿನ ಶಸ್ತ್ರಚಿಕಿತ್ಸಾ ತಜ್ಞರು, ಕಿವಿ-ಮೂಗು ಗಂಟಲು ಸರ್ಜನ್, ಇಬ್ಬರು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯರೊಂದಿಗೆ ನಮ್ಮ ಸರ್ಜರಿ ತಂಡ ಬಲಶಾಲಿಯಾಗಿದೆ. ನೋವು ರಹಿತ ಹೆರಿಗೆ, ಕ್ಲಿಷ್ಟಕರವಾದ ಬೆನ್ನುಮೂಳೆ ಶಸ್ತ್ರಚಿಕಿತ್ಸೆ, ಸೊಂಟ ಮತ್ತು ಮೊಣಕಾಲು ಶಸ್ತ್ರಚಿಕಿತೆ, ಬಾಯಿಯ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದರು. ಬೆನ್ನುಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಶತಾನಂದ ಪ್ರಸಾದ್ ರಾವ್ ಮಾತನಾಡಿ ಡಾ. ಹೆಗ್ಗಡೆರ ಸಹಕಾರದಿಂದ ಈ ಆಸ್ಪತ್ರೆಯಲ್ಲಿ ಸರ್ಜರಿ ಮತ್ತು ಡ್ಯೂರಲ್ ರಿಪೇರ್ ಶಸ್ತ್ರಚಿಕಿತ್ಸೆಯನ್ನು ಯಸಸ್ವಿಯಾಗಿ ನಡೆಸಿದ್ದು, ವಿಶ್ವ ಮಟ್ಟದಲ್ಲಿ ನಮ್ಮ ಆಸ್ಪತ್ರೆ ಗುರುತಿಸಲ್ಪಟ್ಟಿದೆ. ಈ ಹಿಂದೆ ಸರ್ಜರಿ ಮಾಡಿಸಲು ಮಂಗಳೂರಿಗೆ ಹೋಗುತ್ತಿದ್ದ ಜನ ಇವತ್ತಿನ ದಿನಗಳಲ್ಲಿ ಇಲ್ಲಿಯೇ ಶಸ್ತ್ರಚಿಕಿತ್ಸೆ ನಡೆಸಿ ಎಂದು ನಮ್ಮ ವೈದ್ಯರಲ್ಲಿ ವಿನಂತಿ ಮಾಡುತ್ತಿದ್ದಾರೆ ಎಂದರು. ಡಾ| ಉಷಾ ಜಿ. ಶೆಟ್ಟಿ ತಮ್ಮ ಅನಿಸಿಕೆ ವ್ಯಕ್ತಪಡಿಸುತ್ತಾ, ಡಾ. ಹೆಗ್ಗಡೆರ ಸಂಸ್ಥೆಯಲ್ಲಿ ವೈದ್ಯ ವೃತ್ತಿ ನಡೆಸಲು ಹೆಮ್ಮೆ ಎನಿಸುತ್ತಿದೆ. ನಂಬಿಕೆ, ವಿಶ್ವಾಸಗಳಿಗೆ ಹೆಸರುವಾಸಿಯಾಗಿರುವ ಎಸ್.ಡಿ.ಎಂ ಸಂಸ್ಥೆಯಲ್ಲಿ ದುಡಿಯುವುದೇ ನಮ್ಮ ಸುಯೋಗ ಎಂದರು. ವೈದ್ಯರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಉತ್ತಮ ವಾತಾವರಣ ಇದೆ. ವ್ಯವಸ್ಥಾಪಕ ನಿರ್ದೇಶಕರಾದ ಎಂ ಜನಾರ್ದನ್ ಅವರ ಸಹಕಾರ ಮತ್ತು ಉತ್ತಮ ಆಡಳಿತ ನಮಗೆಲ್ಲಾ ಹೊಸ ಸ್ಪೂರ್ತಿಯನ್ನು ನೀಡುತ್ತಿದೆ ಎಂದರು. ಧರ್ಮಸ್ಥಳ ಬೀಡಿನ ಕು| ಮಾನ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಎಲ್ಲಾ ವೈದ್ಯರನ್ನು ಡಾ. ಹೆಗ್ಗಡೆಯವರು ಸನ್ಮಾನಿಸಿದರು. ಜಗನ್ನಾಥ ಎಂ ಮತ್ತು ಸೃಜನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Article Image

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ಸೇವೆಯಲ್ಲಿರುವ ಸಂತೋಷ ಬೇರೆಲ್ಲಿಯೂ ಸಿಗಲಾರದು. ನಮ್ಮೆಲ್ಲಾ ವೈದ್ಯರಲ್ಲಿ ಆ ಸೇವಾ ಮನೋಭಾವವಿದೆ ಎಂದರು. ಅವರು ವೈದ್ಯರ ದಿನಾಚರಣೆಯ ಅಂಗವಾಗಿ ಇಲ್ಲಿನ ವೈದ್ಯರನ್ನು ಸನ್ಮಾನಿಸಿ ಮಾತನಾಡುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವೈದ್ಯರ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೈದ್ಯರಿಗೆ ಅವರ ಪರಿವಾರದವರ ಸಹಕಾರ ಇರುವುದರಿಂದ ಮಾತ್ರ ಇಂತಹ ಗ್ರಾಮೀಣ ಪ್ರದೇಶದಲ್ಲಿ ನಮ್ಮ ವೈದ್ಯರು ಸೇವೆ ಸಲ್ಲಿಸಲು ಸಾಧ್ಯವಾಗಿದೆ. ಕೇವಲ ವೈದ್ಯಕೀಯ ಸಲಕರಣೆಗಳು ಇದ್ದರೆ ಸಾಲದು ಅದನ್ನು ಸರಿಯಾಗಿ ಬಳಸುವವರ ಮೂಲಕ ರೋಗಿಗಳಿಗೆ ಉಪಯುಕ್ತವಾಗಬೇಕು. ಅಂತಹ ಕೆಲಸ ಈ ಆಸ್ಪತ್ರೆಯಲ್ಲಿ ಅತ್ಯುತ್ತಮವಾಗಿ ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ನಗರದ ಹೈಟೆಕ್ ವೈದ್ಯಕೀಯ ಸೇವೆ ಕಡಿಮೆ ಖರ್ಚಿನಲ್ಲಿ ಸಿಗಬೇಕು ಎಂಬ ಉದ್ದೇಶದಿಂದ ಈ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ. ಇಲ್ಲಿನ ವೈದ್ಯಕೀಯ ಸೇವೆಯನ್ನು ಗಮನಿಸಿ ನಗರದ ವೈದ್ಯರು ಅತ್ಯಂತ ಉತ್ಸಾಹದಿಂದ ಈ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಲು ಮುಂದೆ ಬರುತ್ತಿರುವುದು ಖುಷಿ ಕೊಟ್ಟಿದೆ. ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರ ಆಡಳಿತದಿಂದ ಆಸ್ಪತ್ರೆ ಬೆಳೆಯುತ್ತಿದೆ. ಅತೀ ಶೀಘ್ರದಲ್ಲಿ ಎಂ.ಆರ್ ಸ್ಕ್ಯಾನಿಂಗ್ ಸೇವೆ ಇಲ್ಲಿ ದೊರೆಯಲಿದೆ ಎಂದರು. ಹೇಮಾವತಿ ವಿ. ಹೆಗ್ಗಡೆಯವರು ಮಾತನಾಡಿ ಗಿಡ ಹೆಮ್ಮರವಾಗಿ ಬೆಳೆಯುವಂತೆ ನಮ್ಮ ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಬೆಳೆಯುತ್ತಿದೆ. ಮರದ ರೆಂಬೆ ಕೊಂಬೆಗಳು ವಿಸ್ತಾರವಾಗುವಂತೆ ಇಲ್ಲಿ ಹೊಸ ಹೊಸ ವಿಭಾಗಗಳು ಕೂಡ ತೆರೆದುಕೊಳ್ಳುತ್ತಿವೆ. ಸೇವಾ ಮನೋಭಾವ ಹೊಂದಿರುವ ಇಲ್ಲಿನ ವೈದ್ಯರು ಕೇವಲ ವೃತ್ತಿಯಿಂದ ಮಾತ್ರ ಅಲ್ಲ ಹೃದಯದಿಂದ ವೈದ್ಯರಾಗಿದ್ದಾರೆ. ವೈದ್ಯರ ಸೇವೆಗೆ ಬೆಲೆ ಕಟ್ಟಲಾಗದು. ಅತ್ಯುತ್ತಮ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಎಸ್.ಡಿ.ಎಂ ಬ್ರಾಂಡ್‌ಗೆ ಹೊಸ ಗರಿಯಾಗಿ ಶೋಭಿಸುತ್ತಿದೆ. ಇದಕ್ಕೆಲ್ಲ ಕಾರಣ ಎಲ್ಲರ ಶ್ರಮದೊಂದಿಗೆ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರ ಕಠಿಣ ಪರಿಶ್ರಮ ಮತ್ತು ಎಲ್ಲರನ್ನು ಒಗ್ಗೂಡಿ ಕೆಲಸ ಮಾಡಿಸುವ ಚಾಣಾಕ್ಯತೆ ಇದೆ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ, 2025-26ರ ಸಾಲಿನಲ್ಲಿ 4 ಕೋಟಿಗೂ ಹೆಚ್ಚು ಮೊತ್ತದ ವೈದ್ಯಕೀಯ ಸೇವೆಯನ್ನು ಡಾ. ಹೆಗ್ಗಡೆಯವರ ನಿದೇರ್ಶನದಂತೆ ಉಚಿತವಾಗಿ ನೀಡಲಾಗಿದೆ. 11 ಹಾಸಿಗೆಗಳ ಸುಸಜ್ಜಿತ ಹವಾನಿಯಂತ್ರಿತ ಡಯಾಲಿಸಿಸ್ ಸೆಂಟರ್‌ನಲ್ಲಿ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿದ್ದು, 2025-26ರಲ್ಲಿ 1.44 ಕೋಟಿ ಮೊತ್ತದ 9644 ಉಚಿತ ಡಯಾಲಿಸಿಸ್ ಸೇವೆ ನೀಡಲಾಗಿದೆ. 60 ಕ್ಕೂ ಹೆಚ್ಚು ಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ವೈದ್ಯರು ಇಲ್ಲಿ ಲಭ್ಯವಿದ್ದಾರೆ ಎಂದರು. ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ ಮಾತನಾಡಿ ಎಲ್ಲಾ ವಿಭಾಗಗಳಲ್ಲಿ ತಜ್ಞ ವೈದ್ಯರಿದ್ದು, ಅತ್ಯಾಧುನಿಕ ವೈದ್ಯಕೀಯ ಸೇವೆಯನ್ನು ಇಲ್ಲಿ ನೀಡಲಾಗುತ್ತಿದೆ ಎಂದರು. ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಮಾತನಾಡಿ, ದ.ಕ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹೊರತು ಪಡಿಸಿ ಅತೀ ಹೆಚ್ಚು ಹೆರಿಗೆ ನಡೆಸುವ ಆಸ್ಪತ್ರೆ ನಮ್ಮದಾಗಿದೆ. ಇಲ್ಲಿ 2 ಸುಸಜ್ಜಿತ ಆಪರೇಶನ್ ಥಿಯೇಟರ್ ಇದ್ದು, ದಿನ ಒಂದಕ್ಕೆ 10 ರಿಂದ 15 ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುತ್ತಿದೆ. ಕಳೆದ ವರ್ಷ 40 ಲಕ್ಷ ರೂಪಾಯಿ ಮೌಲ್ಯದ ಲ್ಯಾಪರೋಸ್ಕೋಪಿಕ್ ಯಂತ್ರ ಅಳವಡಿಸಿದ್ದು, ಕಳೆದ ಮೇ ತಿಂಗಳಲ್ಲಿ 100 ಕ್ಕೂ ಹೆಚ್ಚು ಲ್ಯಾಪರೋಸ್ಕೋಪಿಕ್ ಸರ್ಜರಿ ನಡೆಸಲಾಗಿದೆ. ಲೇಸರ್ ಶಸ್ತ್ರಚಿಕಿತ್ಸೆ ಲ್ಯಾಪರೋಸ್ಕೋಪಿಕ್ ಸರ್ಜರಿ, ಎಂಡೋಸ್ಕೋಪಿಕ್ ಸರ್ಜರಿ ಸೇವೆ ಇಲ್ಲಿ ಲಭ್ಯವಿದ್ದು, ನ್ಯೂರೋ ಸರ್ಜರಿ ಸೇವೆ, ಎಮರ್ಜೆನ್ಸಿ ಮೆಡಿಸಿನ್, ಇಬ್ಬರು ಸಾಮಾನ್ಯ ಸರ್ಜರಿ, 5 ಮಂದಿ ಆರ್ಥೋಪೆಡಿಕ್ ಸರ್ಜನ್, ಕಣ್ಣಿನ ಶಸ್ತ್ರಚಿಕಿತ್ಸಾ ತಜ್ಞರು, ಕಿವಿ-ಮೂಗು ಗಂಟಲು ಸರ್ಜನ್, ಇಬ್ಬರು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯರೊಂದಿಗೆ ನಮ್ಮ ಸರ್ಜರಿ ತಂಡ ಬಲಶಾಲಿಯಾಗಿದೆ. ನೋವು ರಹಿತ ಹೆರಿಗೆ, ಕ್ಲಿಷ್ಟಕರವಾದ ಬೆನ್ನುಮೂಳೆ ಶಸ್ತ್ರಚಿಕಿತ್ಸೆ, ಸೊಂಟ ಮತ್ತು ಮೊಣಕಾಲು ಶಸ್ತ್ರಚಿಕಿತೆ, ಬಾಯಿಯ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದರು. ಬೆನ್ನುಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಶತಾನಂದ ಪ್ರಸಾದ್ ರಾವ್ ಮಾತನಾಡಿ ಡಾ. ಹೆಗ್ಗಡೆರ ಸಹಕಾರದಿಂದ ಈ ಆಸ್ಪತ್ರೆಯಲ್ಲಿ ಸರ್ಜರಿ ಮತ್ತು ಡ್ಯೂರಲ್ ರಿಪೇರ್ ಶಸ್ತ್ರಚಿಕಿತ್ಸೆಯನ್ನು ಯಸಸ್ವಿಯಾಗಿ ನಡೆಸಿದ್ದು, ವಿಶ್ವ ಮಟ್ಟದಲ್ಲಿ ನಮ್ಮ ಆಸ್ಪತ್ರೆ ಗುರುತಿಸಲ್ಪಟ್ಟಿದೆ. ಈ ಹಿಂದೆ ಸರ್ಜರಿ ಮಾಡಿಸಲು ಮಂಗಳೂರಿಗೆ ಹೋಗುತ್ತಿದ್ದ ಜನ ಇವತ್ತಿನ ದಿನಗಳಲ್ಲಿ ಇಲ್ಲಿಯೇ ಶಸ್ತ್ರಚಿಕಿತ್ಸೆ ನಡೆಸಿ ಎಂದು ನಮ್ಮ ವೈದ್ಯರಲ್ಲಿ ವಿನಂತಿ ಮಾಡುತ್ತಿದ್ದಾರೆ ಎಂದರು. ಡಾ| ಉಷಾ ಜಿ. ಶೆಟ್ಟಿ ತಮ್ಮ ಅನಿಸಿಕೆ ವ್ಯಕ್ತಪಡಿಸುತ್ತಾ, ಡಾ. ಹೆಗ್ಗಡೆರ ಸಂಸ್ಥೆಯಲ್ಲಿ ವೈದ್ಯ ವೃತ್ತಿ ನಡೆಸಲು ಹೆಮ್ಮೆ ಎನಿಸುತ್ತಿದೆ. ನಂಬಿಕೆ, ವಿಶ್ವಾಸಗಳಿಗೆ ಹೆಸರುವಾಸಿಯಾಗಿರುವ ಎಸ್.ಡಿ.ಎಂ ಸಂಸ್ಥೆಯಲ್ಲಿ ದುಡಿಯುವುದೇ ನಮ್ಮ ಸುಯೋಗ ಎಂದರು. ವೈದ್ಯರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಉತ್ತಮ ವಾತಾವರಣ ಇದೆ. ವ್ಯವಸ್ಥಾಪಕ ನಿರ್ದೇಶಕರಾದ ಎಂ ಜನಾರ್ದನ್ ಅವರ ಸಹಕಾರ ಮತ್ತು ಉತ್ತಮ ಆಡಳಿತ ನಮಗೆಲ್ಲಾ ಹೊಸ ಸ್ಪೂರ್ತಿಯನ್ನು ನೀಡುತ್ತಿದೆ ಎಂದರು. ಧರ್ಮಸ್ಥಳ ಬೀಡಿನ ಕು| ಮಾನ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಎಲ್ಲಾ ವೈದ್ಯರನ್ನು ಡಾ. ಹೆಗ್ಗಡೆಯವರು ಸನ್ಮಾನಿಸಿದರು. ಜಗನ್ನಾಥ ಎಂ ಮತ್ತು ಸೃಜನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಳ್ವಾಸ್: ಹಸಿರು ಸಂವಾದ ಅಭಿಯಾನಕ್ಕೆ ಚಾಲನೆ

Article Image

ಆಳ್ವಾಸ್: ಹಸಿರು ಸಂವಾದ ಅಭಿಯಾನಕ್ಕೆ ಚಾಲನೆ

ಮೂಡುಬಿದಿರೆ: ಕರಾವಳಿ ನದಿಗಳ ಮೂಲಕ ಸಮುದ್ರ ಸೇರುವ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯವನ್ನು ಮೂಲದಲ್ಲೇ ತಡೆಗಟ್ಟುವ ಉದ್ದೇಶದಿಂದ ರೂಪಿಸಲಾದ ಮಹತ್ವಾಕಾಂಕ್ಷೆಯ ‘ಹಸಿರು ಸಂವಾದ’ ಅಭಿಯಾನಕ್ಕೆ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಭಾನುವಾರ ಚಾಲನೆ ದೊರೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಪರ್ಯಾವರಣ ಸಂರಕ್ಷಣಾ ತಂಡ ಹಾಗೂ ವಿವಿಧ ಶೈಕ್ಷಣಿಕ ಸಂಸ್ಥೆಗಳು, ಸ್ವಯಂಸೇವಾ ಸಂಘಟನೆಗಳು, ಕೈಗಾರಿಕೆಗಳು ಮತ್ತು ಆಡಳಿತ ವ್ಯವಸ್ಥೆಯ ಸಹಭಾಗಿತ್ವದಲ್ಲಿ ಈ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ಆರಂಭಗೊಂಡಿದ್ದು, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಮತ್ತು ಸುಸ್ಥಿರ ಪರಿಸರ ಸಂರಕ್ಷಣೆಗೆ ಮಾದರಿಯಾಗುವ ಗುರಿ ಹೊಂದಿದೆ. ಕಾರ‍್ಯಕ್ರಮದಲ್ಲಿ ಉಪಸ್ಥಿತರಿದ್ದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಕಾರ‍್ಯದರ್ಶಿ ಜಯಲಕ್ಷ್ಮೀ ರಾಯ್ಕೋಡ್ ಮಾತನಾಡಿ, ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯ ಪರಸ್ಪರ ಸಂಬಂಧ ಹೊಂದಿದ್ದು, ಸರ್ಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಜನರ ಸಕ್ರಿಯ ಸಹಭಾಗಿತ್ವ ಅತ್ಯಗತ್ಯ. ಸರ್ಕಾರ ಮತ್ತು ಸಾರ್ವಜನಿಕರ ಸಹಕಾರ ಚಪ್ಪಾಳೆಯ ಎರಡು ಕೈಗಳಂತೆ ಒಂದಾದಾಗ ಮಾತ್ರ ಅಭಿವೃದ್ಧಿಯ ಸದ್ದು ಮೂಡುತ್ತದೆ. ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಪರಿಸರಕ್ಕೂ ಸಾರ್ವಜನಿಕ ಆರೋಗ್ಯಕ್ಕೂ ಗಂಭೀರ ಅಪಾಯವನ್ನುಂಟು ಮಾಡುತ್ತಿದೆ. ಆರೋಗ್ಯಕರ ಜೀವನಶೈಲಿ ಮತ್ತು ಪರಿಸರ ಸ್ನೇಹಿ ಅಭ್ಯಾಸಗಳನ್ನು ಆಳವಡಿಸಿಕೊಳ್ಳುವುದು ಇಂದಿನ ಅಗತ್ಯ. ಪರಿಸರದ ಬಗ್ಗೆ ಪ್ರತಿಯೊಬ್ಬರೂ ವೈಯಕ್ತಿಕ ಹೊಣೆಗಾರಿಕೆ ಹೊಂದಿದಾಗ ಮಾತ್ರ ಸುಸ್ಥಿರ ಅಭಿವೃದ್ಧಿಯ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಲವು ವರ್ಷಗಳಿಂದ ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಮೌಲ್ಯಾಧಾರಿತ ಕಾರ್ಯಕ್ರಮಗಳ ಮೂಲಕ ಮಾದರಿ ಕಾರ್ಯಗಳನ್ನು ನಡೆಸುತ್ತಿದೆ ಎಂದು ಶ್ಲಾಘಿಸಿದರು. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚುತ್ತಿರುವ ಕೆಲವು ಆರೋಗ್ಯ ಸಮಸ್ಯೆಗಳಿಗೆ, ವಿಶೇಷವಾಗಿ ಗರ್ಭಕೋಶ ಸಂಬಂಧಿತ ತೊಂದರೆಗಳಿಗೆ, ಒಂದು ಬಾರಿ ಬಳಸಿ ತ್ಯಜಿಸುವ ಸ್ಯಾನಿಟರಿ ಹಾಗೂ ಅಡಲ್ಟ್ ಪ್ಯಾಡ್‌ಗಳಲ್ಲಿ ಬಳಸಲಾಗುವ ಕೆಲವು ರಾಸಾಯನಿಕಗಳ ಪರಿಣಾಮವೂ ಕಾರಣವಾಗಿರಬಹುದೆಂಬ ಆತಂಕಗಳು ವ್ಯಕ್ತವಾಗುತ್ತಿವೆ. ಆದ್ದರಿಂದ ಇಂತಹ ಉತ್ಪನ್ನಗಳ ಬಳಕೆ, ಸುರಕ್ಷಿತ ವಿಲೇವಾರಿ ಹಾಗೂ ಪರಿಸರ ಸ್ನೇಹಿ ಪರ್ಯಾಯಗಳ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದರು. ಪರ್ಯಾವರಣ ಸಂರಕ್ಷಣಾ ತಂಡದ ಪ್ರಾಂತ ಸಂಯೋಜಕ ವೆಂಕಟೇಶ್ ಸಂಗನಾಳ್ ಮಾತನಾಡಿ, ಪರಿಸರ ಸಂರಕ್ಷಣೆ ಕೇವಲ ಸ್ವಚ್ಛತಾ ಅಭಿಯಾನವಾಗಿರದೆ, ಜನರ ಜೀವನಶೈಲಿಯಲ್ಲಿ ಬದಲಾವಣೆ ತರುವ ಸಾಮಾಜಿಕ ಚಳವಳಿಯಾಗಬೇಕು ಎಂದರು. ಹಸಿರು ಸಂವಾದ ಅಭಿಯಾನವು ಕೇವಲ ಒಂದು ಕಾರ್ಯಕ್ರಮವಲ್ಲ; ಅದು ಪ್ರತಿ ಮನೆ ಮತ್ತು ಪ್ರತಿ ಗ್ರಾಮವನ್ನು ತಲುಪುವ ಜನಾಂದೋಲನವಾಗಿ ಮೂಡಿಬರಬೇಕು ಎಂದರು. ಇಂದಿನ ದಿನಗಳಲ್ಲಿ ಜನರ ಖರೀದಿ ಸಾಮರ್ಥ್ಯ ಹೆಚ್ಚುತ್ತಿರುವಂತೆ ಬಳಕೆಯ ವಸ್ತುಗಳ ಪ್ರಮಾಣವೂ ಹೆಚ್ಚುತ್ತಿದ್ದು, ಅದರೊಂದಿಗೆ ತ್ಯಾಜ್ಯದ ಪ್ರಮಾಣವೂ ಗಣನೀಯವಾಗಿ ಏರಿಕೆಯಾಗುತ್ತಿದೆ. ಬಳಕೆ ಆಧಾರಿತ ಜೀವನಶೈಲಿಯ ಪರಿಣಾಮವಾಗಿ ಪರಿಸರದ ಮೇಲೆ ಹೆಚ್ಚುತ್ತಿರುವ ಒತ್ತಡವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾಗಿದೆ ಎಂದು ಹೇಳಿದರು. ಈ ಹಿಂದೆ ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದ್ದ ಜೀವನಶೈಲಿಯ ಬದಲಾವಣೆಗಳು ಈಗ ಗ್ರಾಮೀಣ ಪ್ರದೇಶಗಳಿಗೂ ವೇಗವಾಗಿ ವ್ಯಾಪಿಸುತ್ತಿವೆ. ಇದರ ಪರಿಣಾಮವಾಗಿ ಗ್ರಾಮಗಳಲ್ಲಿಯೂ ಪ್ಲಾಸ್ಟಿಕ್ ಹಾಗೂ ಇತರ ಘನ ತ್ಯಾಜ್ಯದ ಸಮಸ್ಯೆ ಗಂಭೀರ ಸ್ವರೂಪ ಪಡೆಯುತ್ತಿದೆ. ಆದ್ದರಿಂದ ಸಮಸ್ಯೆ ಉಲ್ಬಣವಾಗುವ ಮುನ್ನವೇ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಮತ್ತು ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದು ಅವರು ತಿಳಿಸಿದರು. ಹಸಿರು ಸಂವಾದ ಅಭಿಯಾನದ ಮೂಲಕ ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಿ, ಗ್ರಾಮ ಮಟ್ಟದಲ್ಲೇ ಸುಸ್ಥಿರ ತ್ಯಾಜ್ಯ ನಿರ್ವಹಣೆಯ ಮಾದರಿಯನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಕರಾವಳಿ ಕರ್ನಾಟಕವು ಒಂದು ಕಡೆ ಅರಬ್ಬಿ ಸಮುದ್ರ ಹಾಗೂ ಮತ್ತೊಂದು ಕಡೆ ವಿಶ್ವದ ಜೀವವೈವಿಧ್ಯದ ಅತ್ಯಂತ ಸೂಕ್ಷ್ಮ ಪರಿಸರ ವಲಯಗಳಲ್ಲಿ ಒಂದಾದ ಪಶ್ಚಿಮ ಘಟ್ಟಗಳಿಂದ ಆವೃತವಾಗಿರುವ ಅಪರೂಪದ ಭೌಗೋಳಿಕ ಪ್ರದೇಶವಾಗಿದೆ. ಇಂತಹ ಅಮೂಲ್ಯ ನೈಸರ್ಗಿಕ ಪರಿಸರ ವ್ಯವಸ್ಥೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದರು. ಪಶ್ಚಿಮ ಘಟ್ಟಗಳು ಈ ಭಾಗದ ಜೀವನಾಡಿ ಹಾಗೂ ಶ್ವಾಸಕೋಶದಂತಿವೆ. ಅವು ಕೇವಲ ಜೀವವೈವಿಧ್ಯದ ತಾಣಗಳಷ್ಟೇ ಅಲ್ಲ, ಕರಾವಳಿ ಭಾಗದ ಹವಾಮಾನ ಸಮತೋಲನ, ಜಲಸಂಪನ್ಮೂಲ ಮತ್ತು ಪರಿಸರ ಆರೋಗ್ಯವನ್ನು ಕಾಪಾಡುವ ಪ್ರಮುಖ ನೈಸರ್ಗಿಕ ವ್ಯವಸ್ಥೆಯಾಗಿವೆ. ಆದ್ದರಿಂದ ಪರಿಸರ ಸಂರಕ್ಷಣೆಯನ್ನು ಅಭಿವೃದ್ಧಿಗೆ ವಿರುದ್ಧವಾದ ವಿಚಾರವಾಗಿ ನೋಡದೆ, ಸುಸ್ಥಿರ ಅಭಿವೃದ್ಧಿಯ ಅವಿಭಾಜ್ಯ ಅಂಗವಾಗಿ ಪರಿಗಣಿಸಬೇಕು ಎಂದರು. ‘ಹಸಿರು ಸಂವಾದ' ಅಭಿಯಾನವು ಕೇವಲ ತ್ಯಾಜ್ಯ ನಿರ್ವಹಣೆಯ ಕಾರ್ಯಕ್ರಮವಾಗಿರದೆ, ಸಮಾಜದಲ್ಲಿ ಪರಿಸರದ ಬಗ್ಗೆ ಜಾಗೃತಿ, ಹೊಣೆಗಾರಿಕೆ ಮತ್ತು ವರ್ತನಾತ್ಮಕ ಬದಲಾವಣೆಯನ್ನು ತರುವ ಜನಾಂದೋಲನವಾಗಿ ರೂಪುಗೊಳ್ಳಬೇಕು. ಈ ಅಭಿಯಾನದ ನಿಜವಾದ ಯಶಸ್ಸು ಸಾಮಾಜಿಕ ಪರಿವರ್ತನೆಯಲ್ಲಿ ಅಡಗಿದೆ ಎಂದರು. ‘ಹಸಿರು ಸಂವಾದ’ ಅಭಿಯಾನದ ಕುರಿತು ವಿವರಣೆ ನೀಡಿ ಮಾತನಾಡಿದ ಆಳ್ವಾಸ್ ಕಾಲೇಜಿನ ಪ್ರಾಚರ‍್ಯ ಡಾ ಕುರಿಯನ್, ಸಾಂಪ್ರದಾಯಿಕ ಸ್ವಚ್ಛತಾ ಕಾರ್ಯಾಚರಣೆಗಳನ್ನು ಮೀರಿ, ತ್ಯಾಜ್ಯವು ನದಿಗಳ ಮೂಲಕ ಸಮುದ್ರ ಸೇರಿ ಮೈಕ್ರೋಪ್ಲಾಸ್ಟಿಕ್ ಆಗಿ ಪರಿವರ್ತನೆಯಾಗುವುದನ್ನು ತಡೆಯಲು ಮೂಲ ಹಂತದಲ್ಲೇ ವೈಜ್ಞಾನಿಕ ಹಾಗೂ ಸಮುದಾಯ ಆಧಾರಿತ ವ್ಯವಸ್ಥೆಯನ್ನು ರೂಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಜನರ ಪಾಲ್ಗೊಳ್ಳುವಿಕೆ, ಸ್ಥಳೀಯ ಆಡಳಿತದ ಹೊಣೆಗಾರಿಕೆ ಮತ್ತು ವಲಯ ಆರ್ಥಿಕತೆ ಆಧಾರಿತ ತ್ಯಾಜ್ಯ ನಿರ್ವಹಣೆಯ ಮಾದರಿಯನ್ನು ನಿರ್ಮಿಸಲು ಅಭಿಯಾನ ಒತ್ತು ನೀಡಲಿದೆ. ಈ ಯೋಜನೆಯಡಿ ಪಾವಂಜೆ (ಗುರುಪುರ), ನಂದಿನಿ ಹಾಗೂ ಶಾಂಭವಿ ನದಿಗಳ ಜಲಾನಯನ ಪ್ರದೇಶದ 46 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ನದಿಗಳ ಮೂಲಕ ಸಮುದ್ರಕ್ಕೆ ಸೇರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿತಗೊಳಿಸಲು ಗ್ರಾಮ ಮಟ್ಟದಲ್ಲಿಯೇ ವೈಜ್ಞಾನಿಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ. ಅಭಿಯಾನವನ್ನು ಮೂರು ಹಂತಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತವು ಜುಲೈ–ಆಗಸ್ಟ್ 2026ರವರೆಗೆ ನಡೆಯಲಿದ್ದು, ಕ್ಷೇತ್ರ ಸಮೀಕ್ಷೆ, ಮಾಹಿತಿ ಸಂಗ್ರಹ, ತ್ಯಾಜ್ಯ ಸಮಸ್ಯೆಗಳ ಮೌಲ್ಯಮಾಪನ ಹಾಗೂ ಜನಜಾಗೃತಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗಿದೆ. ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಸ್ಥಳೀಯ ಸಂಘಟನೆಗಳು ಮತ್ತು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಪರಿಸರ ಸಂರಕ್ಷಣೆಯಲ್ಲಿ ಸಮುದಾಯದ ಪಾಲುದಾರಿಕೆಯನ್ನು ಬಲಪಡಿಸಲಾಗುತ್ತದೆ ಎಂದರು. ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ತೊಡಗಿಸಲು ‘ಚೋಟಾ ಕಾಪ್’ ಯೋಜನೆ ಜಾರಿಗೊಳ್ಳಲಿದೆ. ಮಕ್ಕಳಲ್ಲಿ ಪರಿಸರ ಕಾಳಜಿ ಮತ್ತು ಹೊಣೆಗಾರಿಕೆಯನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಯುವಜನರಲ್ಲಿ ಹೊಸ ತಂತ್ರಜ್ಞಾನ ಹಾಗೂ ನವೀನ ಆಲೋಚನೆಗಳಿಗೆ ಉತ್ತೇಜನ ನೀಡಲು ಐಡಿಯಾಥಾನ್ ಆಯೋಜಿಸಲಾಗುತ್ತಿದ್ದು, ಆಯ್ಕೆಯಾಗುವ ಪರಿಸರ ಸ್ನೇಹಿ ಆವಿಷ್ಕಾರಗಳಿಗೆ ಅಭಿವೃದ್ಧಿ ನಿಧಿಯನ್ನೂ ಒದಗಿಸಲಾಗುತ್ತದೆ. ಎರಡನೇ ಹಂತವು ಆಗಸ್ಟ್ ನಿಂದ ನವೆಂಬರ್‌ವರೆಗೆ ನಡೆಯಲಿದ್ದು, ಘನ ತ್ಯಾಜ್ಯ ನಿರ್ವಹಣಾ ನಿಯಮಾವಳಿ–2026 ಅನುಸಾರ ವಿವಿಧ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತದೆ. ನದಿಗಳ ಮೇಲ್ಮೈ ಹಾಗೂ ನೀರಿನ ಅಡಿಯಲ್ಲಿರುವ ತ್ಯಾಜ್ಯ ತೆರವು, ತ್ಯಾಜ್ಯದ ವೈಜ್ಞಾನಿಕ ಸಂಸ್ಕರಣೆ, ಸಂಗ್ರಹ ಮತ್ತು ಮರುಬಳಕೆ ವ್ಯವಸ್ಥೆ, ಮರುಸಂಸ್ಕರಣೆಗೆ ಅಸಾಧ್ಯವಾದ ತ್ಯಾಜ್ಯದ ಸೂಕ್ತ ವಿಲೇವಾರಿ, ‘ಸ್ವಚ್ಛ ಗ್ರಾಮ’ ಸ್ಪರ್ಧೆ, ಪರಿಸರ ಜಾಗೃತಿ ಮೂಡಿಸುವ ರೀಲ್ಸ್ ಸ್ಪರ್ಧೆ, ಫನ್ನಿ ರಿಪೋರ್ಟರ್ಸ್, ವಿದ್ಯಾರ್ಥಿ ಚಟುವಟಿಕೆಗಳು ಹಾಗೂ ವಿವಿಧ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ. ಮೂರನೇ ಹಂತವಾಗಿ ಡಿಸೆಂಬರ್ 2026ರಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗುತ್ತದೆ. ಭಾಗವಹಿಸುವ ಗ್ರಾಮ ಪಂಚಾಯಿತಿಗಳು ತಮ್ಮ ತ್ಯಾಜ್ಯ ನಿರ್ವಹಣಾ ಅನುಭವ ಮತ್ತು ಸಾಧನೆಗಳನ್ನು ಪ್ರಸ್ತುತಪಡಿಸಲಿದ್ದು, ದೇಶದ ಖ್ಯಾತ ಪರಿಸರ ವಿಜ್ಞಾನಿಗಳು, ತಜ್ಞರು ಮತ್ತು ಪರಿಸರ ಹೋರಾಟಗಾರರು ವೈಜ್ಞಾನಿಕ ಅಧಿವೇಶನಗಳಲ್ಲಿ ಭಾಗವಹಿಸಲಿದ್ದಾರೆ. ಸ್ಥಳೀಯ ಮಟ್ಟದ ಯಶಸ್ವಿ ಮಾದರಿಗಳನ್ನು ರಾಷ್ಟ್ರೀಯ ಮಟ್ಟದ ಉತ್ತಮ ಪದ್ಧತಿಗಳೊಂದಿಗೆ ಸಂಪರ್ಕಿಸುವ ವೇದಿಕೆಯಾಗಲಿದೆ. ಸಮ್ಮೇಳನದ ಸಮಾರೋಪದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ನದಿಗಳಿಗೆ ಸೇರುವ ಪ್ರಮಾಣವನ್ನು ಅತ್ಯಂತ ಪರಿಣಾಮಕಾರಿಯಾಗಿ ಕಡಿಮೆಗೊಳಿಸಿದ ಗ್ರಾಮಕ್ಕೆ ಪ್ರತಿಷ್ಠಿತ ‘ಸ್ವಚ್ಛ ಗ್ರಾಮ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಉತ್ತಮ ಸಾಧನೆ ತೋರಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪರಿಸರ ಪ್ರಶಸ್ತಿಗಳಿಗೆ ಶಿಫಾರಸು ಮಾಡಲಾಗುವುದು. ಪರಿಸರ ಸಂರಕ್ಷಣೆಯಲ್ಲಿ ವಿಶೇಷ ಸೇವೆ ಸಲ್ಲಿಸಿದ ‘ವೇಸ್ಟ್ ವಾರಿಯರ್ಸ್’, ವಿದ್ಯಾರ್ಥಿಗಳು ಹಾಗೂ ಸ್ಪರ್ಧೆಗಳ ವಿಜೇತರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದರು. ಕರಾವಳಿ ಪರಿಸರ ಸಂರಕ್ಷಣೆಯಲ್ಲಿ ಸಮುದಾಯ, ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಆಡಳಿತ ಮತ್ತು ತಜ್ಞರನ್ನು ಒಂದೇ ವೇದಿಕೆಗೆ ತರುವ ಈ ‘ಹಸಿರು ಸಂವಾದ’ ಅಭಿಯಾನವು, ಕರಾವಳಿ ಕರ್ನಾಟಕದಲ್ಲಿ ವೈಜ್ಞಾನಿಕ ಹಾಗೂ ಶಾಶ್ವತ ತ್ಯಾಜ್ಯ ನಿರ್ವಹಣೆಗೆ ಹೊಸ ಮಾದರಿಯಾಗಿ ರೂಪುಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಪರ್ಯಾವರಣ ಸಂರಕ್ಷಣಾ ತಂಡದ ಜಯರಾಮ್ ಬೊಳ್ಳಾಜೆ, ಹೊಸದಿಂಗತ ಪತ್ರಿಕೆಯ ಸಿಇಒ ಪಿ.ಎಸ್ ಪ್ರಕಾಶ್, ಪರಿಸರ ವಿಜ್ಞಾನಿ ಡಾ. ಬಿನಿಷಾ ಪಿ., ಘನ ತ್ಯಾಜ್ಯ ನಿರ್ವಹಣಾ ತಜ್ಞ ಹಾಗೂ ‘ಫ್ರೆಂಡ್ಸ್ ಆಫ್ ಲೇಕ್ಸ್’ ಸಂಸ್ಥೆಯ ಸಂಸ್ಥಾಪಕ ರಾಮಪ್ರಸಾದ್, ಸ್ವಚ್ಛ ಕಾರ್ಕಳ ಬ್ರಿಗೇಡ್‌ನ ಅರ್ಜುನ ಕುಮಾರ್ ಇದ್ದರು. ಹಸಿರು ಸಂವಾದ ಅಭಿಯಾನದ ಮಂಜುನಾಥ್ ಸ್ವಾಗತಿಸಿ, ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸಮಕಿತ ಸುಧೀರ ಕುರಕುರೆ ಅವರಿಗೆ ಬೆಳ್ಳಿ ಪದಕ

Article Image

ಸಮಕಿತ ಸುಧೀರ ಕುರಕುರೆ ಅವರಿಗೆ ಬೆಳ್ಳಿ ಪದಕ

2026ರ ಜೂನ್ 25ರಂದು ಬೆಂಗಳೂರಿನ ಎಂಎನ್ ಕೆಆರ್ ಬಾಸ್ಕೆಟ್ ಬಾಲ್ ಸ್ಟೇಡಿಯಂನಲ್ಲಿ ನಡೆದ ರಾಜ್ಯ (ಅಂಡರ್-16) ಯುವ ಬಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್‌ನಲ್ಲಿ, ಸದರ್ನ್ ಬ್ಲೂಸ್ ತಂಡದ ಸದಸ್ಯರಾದ ಸಮಕಿತ ಸುಧೀರ ಕುರಕುರೆ ಅವರು ರನ್ನರ್ಸ್-ಅಪ್ ಟ್ರೋಫಿ ಹಾಗೂ ಬೆಳ್ಳಿ ಪದಕವನ್ನು ಪಡೆದಿದ್ದಾರೆ.

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026 ಪ್ರತಿಭೋತ್ಸವ

Article Image

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026 ಪ್ರತಿಭೋತ್ಸವ

ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ “ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026” ಪ್ರತಿಭೋತ್ಸವದ ಅಂಗವಾಗಿ ಆಯೋಜಿಸಲಾದ ಸಂಸ್ಕೃತಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಸಂಭ್ರಮ, ಸಾಂಸ್ಕೃತಿ ಮತ್ತು ಕಲಾ ವೈಭವದ ನಡುವೆ ಅದ್ದೂರಿಯಾಗಿ ನಡೆಯಿತು. ಖ್ಯಾತ ಯಕ್ಷಗಾನ ಕಲಾವಿದ ಹಾಗೂ ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಹಾಗೂ ಸಾಂಸ್ಕೃತಿಕ ತೇರನ್ನು ಎಳೆಯುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಪಟ್ಲ ಸತೀಶ್ ಶೆಟ್ಟಿ ಅವರು, “ ಇಂತಹ ಸಾಂಸ್ಕೃತಿಕ ವಾತವರಣದಲ್ಲಿ ಬೆಳೆದು ಬರುತ್ತಿರುವ ವಿದ್ಯಾರ್ಥಿಗಳೇ ನಿಜವಾಗಿಯೂ ಧನ್ಯರು. ಶಿಕ್ಷಣದೊಂದಿಗೆ ಸಾಂಸ್ಕೃತಿಕ ಸಂಸ್ಕಾರ ಮತ್ತು ಉತ್ತಮ ಪರಿಸರವು ಅತ್ಯಂತ ಮುಖ್ಯ. ಶಾಲೆಯು ಕೇವಲ ಶಿಕ್ಷಣ ನೀಡುವ ಕೇಂದ್ರವಲ್ಲ; ಉತ್ತಮ ಸಂಸ್ಕಾರವನ್ನು ರೂಪಿಸುವ ಪವಿತ್ರ ಕ್ಷೇತ್ರವಾಗಿದೆ,” ಎಂದು ಹೇಳಿದರು. “ಭಗವಂತನು ಕೊಟ್ಟರುವ ಈ ದೇಹವನ್ನು ಸಮಾಜದ. ವಿಶೇಷವಾಗಿ ಬಡವರ ಮತ್ತು ನೊಂದವರ ಒಳಿತಿಗಾಗಿ ಮೀಸಲಿಡಬೇಕು. ಜೀವನದಲ್ಲಿ ತಂದೆ, ತಾಯಿ ಮತ್ತು ಗುರುಗಳಿಗೆ ಸದಾ ಋಣಿಗಳಾಗಿರಬೇಕು. ಅವರ ಆರ್ಶೀವಾದವೇ ನಮ್ಮ ಬದುಕಿನ ನಿಜವಾದ ಸಂಪತ್ತು,” ಎಂದು ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯಗಳ ಕುರಿತು ಕಿವಿಮಾತು ಹೇಳಿದರು. ನಂತರ “ಯಕ್ಷಗಾನಂ ವಿಶ್ವಗಾನಂ” ಎಂಬ ಘೋಷಣೆಯೊಂದಿಗೆ ತಮ್ಮ ಸುಮಧುರ ಕಂಠಸಿರಿಯ ಮೂಲಕ ಯಕ್ಷಗಾನದ ಗಾನಸುಧೆಯನ್ನು ಹರಿಸಿ ಸಭಿಕರನ್ನು ಮಂತ್ರಮುಗ್ಧರನ್ನಾಗಿಸಿದರು. ಅವರ ಭಾವಪೂರ್ಣ ಗಾಯನಕ್ಕೆ ಸಭಾಂಗಣ ಕರತಾಡನದಿಂದ ಮೊಳಗಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಪಟ್ಲ ಸತೀಶ್ ಶೆಟ್ಟಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಯಕ್ಷಗಾನ ಕಲಾವಿದ ಮಹವೀರ ಪಾಂಡಿ ಅವರು ಮಾತನಾಡಿ, “ಅವಕಾಶವನ್ನು ಗುರುತಿಸಿ ಶ್ರಮದಿಂದ ಸದುಪಯೋಗಪಡಿಸಿಕೊಡವರಿಗೆ ದೇವರ ಆರ್ಶೀವಾದ ಸದಾ ಜೊತೆಯಾಗಿರುತ್ತದೆ,” ಎಂದು ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಅವರು ಮಾತನಾಡಿ, “ಯಕ್ಷಗಾನದ ಮೂಲಕ ಕರಾವಳಿಯ ಕೀರ್ತಿಯನ್ನು ವಿಶ್ವದಾದ್ಯಂತ ಪಸರಿಸಿದ ಪಟ್ಲ ಸತೀಶ್ ಶೆಟ್ಟಿಯವರ ಸಾಧನೆ ಪ್ರತಿಯೊಬ್ಬ ವಿದ್ಯಾರ್ಥಿಗೂ ಸ್ಪೂರ್ತಿದಾಯಕವಾಗಿದೆ. ಅವರನ್ನು ಆದರ್ಶವಾಗಿಟ್ಟುಕೊಂಡು ತಮ್ಮ ಪ್ರತಿಭೆಯನ್ನು ಬೆಳಸಿಕೊಂಡು ಸಾಧನೆಯ ಶಿಖರವನ್ನು ತಲುಪಬೇಕು, " ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅವರು, “ಯಕ್ಷಗಾನವನ್ನು ವಿಶ್ವಮಟ್ಟದಲ್ಲಿ ಪರಿಚಯಿಸಿ ಕರಾವಳಿಯ ಕೀರ್ತಿಯನ್ನು ಪಸರಿಸುವಲ್ಲಿ ಪಟ್ಲ ಸತೀಶ್ ಶೆಟ್ಟಿಯವರ ಕೊಡುಗೆ ಅಪಾರವಾಗಿದೆ. ಕಲೆಗೆ ಸಮಾಜವನ್ನು ಜಾಗೃತಗೊಳಿಸುವ ಅದ್ಭುತ ಶಕ್ತಿಯಿದೆ. ನಾವು ನಮ್ಮೊಂದಿಗೆ ಇತರರನ್ನೂ ಬೆಳೆಸುವ ಮನೋಭಾವವನ್ನು ಹೊಂದಿದಾಗ ಸಮಾಜವೂ ಅಭಿವೃದ್ಧಿಯಾಗುತ್ತದೆ. ಭಗವಂತ ಪ್ರತಿಯೊಬ್ಬರಿಗೂ ಯೋಗ ಮತ್ತು ಯೋಗ್ಯತೆಯನ್ನು ನೀಡುತ್ತಾನೆ. ಅದನ್ನು ಸಾರ್ಥಕಗೊಳಿಸುವ ರೀತಿಯಲ್ಲಿ ಜೀವನವನ್ನು ರೂಪಿಸಿಕೊಳ್ಳಬೇಕು,” ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ. ಸಂಪತ್ ಕುಮಾರ್ ಜೈನ್, ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮೂಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್, ಸಿಬಿಎಸ್‌ಸಿ ಪ್ರಾಂಶುಪಾಲರಾದ ಶ್ರೀಪ್ರಸಾದ್, ಕೀಬೋರ್ಡ್ ಪರಿಣಿತ ಸದಾಶಿವ ಭಟ್ ಶಿವಗಿರಿ. ತಬಲಾ ಪರಿಣಿತ ಗೌರಿಪ್ರಸಾದ್ ಗುರುವಾಯನಕೆರೆ, ಭರತನಾಟ್ಯ ಕಲಾವಿದೆ ರಶ್ಮಿತಾ ಅರವಿಂದ್ ಕರಾಟೆ ತರಬೇತುದಾರ ಸರ್ಫರಾಜ್ ಎ.ಕೆ, ಚಿತ್ರಕಲೆ ಶಿಕ್ಷಕ ಭಾಸ್ಕರ ನೆಲ್ಯಾಡಿ, ಕೊಳಲು ವಾದಕ ಲೋಕೇಶ್ ಸಂಪಿಗೆ, ಚೆಂಡೆ ವಾದಕ ಚಂದ್ರಶೇಖರ ಆಚಾರ್, ಪಾಶ್ಚಾತ್ಯ ನೃತ್ಯ ತರಬೇತುದಾರ ರೂಪೇಶ್ ಕುಮಾರ್ ಹಾಗೂ ಕರಕುಶಲ ಕಲೆ ಶಿಕ್ಷಕಿ ಚೇತನಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿ ಪ್ರತಿಭೆಯ ಅನಾವರಣ ಮಾಡುವ ಮೂಲಕ ಕಾರ್ಯಕ್ರಮದ ಮೆರುಗನ್ನು ಇನ್ನಷ್ಟು ಹೆಚ್ಚಿಸಿದರು. ಶಿಕ್ಷಕಿ ಹರ್ಷಿತಾ ಸ್ವಾರ್ಗತಿಸಿದರು. ಮೌಲ್ಯ ವೈ ಆರ್ ಜೈನ್ ಅವರು ಪಟ್ಲ ಸತೀಶ್ ಶೆಟ್ಟಿಯವರ ವ್ಯಕ್ತಿ ಪರಿಚಯ ಮಾಡಿಕೊಟ್ಟರು. ವಿಜೇತ ಹಾಗೂ ಶರ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ವನಿತಾ ವಂದಿಸಿದರು.

ಎಕ್ಸಲೆಂಟ್: ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

Article Image

ಎಕ್ಸಲೆಂಟ್: ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ: ವಿದ್ಯಾರ್ಥಿ ಸಮುದಾಯವು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತರಾಗಿ, ಆರೋಗ್ಯವಂತ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣದಲ್ಲಿ ಸಕ್ರಿಯ ಪಾತ್ರವಹಿಸಬೇಕು ಎಂದು ಮೂಡುಬಿದಿರೆ ಆರಕ್ಷಕ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರತಿಭಾ ಕೆ.ಎಸ್. ಹೇಳಿದರು. ಅವರು ಮೂಡುಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಮಾದಕ ವ್ಯಸನವು ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಬದುಕಿನ ಮೇಲೆ ಉಂಟುಮಾಡುವ ದುಷ್ಪರಿಣಾಮಗಳನ್ನು ವಿವರಿಸಿದ ಅವರು, ಕ್ಷಣಿಕ ಆಕರ್ಷಣೆಗೆ ಒಳಗಾಗದೆ ಉತ್ತಮ ಸ್ನೇಹ, ಸತ್ಪ್ರವೃತ್ತಿ ಮತ್ತು ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಯುವಜನತೆ ವ್ಯಸನಮುಕ್ತ ಜೀವನಶೈಲಿಯನ್ನು ರೂಢಿಸಿಕೊಂಡಾಗ ಮಾತ್ರ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪುಷ್ಪರಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಬದ್ಧರಾಗಿ ಕಾರ್ಯನಿರ್ವಹಿಸುವ ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಪ್ರತಿಜ್ಞೆ ಸ್ವೀಕರಿಸಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಸಂಕಲ್ಪ ಮಾಡಿದರು. ಕಾರ್ಯಕ್ರಮದಲ್ಲಿ ಸಿಇಟಿ ಸಂಯೋಜಕರಾದ ರಂಜಿತ್ ಜೈನ್, ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಶೃತಿ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ಸುನಾದರಾಜ್ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು.

ಧರ್ಮಸ್ಥಳ: ಸ್ವಚ್ಛ ನೇತ್ರಾವತಿ ಅಭಿಯಾನ

Article Image

ಧರ್ಮಸ್ಥಳ: ಸ್ವಚ್ಛ ನೇತ್ರಾವತಿ ಅಭಿಯಾನ

ಉಜಿರೆ: ಧರ್ಮಸ್ಥಳ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನೇತ್ರಾವತಿ ಸ್ನಾನಘಟ್ಟದಲ್ಲಿ “ಸ್ವಚ್ಛ ನೇತ್ರಾವತಿ” ಅಭಿಯಾನ ಆಯೋಜಿಸಲಾಯಿತು. ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಸಂಜೀವಿನಿ ಮಹಿಳಾ ಒಕ್ಕೂಟ, ಕನ್ಯಾಕುಮಾರಿ ಯುವತಿ ಮಂಡಲ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅನೇಕ ಸ್ಥಳೀಯ ಸಂಘಟನೆಗಳ ಸದಸ್ಯರು ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ “ಸ್ವಚ್ಛತಾ ಸೂಚನಾ ಫಲಕ” ಅನಾವರಣಗೊಳಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ಪಿ.ಡಿ.ಒ. ಗಾಯತ್ರಿ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಮೀಳಾ ಧನ್ಯವಾದವಿತ್ತರು.

ಬೆಳ್ತಂಗಡಿ: ಡಾ. ಡಿ. ಹೆಗ್ಗಡೆ ದಂಪತಿಗಳು ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ಭೇಟಿ

Article Image

ಬೆಳ್ತಂಗಡಿ: ಡಾ. ಡಿ. ಹೆಗ್ಗಡೆ ದಂಪತಿಗಳು ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ಭೇಟಿ

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರಾದ ಹಾಗೂ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಸಿರಿ ಸಂಸ್ಥೆಯ ಸಂಸ್ಥಾಪಕರಾದ ಹೇಮಾವತಿ ವಿ. ಹೆಗ್ಗಡೆಯವರು ಬೆಳ್ತಂಗಡಿಯಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವಿವಿಧ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿ, ಅಲ್ಲಿನ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಿದ ಹೆಗ್ಗಡೆ ದಂಪತಿಗಳು, ಸಿಬ್ಬಂದಿಗಳ ಕಾರ್ಯನಿಷ್ಠೆ ಹಾಗೂ ಸೇವಾ ಮನೋಭಾವವನ್ನು ಶ್ಲಾಘಿಸಿ ಶುಭ ಹಾರೈಸಿದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್. ಜನಾರ್ಧನ ಅವರು ಹೆಗ್ಗಡೆ ದಂಪತಿಗಳನ್ನು ಹಾಗೂ ಹೆಗ್ಗಡೆಯವರ ಮೊಮ್ಮಗಳಾದ ಮಾನ್ಯರವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬಡ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣದ ಮಹೋದ್ದೇಶದಿಂದ ಸಿರಿ ಸಂಸ್ಥೆಗೆ ಸುಸಜ್ಜಿತ ಹಾಗೂ ಭವ್ಯ ನೂತನ ಕಟ್ಟಡವನ್ನು ನಿರ್ಮಿಸಿಕೊಟ್ಟು, ಸಿಬ್ಬಂದಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅವರ ಶ್ರೇಯೋಭಿವೃದ್ಧಿಗೆ ಸದಾ ಪ್ರೋತ್ಸಾಹ ನೀಡುತ್ತಿರುವ ಹೆಗ್ಗಡೆ ದಂಪತಿಯವರಿಗೆ ಕೃತಜ್ಞತೆಗಳನ್ನು ಸಲ್ಲಿಸಿ, ಸಿರಿ ಸಂಸ್ಥೆಯ ವತಿಯಿಂದ ಗೌರವಾರ್ಪಣೆ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಸೇಲಂನಲ್ಲಿರುವ ಇಸ್ಕಾನ್ ದೇವಾಲಯದ ಶ್ರೀರಾಮಪ್ರಭು ಚಂದನದಾಸ ಸ್ವಾಮೀಜಿಯವರು, ರಾಜೇಶ್ ಪೈ, ಡಾ. ಹರೀಶ್ ಕೃಷ್ಣಸ್ವಾಮಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

First Previous

Showing 1 of 16 pages

Next Last